ಶಾಲೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ – ಪೋಕ್ಸೊ ಕಾಯ್ದೆಯಡಿ ಶಿಕ್ಷಕನ ಬಂಧನ

ಚೆನ್ನೈ: ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ತಮಿಳುನಾಡಿನ ಕೊಯಮತ್ತೂರು ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ.

ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಕಂಪ್ಯೂಟರ್ ಸೈನ್ಸ್ ಬೋಧಿಸುತ್ತಿದ್ದ ಆರೋಪಿಯ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಶಾಲೆಯ 11 ನೇ ತರಗತಿಯ ಕೆಲವು ವಿದ್ಯಾರ್ಥಿಗಳು ಶಿಕ್ಷಕ ಆನ್‌ಲೈನ್ ಹಾಗೂ ಆಫ್‌ಲೈನ್ ತರಗತಿಗಳಲ್ಲಿ ಅಶ್ಲೀಲ ಟೀಕೆ ಹಾಗೂ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಬಳ್ಳಾರಿಯಲ್ಲಿ ಸರಣಿ ಸರಕಳ್ಳತನ – ತಾಯಿ, ಮಗಳು ಬಂಧನ

ಗುರುವಾರ ವಿದ್ಯಾರ್ಥಿಗಳು ಶಾಲಾ ಮುಖ್ಯೋಪಾಧ್ಯಾಯರಿಗೆ ಈ ಬಗ್ಗೆ ದೂರನ್ನು ನೀಡಿದ್ದು, ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಶಾಲೆಯ ಮುಂಭಾಗದ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸುವುದಾಗಿಯೂ ಹೇಳಿದ್ದರು.

ಪೊಲೀಸ್ ಅಧಿಕಾರಿಗಳು ಹಾಗೂ ಶಾಲಾ ಮಂಡಳಿ ವಿಷಯವನ್ನು ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ತಿಳಿಸಿರುವುದಾಗಿ ವಿದ್ಯಾರ್ಥಿಗಳಿಗೆ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಣಾಧಿಕಾರಿ ಶುಕ್ರವಾರ ಆರೋಪಿ ಶಿಕ್ಷಕನನ್ನು ಅಮಾನತುಗೊಳಿಸಿದ್ದಾರೆ. ಇದನ್ನೂ ಓದಿ: ವಾಹನವನ್ನು ಓವರ್ ಟೇಕ್ ಮಾಡಿದ್ದಕ್ಕೆ ಕೆಎಸ್‌ಆರ್‌ಟಿಸಿ ಚಾಲಕ, ಕಂಡಕ್ಟರ್ ಮೇಲೆ ಹಲ್ಲೆ!

Comments

Leave a Reply

Your email address will not be published. Required fields are marked *