ಬೆಂಗಳೂರು: ಕಾಲೇಜಿನ ಎರಡನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಯತ್ನಿಸಿರುವ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ.
ಟಿ ಸಿ ಪಾಳ್ಯದ ನಿವಾಸಿ ಮೀನಾ (19) ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ. ಜೀವನ್ ಭೀಮಾನಗರದ ಮಹಿಮಾ ಕಾಲೇಜಿನಲ್ಲಿ ಬಿಎ ವ್ಯಾಸಂಗ ಮಾಡುತ್ತಿದ್ದಾಳೆ. ಮೀನಾ ಕಾಲೇಜಿಗೆ ಅಕ್ಕನ ಮನೆಯಿಂದ ಬರುತ್ತಿದ್ದಳು. ಆದರೆ ಇಂದು ಕಾಲೇಜಿನಲ್ಲಿ ಪ್ರಾರ್ಥನೆ ನಡೆಯುವಾಗ ಮೀನಾ ಮಹಡಿಯಿಂದ ಜಿಗಿದು ಆತ್ಮಹತ್ಯೆ ಯತ್ನಿಸಿದ್ದಾಳೆ. ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಇದನ್ನೂ ಓದಿ: OMICRON ಸೋಂಕಿಗೆ ಪ್ರತ್ಯೇಕ ಆಸ್ಪತ್ರೆ: ದೆಹಲಿ ಸರ್ಕಾರ

ಘಟನೆಯಿಂದಾಗಿ ವಿದ್ಯಾರ್ಥಿನಿಯ ತಲೆ ಮತ್ತು ಕಾಲಿಗೆ ಗಾಯಗಳಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ನಿಮ್ಹಾನ್ಸ್ ಆಸ್ಪತ್ರೆಗೆ ವಿದ್ಯಾರ್ಥಿನಿಯನ್ನು ದಾಖಲಿಸಲಾಗಿದೆ. ಘಟನೆ ಸಂಬಂಧಿಸಿದಂತೆ ಸ್ಥಳಕ್ಕೆ ಜೀವನ್ ಭೀಮಾನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು.ಇದನ್ನೂ ಓದಿ: ಓಮಿಕ್ರಾನ್ ರೂಪಾಂತರಿಯಿಂದ ಜಾಗತಿಕ ಅಪಾಯ ಹೆಚ್ಚು-WHO

Leave a Reply