ಮತ್ತೆ ಮೇಕೆದಾಟು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

River

ನವದೆಹಲಿ: ಮೇಕೆದಾಟು ಆಣೆಕಟ್ಟು ನಿರ್ಮಾಣ ವಿರೋಧಿಸಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ಈ ಪ್ರಕರಣ ವಿಚಾರಣೆಯನ್ನು ಜನವರಿ 25ರಂದು ನಡೆಸಲಾಗುವುದು ಎಂದು ನ್ಯಾ.ಎ.ಎಂ.ಖಾನ್ವಿಲ್ಕರ್ ನೇತೃತ್ವದ ತ್ರಿ ಸದಸ್ಯ ಪೀಠ ಹೇಳಿದೆ.

ತಮಿಳುನಾಡು ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ಇಂದು ನಡೆಯಬೇಕಿತ್ತು. ವಿಚಾರಣೆ ನಡೆಯಬೇಕಿದ್ದ ಅರ್ಜಿ, ಮುಲ್ಲೈ ಪೆರಿಯಾರ್ ಆಣೆಕಟ್ಟು ಸುರಕ್ಷತೆ ಸಂಬಂಧಿಸಿದ ಪ್ರಕರಣವೊಂದರ ಜೊತೆಗೆ ಸುಪ್ರೀಂಕೋರ್ಟ್ ಟ್ಯಾಗ್ ಮಾಡಿತ್ತು. ಇಂದು ವಿಚಾರಣೆ ವೇಳೆ ಕರ್ನಾಟಕ ಮತ್ತು ತಮಿಳುನಾಡು ಪರ ವಾದ ಮಂಡಿಸಿದ ವಕೀಲರು ಮುಲ್ಲೈ ಪೆರಿಯಾರ್ ಮತ್ತು ಮೇಕೆದಾಟಿಗೂ ಯಾವುದೇ ಸಂಬಂಧ ಇಲ್ಲ ಎರಡು ಅರ್ಜಿಗಳು ಪ್ರತ್ಯೇಕ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಫಸ್ಟ್ ಟೈಂ ಮನುಷ್ಯನಿಗೆ ಹಂದಿ ಹೃದಯ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿ

SUPREME COURT

ವಕೀಲರ ಮನವಿಯನ್ನು ಪುರಸ್ಕರಿಸಿದ ಪೀಠ ಜನವರಿ 25 ರಂದು ಮೇಕೆದಾಟು ಪ್ರಕರಣ ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ.

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಜ್ಯದ ಸಮಗ್ರ ಯೋಜನಾ ವರದಿ(ಡಿಪಿಆರ್)ಗೆ ಕೇಂದ್ರ ತಾತ್ವಿಕ ಒಪ್ಪಿಗೆ ನೀಡಿದ ಬಳಿಕ ಯೋಜನೆ ವಿರೋಧಿಸಿ ತಮಿಳುನಾಡು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿತ್ತು. ಯೋಜನೆಗೆ ಅನುಮತಿ ನೀಡದಂತೆ ಕೇಂದ್ರಕ್ಕೆ ಸೂಚಿಸಲು ಮನವಿ ಮಾಡಿತ್ತು.

ಈ ಮುಖ್ಯ ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಎನ್‍ಜಿಟಿ ಆದೇಶವೊಂದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ತಮಿಳುನಾಡು ಮೇಲ್ಮನವಿ ಅರ್ಜಿ ಸಲ್ಲಿಸಿದೆ. ಕಾಮಗಾರಿ ಪರಿಶೀಲನೆಗೆ ಸಮಿತಿ ರಚಿಸಿ ಚೆನ್ನೈ ಹಸಿರು ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿತ್ತು. ಅದಕ್ಕೂ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ಆದೇಶವನ್ನು ತಮಿಳುನಾಡು ಪ್ರಶ್ನಿಸಿದೆ.  ಇದನ್ನೂ ಓದಿ: ಆರತಿ ತಟ್ಟೆ ಹಿಡಿದು ಪೂಜೆಗಾಗಿ ಎರಡು ಕುಟುಂಬಗಳ ನಡುವೆ ಕಿತ್ತಾಟ – ದೃಶ್ಯ ಸಿಸಿಟಿವಿಯಲ್ಲಿ ಸೆರೆ

Comments

Leave a Reply

Your email address will not be published. Required fields are marked *