ರಾಜ್ಯ ಬಿಜೆಪಿ ನಾಯಕರು ಅಸಮರ್ಥರು: ಪ್ರಿಯಾಂಕ್ ಖರ್ಗೆ

ಕಲಬುರಗಿ: ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನಾವೀಸ್ ಮತ್ತು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಪದೇ ಪದೇ ಬರೋದನ್ನ ನೋಡಿದರೆ ಕರ್ನಾಟಕ ಬಿಜೆಪಿ ನಾಯಕರು ಅಸಮರ್ಥರಾಗಿದ್ದಾರೆ ಎಂದು ಅರ್ಥವಾಗುತ್ತದೆ ಎಂದು ಸಮಾಜಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಬಿಜೆಪಿ ನಾವು ಅಧಿಕಾರಕ್ಕೆ ಬರುತ್ತೇವೆ ಅಂತಾ ಹೇಳುತ್ತಿರೋದನ್ನ ನೋಡಿದ್ರೆ, ಐಟಿ ಮತ್ತು ಇಡಿ ಇಲಾಖೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ಮೇಲ್ನೋಟಕ್ಕೆ ಕಾಣಿಸುತ್ತದೆ. ಬಿಜೆಪಿ ಸಮ್ಮಿಶ್ರ ಸರ್ಕಾರ ಉರಿಳಿಸಲು ಪ್ರಯತ್ನಿಸಿದ್ರೆ, ಸರ್ಕಾರವಾಗಿ ಉಳಿಸಲು ನಾವು ಪ್ರಯತ್ನಿಸುತ್ತೇವೆ. ನಮ್ಮ ಜೊತೆ ಬಿಜೆಪಿ ಶಾಸಕರು ಇಲ್ವಾ..? ನಮ್ಮ ಸಂಪರ್ಕದಲ್ಲಿಯೂ ಹಲವು ನಾಯಕರಿದ್ದಾರೆ ಎಂದು ಹೇಳಿದರು.

ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ನಾನು ಸುಮ್ಮನೇ ಇರೋದಿಲ್ಲ ಅಂತಾ ಹೇಳುತ್ತಾ ಬಂದಿದ್ದಾರೆ. ಇನ್ನು ಪಿಎಲ್‍ಡಿ ಬ್ಯಾಂಕ್ ಚುನಾವಣೆಗೆ ಸಂಬಂಧಿಸಿದ ಗೊಂದಲವನ್ನು ಕೆಪಿಸಿಸಿ ಕಾರ್ಯಧ್ಯಕ್ಷರಾದ ಈಶ್ವರ್ ಖಂಡ್ರೆ ಬಗೆಹರಿಸಿದ್ದಾರೆ. ಬೆಳಗಾವಿ ರಾಜಕಾರಣದ ಬಗ್ಗೆ ನಾನು ಹೆಚ್ಚು ಮಾತನಾಡೋದಿಲ್ಲ. ಪಕ್ಷದ ಹಿರಿಯ ನಾಯಕರು ಈಗಾಗಲೇ ಆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ್ದಾರೆ ಎಂದು ಹೇಳುವ ಮೂಲಕ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Comments

Leave a Reply

Your email address will not be published. Required fields are marked *