Mysuru Bengaluru Expressway ಪ್ರಯಾಣಕ್ಕೆ ಸ್ಪೀಡ್ ಲಿಮಿಟ್ – 100 ಕಿಮೀ ವೇಗ ದಾಟಿದ್ರೆ ಫೈನ್!

ಬೆಂಗಳೂರು: ಎಕ್ಸ್‌ಪ್ರೆಸ್‌ವೇನಲ್ಲಿ ವೇಗದ ಮಿತಿಯನ್ನು ಅಳವಡಿಸಿ ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ. ಸ್ಪೀಡ್ ಲಿಮಿಟ್ 100 ಕಿಮೀಗೆ ಸೀಮಿತಗೊಳಿಸಿದ್ದು, ಈ ಬಗ್ಗೆ ಅವರು ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ರಸ್ತೆ ವಾಹನ ಸಂಚಾರಕ್ಕೆ ಮುಕ್ತಗೊಂಡ ಬಳಿಕ ನೂರಾರು ಅಪಘಾತಗಳಿಂದ ಸಾಕಷ್ಟು ಸಾವುನೋವುಗಳು ಸಂಭವಿಸಿವೆ. ಈ ಬಗ್ಗೆ ರಸ್ತೆ ಪರಿಶೀಲನೆ ನಡೆಸಿದ್ದ ಎಡಿಜಿಪಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಕೈಗೊಳ್ಳಬಹುದಾದ ಕ್ರಮಗಳನ್ನು ಪಟ್ಟಿ ಮಾಡಿದ್ದರು. ಇದೀಗ ರಸ್ತೆಯಲ್ಲಿ ವೇಗ ಮಿತಿಯ ಬೋರ್ಡ್‍ಗಳನ್ನು ಅಳವಡಿಸಲಾಗಿದೆ. ಅಲ್ಲದೇ ರಾಮನಗರ ಜಿಲ್ಲೆಯಲ್ಲಿ ಸ್ಪೀಡ್ ರೆಡಾರ್ ಗನ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಯುಪಿಯಲ್ಲಿ ಮುಂದುವರೆದ ಬುಲ್ಡೋಜರ್ ಅಸ್ತ್ರ – ಲವ್ ಜಿಹಾದ್ ಆರೋಪಿ ಮನೆ ಉಡೀಸ್

ವೇಗ ಮಿತಿ ದಾಟಿದರೆ 1000 ರೂ. ದಂಡ ಹಾಗೂ ಡಿಎಲ್ ರದ್ದುಪಡಿಸುವ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆಯ ಫೋಟೊ ಹಾಗೂ ನೋಟಿಸ್ ನೀಡಿ ದಂಡ ವಸೂಲಿ ಮಾಡಲಾಗುತ್ತಿದೆ. ಈ ನಿರ್ಧಾರಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಟೀಕಿಸಿ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: Bengaluru Mysuru Expressway- ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧಿಸಿ: ಮರಿತಿಬ್ಬೇಗೌಡ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]