ಕಾರು ಪಲ್ಟಿ- SSLC ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಸಾವು!

ಕಾರವಾರ: ಅತಿವೇಗದ ಚಾಲನೆಯಿಂದ ಕಾರು ಪಲ್ಟಿಯಾಗಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ಓರ್ವ ವಿದ್ಯಾರ್ಥಿ ಮೃತಪಟ್ಟು, ಮೂರು ವಿದ್ಯಾರ್ಥಿಗಳಿಗೆ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ.

ಶಮ್ಮಾಸ್(19) ಅಪಘಾತದಲ್ಲಿ ಮೃತ ವಿದ್ಯಾರ್ಥಿ. ಶಮ್ಮಾಸ್ ಭಟ್ಕಳ ಪಟ್ಟಣದ ಜಾಮೀಯಾ ಸ್ಟ್ರೀಟ್ ನಿವಾಸಿಯಾಗಿದ್ದು, ಅಪಘಾತದಲ್ಲಿ ಗಾಯಗೊಂಡವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗಿದೆ. ಇಬ್ಬರು ವಿದ್ಯಾರ್ಥಿಗಳಿಗೆ ಚಿಕ್ಕಪುಟ್ಟ ಗಾಯಗಳಾಗಿದ್ದು, ಅಪಘಾತದ ನಂತರ ಪರೀಕ್ಷೆಯನ್ನು ಬರೆಯಲು ತೆರಳಿದ್ದಾರೆ.

ಮದರಸಾದಲ್ಲಿ ಓದುತಿದ್ದ ವಿದ್ಯಾರ್ಥಿಗಳು ಭಟ್ಕಳದಿಂದ ಕಾರವಾರದ ಕಡೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಬರೆಯಲು ತೆರಳುತ್ತಿದ್ದರು. ಈ ವೇಳೆ ಅತೀ ವೇಗದಲ್ಲಿ ಕಾರು ಚಲಾಯಿಸಿ ನಿಯಂತ್ರಿಸಲಾಗದೇ ಪಲ್ಟಿ ಹೊಡೆದಿದೆ. ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

ಈ ಘಟನೆ ಸಂಬಂಧ ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments

Leave a Reply

Your email address will not be published. Required fields are marked *