ಬೆಂಗಳೂರು: ಪತ್ರಿಕೋದ್ಯಮ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ಕೊತ್ತನೂರಿನ ಕೆ ನಾರಾಯಣಪುರ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್‍ನಲ್ಲಿ ನಡೆದಿದೆ.
ಮುಂಬೈ ಮೂಲದ ಸೋಫಿಯಾ ದಮನಿ ಅನುಮಾನಾಸ್ಪದವಾಗಿ ಮೃತಪಟ್ಟ ವಿದ್ಯಾರ್ಥಿನಿ. ನಗರದ ಖಾಸಗಿ ಕಾಲೇಜಿನಲ್ಲಿ 4ನೇ ಸೆಮಿಸ್ಟರ್ ಓದುತ್ತಿದ್ದ ವಿದ್ಯಾರ್ಥಿನಿ ಸೋಫಿಯಾ ಶವ ಹಾಸ್ಟೆಲಿನ ಕೋಣೆಯ ಬೆಡ್ ಮೇಲೆ ಬುಧವಾರ ಸಂಜೆ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅನುಮಾನಾಸ್ಪದವಾಗಿ ಸೋಫಿಯಾ ಮೃತಪಟ್ಟ ಹಿನ್ನೆಲೆಯಲ್ಲಿ ದೂರು ನೀಡಲಾಗಿದ್ದು, ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 74(ಅಸಹಜ ಸಾವು) ಅಡಿ ಪ್ರಕರಣ ದಾಖಲಾಗಿದೆ.

ಕಳೆದ ಎರಡು ವರ್ಷದಿಂದ ಸೋಫಿಯಾ ಬೆಂಗಳೂರಿನಲ್ಲಿ ನೆಲೆಸಿದ್ದಳು. ಪೊಲೀಸರು ಮುಂಬೈಯಿಂದ ಸೋಫಿಯಾ ಪೋಷಕರ ಆಗಮನಕ್ಕಾಗಿ ಈಗ ಕಾಯುತ್ತಿದ್ದಾರೆ. ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ಸೋಫಿಯಾ ಮೃತದೇಹವನ್ನು ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಲಾಗಿದೆ.
ಸೋಫಿಯಾ ಬೆಳಗ್ಗೆ ಸಹಪಾಠಿಗಳ ಜೊತೆ ಮಾತಾಡಿದ್ದಾಳೆ. ಈ ನೀವು ಕಾಲೇಜಿಗೆ ಹೋಗಿ ನಾನು ಬರುವುದಿಲ್ಲ ಎಂದು ತಿಳಿಸಿದ್ದಾಳೆ. ಬಳಿಕ ಸಂಜೆ ಸಹಪಾಠಿಗಳು ಹಾಸ್ಟೆಲ್ ವಾಪಸ್ ಬಂದಾಗ ಸೋಫಿಯಾ ಶವವಾಗಿ ಪತ್ತೆಯಾಗಿದ್ದಾಳೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Leave a Reply