ಮೇರುನಟ ಡಾ.ವಿಷ್ಣು ಅವರ 52ನೇ ಪುತ್ಥಳಿ ಅನಾವರಣ

ನ್ನಡದ ಮೇರುನಟ ಡಾ. ವಿಷ್ಣುವರ್ಧನ್ ಅವರ ಪುತ್ಥಳಿಗಳು ರಾಜ್ಯಾದ್ಯಂತ ತಲೆಯೆತ್ತಿವೆ. ವಿಷ್ಣು ಅಭಿಮಾನಿಗಳು ರಾಜ್ಯದ ನಾನಾ ಕಡೆ ಅವರ ಪುತ್ಥಳಿಯನ್ನು (Putthali) ಪ್ರತಿಷ್ಠಾಪಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ (Bangalore) ಕರುನಾಡ  ತಿಲಕ ಡಾ.ವಿಷ್ಣು ಕನ್ನಡ ಅಭಿಮಾನಿಗಳ‌ ಸಂಘದ ವತಿಯಿಂದ ಗಿರಿನಗರ ಹಿರಣ್ಣನ ಗುಟ್ಟೆ ಸರ್ಕಲ್ ನಲ್ಲಿ  ಡಾ‌.ವಿಷ್ಣು ಸೇನಾ ಸಮಿತಿ ರಾಜ್ಯಾಧ್ಯಕ್ಷರಾದ ವೀರಕಪುತ್ರ ಶ್ರೀನಿವಾಸ್ (Veerakaputra Srinivas) ಅವರ  ಉಪಸ್ಥಿತಿಯಲ್ಲಿ ಶಾಸಕ ಎಂ ಕೃಷ್ಣಪ್ಪ (M. Krishnappa) ಅಮೃತ ಹಸ್ತದಿಂದ ಪುತ್ಥಳಿ ಅನಾವರಣವಾಯಿತು

ವಿಶೇಷ ಏನಂದ್ರೆ ಇದು ವೀರಕಪುತ್ರ ಶ್ರೀನಿವಾಸ್ ಅವರು ವೈಯಕ್ತಿಕವಾಗಿ ಡಾ.ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಕೊಡುಗೆಯಾಗಿ ನೀಡುತ್ತಿರುವ 52 ನೇ ಪುತ್ಥಳಿ ಆಗಿರುವುದು ವಿಶೇಷ. ವಿಷ್ಣು ಅವರ ಹೆಸರಿನಲ್ಲಿ ಸಾಕಷ್ಟು ಕೆಲಸಗಳನ್ನು ಮಾಡುತ್ತಾ ಬಂದಿರುವ ವೀರಕಪುತ್ರ ಶ್ರೀನಿವಾಸ್ ಸಾಕಷ್ಟು ಕಡೆ ಪುತ್ಥಳಿಯನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಮೂಲಕ ಅಭಿಮಾನ ಮೆರೆದಿದ್ದಾರೆ. ಇದನ್ನೂ ಓದಿ:‘ಕಬಾಲಿ’ ನಿರ್ಮಾಪಕ ಅರೆಸ್ಟ್ ಬೆನ್ನಲ್ಲೇ ಡ್ರಗ್ಸ್ ಪ್ರಕರಣದಲ್ಲಿ ನಟಿ ಅಶು ರೆಡ್ಡಿ ಹೆಸರು

ಮೊನ್ನೆಯಷ್ಟೇ ವಿಷ್ಣುವರ್ಧನ್ (Dr. Vishnuvardhan) ಹೆಸರಿನಲ್ಲಿ ದಾಖಲೆ (Record) ಯೊಂದು  ಸೃಷ್ಟಿಯಾಗಿತ್ತು. ವೀರಕಪುತ್ರ ಶ್ರೀನಿವಾಸ್ ಮತ್ತು ವಿಷ್ಣು ಸೇನಾನಿಗಳು ವಿಷ್ಣುವರ್ಧನ್ ಹುಟ್ಟು ಹಬ್ಬದಂದು ಕಟೌಟ್ ಜಾತ್ರೆ ಮಾಡಿದ್ದರು. ನೆಚ್ಚಿನ ನಟನ 52 ಕಟೌಟ್‌ಗಳನ್ನು ಅಂದು ಬೆಂಗಳೂರಿನ ಬಾಲಣ್ಣ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಸ್ಮಾರಕದ ಮುಂದೆ ನಿಲ್ಲಿಸಿದ್ದರು. ಇದನ್ನು ಪರಿಗಣಿಸಿ ಏಷ್ಯಾ ಬುಕ್ ಮತ್ತು ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಅದು ದಾಖಲಾಗಿತ್ತು.

ಡಾ. ವಿಷ್ಣುವರ್ಧನ್ ಅವರು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಹಿನ್ನಲೆಯಲ್ಲಿ ಅವರ 50 ಸೇನಾನಿಗಳು ಡಾ. ವಿಷ್ಣು ಸೇನಾ ಸಮಿತಿಯ ವೀರಕಪುತ್ರ ಶ್ರೀನಿವಾಸ ಅವರ ನೇತೃತ್ವದಲ್ಲಿ 2022ರ ಸೆಪ್ಟೆಂಬರ್‌ 18 ರಂದು ಬೆಂಗಳೂರಿನ ಡಾ. ವಿಷ್ಣು ಪುಣ್ಯಭೂಮಿಯಲ್ಲಿ 51 ಬೃಹತ್‌ ಕಟೌಟ್‌ಗಳನ್ನು ಸ್ಥಾಪಿಸಿ ‘ಕಟೌಟ್‌ ಜಾತ್ರೆ’ ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಆ ಕಟೌಟ್‌ಗಳಿಗೆ ಬೃಹತ್‌ ಹಾರಗಳನ್ನು ಸಹ ಹಾಕಿಸಿದ್ದರು. ಪೊಲೀಸ್‌ ಇಲಾಖೆಯ ಪ್ರಕಾರ ಎರಡೂವರೆ ಲಕ್ಷ ಕನ್ನಡಿಗರು ಈ ಕಟೌಟ್‌ ಜಾತ್ರೆಯಲ್ಲಿ ಭಾಗವಹಿಸಿದ್ದರು.

 

ಅಂದೇ ಈ ಕಟೌಟ್‌ ಜಾತ್ರೆಯನ್ನು ಏಷ್ಯಾ ಬುಕ್‌ ಆಫ್‌ ರೆಕಾರ್ಡ್‌ನಲ್ಲಿ ದಾಖಲಿಸಲು ಮನವಿಯನ್ನು ಸಲ್ಲಿಸಲಾಗಿತ್ತು. ಆ ಸಂಸ್ಥೆಯು ನಮ್ಮ ದಾಖಲೆ ಸಂಬಂಧ ಅನೇಕ ಹಂತದ ಪರೀಕ್ಷೆಗಳನ್ನು ನಡೆಸಿದರಲ್ಲದೆ, ಖುದ್ದಾಗಿ ಸ್ಥಳ ಪರಿಶೀಲನೆಯನ್ನು ಸಹ ಮಾಡಿದ್ದರು. ನಂತರ ಕಟೌಟ್ ಜಾತ್ರೆಯು ಏಷ್ಯಾ ಬುಕ್‌ ಆಫ್‌ ‌ ರೆಕಾರ್ಡ್‌ನಲ್ಲಿ ದಾಖಲೆಯಾಗಿದೆ.