ಬೆಂಗಳೂರು: ಇಂದು ಸಾಹಸಸಿಂಹ ಡಾ.ವಿಷ್ಣುವರ್ಧನ್ ಅವರ 10ನೇ ವರ್ಷದ ಪುಣ್ಯಸ್ಮರಣೆ. ಹೀಗಾಗಿ ನಟ ಕಿಚ್ಚ ಸುದೀಪ್ ಸೋಶಿಯಲ್ ಮೀಡಿಯಾದಲ್ಲಿ ಅವರನ್ನು ಸ್ಮರಿಸಿದ್ದಾರೆ.
ಸುದೀಪ್ ಟ್ವೀಟ್ ಮಾಡುವ ಮೂಲಕ ಅಪ್ಪಾಜಿ ವಿಷ್ಣುವರ್ಧನ್ ಅವರನ್ನು ಸ್ಮರಣೆ ಮಾಡಿದ್ದಾರೆ. “ಅಪ್ಪಾಜಿ..ಇಂದು ನಿಮ್ಮ 10ನೇ ಪುಣ್ಯಸ್ಮರಣೆ. ಆದರೆ ಮರೆತವರಿಗೆ ಮಾತ್ರ ಸ್ಮರಣೆ. ನೀವು ನಮ್ಮೆದೆಯ ನಂದಾದೀಪ. ಈ 10 ವರ್ಷದಲ್ಲಿ ಒಂದೇ ಒಂದು ದಿನವೂ ಈ ನಾಡು, ಚಿತ್ರರಂಗ, ನಿಮ್ಮ ಅಭಿಮಾನಿಗಳು ಮತ್ತು ನಾನು ನಿಮ್ಮನ್ನು ಮರೆತೇ ಇಲ್ಲ. ನಿಮ್ಮ ಹೆಸರು ಅತ್ಯಂತ ಪ್ರಕಾಶಮಾನವಾಗಿ ಬೆಳಗುತ್ತಲೇ ಇದೆ. ಆ ಬೆಳಕು ಎಲ್ಲರಿಗೂ ದಾರಿದೀಪವಾಗಿದೆ” ಎಂದು ಪ್ರೀತಿಯಿಂದ ಬರೆದುಕೊಂಡಿದ್ದಾರೆ.

ಜೊತೆಗೆ ವಿಷ್ಣುವರ್ಧನ್ ಅವರು ಫೋಟೋವನ್ನು ಶೇರ್ ಮಾಡಿದ್ದಾರೆ. ಸುದೀಪ್ ಟ್ವೀಟ್ ಮಾಡಿದ ತಕ್ಷಣ ಅಭಿಮಾನಿಗಳು ಕಮೆಂಟ್ ಮಾಡುವ ಮೂಲಕ ವಿಷ್ಣುವರ್ಧನ್ ಅವರನ್ನು ಸ್ಮರಿಸುತ್ತಿದ್ದಾರೆ.
ಡಾ.ವಿಷ್ಣುವರ್ಧನ್ ಅವರು ಡಿಸೆಂಬರ್ 30, 2009ರಂದು ಇಹಲೋಕ ತ್ಯಜಿಸಿದ್ದರು. ಸುದೀಪ್ ಸದಾ ವಿಷ್ಣುವರ್ಧನ್ ಅವರನ್ನು ಅಪ್ಪಾಜಿ ಎಂದು ಕರೆಯುತ್ತಿದ್ದರು. ಅವರಿಬ್ಬರ ನಡುವೆ ಉತ್ತಮ ಬಾಂಧವ್ಯ ಕೂಡ ಇತ್ತು. ಸುದೀಪ್ ‘ಮಾತಾಡ್ ಮಾತಾಡ್ ಮಲ್ಲಿಗೆ’ ಸಿನಿಮಾದಲ್ಲಿ ಅಪ್ಪಾಜಿ ವಿಷ್ಣುವರ್ಧನ್ ಅವರ ಜೊತೆ ಅಭಿನಯಿಸಿದ್ದರು.
ಅಪ್ಪಾಜಿ..
ಇಂದು ನಿಮ್ಮ 10ನೇ ಪುಣ್ಯಸ್ಮರಣೆ! ಆದ್ರೆ ಮರೆತವರಿಗೆ ಮಾತ್ರ ಸ್ಮರಣೆ. ನೀವು ನಮ್ಮೆದೆಯ ನಂದಾದೀಪ. ಈ 10 ವರ್ಷದಲ್ಲಿ ಒಂದೇ ಒಂದು ದಿನವೂ ಈ ನಾಡು, ಚಿತ್ರರಂಗ, ನಿಮ್ಮ ಅಭಿಮಾನಿಗಳು ಮತ್ತು ನಾನು ನಿಮ್ಮನ್ನು ಮರೆತೇ ಇಲ್ಲ. ನಿಮ್ಮ ಹೆಸರು ಅತ್ಯಂತ ಪ್ರಕಾಶಮಾನವಾಗಿ ಬೆಳಗುತ್ತಲೇ ಇದೆ. ಆ ಬೆಳಕು ಎಲ್ಲರಿಗೂ ದಾರಿದೀಪವಾಗಿದೆ. pic.twitter.com/wTQqhH1hoo— Kichcha Sudeepa (@KicchaSudeep) December 30, 2019

Leave a Reply