ಕೆ.ಎಲ್ ರಾಹುಲ್ ಜೊತೆ ಮಗಳ ಮದುವೆಗೆ ಸುನೀಲ್ ಶೆಟ್ಟಿ ಗ್ರೀನ್ ಸಿಗ್ನಲ್

ಮುಂಬೈ: ಮಗಳು ಅಥಿಯಾ ಶೆಟ್ಟಿ ಮತ್ತು ಟೀಮ್ ಇಂಡಿಯಾದ ಪ್ರಮುಖ ಬ್ಯಾಟ್ಸ್‌ಮ್ಯಾನ್ ಕೆಎಲ್ ರಾಹುಲ್ ಮದುವೆಗೆ ಬಾಲಿವುಡ್ ನಟ ಸುನೀಲ್ ಶೆಟ್ಟಿ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಅಥಿಯಾ ಶೆಟ್ಟಿ ಮತ್ತು ಕೆಎಲ್ ರಾಹುಲ್ ಅವರ ಪ್ರೇಮ ಸಂಬಂಧದ ಗಾಸಿಪ್‍ಗಳು ಬಹಳ ದಿನಗಳಿದ ನಡೆಯುತ್ತಲೇ ಇವೆ. ಅವರ ಲವ್ವಿ-ಡವ್ವಿ ಪೋಸ್ಟ್‌ಗಳು ಸದಾ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಲ್ಲಿರುತ್ತವೆ. ವರದಿಗಳ ಪ್ರಕಾರ, ಪ್ರೇಮಿಗಳು ಈ ವರ್ಷದ ಅಂತ್ಯದೊಳಗೆ ದಾಂಪತ್ಯ ಜೀವನಕ್ಕೆ ಕಾಲಿಡುವ ಸಂಭವಿದ್ದು, ಈ ಕುರಿತು ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಸುನೀಲ್ ಶೆಟ್ಟಿ, ನನ್ನ ಆಶೀರ್ವಾದ ಯಾವಾಗಲೂ ಅವರೊಂದಿಗೆ ಇರುತ್ತದೆ ಎಂದು ಶುಭಹಾರೈಸಿದ್ದಾರೆ. ಕಾಲ ಬದಲಾಗಿದೆ ಅವರವರ ಇಚ್ಛೆಗೆ ಅನುಗುಣವಾಗಿ ಏನು ಮಾಡಬೇಕೆಂದು ಅವರೇ ನಿರ್ಧರಿಸುತ್ತಾರೆ. ನನ್ನ ಮಗಳು ಮತ್ತು ಮಗ ಇಬ್ಬರೂ ಜವಾಬ್ದಾರಿಯುತರಾಗಿದ್ದಾರೆ. ಅವರ ಭವಿಷ್ಯದ ನಿರ್ಧಾರ ಅವರೇ ತೆಗೆದುಕೊಳ್ಳಬೇಕೆಂದು ನಾನು ಬಯಸುತ್ತೇನೆ. ನನ್ನ ಆಶೀರ್ವಾದ ಅವರಿಗೆ ಯಾವಾಗಲೂ ಇರುತ್ತದೆ ಎಂದಿದ್ದಾರೆ. ಇದನ್ನೂ ಓದಿ: `ಟಗರು’ ನಟಿ ಮಾನ್ವಿತಾ ಸ್ನಾತಕೋತ್ತರ ಪದವೀಧರೆ

ಆಥಿಯಾ ಯುಕೆಯಲ್ಲಿ ರಾಹುಲ್ ಒಟ್ಟಿಗೆ ಸಮಯ ಕಳೆಯುತ್ತಿದ್ದಾಗಿನಿಂದ ಇವರಿಬ್ಬರ ಪ್ರೇಮ ಸಂಬಂಧದ ಬಗ್ಗೆ ಅಭಿಮಾನಿಗಳಲ್ಲಿ ಸಾಕಷ್ಟು ಗೊಂದಲಗಳು ಪ್ರಾರಂಭವಾದವು. ನಂತರ ರಾಹುಲ್ ತನ್ನ ಪ್ರೇಯಸಿಯ ಸಹೋದರ ಅಹಾನ್ ಶೆಟ್ಟಿ ಅವರ ಚೊಚ್ಚಲ ಚಿತ್ರ ತಡಪ್‍ನ ಪ್ರೀಮಿಯರ್ ನೈಟ್‍ನಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಂಡರು. ವರದಿಗಳ ಪ್ರಕಾರ ಈ ವರ್ಷದ ಅಂತ್ಯದೊಳಗೆ ದಕ್ಷಿಣ ಭಾರತದ ಸಂಪ್ರದಾಯದಂತೆ ಈ ಕ್ಯೂಟ್ ಜೋಡಿ ಸಪ್ತಪದಿ ತುಳಿಯಲಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ವಿಜಯ್ ದೇವರಕೊಂಡ ಹೊಸ ಗರ್ಲ್ ಫ್ರೆಂಡ್ ಅನನ್ಯ ಪಾಂಡೆ? : ಮುನಿಸಿಕೊಂಡ್ರಾ ರಶ್ಮಿಕಾ ಮಂದಣ್ಣ

ಮಾರ್ಚ್ 15 ರಂದು ಮುಂಬೈ ವಿಮಾನ ನಿಲ್ದಾಣದಲ್ಲಿ ಅಥಿಯಾ ತನ್ನ ಪ್ರಿಯಕರ್‌ನನ್ನು ಕರೆದೊಯ್ಯಲು ಬಂದಾಗ ಈ ಜೋಡಿ ಒಟ್ಟಿಗೆ ಕಾಣಿಸಿಕೊಂಡಿತ್ತು. ಐಪಿಎಲ್ 2022ರಲ್ಲಿ ಬಾಲಿವುಡ್ ಮತ್ತು ಕ್ರಿಕೆಟ್ ಅಭಿಮಾನಿಗಳು ಇಬ್ಬರನ್ನು ಒಟ್ಟಿಗೆ ನೋಡಲು ಬಹಳ ಉತ್ಸುಕರಾಗಿದ್ದರು.

Comments

Leave a Reply

Your email address will not be published. Required fields are marked *