ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಕಾರು – ಮೂವರಿಗೆ ಗಾಯ

ಹೈದರಾಬಾದ್: ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿಗಳಿಗೆ ಗುದ್ದಿದ್ದು, ಮೂವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್‍ನಲ್ಲಿ ನಡೆದಿದೆ.

ಕರ್ನೂಲ್‍ನ ವಿಸಿ ಕಾಲೋನಿಯಲ್ಲಿ ನಡೆದ ಈ ಘಟನೆ ಸಿಸಿಟಿವಿ ಕ್ಯಾಮೆರಾವೊಂದರಲ್ಲಿ ಸೆರೆಯಾಗಿದೆ. ವೀಡಿಯೋದಲ್ಲಿ ವೇಗವಾಗಿ ಬಂದ ಕಾರು ರಸ್ತೆ ಬದಿ ನಿಲ್ಲಿಸಿದ್ದ ಬೈಕ್‍ಗೆ ಗುದ್ದಿ, ನಂತರ ಪಕ್ಕದಲ್ಲಿ ನಡೆದುಕೊಂಡು ಬರುತ್ತಿದ್ದ ಜನರಿಗೆ ಡಿಕ್ಕಿ ಹೊಡೆದಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

ಸದ್ಯ ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನೆ ಬಳಿಕ ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ವೇಗವಾಗಿ ಬೈಕ್‍ನಲ್ಲಿ ಬಂದು ಬಟ್ಟೆ ಅಂಗಡಿಗೆ ನುಗ್ಗಿದ – ವೀಡಿಯೋ ವೈರಲ್

ಇದೇ ರೀತಿ ಕೆಲವು ತಿಂಗಳ ಹಿಂದೆ ರಸ್ತೆಯಲ್ಲಿ ಸಾಗುತ್ತಿದ್ದ ಬೈಕ್ ಸವಾರ ನಿಯಂತ್ರಣ ತಪ್ಪಿ ವೇಗವಾಗಿ ಬಂದು ಅಂಗಡಿಗೆ ನುಗ್ಗಿದ ಭಯಾನಕ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಘಟನೆಯ ವೀಡಿಯೋ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅಂಗಡಿಯಲ್ಲಿ 4 ಜನ ಕುಳಿತುಕೊಂಡಿರುತ್ತಾರೆ. ಈ ವೇಳೆ ಬ್ರೇಕ್ ಫೇಲ್ ಆಗಿದ್ದರ ಪರಿಣಾಮ ನಿಯಂತ್ರಣ ತಪ್ಪಿ ಬಜಾಜ್ ಪಲ್ಸರ್ ಬೈಕ್ ಅಂಗಡಿಯ ಒಳಗೆ ನುಗ್ಗಿದ್ದು, ವಾಹನ ಸವಾರ ಕೌಂಟರ್‌ಗೆ ಜಿಗಿದಿದ್ದನು. ಇದನ್ನೂ ಓದಿ: ನನಗೂ ಈ ಗಲಾಟೆಗೂ ಯಾವುದೇ ಸಂಬಂಧ ಇಲ್ಲ, ನನ್ನ ವಿರುದ್ಧ ತನಿಖೆ ಆಗಲಿ: ನಲಪಾಡ್

Car, people, Video, Hyderabad

Comments

Leave a Reply

Your email address will not be published. Required fields are marked *