ಪರೀಕ್ಷೆಯಲ್ಲಿ ಹೆಚ್ಚುವರಿ ಸಮಯ ನಿರಾಕರಿಸಿದ್ದಕ್ಕೆ ಶಾಲಾ ಕಟ್ಟಡವನ್ನೇ ಧ್ವಂಸಗೊಳಿಸಿದ ವಿದ್ಯಾರ್ಥಿಗಳು

ಇಂಫಾಲ: ಬೋರ್ಡ್ ಪರೀಕ್ಷೆಗೆ (Exam) ಹಾಜರಾಗಿದ್ದ ವಿದ್ಯಾರ್ಥಿಗಳು (Students) ಪರೀಕ್ಷೆ ಬರೆಯುತ್ತಿದ್ದ ವೇಳೆ ಹೆಚ್ಚುವರಿ ಸಮಯ ಕೇಳಿದ್ದು, ಇದನ್ನು ನಿರಾಕರಿಸಿದ್ದಕ್ಕೆ ಶಾಲೆಯ (School) ಕಟ್ಟಡವನ್ನೇ ಧ್ವಂಸಗೊಳಿಸಿರುವ (Vandalise) ಘಟನೆ ಮಣಿಪುರದ (Manipur) ತೌಬಲ್ (Thoubal) ಜಿಲ್ಲೆಯಲ್ಲಿ ನಡೆದಿದೆ.

ಘಟನೆ ಯೈರಿಪೋಕ್‌ನ ಎಸಿಎಂಇ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಡೆದಿದೆ. ವರದಿಗಳ ಪ್ರಕಾರ, ಕೌನ್ಸಿಲ್ ಆಫ್ ಹೈಯರ್ ಸೆಕೆಂಡರಿ ಎಜುಕೇಶನ್ ಮಣಿಪುರ ನಡೆಸುತ್ತಿದ್ದ ಪರೀಕ್ಷೆ ವೇಳೆ 5 ನಿಮಿಷ ಬಾಕಿ ಉಳಿದಿದ್ದಾಗ ವಿದ್ಯಾರ್ಥಿಗಳು ಹೆಚ್ಚುವರಿ ಸಮಯ ನೀಡುವಂತೆ ಒತ್ತಾಯಿಸಿದ್ದಾರೆ. ಶಾಲೆಯ ಗಂಟೆ ಬಾರಿಸುತ್ತಿದ್ದಂತೆ ವಿದ್ಯಾರ್ಥಿಗಳು ಗಲಾಟೆ ಮಾಡಲು ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ಮಿತ್ರನ ತಲೆಯನ್ನೇ ಕಡಿದು, ಹೃದಯ ಕಿತ್ತು ಕೊನೆಗೆ ಪೊಲೀಸರಿಗೆ ಶರಣಾದ

EXAM

ಗಲಾಟೆ ಹಿಂಸಾಚಾರಕ್ಕೆ ತಿರುಗಿ, ವಿದ್ಯಾರ್ಥಿಗಳು ಕಲ್ಲುತೂರಾಟ ನಡೆಸಿದ್ದಾರೆ. ಕಂಪ್ಯೂಟರ್, ಪೀಠೋಪಕರಣಗಳು ಸೇರಿದಂತೆ ಶಾಲೆ ಆಸ್ತಿಯನ್ನು ಧ್ವಂಸಗೊಳಿಸಿದ್ದಾರೆ. ಈ ವೇಳೆ ಶಾಲೆಯಲ್ಲಿ ನಡೆಯುತ್ತಿರುವ ಅವ್ಯವಸ್ಥೆಯನ್ನು ಕಂಡು ಶಿಕ್ಷಕಿ ಸೇರಿದಂತೆ 15 ವಿದ್ಯಾರ್ಥಿಗಳು ಮೂರ್ಛೆ ಹೋಗಿದ್ದಾರೆ. ಅವರೆಲ್ಲರನ್ನೂ ಚಿಕಿತ್ಸೆಗೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಿಂಸಾಚಾರದಲ್ಲಿ ತೊಡಗಿದ್ದ 8 ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: 14ರ ಬಾಲಕಿಯನ್ನು ರೇಪ್ ಮಾಡಿ ಗರ್ಭಿಣಿಯಾಗಿಸಿದ ಮಲತಂದೆ

Comments

Leave a Reply

Your email address will not be published. Required fields are marked *