ಜೈಲಿನಲ್ಲಿ ಕೈದಿಯ ಅನುಮಾನಾಸ್ಪದ ಸಾವು

ಬೆಳಗಾವಿ: ಕೇರಳದ ಕುಖ್ಯಾತ ರೌಡಿ ಡಾನ್ ತಸ್ಲಿಮ್ ಕೊಲೆ ಆರೋಪದ ಮೇಲೆ ಜೈಲು ಸೇರಿದ್ದ ಗುರುರಾಜ್ ದೊಡ್ಡಮನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

ಕಳೆದ ನಾಲ್ಕು ದಿನಗಳಿಂದ ಎದೆ ನೋವಿನಿಂದ ಬಳಲುತ್ತಿರುವುದಾಗಿ ಗುರುರಾಜ್ ಹೇಳಿಕೊಂಡಿದ್ದ. ಶುಕ್ರವಾರ ಸಂಜೆಯೂ ಜೈಲಿನ ಸಿಬ್ಬಂದಿ ಬಳಿ ಎದೆನೋವು ಇದೆ, 500 ರೂ. ಕೊಡುವಂತೆ ಕೇಳಿಕೊಂಡಿದ್ದ. ಇದಾದ ಕೆಲವೇ ಗಂಟೆಗಳಲ್ಲಿ ಗುರುರಾಜ್ ಸಾವನ್ನಪ್ಪಿದ್ದಾನೆ ಎಂದು ಜೈಲು ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿ ಅಗ್ನಿ ಅವಘಡ – 20 ಕೈದಿಗಳು ಆಸ್ಪತ್ರೆಗೆ ದಾಖಲು

jail

2019ರಲ್ಲಿ ಕೊಲೆ ಕೇಸ್‌ನಲ್ಲಿ ಗುರುರಾಜ್ ಜೈಲು ಸೇರಿದ್ದ. ಹದಿನೈದು ದಿನಗಳ ಹಿಂದೆ ಗುರುರಾಜ್ ಮೇಲೆ ಜೈಲು ಸಿಬ್ಬಂದಿ ಹಲ್ಲೆ ನಡೆಸಿದ್ದ ಎಂದು ಹೇಳಲಾಗಿದೆ. ಇದಾದ ಬಳಿಕ ಗುರುರಾಜ್‌ಗೆ ಎದೆನೋವು ಕಂಡುಬಂದಿದೆ. ಗುರುರಾಜ್ ಸಾವಿಗೆ ಜೈಲು ಸಿಬ್ಬಂದಿಯೇ ಕಾರಣ ಎಂದು ಆತನ ಸಹೋದರ ಕಿರಣ್ ಆರೋಪಿಸಿದ್ದಾರೆ. ಇದನ್ನೂ ಓದಿ: ಕಳೆದುಕೊಂಡಿರುವ ಜಿಲ್ಲಾ ಕೇಂದ್ರ ಹಾಸನವನ್ನು ಮತ್ತೆ ಜೆಡಿಎಸ್ ತೆಕ್ಕೆಗೆ ತೆಗೆದುಕೊಳ್ಬೇಕು: ಸೂರಜ್

ಗುರುರಾಜ್ ಕುಟುಂಬಸ್ಥರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಜೈಲು ಸಿಬ್ಬಂದಿಯ ವಿರುದ್ಧ ದೂರು ನೀಡಲು ಮುಂದಾಗಿದ್ದಾರೆ.

Comments

Leave a Reply

Your email address will not be published. Required fields are marked *