ಮಂತ್ರ ಮಾಂಗಲ್ಯ ವಿವಾಹವಾಗಲಿದ್ದಾರೆ ಗಾಯಕಿ ಸುಹಾನಾ ಸಯ್ಯದ್

ತ್ತೀಚೆಗಷ್ಟೇ ಸರಿಗಮಪ ಖ್ಯಾತಿಯ ಗಾಯಕಿ ಸುಹಾನಾ ಸಯ್ಯದ್ (Suhaana Syed) ತಾವು ಪ್ರೀತಿಸುತ್ತಿರುವ ಹುಡುಗನ ಪರಿಚಯ ಮಾಡಿಕೊಟ್ಟಿದ್ದರು. 16 ವರ್ಷಗಳಿಂದ ಪ್ರೀತಿಸುತ್ತಿರುವ ನಿತಿನ್ ಹೆಸರಿನ ರಂಗಭೂಮಿ ಕಲಾವಿದನ ಜೊತೆ ಸುಹಾನಾ ಮದುವೆಯಾಗುತ್ತಿದ್ದು ಮದುವೆಯಲ್ಲಿ ವಿಶ್ವಮಾನವತ್ವದ ಧೋರಣೆ ಮೆರೆಯಲು ಹೊರಟಿದ್ದಾರೆ.

ಕುವೆಂಪು (Kuvempu) ಅವರ ಮಂತ್ರ ಮಾಂಗಲ್ಯದ (Mantra Mangalya) ಆಶಯದಂತೆ ಸುಹಾನಾ ಹಾಗೂ ನಿತಿನ್ ಸತಿಪತಿಯಾಗಲು ಹೊರಟಿದ್ದಾರೆ. ಶುಕ್ರವಾರ ಬೆಂಗಳೂರು ಹೊರವಲಯ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್ನಲ್ಲಿ ಮಂತ್ರ ಮಾಂಗಲ್ಯ ವಿವಾಹ ಜರುಗಲಿದೆ. ವಧು ಮತ್ತು ವರನ ಕಡೆಯ ಹತ್ತಿರದ ಬಂಧುಗಳು ಹಾಗೂ ಕೆಲವೇ ಕೆಲವು ಆಪ್ತರಿಗಷ್ಟೇ ಆಹ್ವಾನ ನೀಡಲಾಗಿದೆ.  ಇದನ್ನೂ ಓದಿ:  ಖ್ಯಾತ ಗಾಯಕಿ ಜೊತೆ 2ನೇ ಮದ್ವೆಗೆ ಸಜ್ಜಾದ ರಘು ದೀಕ್ಷಿತ್;‌ ಅಕ್ಟೋಬರ್ ಅಂತ್ಯದಲ್ಲೇ ಮದುವೆ!

ಹಿಜಬ್ (Hijab) ಧರಿಸಿ ಹಿಂದೂ ಭಜನೆ ಹಾಡುವ ಸುಹಾನಾಗೆ ತೀವ್ರ ವಿರೋಧ ವ್ಯಕ್ತವಾಗಿತ್ತು, ಆದರೀಗ ಎಲ್ಲಾ ಅಡೆತಡೆಗಳನ್ನ ದಾಟಿ ತಾವು ಬಹುವರ್ಷಗಳಿಂದ ಪ್ರೀತಿಸುತ್ತಿರುವ ಅಂತರ್ ಧರ್ಮದ ಹುಡುಗನ ಜೊತೆ ಮದುವೆಯಾಗಲು ಹೊರಟಿದ್ದಾರೆ. ಇದನ್ನೂ ಓದಿ:  ಬೆಂಗಳೂರಿನಲ್ಲಿ ಹಾಡಹಗಲೇ ಪ್ರಿಯಕರನಿಂದ ವಿದ್ಯಾರ್ಥಿನಿಯ ಬರ್ಬರ ಕೊಲೆ

ಈ ಅಂತರ್‌ಧರ್ಮೀಯ ಮದುವೆ ವಿಶೇಷವಾಗಿದ್ದು ಅನೇಕ ಕಲಾವಿದರು ಗಾಯಕರು ಸಾಕ್ಷಿಯಾಗಲಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿ , ಪ್ರೀತಿ ವಿಶ್ವದ ಭಾಷೆ, ಹೃದಯದಿಂದ ಹೊರಹೊಮ್ಮಿದ ಈ ಪ್ರೇಮ ಕಾವ್ಯ ದೇವ ವಿರಚಿತ. ಶ್ರೀ ಕುವೆಂಪುರವರ ಮಂತ್ರ ಮಾಂಗಲ್ಯದ ಆಶಯದಂತೆ ಸುಹಾನಾ ಹಾಗೂ ನಿತಿನ್ ಮದುವೆಯಾಗುತ್ತಿದ್ದೇವೆ. ನಮ್ಮ ನಡೆ ವಿಶ್ವಮಾನವತ್ವದೆಡೆಗೆ ಎಂದು ಹೇಳಿಕೊಂಡಿದ್ದಾರೆ.