ಬೆಂಗಳೂರು ಜೀವನ ತುಂಬಾ ಆಕರ್ಷಕ: ವರ್ಗಾವಣೆ ವಿರೋಧಿಸಿ ವೈದ್ಯರು ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ

ನವದೆಹಲಿ: ಬೆಂಗಳೂರು (Bengaluru) ಜೀವನ ತುಂಬಾ ಆಕರ್ಷಕವಾಗಿ ಎನ್ನುವ ಮೂಲಕ ವರ್ಗಾವಣೆಯನ್ನು ವಿರೋಧಿಸಿ ವೈದ್ಯರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ (Supreme Court) ತಿರಸ್ಕರಿಸಿದೆ.

ವೈದ್ಯರನ್ನು ಬೆಂಗಳೂರಿನಿಂದ ಹೊರಗೆ ವರ್ಗಾಯಿಸಿದರೆ ಯಾವುದೇ ಪೂರ್ವಾಗ್ರಹವಿಲ್ಲ ಎಂದು ನ್ಯಾಯಮೂರ್ತಿಗಳಾದ ಉಜ್ಜಲ್ ಭುಯಾನ್ ಮತ್ತು ಕೆ ವಿನೋದ್ ಚಂದ್ರನ್ ಅವರಿದ್ದ ಪೀಠ ಹೇಳಿದೆ. ಇದನ್ನೂ ಓದಿ: ಹೇಮಾವತಿ ಲಿಂಕ್ ಕೆನಾಲ್ ಸಭೆ ಮುಂದೂಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರಿನ ವಿಶ್ವಮಾನವ ಜೀವನವು ತುಂಬಾ ಆಕರ್ಷಕವಾಗಿದೆ. ಕರ್ನಾಟಕದ ಇತರ ಪ್ರದೇಶಗಳು ಸಹ ಅಭಿವೃದ್ಧಿ ಹೊಂದಿದವು. ನೀವು ಸಮಾಜದ ಸವಲತ್ತು ಪಡೆದ ವರ್ಗ. ನೀವು ವರ್ಗಾವಣೆಯನ್ನು ವಿರೋಧಿಸಿದರೆ ಇತರರಿಗೆ ಏನಾಗುತ್ತದೆ? ನಾವು ಮೇಲ್ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಕೋರ್ಟ್‌ ತಿಳಿಸಿದೆ.

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೊಳಗಿನ ವೈದ್ಯಕೀಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯ ವರ್ಗಾವಣೆಯನ್ನು ನಿಯಂತ್ರಿಸುವ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ (ವೈದ್ಯಕೀಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಗಳ ವರ್ಗಾವಣೆ ನಿಯಂತ್ರಣ) ನಿಯಮಗಳು, 2025 ಅನ್ನು ಪ್ರಶ್ನಿಸಿ ವೈದ್ಯರ ತಂಡವೊಂದು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು. ಇದನ್ನೂ ಓದಿ: ರೈಲ್ವೆ ಹಳಿಯ ಮೇಲೆ ಕಾರು ಚಲಾಯಿಸಿ ಶಾಕ್‌ ಕೊಟ್ಟ ಯುವತಿ; ಬೆಂಗಳೂರು-ಹೈದರಾಬಾದ್‌ ರೈಲು ಸೇವೆ ಸ್ಥಗಿತ