ಸೋನಿಯಾ ಗಾಂಧಿ ಮತ್ತೆ ಆಸ್ಪತ್ರೆಗೆ ದಾಖಲು

ನವದೆಹಲಿ: ಈ ಹಿಂದೆ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ (Congress) ನಾಯಕಿ ಸೋನಿಯಾ ಗಾಂಧಿ (Sonia Gandhi) ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜ್ವರ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ (Ganga Ram Hospital) ದಾಖಲಿಸಲಾಗಿದೆ ಎಂದು ಎಐಸಿಸಿ ವಕ್ತಾರರು ತಿಳಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ ನಂತ್ರ ಸೋನಿಯಾ ಗಾಂಧಿ ಶ್ವಾಸಕೋಶದಲ್ಲಿ ಫಂಗಲ್ ಇನ್ಫೆಕ್ಷನ್

SONIA GANDHI

ಆಸ್ಪತ್ರೆಯ ಟ್ರಸ್ಟ್ ಸೊಸೈಟಿ ಅಧ್ಯಕ್ಷ ಡಿ.ಎಸ್ ರಾಣಾ, ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ಸಲಹೆಗಾರ ಅರೂಪ್ ಬಸು ಅವರ ತಂಡವು ಸೋನಿಯಾ ಗಾಂಧಿ ಅವರ ಆರೋಗ್ಯ ಮೇಲ್ವಿಚಾರಣೆ ನಡೆಸುತ್ತಿದೆ.

ಜ್ವರದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಆರೋಗ್ಯ ಸ್ಥಿರವಾಗಿದ್ದು, ಅವರನ್ನ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರ ತಂಡ ಹೇಳಿದೆ. ಇದನ್ನೂ ಓದಿ: ಅದಾನಿ ಸಮೂಹ ಕಂಪನಿಗಳಲ್ಲಿ 15,446 ಕೋಟಿ ಹೂಡಿಕೆ – ಅದಾನಿ ಕೈ ಹಿಡಿದ ರಾಜೀವ್‌ ಜೈನ್‌ ಯಾರು?

ಸೋನಿಯಾ ಗಾಂಧಿ ಅವರು ಈ ಹಿಂದೆ ಶ್ವಾಸಕೋಶದಲ್ಲಿ ಇನ್ಫೆಕ್ಷನ್ ಸಮಸ್ಯೆಯಿಂದ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು.

Comments

Leave a Reply

Your email address will not be published. Required fields are marked *