ಎಸ್‍ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಸೊಸೆ ಅಪರ್ಣಾ ಯಾದವ್ ಬಿಜೆಪಿಗೆ?

ಲಕ್ನೋ: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನವೇ ನಡೆಯುತ್ತಿರುವ ಭಾರೀ ರಾಜಕೀಯ ಬೆಳವಣಿಗೆ ಮಧ್ಯೆ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಬಿಜೆಪಿ ಸೇರುವ ಸಾಧ್ಯತೆ ಇದೆ.

ಮುಲಾಯಂ ಸಿಂಗ್ ಅವರ ಕಿರಿಯ ಪುತ್ರ ಪ್ರತೀಕ್ ಯಾದವ್ ಅವರ ಪತ್ನಿ ಅಪರ್ಣಾ ಯಾದವ್ ಅವರು ಬಿಜೆಪಿ ಪಕ್ಷಕ್ಕೆ ಸೇರಬಹುದು ಎಂಬ ಗಾಳಿ ಸುದ್ದಿ ಹರಿದಾಡುತ್ತಿದೆ.   2017ರ ಉತ್ತರ ಪ್ರದೇಶ ಲಕ್ನೋ ಕ್ಯಾಂಟ್‌ ಕ್ಷೇತ್ರದಲ್ಲಿ ಅಪರ್ಣಾ ಸ್ಪರ್ಧಿಸಿ ಬಿಜೆಪಿಯ ರೀಟಾ ಬಹುಗುಣ ಜೋಶಿ ವಿರುದ್ಧ ಸೋತಿದ್ದರು. ಇದನ್ನೂ ಓದಿ: ಆಫ್ಘಾನ್ ಸಂಗೀತಗಾರನ ಮುಂದೆಯೇ ವಾದ್ಯ ಸುಟ್ಟ ತಾಲಿಬಾನಿಗಳು

ರಾಮ ಮಂದಿರ ನಿರ್ಮಾಣಕ್ಕೆ 11 ಲಕ್ಷ ರೂಪಾಯಿ ದೇಣಿಗೆ ನೀಡುವುದರಿಂದ ಹಿಡಿದು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಆರ್‌ಸಿ)ವರೆಗೂ ಅಪರ್ಣಾ ಅವರು ಬಿಜೆಪಿ ಮತ್ತು ಕೇಂದ್ರ ಸರ್ಕಾರದ ನೀತಿಗಳನ್ನು ಬಹಿರಂಗವಾಗಿಯೇ ಬೆಂಬಲಿಸಿದ್ದಾರೆ. ರಾಮಮಂದಿರ ನಿರ್ಮಾಣಕ್ಕೆ 11 ಲಕ್ಷ ರೂಪಾಯಿ ದೇಣಿಗೆ ನೀಡುವ ವೇಳೆ, ನಾನು ಸ್ವಯಂ ಪ್ರೇರಣೆಯಿಂದ ಈ ದೇಣಿಗೆ ನೀಡಿದ್ದೇನೆ. ಮಹಾನ್ ಪುರುಷ ರಾಮ, ಭಾರತದ ಸಂಸ್ಕೃತಿ ಮತ್ತು ನಂಬಿಕೆಯ ಕೇಂದ್ರ. ಪ್ರತಿಯೊಬ್ಬ ಭಾರತೀಯರು ರಾಮ ಮಂದಿರಕ್ಕೆ ದೇಣಿಗೆ ನೀಡಬೇಕು ಎಂದು ಹೇಳಿದ್ದರು.

ಹಿಂದೂಳಿದ ವರ್ಗದ ಹಲವಾರು ನಾಯಕರು ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಈ ಮಧ್ಯೆ ಅಪರ್ಣಾ ಯಾದವ್ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದರೆ ಪಕ್ಷಕ್ಕೆ ಬಲ ಬಂದಂತಾಗುತ್ತದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳಾಗುತ್ತಿವೆ. ಇದನ್ನೂ ಓದಿ: ಯುಪಿ ಬಿಜೆಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಬಿಜೆಪಿಯ ಮಾಜಿ ಸಚಿವರಾದ ಸ್ವಾಮಿ ಪ್ರಸಾದ್ ಮೌರ್ಯ ಮತ್ತು ಧರಂ ಸಿಂಗ್ ಸೈನಿ ಮತ್ತು ಇತರೆ ಶಾಸಕರು ಶುಕ್ರವಾರ ತಮ್ಮ ಬೆಂಬಲಿಗರೊಂದಿಗೆ ಎಸ್‍ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 2017ರಲ್ಲಿ ಹಿಂದುಳಿದ ಜಾತಿಗಳನ್ನು ವಂಚಿಸಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೇಸರಿ ಪಕ್ಷದ ಅವನತಿಯ ಕ್ಷಣಗಣನೆ ಆರಂಭವಾಗಿದೆ ಎಂದು ಸ್ವಾಮಿ ಪ್ರಸಾದ್ ಮೌರ್ಯ ಮಾತನಾಡಿದ್ದರು. ಇದನ್ನೂ ಓದಿ:  ವಾರಪೂರ್ತಿ ಜನಜಾತ್ರೆ, ವಾರಾಂತ್ಯದಲ್ಲಿ ಕರ್ಫ್ಯೂ – ಆತಂಕದಲ್ಲಿ ಕಾಫಿನಾಡು ಜನತೆ

ಈ ಮುನ್ನ ಫಿರೋಜಾಬಾದ್ ಜಿಲ್ಲೆಯ ಸಿರ್ಸಗಂಜ್‍ನ ಹಾಲಿ ಎಸ್‍ಪಿ ಶಾಸಕ ಹರಿಯೋಮ್ ಯಾದವ್ ಬುಧವಾರ ದೆಹಲಿಯಲ್ಲಿ ಹಿರಿಯ ರಾಜ್ಯ ನಾಯಕರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Comments

Leave a Reply

Your email address will not be published. Required fields are marked *