ಬೆಂಗಳೂರಿನಲ್ಲಿ ಶಂಕಾಸ್ಪದ ಕುಕ್ಕರ್ ಸ್ಫೋಟ – ಓರ್ವ ಸಾವು, ಮತ್ತೋರ್ವ ಗಂಭೀರ

– ಘಟನಾ ಸ್ಥಳದಲ್ಲಿ ಸುಟ್ಟ ವಯರ್ ಪತ್ತೆ
– ಎನ್‌ಐಎ ಪರಿಶೀಲನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಮಂಗಳವಾರ ಶಂಕಾಸ್ಪದವಾಗಿ ಕುಕ್ಕರ್ ಸ್ಫೋಟಗೊಂಡ (Cooker Blast) ಪರಿಣಾಮ ಚಿಕಿತ್ಸೆ ಫಲಿಸದೆ ಓರ್ವ ಸಾವನ್ನಪ್ಪಿದ ಘಟನೆ ಜೆಪಿ ನಗರದಲ್ಲಿ (JP Nagar) ನಡೆದಿದೆ.

ಕುಕ್ಕರ್ ಸ್ಫೋಟದಲ್ಲಿ ಉತ್ತರ ಪ್ರದೇಶ ಮೂಲದ ಮೋಸಿನ್ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಇನ್ನೋರ್ವ ಗಾಯಾಳು ಸಮೀರ್‌ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸ್ಫೋಟದ ಹಿಂದೆ ಅನುಮಾನಗಳು ಶುರುವಾಗಿವೆ. ಜೆಪಿ ನಗರ 24ನೇ ಮುಖ್ಯರಸ್ತೆಯ ಉಡುಪಿ ಉಪಹಾರದ ಮನೆಯ ಬಳಿ ಈ ಘಟನೆ ನಡೆದಿದೆ. ಇದನ್ನೂ ಓದಿ: ವಾಲ್ಮೀಕಿ ಹಗರಣದ ವಿರುದ್ಧ ಸರಿಯಾದ ಹೋರಾಟ ನಡೆದರೆ ಸಿಎಂ ಕುರ್ಚಿ ಅಲ್ಲಾಡುತ್ತೆ: ಪ್ರತಾಪ್ ಸಿಂಹ

ಈ ಸ್ಫೋಟವೂ ನಿಗೂಢವಾಗಿದೆ ಎನ್ನಲಾಗಿದ್ದು, ಈ ಹಿಂದೆ ನಡೆದ ರಾಮೇಶ್ವರಂ ಕೆಫೆಗೂ ಮೊದಲು ಸಿಲಿಂಡರ್ ಸ್ಫೋಟ ಎನ್ನಲಾಗಿತ್ತು. ಬಳಿಕ ಅದು ಭಯೋತ್ಪಾದಕ ಕೃತ್ಯ ಎನ್ನುವುದು ಖಚಿತವಾಗಿತ್ತು. ಅದೇ ಮಾದರಿಯಲ್ಲಿ ಜೆಪಿ ನಗರದಲ್ಲಿ ನಡೆದಿರುವ ಸ್ಫೋಟವೂ ಕೂಡ ಅನುಮಾನಕ್ಕೆ ಕಾರಣವಾಗಿದೆ. ಮೇಲ್ನೋಟಕ್ಕೆ ಇದು ಕುಕ್ಕರ್ ಸ್ಫೋಟ ಎನ್ನಲಾಗುತ್ತಿದೆ. ಇದನ್ನೂ ಓದಿ: ಸಂಪನ್ಮೂಲದ ಗ್ಯಾರಂಟಿ ಇಲ್ಲದೇ ತಂದ ಗ್ಯಾರಂಟಿ ಯೋಜನೆಗಳನ್ನು ಶಾಸಕರೇ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ: ಅಶೋಕ್

ಸ್ಫೋಟದ ತೀವ್ರತೆಗೆ ರೂಂನಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿದೆ. ಪ್ರಾಥಮಿಕ ತನಿಖೆಯಲ್ಲಿ ಕುಕ್ಕರ್ ಸ್ಫೋಟ ಎನ್ನಲಾಗಿದ್ದು, ಸುಟ್ಟ ವಯರ್‌ಗಳು ಕೂಡ ಪತ್ತೆಯಾಗಿದೆ. ಇನ್ನು ಇಂದು (ಬುಧವಾರ) ಬಾಂಬ್ ನಿಷ್ಕ್ರಿಯಾ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಆ.20 ರಿಂದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಆರಂಭ