ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್- ಸೂರಜ್ ರೇವಣ್ಣಗೆ ಮೆಡಿಕಲ್ ಟೆಸ್ಟ್

ಬೆಂಗಳೂರು: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಎಮ್‍ಎಲ್‍ಸಿ ಸೂರಜ್ ರೇವಣ್ಣರನ್ನು ಮೆಡಿಕಲ್ ಟೆಸ್ಟ್‌ಗೆ ಬೌರಿಂಗ್ ಆಸ್ಪತ್ರೆಗೆ ಸಿಐಡಿ ಪೊಲೀಸರು ಕರೆತಂದಿದ್ದಾರೆ.

ಸೂರಜ್ ವಿರುದ್ಧ ದಾಖಲಾಗಿರುವ ಅಸಹಜ ಲೈಂಗಿಕ ಕ್ರಿಯೆ ಪ್ರಕರಣದಲ್ಲಿ ಮೆಡಿಕಲ್ ಟೆಸ್ಟ್‌ಗೆ 42ನೇ ಎಸಿಎಂಎಂ ಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಅವರನ್ನು ಟೆಸ್ಟ್‌ಗೆ ಕರೆತರಲಾಗಿದೆ. ಬುಧವಾರ ಸಹ ಅವರನ್ನು ಮೆಡಿಕಲ್ ಟೆಸ್ಟ್‌ಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ನ್ಯಾಯಾಲಯದ ಅನುಮತಿ ಪಡೆಯದೇ ಸಿಐಡಿ ಪೊಲೀಸರು ಅವರನ್ನು ಕರೆತಂದಿದ್ದ ಹಿನ್ನೆಲೆ ವೈದ್ಯರು ಜನರಲ್ ಚೆಕಪ್ ಮಾಡಿ ಕಳಿಸಿದ್ದರು. ವಿಶೇಷ ಮೆಡಿಕಲ್ ಟೆಸ್ಟ್‌ಗೆ ವೈದ್ಯರು ನಿರಾಕರಿಸಿದ್ದರು. ಇದನ್ನೂ ಓದಿ: ಸಾರ್ವಜನಿಕವಾಗಿ ಮಹಿಳೆಗೆ ಥಳಿಸಿದ ದುರುಳರು- ವೀಡಿಯೋ ವೈರಲ್

ಏನಿದು ಪ್ರಕರಣ?: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಸೂರಜ್ ರೇವಣ್ಣ ಅವರನ್ನು ಜೂ.23 ರಂದು ಪೊಲೀಸರು ಬಂಧಿಸಿದ್ದರು. ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ಅಕ್ರಮ ಬಂಧನ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಕೇಸ್ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್‍ಪಿಗೂ ದೂರಿನ ಪ್ರತಿಯನ್ನು ಇ-ಮೇಲ್ ಮಾಡಿದ್ದ. ಮೇಲ್ ಆಧರಿಸಿ ಸಂತ್ರಸ್ತನನ್ನ ಕರೆಸಿ ಮಾಹಿತಿ ಪಡೆದ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದರು.

ಇದಾದ ಬಳಿಕ ಸಂತ್ರಸ್ತನ ವಿರುದ್ಧ ಪ್ರತಿದೂರು ನೀಡಲು ಸೂರಜ್, ಹಾಸನದ ಸೆನ್ ಪೊಲೀಸ್ ಠಾಣೆಗೆ ತೆರಳಿದ್ದರು. ಅಲ್ಲಿಯೇ ಅವರನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಸಿಐಡಿ ಕಸ್ಟಡಿಗೆ ಸೂರಜ್‌ ರೇವಣ್ಣ – ಕೋರ್ಟ್‌ನಲ್ಲಿ ವಾದ, ಪ್ರತಿವಾದ ಏನಿತ್ತು?