ಇಸ್ಲಾಂಗೆ ಮತಾಂತರ ಆದ್ರಾ ಸ್ಟಾರ್ ನಟ ವಿಶಾಲ್: ಏನಿದು ಇನ್ಶ್ಯಾ ಅಲ್ಲಾಹ್?

ಮಿಳಿನ ಖ್ಯಾತ ನಟ ವಿಶಾಲ್ ದೇವರ ಬಗ್ಗೆ ಅಪಾರ ನಂಬಿಕೆವುಳ್ಳವರು. ಅವರು ಯಾವ ಜಾತಿಯರು ಎಂದು ಈವರೆಗೂ ಅಭಿಮಾನಿಗಳು ಕೇಳದೇ ಆರಾಧಿಸುತ್ತಾ ಬಂದಿದ್ದಾರೆ. ಸದ್ಯ ವಿಶಾಲ್ ಮಾಡಿರುವ ಒಂದು ಟ್ವಿಟ್ ನಿಂದಾಗಿ ವಿಶಾಲ್ ಯಾವ ಧರ್ಮದವರು ಎಂದು ಹುಡುಕುತ್ತಿದ್ದಾರೆ ನೆಟ್ಟಿಗರು. ಇದನ್ನೂ ಓದಿ : ತಾಳಿಕಟ್ಟಿ ಹೆಂಡತಿಯನ್ನು ಎತ್ತಿಕೊಂಡ ರಣಬೀರ್ ಕಪೂರ್

ವಿಶಾಲ್ ಅವರ ಸಹೋದರಿ ಐಶು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಖುಷಿಯನ್ನು ಅಭಿಮಾನಿಗಳ ಜತೆ ಹಂಚಿಕೊಂಡಿರುವ ಅವರು, ‘ನಾನು ಮತ್ತೆ ಅಂಕಲ್ ಆಗಿರುವೆ. ಮತ್ತೊಮ್ಮೆ ಅಂಕಲ್ ಆಗಿರುವುದು ಸಂಭ್ರಮ ತಂದಿದೆ. ನನ್ನ ಸಹೋದರಿ ಐಶು ಅವರು ರಾಜಕುಮಾರಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಮತ್ತು ಸಹೋದರಿಗೂ ಶುಭ ಹಾರೈಸಿ. ಇಬ್ಬರಿಗೂ ಇನ್ಶ್ಯಾ ಅಲ್ಲಾಹ್ ನ ಆಶೀರ್ವಾದವಿರಲಿ’ ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ‘ಇನ್ಶ್ಯಾ ಅಲ್ಲಾಹ್’ ಎಂಬ ಪದವೇ ಇದೀಗ ಚರ್ಚೆಗೆ ಕಾರಣವಾಗಿದೆ. ಇದನ್ನೂ ಓದಿ: ‘BOSS’ ಪಟ್ಟ ಅಲಂಕರಿಸಿದ ಯಶ್ : ಟ್ವಿಟರ್ ಟ್ರೆಂಡಿಂಗ್ ನಲ್ಲಿ #YASHBOSS

ಅಲ್ಲಾಹ್ ದೇವರ ಆಶೀರ್ವಾದ ಕೋರಿರುವ ವಿಶಾಲ್ ಹಾಗಾದರೆ, ಇಸ್ಲಾಂಗೆ ಮತಾಂತರ ಆಗಿದ್ದಾರಾ ಎಂದು ನೆಟ್ಟಿಗರು ಹಲವು ರೀತಿಯಲ್ಲಿ ಪ್ರಶ್ನೆ ಮಾಡಿದ್ದಾರೆ. ಅಷ್ಟಕ್ಕೂ ಇಂಥದ್ದೊಂದು ಪದವನ್ನು ಅವರು ಹಾಕಿರುವುದಾದರೂ ಏತಕ್ಕೆ ಎನ್ನುವ ಚರ್ಚೆ ಕೂಡ ತಮಿಳು ನಾಡಿನಲ್ಲಿ ನಡೆದಿದೆ. ಅದಕ್ಕೆ ವಿಶಾಲ್ ಯಾವುದೇ ರೀತಿಯಲ್ಲಿ ಪ್ರತಿಕ್ರಿಯೆ ಕೊಡಲು ಹೋಗಿಲ್ಲ.

ಸಮಾಜಮುಖಿ ಕಾರ್ಯಗಳಿಂದಾಗಿ ವಿಶಾಲ್ ಎಲ್ಲರ ಪ್ರೀತಿಯ ನಟರಾಗಿ ಉಳಿದುಕೊಂಡಿದ್ದಾರೆ. ಕನ್ನಡದ ಹೆಮ್ಮೆಯ ನಟ ಪುನೀತ್ ರಾಜ್ ಕುಮಾರ್ ನಿಧನರಾದಾಗ, ಅಪ್ಪು ನೋಡಿಕೊಳ್ಳುತ್ತಿದ್ದ ಅಷ್ಟೂ ಮಕ್ಕಳನ್ನು ದತ್ತು ಪಡೆದುಕೊಂಡು ಓದಿಸುತ್ತೇನೆ ಎಂದು ಹೇಳಿದ್ದರು. ಈ ನಡೆ ಭಾರೀ ಮೆಚ್ಚುಗೆಗೆ ಪಾತ್ರವಾಗಿತ್ತು. ಅಲ್ಲದೇ, ಪುನೀತ್ ಅವರ ಹೆಸರಿನಲ್ಲಿ ಅವರು ಗಿಡಗಳನ್ನು ನೆಟ್ಟು, ಪುನೀತ್ ಅಭಿಮಾನಿಗಳು ಪ್ರೀತಿಗೂ ವಿಶಾಲ್ ಪಾತ್ರರಾಗಿದ್ದರು. ಇದನ್ನೂ ಓದಿ:ಬೀಸ್ಟ್ ಸಿನಿಮಾಕ್ಕೆ ಸೆಡ್ಡು ಹೊಡೆದ ಕೆಜಿಎಫ್-2 – ಕೇರಳ, ತಮಿಳುನಾಡಿನಲ್ಲೂ ರಾಕಿಭಾಯ್ ಹವಾ

ಸದ್ಯ ವಿಶಾಲ್ ಅವರು ಲಾಠಿ ಎಂಬ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಸುನೈನಾ ಅವರು ವಿಶಾಲ್ ಗೆ ನಾಯಕಿಯಾಗಿ ನಟಿಸಿದ್ದಾರೆ. ರಮಣ ಮತ್ತು ನಂದು ಈ ಸಿನಿಮಾವನ್ನು ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ.

Comments

Leave a Reply

Your email address will not be published. Required fields are marked *