ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳು ಶಾಲೆಗೆ ಬರೋದು ಪಾಠ ಪ್ರವಚನ ಕೇಳೋಕಾ ಅಥವಾ ಶೌಚಾಲಯ ಕ್ಲೀನ್ ಮಾಡೋಕಾ ಎನ್ನುವ ಅನುಮಾನ ಶುರುವಾಗಿದೆ. ಯಾವುದೇ ಕ್ರಮ ಕೈಗೊಳ್ಳದೇ ವಿದ್ಯಾರ್ಥಿಗಳಿಂದಲೇ ಗಬ್ಬುನಾರುತ್ತಿರುವ ಶೌಚಾಲಯಗಳನ್ನು ಸ್ವಚ್ಛತೆ ಮಾಡಿಸಲಾಗಿದೆ.
ಗಬ್ಬುನಾರುತ್ತಿದ್ದ ಶೌಚಾಲಯಗಳನ್ನು ವಿದ್ಯಾರ್ಥಿಗಳಿಂದಲೇ ಕ್ಲೀನ್ ಮಾಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕು ನಗರಗೆರೆ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ. ಶಾಲಾ ವಿದ್ಯಾರ್ಥಿಗಳಿದಂಲೇ ಶಿಕ್ಷಕರು ಕಸ ಕಡ್ಡಿಯಿಂದ ಗಬ್ಬು ನಾರುತ್ತಿರುವ ಶೌಚಾಲಯಗಳ ಸ್ವಚ್ಚತೆ ಮಾಡಿಸಿದ್ದು, ಇದನ್ನ ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಪೆನ್ನು ಪುಸ್ತಕ ಹಿಡಿಯಬೇಕಾದ ವಿದ್ಯಾರ್ಥಿಗಳು ಪೊರಕೆ ಹಿಡಿದು ಟಾಯ್ಲೆಟ್ ಕ್ಲೀನ್ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು, ಶಿಕ್ಷಕರ ನಡೆ ವಿರುದ್ಧ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ವಿದ್ಯಾರ್ಥಿಗಳಿಂದ ಶೌಚಾಲಯಗಳನ್ನು ಕ್ಲೀನ್ ಮಾಡಿಸಿರೋದಲ್ಲದೆ ಯಾವುದೇ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿಲ್ಲ. ಸ್ವಚ್ಚತೆಗೆ ಬಳಸಬೇಕಾದ ಪರಿಕರಗಳನ್ನು ಬಳಸದೆ ಶಿಕ್ಷಕರ ವಿದ್ಯಾರ್ಥಿಗಳ ಆರೋಗ್ಯದ ಜೊತೆ ಚೆಲ್ಲಾಟ ಆಡಿದ್ದಾರೆ ಎಂದು ಅಕ್ರೋಶ ವ್ಯಕ್ತವಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Leave a Reply