ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ

ನವದೆಹಲಿ: ಇಲ್ಲಿನ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಪಾದಯಾತ್ರೆ ವೇಳೆ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಮೇಲೆ ವ್ಯಕ್ತಿಯೊಬ್ಬರು ಲಿಕ್ವಿಡ್ (Liquid) ಎರಚಿರುವ ಘಟನೆ ನಡೆದಿದೆ.

ಘಟನೆ ಸಂಬಂಧ ಅಶೋಕ್ ಝಾ‌ ಎಂಬ ವ್ಯಕ್ತಿಯನ್ನ ಪೊಲೀಸರು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಕೇಜ್ರಿವಾಲ್ ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಬೆಂಬಲಿಗರೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ದೃಶ್ಯಾವಳಿ ವೀಡಿಯೋಗಳು ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕೆ ಅದ್ದೂರಿ ತೆರೆ – ಲಕ್ಷಾಂತರ ಭಕ್ತರು ಸಾಕ್ಷಿ

ಈ ಬೆಳವಣಿಗೆಗೆ ಪ್ರತಿಕ್ರಿಯಿಸಿದ ಎಎಪಿ, ಮಾಜಿ ಮುಖ್ಯಮಂತ್ರಿಯೊಬ್ಬರು ರಾಷ್ಟ್ರ ರಾಜಧಾನಿಯಲ್ಲಿ ಸುರಕ್ಷಿತವಾಗಿಲ್ಲದಿದ್ದರೆ, ಇನ್ನು ಜನಸಾಮಾನ್ಯರ ಗತಿ ಏನು? ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ನಮ್ಮ ಮಠ-ಮಾನ್ಯಗಳ ಜೀರ್ಣೋದ್ಧಾರಕ್ಕೆ ಆ ಮುಲ್ಲಾಗಳಿಂದ ಹಣ ತೆಗೆದುಕೊಳ್ಳಬೇಡಿ: ಯತ್ನಾಳ್

ಕೇಜ್ರಿವಾಲ್ ಅವರು ತಮ್ಮ ಭದ್ರತಾ ಸಿಬ್ಬಂದಿ ಹಿಂದೆ ನಿಂತಿರುವ ಜನರತ್ತ ಕೈಬೀಸುತ್ತಿದ್ದ ವೇಳೆ ಅವರ ಬಳಿಗೆ ಬಂದ ವ್ಯಕ್ತಿಯೊಬ್ಬ ಮಾಜಿ ಸಿಎಂ ಮೇಲೆ ದ್ರವ ಎರಚಿದ್ದಾನೆ. ತಕ್ಷಣ ಭದ್ರತಾ ಸಿಬ್ಬಂದಿ ಆತನನ್ನು ತಡೆದರು. ನಂತರ ಕೇಜ್ರಿವಾಲ್ ಮತ್ತು ಅವರ ಜೊತೆಗಿದ್ದ ಭದ್ರತಾ ಸಿಬ್ಬಂದಿ ಮುಖ ಒರೆಸಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಅದೇ ಪ್ರದೇಶದ ನಿವಾಸಿಯಾಗಿರುವ ಲಿಕ್ವಿಡ್ ಎರಚಿದ ವ್ಯಕ್ತಿಯನ್ನು ಸ್ಥಳೀಯ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನೂ ಮತ್ತೊಬ್ಬ ಆಪ್‌ ನಾಯಕ ಸೌರಭ್‌ ಭಾರದ್ವಾಜ್‌ ಮಾತನಾಡಿ, ಈ ದಾಳಿಯ ಹಿಂದೆ ಬಿಜೆಪಿ ಕೈವಾಡವಿದೆ. ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕುಸಿದಿದೆ ಮತ್ತು ಕೇಂದ್ರ ಸರ್ಕಾರ ಮತ್ತು ಗೃಹ ಸಚಿವರು ಏನನ್ನೂ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡು, ಆಂಧ್ರದಲ್ಲಿ ಫೆಂಗಲ್ ಅಬ್ಬರ – ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