H1N1ಗೆ ಬೆಚ್ಚಿ ಬಿದ್ದ ಬೆಂಗಳೂರು ಟೆಕ್ಕಿಗಳು

ಬೆಂಗಳೂರು: ಇಡೀ ವಿಶ್ವದೆಲ್ಲೆಡೆ ಕೊರೊನಾ ಭೀತಿ ಎದುರಾಗಿದೆ. ಇದರ ನಡುವೆ ಬೆಂಗಳೂರಿನಲ್ಲಿ ಮಹಾಮಾರಿ ಎಚ್1ಎನ್1 ಭಯ ಕಾಡುತ್ತಿದೆ.

ಜನವರಿಯಿಂದ ಇಂದಿನವರೆಗೂ ಬೆಂಗಳೂರಿನಲ್ಲಿ 66ಕ್ಕೂ ಹೆಚ್ಚು ಮಂದಿಗೆ ಎಚ್1ಎನ್1 ಪಾಸಿಟಿವ್ ರಿಸಲ್ಟ್ ಬಂದಿದೆ. ರಾಜ್ಯದಲ್ಲಿ ಜನವರಿಯಿಂದ ಈವರೆಗೆ 171 ಮಂದಿ ಈ ಸೋಂಕಿನಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಜಾಪುರದ ಇಕೋ ವರ್ಲ್ಡ್ ಕ್ಯಾಂಪಸ್‍ನ ನಾಲ್ಕೈದು ಪ್ರತಿಷ್ಠಿತ ಸಾಫ್ಟ್‌ವೇರ್ ಕಂಪೆನಿಯ ಸಿಬ್ಬಂದಿ, ಕೆಲ ದಿನಗಳ ಮಟ್ಟಿಗೆ ವರ್ಕ್ ಫ್ರಂ ಹೋಂ ಅಂದರೆ ಮನೆಯಿಂದಲೇ ಕೆಲಸ ನಿರ್ವಹಿಸುವಂತೆ ಸೂಚಿಸಿದೆ. ಇದನ್ನೂ ಓದಿ: ಏನಿದು ಎಚ್1ಎನ್1? ಹಂದಿ ಜ್ವರ ಬಂದ ಮೇಲೆ ಏನು ಮಾಡಬೇಕು?

ಇಕೋ ವರ್ಲ್ಡ್‌ನಲ್ಲಿ 25ಕ್ಕೂ ಹೆಚ್ಚು ಸಾಫ್ಟ್‌ವೇರ್ ಸಂಸ್ಥೆಗಳ 2 ಲಕ್ಷಕ್ಕೂ ಹೆಚ್ಚು ಮಂದಿ ಕೆಲಸ ನಿರ್ವಹಿಸುತ್ತಿದ್ದಾರೆ. ಸ್ವೈನ್ ಫ್ಲೂ ಕಾಣಿಸಿಕೊಂಡ ಕಾರಣ ಸಂಸ್ಥೆಯ ಸಿಬ್ಬಂದಿಯನ್ನು ಕಡ್ಡಾಯವಾಗಿ ಫೆ. 20ರಿಂದ 28ರವರೆಗೆ ಮನೆಯಿಂದಲೇ ಕಾರ್ಯ ನಿರ್ವಹಿಸುವಂತೆ ತಿಳಿಸಲಾಗಿದೆ. ಈ ಬಗ್ಗೆ ಸಿಬ್ಬಂದಿಗೆ ಇ-ಮೇಲ್ ಮಾಡಿದೆ.

ಇನ್ನೂ ಕೆಲ ಸಾಫ್ಟ್‌ವೇರ್ ಕಂಪೆನಿಗಳ ಕಚೇರಿಗಳಲ್ಲಿ ಔಷಧಿ ಸಿಂಪಡಣೆ, ಕ್ಲೀನಿಂಗ್ ಕೂಡ ಮಾಡಲಾಗುತ್ತಿದೆ. ಜೊತೆಗೆ ಸಿಬ್ಬಂದಿಗಳ ಕುಟುಂಬದವರಲ್ಲಿ ಯಾರಿಗಾದರೂ ಚಳಿ, ಜ್ವರ ಅಥವಾ ಕೆಮ್ಮು ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಎಂದು ಸಲಹೆ ನೀಡಲಾಗಿದೆ.

Comments

Leave a Reply

Your email address will not be published. Required fields are marked *