Tag: ಅಂಕಿತಾ ಅಮರ್‌

  • ಶೈನ್ ಶೆಟ್ಟಿ, ಅಂಕಿತ ಅಮರ್ ಚಿತ್ರಕ್ಕೆ ಸೆನ್ಸಾರ್ ಅಸ್ತು

    ಶೈನ್ ಶೆಟ್ಟಿ, ಅಂಕಿತ ಅಮರ್ ಚಿತ್ರಕ್ಕೆ ಸೆನ್ಸಾರ್ ಅಸ್ತು

    ಕಾಂತಾರದಂತಹ ವಿಶ್ವವಿಖ್ಯಾತ ಚಿತ್ರದ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ (Ajaneesh Loknath) ‘ಜಸ್ಟ್ ಮಾರೀಡ್’ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ABBS Studios ಲಾಂಛನದಲ್ಲಿ ಅಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ ಈ ಪ್ರೇಮ ಕಥಾನಕವನ್ನು ನಿರ್ಮಾಣ ಮಾಡಿದ್ದಾರೆ. ಸಂಗೀತ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಸಿ.ಆರ್.ಬಾಬಿ ಅವರ ಚೊಚ್ಚಲ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ (Shine Shetty) ಹಾಗೂ ಅಂಕಿತ ಅಮರ್ (Ankita Amar) ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ ಜಸ್ಟ್ ಮ್ಯಾರೀಡ್ (Just Married) ಚಿತ್ರ ತೆರೆಗೆ ಬರಲು ಅಣಿಯಾಗಿದೆ. ಇತ್ತೀಚೆಗೆ ಈ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರವನ್ನು ನೀಡಿದೆ. ಸದ್ಯದಲ್ಲೇ ನಿರ್ಮಾಪಕರು ಬಿಡುಗಡೆ ದಿನಾಂಕವನ್ನು ತಿಳಿಸಲಿದ್ದಾರೆ.

    ಪ್ರೇಮಕಥೆಯೊಂದಿಗೆ ಕೌಟುಂಬಿಕ ಕಥಾಹಂದರವನ್ನೂ ಹೊಂದಿರುವ ಜಸ್ಟ್ ಮ್ಯಾರೀಡ್ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು ಹಾಗೂ ಟೀಸರ್ ಗೆ ಪ್ರೇಕ್ಷಕರು ಪ್ರಶಂಸೆಯ ಮಳೆಯನ್ನೇ ಸುರಿಸಿದ್ದಾರೆ. ತೆರೆಯ ಮೇಲೆ ಚಿತ್ರವನ್ನು ನೋಡುವ ಕಾತುರದಲ್ಲಿದ್ದಾರೆ.  ಇದನ್ನೂ ಓದಿ: ಪುನೀತ್ ತನ್ನ ಮಗನಾಗಿದ್ದರೆ ಚೆನ್ನಾಗಿತ್ತು ಎಂದುಕೊಂಡಿದ್ದರಂತೆ ಸರೋಜಾದೇವಿ

     

    ಶೈನ್ ಶೆಟ್ಟಿ ಹಾಗೂ ಅಂಕಿತ ಅಮರ್ ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಭಾರತದ ಹೆಸರಾಂತ ಹಾಗೂ ಅನುಭವಿ ಕಲಾವಿದರ ದೊಡ್ದ ತಾರಾಬಳಗವೇ ಇದೆ. ದೇವರಾಜ್, ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ, ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ, ಅನಿಲ್, ವೇದಿಕಾ ಕಾರ್ಕಳ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.  ಇದನ್ನೂ ಓದಿ: ಬೆನ್ನಿ ಸಿನಿಮಾ ಮೂಲಕ ಜಿಂಕೆ ಮರಿ ಶ್ವೇತಾ ಸ್ಯಾಂಡಲ್‌ವುಡ್‌ಗೆ ಕಂಬ್ಯಾಕ್

    ಚಿತ್ರದಲ್ಲಿ ಆರು ಸುಮಧುರ ಹಾಡುಗಳಿದ್ದು ಅಜನೀಶ್ ಲೋಕನಾಥ್ ಅವರೇ ಸಂಗೀತ ಸಂಯೋಜನೆ ಮಾಡಿದ್ದಾರೆ. ಸಿ.ಆರ್ ಬಾಬಿ ಅವರೆ ಕಥೆ ಬರೆದಿದ್ದಾರೆ. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.

