ಮಂಗಳೂರು: ಅಯೋಧ್ಯೆ ವಿಚಾರದಲ್ಲಿ ಹೀಗೇ ತೀರ್ಪು ನೀಡಬೇಕೆಂದು ಒತ್ತಡ ಹೇರಲಾಗುತ್ತಿದೆ. ಇದು ದೇಶದ ದುರಂತ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಾಧೀಶ ನಾಗಮೋಹನ್ ದಾಸ್ ಹೇಳಿದ್ದಾರೆ.
ನಗರದಲ್ಲಿ ನಡೆದ ಎಡಪಂಥೀಯ ಚಿಂತಕರ ಜನನುಡಿ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ನ್ಯಾಯಾಂಗದ ಸ್ವಾತಂತ್ರ್ಯ ಕಸಿದುಕೊಳ್ಳಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಆದೇಶಕ್ಕಾಗಿ ಸುಪ್ರೀಂ ಕೋರ್ಟ್ ಮೇಲೆ ಒತ್ತಡ ಹೇರಲಾಗುತ್ತಿದೆ. ಅಷ್ಟೇ ಅಲ್ಲದೆ ಇಷ್ಟು ಸಮಯದೊಳಗಾಗಿ ತೀರ್ಪು ನೀಡಬೇಕೆಂಬ ಸೂಚನೆ ನೀಡಲಾಗುತ್ತೆ ಎಂದು ದೂರಿದರು. ಇದನ್ನು ಓದಿ: ಮೂರು ವೋಟರ್ ಐಡಿ ಕಾರ್ಡ್ ಹೊಂದಿರುವುದು ನಿಜವೇ: ಪ್ರಕಾಶ್ ರೈ ಹೇಳಿದ್ದು ಏನು?
ರಾಮ ಮಂದಿರ ನಿರ್ಮಾಣದಲ್ಲಿ ಸುಪ್ರೀಂಕೋರ್ಟ್ ನೀಡಿದ ತೀರ್ಪು ಒಪ್ಪಿಗೆಯಾಗದಿದ್ದರೆ ನಾವು ಸಹಿಸಲ್ಲ ಎನ್ನುವವರಿದ್ದಾರೆ. ನ್ಯಾಯಾಲಯದ ಆದೇಶವನ್ನು ಧಿಕ್ಕರಿಸುವ ಕೆಲಸ ಆಗುತ್ತಿರುವುದು ದೇಶದ ದುರಂತ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply