ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ ಶಾಕ್‌ – ತ.ನಾಡಿಗೆ ನಿತ್ಯ 5,000 ಕ್ಯೂಸೆಕ್‌ ನೀರು ಹರಿಸುವಂತೆ ಸೂಚನೆ

ನವದೆಹಲಿ: ತಮಿಳುನಾಡಿಗೆ (Tamil Nadu) ನಿತ್ಯ 5,000 ಕ್ಯೂಸೆಕ್‌ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್‌ (Supreme Court) ಸೂಚನೆ ನೀಡಿದೆ. ಆ ಮೂಲಕ ರಾಜ್ಯಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲೂ ಹಿನ್ನಡೆಯಾಗಿದೆ.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಬೇಕು ಎಂದು ಕರ್ನಾಟಕ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಇಂದು (ಗುರುವಾರ) ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಪ್ರಾಧಿಕಾರದ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ಸ್ಯಾಂಡಲ್ ವುಡ್ ಸ್ಟಾರ್ಸ್

ಅಲ್ಲದೇ, ಕೆಆರ್‌ಎಸ್‌ನಿಂದ ನಿತ್ಯ ತಮಿಳುನಾಡಿಗೆ 5,000 ಕ್ಯೂಸೆಕ್‌ ನೀರು ಹರಿಸುವಂತೆ ಕರ್ನಾಟಕಕ್ಕೆ ಸುಪ್ರೀಂ ಸೂಚನೆ ನೀಡಿದೆ.

ತಮಿಳುನಾಡಿಗೆ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೊರಡಿಸಿರುವ ಆದೇಶ ನ್ಯಾಯಸಮ್ಮತವಲ್ಲ. ರಾಜ್ಯದ 16 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಸೆ.18 ರಂದು ಹೊರಡಿಸಿರುವ ಆದೇಶ ಪುನರ್‌ಪರಿಶೀಲಿಸಬೇಕು ಎಂಬುದಾಗಿ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಕೇಳಿಕೊಂಡಿತ್ತು. ಆದರೆ ಪ್ರಾಧಿಕಾರದ ಆದೇಶಕ್ಕೆ ಮಧ್ಯಪ್ರವೇಶಿಸಲು ಸುಪ್ರೀಂ ನಿರಾಕರಿಸಿದೆ. ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಒಗ್ಗಟ್ಟು, ಸರ್ವಪಕ್ಷ ಸಂಸದರ ಬೆಂಬಲ: ಡಿಕೆಶಿ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]