ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ವಿವಿ ಆವರಣದಲ್ಲೇ ನೇಣಿಗೆ ಶರಣು!

ಧಾರವಾಡ: ಕರ್ನಾಟಕ ವಿವಿಯ ಹಳೆಯ ವಿದ್ಯಾರ್ಥಿಯೊಬ್ಬ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿರುವ ಗಾರ್ಡನ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಬಸವರಾಜ್ ಹಿಪ್ಪರಗಿ(28) ಎಂದು ಗುರುತಿಸಲಾಗಿದೆ. ಈತ ಶನಿವಾರ ರಾತ್ರಿನೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಸವರಾಜ್ ಹಿಪ್ಪರಗಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ನಾವಲಗಿ ಗ್ರಾಮದವರು ಎಂದು ತಿಳಿದು ಬಂದಿದೆ.

ಬಸವರಾಜ್ ಹಿಪ್ಪರಗಿ ಧಾರವಾಡದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದಕ್ಕೆ ರೂಂ ಮಾಡಿ ಇದ್ದರು ಎಂದು ತಿಳಿದುಬಂದಿದೆ. ಆದರೆ ಇದ್ದಕ್ಕಿದ್ದಂತೆ ಆವರಣದಲ್ಲಿರುವ ಗಾರ್ಡನ್ ನಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿದ್ಯಾರ್ಥಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನೆಯ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಉಪನಗರ ಪೊಲೀಸರು ಭೇಟಿ ನೀಡಿ ಶವವನ್ನ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಸದ್ಯಕ್ಕೆ ಉಪನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Comments

Leave a Reply

Your email address will not be published. Required fields are marked *