ಮೈಸೂರು: ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಮೈಸೂರು ಹೊರವಲಯದ ಘಟನೆ ನಡೆದ ಲಲಿತಾದ್ರಿಪುರ ಬಡಾವಣೆ ನಿರ್ಜನ ಪ್ರದೇಶದಲ್ಲಿ ಸಿಕ್ಕಿದ್ದ ವೈಜ್ಞಾನಿಕ ಸಾಕ್ಷ್ಯ ಹಾಗೂ ಟೆಕ್ನಿಕಲ್ ಎವಿಡೆನ್ಸ್ ಮೂಲಕ ಕಾರ್ಯಾಚರಣೆಗಿಳಿದ ಪೊಲೀಸರು ಘಟನೆ ನಡೆದು 82 ಗಂಟೆಗಳಲ್ಲಿ ಐವರನ್ನು ಬಂಧಿಸಿದ್ದಾರೆ. ಇಷ್ಟೆಲ್ಲ ಸಾಧ್ಯವಾಗಿದ್ದು ಮೈಸೂರು ಗ್ರಾಮಾಂತರ ಹಾಗೂ ದಕ್ಷಿಣ ವಲಯ ಪೊಲೀಸರ ಸಾಹಸದಿಂದ. ಈ ಸಾಹಸಕ್ಕೆ ಮುಂದಾಗಿ ಆಪರೇಷನ್ ಸಕ್ಸಸ್ ಮಾಡಿದ ಟೀಂ ಯಾವುದು, ಆ ಸೂಪರ್ ಕಾಪ್‍ಗಳ ವಿವರ ಇಲ್ಲಿದೆ. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

ಘಟನೆ ನಡೆಯುತ್ತಿದ್ದಂತೆ ಪೊಲೀಸರು ಕಾರ್ಯಾಚರಣೆಗೆ ತಂಡ ರಚಿಸಿದ್ದರು. ಈ ತಂಡದಲ್ಲಿ ಎಸಿಪಿ ಶಿವಶಂಕರ್, ಪೊಲೀಸ್ ಇನ್‍ಸ್ಪೆಕ್ಟರ್ ಗಳಾದ ಶ್ರೀಕಾಂತ್, ಮಹಾದೇವಸ್ವಾಮಿ, ಪ್ರಕಾಶ್, ಅಜರುದ್ದೀನ್, ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಜಯಪ್ರಕಾಶ್, ಸಹಾಯಕ ಸಬ್ ಇನ್‍ಸ್ಪೆಕ್ಟರ್ ಗಳಾದ ಅನಿಲ್ ಮತ್ತು ಅಲೆಕ್ಸ್, ಹೆಡ್ ಕಾನ್‍ಸ್ಟೇಬಲ್ ರಮೇಶ್, ಕಾಂತರಾಜು ಭಗತ್, ಶರೀಫ್, ಮಹಾದೇವು, ರಾಜು ಹಾಗೂ ಪೊಲೀಸ್ ಕಾನ್‍ಸ್ಟೇಬಲ್ ಜೀವನ್, ಗಿರೀಶ್, ಸಾಗರ್ ಮತ್ತು ಸಿಬ್ಬಂದಿ ಮಂಜುನಾಥ್, ಕಿಶೋರ್ ಹಾಗೂ ಲತೀಫ್ ಆರೋಪಿಗಳನ್ನು ಪತ್ತೆ ಹಚ್ಚುವ ತಂಡದಲ್ಲಿದ್ದರು. ಇದನ್ನೂ ಓದಿ: ದರೋಡೆ ಮಾಡಲು ಹೋಗಿ ಏನೂ ಸಿಗದಿದ್ದಾಗ ಯುವತಿಯ ಅತ್ಯಾಚಾರವೆಸಗಿದ ಕಾಮುಕರು!

Leave a Reply