ಪ್ರಜ್ವಲ್ ರೇವಣ್ಣ ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆ – 2,144 ಪುಟಗಳ ದೋಷಾರೋಪ ಪಟ್ಟಿಯಲ್ಲೇನಿದೆ?

– ಅತ್ಯಾಚಾರ ಪ್ರಕರಣದಲ್ಲಿ ಅಪ್ಪ, ಮಗನ ವಿರುದ್ಧ ಚಾರ್ಜ್‌ಶೀಟ್‌
– ಅಡುಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂದಿನಿಂದ ಬಂದು ತಬ್ಬಿ, ಸೊಂಟ ಗಿಂಡಿ, ಬಾ ಎಂದು ಕರೆದಿರೋದು ಉಲ್ಲೇಖ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮೊದಲ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. 2,144 ಪುಟಗಳ ದೋಷಾರೋಪ ಪಟ್ಟಿಯನ್ನು 42 ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಎಸ್‌ಐಟಿ (SIT) ಸಲ್ಲಿಸಿದೆ.

ರಾಜ್ಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 137 ಸಾಕ್ಷ್ಯಗಳನ್ನು ಸಂಗ್ರಹಿಸಿ, ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಇದರಲ್ಲಿ ಏನಿದೆ ಎಂಬ ಬಗ್ಗೆ ‘ಪಬ್ಲಿಕ್ ಟಿವಿ’ಗೆ ಮಾಹಿತಿ ಸಿಕ್ಕಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಸಂಡೇ ಲಾಯರ್, ರಾಹುಲ್ ಗಾಂಧಿ ಮೌನ ಏಕೆ?: ಛಲವಾದಿ ನಾರಾಯಣಸ್ವಾಮಿ ಕಿಡಿ

ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಅಪ್ಪ, ಮಗನ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಅಪ್ಪ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಮಗ ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾದ ಮೊದಲ ಪ್ರಕರಣ ಇದಾಗಿದೆ.

ಮನೆ ಕೆಲಸ ಸಂತ್ರಸ್ತ ಮಹಿಳೆಗೆ ರೇವಣ್ಣ ಮನೆಯಲ್ಲಿ ಮೈ ಕೈ ಮುಟ್ಟಿ ದೌರ್ಜನ್ಯ ಎಸಗಿದ್ದಾರೆ. ಹಣ್ಣು ಕೊಡುವ ನೆಪದಲ್ಲಿ ಸೊಂಟ ಚಿವುಟಿ, ಸೀರೆ ಎಳೆದು ಪ್ರಜ್ವಲ್ ದೌರ್ಜನ್ಯವೆಸಗಿದ್ದಾರೆ ಎಂದು ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ರಾಜ್ಯಪಾಲರು ಸರ್ಕಾರದ ವಿರುದ್ಧ ಇರೋದು ಸ್ಪಷ್ಟ – ಪರಮೇಶ್ವರ್ ಆರೋಪ

ಮಗ ಪ್ರಜ್ವಲ್ ವಿರುದ್ಧ ಅತ್ಯಾಚಾರ, ಹೊಳೆನರಸೀಪುರ ಮನೆಯಲ್ಲಿ ನಿರಂತರವಾಗಿ ಅತ್ಯಾಚಾರ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಬಸವನಗುಡಿ ಮನೆಯಲ್ಲೂ ಅತ್ಯಾಚಾರ ನಡೆಸಿರೋದಾಗಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಲಾಗಿದೆ.

ಹೊಳೆನರಸೀಪುರ ಮನೆಯಿಂದ ಬೆಂಗಳೂರು ಮನೆಗೆ ಕರೆದುಕೊಂಡು ಬಂದು ಕೂಡ ಅತ್ಯಾಚಾರ ಎಸಗಿದ್ದಾರೆ. ಹೊತ್ತಿಲ್ಲದ ಹೊತ್ತಿನಲ್ಲಿ ಸಂತ್ರಸ್ತೆಯ ಜೊತೆ ಬೆದರಿಸಿ ನಿರಂತರವಾಗಿ ಲೈಂಗಿಕ ಸಂಪರ್ಕ ನಡೆಸಿದ್ದಾರೆ ಎಂದು ತನಿಖೆ ನಡೆಸಿದ ಎಸ್‌ಐಟಿಯಿಂದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಬಿಜೆಪಿ ಪರಿಷತ್ ಸದಸ್ಯ

ಎ1 ಹೆಚ್‌ಡಿ ರೇವಣ್ಣ: ಸಂತ್ರಸ್ತ ಮಹಿಳೆಯನ್ನ ರೂಮಿಗೆ ಕರೆಯುತ್ತಿದ್ದರು. ಹಣ್ಣು ಕೊಡುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ. ಮೈ ಕೈ ಮುಟ್ಟಿ, ಹತ್ತಿರಕ್ಕೆ ಎಳೆದುಕೊಂಡು ಲೈಂಗಿಕ ಕಿರುಕುಳ ನೀಡಿದ್ದಾರೆ. ಕಲಂ 354, 354 (ಎ) ಐಪಿಸಿ ಅಡಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.