ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಪ್ರಕರಣ – ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ (Munirathna) ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್‌ ಅಧಿಕಾರಿ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಇಡೀ ರಾಜ್ಯಕ್ಕೆ ಬೆಳಕು ನೀಡುವ ರಾಯಚೂರಿನಲ್ಲೇ ಬೆಳಕಿಲ್ಲ – ಸಾರ್ವಜನಿಕರಿಂದ ತೀವ್ರ ಆಕ್ರೋಶ

ಶುಕ್ರವಾರವಷ್ಟೇ ಬಂಧಿಸಿದ್ದ ಪೊಲೀಸರು:
ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದರು. ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ – 4 ದಿನಗಳಲ್ಲಿ 4 ಸಾವು

ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ 7 ಜೀಪುಗಳು, ಒಂದು ಮೀಸಲು ಪಡೆಯ ವಾಹನ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: Mysuru Dasara | ಮೊದಲಿಂದಲೂ ಧನಂಜಯ – ಕಂಜನ್ ನಡುವೆ ಜಗಳವಿದೆ, ಮೊದಲೂ ಅಲ್ಲ ಕೊನೆಯೂ ಅಲ್ಲ: ಡಿಸಿಎಫ್

ಏನಿದು ಪ್ರಕರಣ?
ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಕಗ್ಗಲೀಪುರದ ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು ಐಟಿ ಆಕ್ಟ್‌ 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಿಸಿದ್ದರು. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು.

<iframe width=”560″ height=”315″ src=”https://www.youtube.com/embed/YCyGPc4hol0?si=bWm8KsOw-pBHO2Ad” title=”YouTube video player” frameborder=”0″ allow=”accelerometer; autoplay; clipboard-write; encrypted-media; gyroscope; picture-in-picture; web-share” referrerpolicy=”strict-origin-when-cross-origin” allowfullscreen></iframe>