ಕರ್ನಾಟಕದ ಗಣಿಗಾರಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ ರಚನೆ – ಸುಪ್ರೀಂಕೋರ್ಟ್

supreme court 12

ನವದೆಹಲಿ: ಕರ್ನಾಟಕದ ಗಣಿಗಾರಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ಪೀಠ ರಚನೆ ಮಾಡುವುದಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಭರವಸೆ ನೀಡಿದ್ದಾರೆ. ಮುಂದಿನ ಬುಧವಾರದಿಂದ ಪೀಠ ರಚಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಹೊಂದಿಕೊಂಡಂತೆ ಕೋರ್ಟ್ ಹಲವು ಗಣಿಗಾರಿಕೆ ಕಂಪನಿಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಹಲವು ಸಮಸ್ಯೆಗಳಾಗಿದ್ದು, ಆ ಭಾಗದ ಜನರು ನಿರುದ್ಯೋಗಿಗಳಾಗುತ್ತಿದ್ದಾರೆ ಎಂದು ಹಿರಿಯ ವಕೀಲ ದುಷ್ಯತ್ ದವ್ ಕೋರ್ಟ್ ಗಮನಕ್ಕೆ ತಂದರು.

ಇದೇ ವೇಳೆ ಮಧ್ಯಪ್ರವೇಶ ಮಾಡಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕರ್ನಾಟಕ ಸರ್ಕಾರದ ಅರ್ಜಿಯನ್ನು ಉಲ್ಲೇಖಿಸಿದರು. ಕರ್ನಾಟಕದ ಗಣಿಗಾರಿಕೆಗೆ ಸಂಬಂಧಿಸಿದ ಹಲವು ಅರ್ಜಿಗಳು ಬಾಕಿ ಉಳಿದಿವೆ ಎಂದರು. ಇದನ್ನೂ ಓದಿ: JNU ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಜಾಮೀನು ಅರ್ಜಿ ವಜಾ

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ಶೀಘ್ರದಲ್ಲಿದಲ್ಲಿ ಪೀಠ ರಚನೆ ಮಾಡಿ, ತ್ವರಿತಗತಿಯಲ್ಲಿ ವಿಚಾರಣೆ ನಡೆಸಿ, ಅರ್ಜಿಗಳ ವಿಲೇವಾರಿ ಮಾಡಲಾಗುವುದು ಎಂದರು. ಇದನ್ನೂ ಓದಿ: ಹಿಜಬ್‍ಗೂ ಪರೀಕ್ಷೆಗೂ ಸಂಬಂಧವಿಲ್ಲ, ತುರ್ತು ವಿಚಾರಣೆ ನಡೆಸಲ್ಲ: ಸುಪ್ರೀಂ

Comments

Leave a Reply

Your email address will not be published. Required fields are marked *