ಪ್ರೇಯಸಿ ಮೇಲೆ ಅತ್ಯಾಚಾರ, ಖಾಸಗಿ ಅಂಗಕ್ಕೆ ಕಾರದಪುಡಿ ಹಾಕಿ ವಿಕೃತಿ – ಆರೋಪಿ ಅರೆಸ್ಟ್

CRIME

ಗಾಂಧಿನಗರ: ಪ್ರೇಯಸಿಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ, ಖಾಸಗಿ ಅಂಗಗಳಿಗೆ ಕಾರದಪುಡಿ ಹಾಕಿ ವಿಕೃತಿ ಮೆರೆದಿದ್ದ ಆರೋಪಿಯನ್ನು ಗುಜರಾತ್‍ನ (Gujarat) ಓಲಪಾಡ್ ಪೊಲೀಸರು ಬಂಧಿಸಿದ್ದಾರೆ.

ಸೂರತ್ (Surat) ಮೂಲದ ಆರೋಪಿ ನಿಕುಂಜ್ ಕುಮಾರ್ ಅಮೃತ್ ಭಾಯ್ ಪಟೇಲ್ ಎಂಬಾತ ತನಗೆ ಮದುವೆಯಾಗಿದ್ದ ವಿಚಾರವನ್ನು ಮುಚ್ಚಿಟ್ಟು ಇನ್ನೊಬ್ಬ ಮಹಿಳೆಯೊಂದಿಗೆ ಜೀವನ ನಡೆಸುತ್ತಿದ್ದ. ಬಳಿಕ ಈ ವಿಚಾರ ಮಹಿಳೆಗೆ ತಿಳಿದು ಗಲಾಟೆ ಮಾಡಿದ್ದಾಳೆ. ಆರೋಪಿಯಿಂದ ದೂರ ಉಳಿಯಲು ನಿರ್ಧರಿಸಿದ್ದಾಳೆ. ಇದನ್ನೂ ಓದಿ: ಧರ್ಮಗುರು ಹೆಂಡತಿಯನ್ನು ಹೇಗೆ ಕೊಂದ? – ಗೂಗಲ್ ಸರ್ಚ್‍ನಿಂದ ಸಿಕ್ಕಿಬಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ

ಇದರಿಂದ ಕೋಪಗೊಂಡ ಆರೋಪಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಅಲ್ಲದೆ ಆಕೆಯ ಖಾಸಗಿ ಅಂಗಗಳಿಗೆ ಕಾರದ ಪುಡಿ ಹಾಕಿದ್ದಾನೆ. ನಂತರ ಆಕೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆವೊಡ್ಡಿದ್ದಾನೆ.

ತೀವ್ರ ಗಾಯಗಳಿಂದ ಅಸ್ವಸ್ಥಳಾಗಿದ್ದ ಮಹಿಳೆಯನ್ನು ಕಂಡು ಸ್ಥಳೀಯರು ಓಲಪಾಡ್ (Olpad) ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 376 (IPC 376) (ಅತ್ಯಾಚಾರ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. ಇದನ್ನೂ ಓದಿ: ಆರ್‌ಎಸ್‌ಎಸ್ ಮುಖಂಡನ ಹತ್ಯೆ ಪ್ರಕರಣ – ಪಿಎಫ್‍ಐ ಸದಸ್ಯ ಅರೆಸ್ಟ್