ದುನಿಯಾ ವಿಜಿ ವಿರುದ್ಧ ಮಹಿಳಾ ಆಯೋಗ ಕೆಂಡಾಮಂಡಲ

ಬೆಂಗಳೂರು: ಸ್ಯಾಂಡಲ್ ವುಡ್ ಕರಿಚಿರತೆ ದುನಿಯಾ ವಿಜಯ್ ವಿರುದ್ಧ ರಾಜ್ಯ ಮಹಿಳಾ ಆಯೋಗ ಕೆಂಡಾಮಂಡಲವಾಗಿದೆ.

ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ್ದಕ್ಕೆ ಆಯೋಗ ವಿಜಯ್ ವಿರುದ್ಧ ಗರಂ ಆಗಿದೆ. ಈ ಹಿನ್ನೆಲೆಯಲ್ಲಿ ಇನ್ನೊಂದು ವಾರದೊಳಗೆ ವಿಚಾರಣೆಗೆ ಹಾಜರಾಗಿ ಅಂತ ಮತ್ತೊಮ್ಮೆ ಎಚ್ಚರಿಕೆ ಕೊಟ್ಟಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭಿಸಿದೆ.

ಜೀವನ ನಡೆಸಲು ನನಗೆ ವಿಜಯ್ ಹಣ ನೀಡುತ್ತಿಲ್ಲ. ಹೀಗಾಗಿ ಮಕ್ಕಳೊಂದಿಗೆ ಜೀವನ ನಡೆಸಲು ಸಾಕಷ್ಟು ತೊಂದರೆಯಾಗುತ್ತಿದೆ ಅಂತ ವಿಜಿ ವಿರುದ್ಧ ಆರೋಪ ಮಾಡಿ ಮೊದಲ ಪತ್ನಿ ನಾಗರತ್ನ ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ದೂರು ಸ್ವೀಕರಿಸಿದ್ದ ಆಯೋಗ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇದೇ 17ರಂದು ವಿಚಾರಣೆಗೆ ಹಾಜರಾಗುವಂತೆ ವಿಜಿಗೆ ನೋಟಿಸ್ ನೀಡಲಾಗಿತ್ತು.

ನೋಟೀಸ್ ಗೆ ಸ್ಪಂದಿಸಿದ ನಟ, ವಿಚಾರಣೆಗೆ ಹಾಜರಾಗುತ್ತೇನೆ. ಆದ್ರೆ ಫಿಲಂ ಶೂಟಿಂಗ್ ಇದ್ದ ಕಾರಣ ಒಂದು ವಾರ ಕಾಲಾವಕಾಶ ನೀಡಬೇಕು ಅಂತ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯೋಗ ಅದಕ್ಕೆ ಅನುವು ಮಾಡಿಕೊಟ್ಟಿತ್ತು. ಆದ್ರೆ ಇದೀಗ ಒಂದು ವಾರ ಕಳೆದ್ರೂ ದುನಿಯಾ ವಿಜಯ್ ವಿಚಾರಣೆಗೆ ಹಾಜರಾಗದೇ ಇದ್ದಿದ್ದರಿಂದ ವಿಜಿ ವಿರುದ್ಧ ಆಯೋಗ ಗರಂ ಆಗಿದೆ.

ಅಲ್ಲದೇ ಒಂದು ವಾರದೊಳಗೆ ವಿಚಾರಣೆಗೆ ಹಾಜರಾಗದೇ ಇದ್ದಲ್ಲಿ ವಿಜಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಮಹಿಳಾ ಆಯೋಗ ಎಚ್ಚರಿಕೆಯ ಸಂದೇಶ ರವಾನಿಸಿದೆ ಎಂಬುದಾಗಿ ತಿಳಿದುಬಂದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Comments

Leave a Reply

Your email address will not be published. Required fields are marked *