ಚಂಡೀಗಢ: ಸಹೋದರಿ ಮಾಳವಿಕಾ ಸೂದ್ ಪಂಜಾಬ್ ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಾಲಿವುಡ್ ನಟ ಸೋನು ಸೂದ್ ತಿಳಿಸಿದ್ದಾರೆ.

ಚಂಡೀಗಢದಿಂದ ಸುಮಾರು 170 ಕಿಮೀ ದೂರದಲ್ಲಿರುವ ಮೊಗಾ ಎಂಬಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಪಂಜಾಬ್ ಚುನಾವಣೆಯಲ್ಲಿ ಸಹೋದರಿ ಮಾಳವಿಕಾ ಸೂದ್ ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಯಾವ ಪಕ್ಷದಿಂದ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ ಎನ್ನುವುದು ಮಾತ್ರ ಇನ್ನೂ ಗೌಪ್ಯವಾಗಿದೆ. ಇದನ್ನೂ ಓದಿ: ಹಸು ಸಗಣಿ, ಗೋಮೂತ್ರ ಆರ್ಥಿಕತೆ ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್

ಸೂದ್ ಇತ್ತೀಚೆಗೆ ಪಂಜಾಬ್ ಮುಖ್ಯಮಂತ್ರಿ ಚರಣ್‍ಜೀತ್ ಸಿಂಗ್ ಚನ್ನಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದರು. ಕೇಜ್ರಿವಾಲ್ ಅವರೊಂದಿಗಿನ ಭೇಟಿ ಪಂಜಾಬ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿಯಾಗಿ ರಾಜಕೀಯ ಪಾದಾರ್ಪಣೆ ಮಾಡಲಿದ್ದಾರೆ ಎನ್ನುವ ವದಂತಿಗಳನ್ನು ಹುಟ್ಟುಹಾಕಿತು. ಆದರೆ ಈ ವೇಳೆ ಸೂನು ಸೂದ್ ಅವರು ನಾವು ಸದ್ಯಕ್ಕೆ ನಾವು ಯಾವುದೇ ರಾಜಕೀಯವನ್ನು ಚರ್ಚಿಸಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದರು. ಆದರೆ ಇದೀಗ ಅವರ ಸಹೋದರಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಕಾ ಆಗಿದೆ. ಯಾವ ಪಕ್ಷದ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಭಾಗವಹಿಸಲಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿಯಬೇಕಿದೆ. ಇದನ್ನೂ ಓದಿ: ಹಿಂದೂ ಧರ್ಮ, ಹಿಂದುತ್ವ ಬೇರೆ ಬೇರೆ: ರಾಹುಲ್ ಗಾಂಧಿ

ಸೋನು ಸೂದ್ ಅವರು ಕೊರೊನಾ ಲಾಕ್‍ಡೌನ್‍ನಲ್ಲಿ ಸಿಲುಕಿ ಅಸಹಾಯಕರಾಗಿರುವ ನೂರಾರು ವಲಸಿಗರನ್ನು ಅವರ ಸ್ವಂತ ರಾಜ್ಯಕ್ಕೆ ಕರೆದೊಯ್ಯಲು ಬಸ್‍ಗಳು, ರೈಲು ಮತ್ತು ವಿಮಾನಗಳನ್ನು ಸಹ ವ್ಯವಸ್ಥೆ ಮಾಡಿದರು. ಈ ವರ್ಷದ ಆರಂಭದಲ್ಲಿ ಎರಡನೇ ಅಲೆ ವೇಳೆ ಕೋವಿಡ್ ರೋಗಿಗಳಿಗೆ ಆಕ್ಸಿಜನ್ ಸಿಲಿಂಡರ್ ಮತ್ತು ಕೊರೊನಾ ಲಸಿಕೆಯನ್ನು ನೀಡುವಲ್ಲಿ ಸಹಾಯ ಮಾಡಿದ್ದರು.

Leave a Reply