ಬುಧವಾರ ಮಧ್ಯಾಹ್ನ ಸುಷ್ಮಾ ಸ್ವರಾಜ್ ಅಂತ್ಯಕ್ರಿಯೆ

ನವದೆಹಲಿ: ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ (67) ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಬುಧವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 2:30 ರ ವರೆಗೆ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ನಂತರ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ಜನಪತ್ ರಸ್ತೆಯ ಧವನ್ ದೀಪ್ ಕಟ್ಟಡದ ನಿವಾಸದಲ್ಲಿ ಸುಷ್ಮಾ ಸ್ವರಾಜ್ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿದೆ. ನಾಳೆ ಬೆಳಗ್ಗೆ 8ರಿಂದ 11 ಗಂಟೆವರೆಗೆ ಜಂತರ್ ಮಂತರ್ ನಲ್ಲಿ ನಂತರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2:30ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗುವುದು. ಆ ಬಳಿಕ 3 ಗಂಟೆಗೆ ಲೋಧಿ ರಸ್ತೆಯ ಶವಾಗಾರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು.

ಸುಷ್ಮಾ ಸ್ವರಾಜ್ ಅವರ ಆರೋಗ್ಯದಲ್ಲಿ ಮಂಗಳವಾರ ರಾತ್ರಿ ಹೃದಯಾಘಾತ ಸಂಭವಿಸಿತ್ತು. ತಕ್ಷಣವೇ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿಯ ಅನೇಕ ನಾಯಕರು ಏಮ್ಸ್ ಆಸ್ಪತ್ರೆಗೆ ದೌಡಾಯಿಸಿದರು. ಅಗಲಿದ ನಾಯಕಿಗೆ ಸಂತಾಪ ವ್ಯಕ್ತಪಡಿಸಿದರು.

Comments

Leave a Reply

Your email address will not be published. Required fields are marked *