ತಿರುಪತಿ ದೇಗುಲದಲ್ಲಿ ಕಾಲ್ತುಳಿತ – ವೆಂಕಟೇಶ್ವರನ ದರ್ಶನಕ್ಕೆ ಭಕ್ತಾದಿಗಳ ನೂಕುನುಗ್ಗಲು

ಅಮರಾವತಿ: ಆಂಧ್ರಪ್ರದೇಶದ ತಿರುಮಲ ತಿರುಪತಿ ದೇಗುಲದ(ಟಿಟಿಡಿ) ಟಿಕೆಟ್ ಕೌಂಟರ್‌ನಲ್ಲಿ ಮಂಗಳವಾರ ಕಾಲ್ತುಳಿತದಂತಹ ಸ್ಥಿತಿ ನಿರ್ಮಾಣವಾಗಿದ್ದು, ಘಟನೆಯಲ್ಲಿ ಮೂವರು ಭಕ್ತಾದಿಗಳಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.

ಮಂಗಳವಾರ 10,000ಕ್ಕೂ ಹೆಚ್ಚು ಯಾತ್ರಾರ್ಥಿಗಳು ವೆಂಕಟೇಶ್ವರನ ದರ್ಶನಕ್ಕೆ ಟಿಕೆಟ್ ಪಡೆಯಲು ಕೌಂಟರ್‌ನಲ್ಲಿ ಜಮಾಯಿಸಿದ್ದರು. ಭಕ್ತರ ಸಂಖ್ಯೆ ಹೆಚ್ಚಾದರಿಂದ ಕಾಲ್ತುಳಿತ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಲವ್ ಕೇಸರಿ ಶಬ್ದ ಚೆನ್ನಾಗಿದೆ: ಪ್ರಮೋದ್ ಮುತಾಲಿಕ್

ತಿರುಪತಿಯ 3 ಟೋಕನ್ ಕೌಂಟರ್‌ಗಳಲ್ಲಿ ಭಾರಿ ಜನದಟ್ಟಣೆ ಕಂಡುಬಂದಿದೆ. ಇದನ್ನು ನೋಡಿ ಟಿಟಿಡಿ ಮಂಡಳಿ ಯಾತ್ರಾರ್ಥಿಗಳನ್ನು ನೇರವಾಗಿ ದರ್ಶನ ಪಡೆಯಲು ಕಂಪಾರ್ಟ್ಮೆಂಟ್‌ಗೆ ಕಳುಹಿಸಲು ನಿರ್ಧರಿಸಿದೆ. ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತ ಶೀಘ್ರದಲ್ಲೇ ಹಿಂದೂ ರಾಷ್ಟ್ರವಾಗಲಿದೆ ಎಂದಿದ್ದ ಬಿಜೆಪಿ MLA ವಿರುದ್ಧ ದೂರು ದಾಖಲು

ಟಿಕೆಟ್ ಕೌಂಟರ್‌ಗಳಲ್ಲಿ ಕಾಲ್ತುಳಿತದ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಟಿಟಿಡಿ ಭಾನುವಾರದವರೆಗೆ ವಿಐಪಿ ದರ್ಶನವನ್ನು ರದ್ದುಗೊಳಿಸಿದೆ.

Comments

Leave a Reply

Your email address will not be published. Required fields are marked *