ದಾವಣಗೆರೆ: ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್ ಕಾರೊಂದು ರಸ್ತೆ ಬದಿಯ ಕಾಲುವೆಗೆ ಉರುಳಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ರಾಷ್ಟ್ರೀಯ ಹೆದ್ದಾರಿ ಪಕ್ಕದ ತುಂಗಭದ್ರಾ ನಾಲೆಯಲ್ಲಿ ಈ ಅವಘಡ ಸಂಭವಿಸಿದೆ. ಇಂದು ನಸುಕಿನ ಜಾವ ಶಿವಮೊಗ್ಗದಿಂದ ದಾವಣಗೆರೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದಿದೆ.
ಘಟನೆಯಿಂದ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕ್ರೇನ್ ಮೂಲಕ ಕಾರು ಮೇಲೆತ್ತಲಾಗಿದೆ. ಸ್ಥಳಕ್ಕೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.




Leave a Reply