     

    ಪಿ ಜಿ ಛಾಯಾಗ್ರಹಣ, ಶ್ರೀಕಾಂತ್ ಮತ್ತು ಪ್ರತೀಕ್ ಶೆಟ್ಟಿ ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ ಜಸ್ಟ್ ಮ್ಯಾರೀಡ್ ಚಿತ್ರದ ಹಾಡುಗಳನ್ನು ಕೆ.ಕಲ್ಯಾಣ್, ಡಾ.ವಿ.ನಾಗೇಂದ್ರಪ್ರಸಾದ್, ಪ್ರಮೋದ್ ಮರವಂತೆ, ಧನಂಜಯ್ ರಂಜನ್ ಮತ್ತು ಶಶಿ ಕಾವೂರ್ ಬರೆದಿದ್ದಾರೆ.

  • ನಟಿಗೆ ಬಿಗ್ ಚಾನ್ಸ್- ಉಪೇಂದ್ರಗೆ ಅಂಕಿತಾ ಅಮರ್ ನಾಯಕಿ

    ನಟಿಗೆ ಬಿಗ್ ಚಾನ್ಸ್- ಉಪೇಂದ್ರಗೆ ಅಂಕಿತಾ ಅಮರ್ ನಾಯಕಿ

    ‘ನಮ್ಮನೆ ಯುವರಾಣಿ’ ಸೀರಿಯಲ್ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟ ಅಂಕಿತಾ ಅಮರ್ (Ankita Amar) ಕನ್ನಡದ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ನಟಿಗೆ ಬಿಗ್ ಆಫರ್‌ವೊಂದು ಅರಸಿ ಬಂದಿದೆ. ರಿಯಲ್ ಸ್ಟಾರ್ ಉಪೇಂದ್ರಗೆ (Upendra) ಅಂಕಿತಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದನ್ನೂ ಓದಿ:ರಾಕೇಶ್ ಗುಣ ಮಗುವಿನಂತೆ – ಬಿಕ್ಕಿ ಬಿಕ್ಕಿ ಅತ್ತ ದಿವ್ಯಾಶ್ರೀ

    ನಾಗಣ್ಣ ನಿರ್ದೇಶನದ, ಸೂರಪ್ಪ ಬಾಬು ನಿರ್ಮಾಣದ ‘ಭಾರ್ಗವ’ ಚಿತ್ರಕ್ಕೆ ನಾಯಕಿಯಾಗಿ ಅಂಕಿತಾ ಸೆಲೆಕ್ಟ್ ಆಗಿದ್ದಾರೆ. ಈ ಸಿನಿಮಾದಲ್ಲಿ ನಟಿಗೆ ಉತ್ತಮ ಪಾತ್ರವೇ ಸಿಕ್ಕಿದೆ. ಉಪೇಂದ್ರ ಅವರು ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ಅಂಕಿತಾ ನಟನೆ ನೋಡಿ ‘ಭಾರ್ಗವ’ ಚಿತ್ರಕ್ಕೆ ಇವರೇ ಸೂಕ್ತ ಎಂದು ಹೇಳಿದ್ದರು. ಹೀಗಾಗಿ ಅಂಕಿತಾಗೆ ಉಪೇಂದ್ರ ಜೊತೆ ನಟಿಸುವ ಒಂದೊಳ್ಳೆಯ ಅವಕಾಶ ಸಿಕ್ಕಿದೆ. ಇದನ್ನೂ ಓದಿ:ಕುಟುಂಬ ಸಮೇತ ಮಂತ್ರಾಲಯದಲ್ಲಿ ರಾಯರ ದರ್ಶನ ಪಡೆದ ಉಪೇಂದ್ರ

     

    View this post on Instagram

     

    A post shared by Ankita Amar (@ankita.amar)

    ಶೈನ್ ಶೆಟ್ಟಿ ‘ಜಸ್ಟ್ ಮ್ಯಾರೀಡ್’, ಪೃಥ್ವಿ ಅಂಬರ್ ಜೊತೆ ‘ಅಬ ಜಬ ದಬ’ ಸಿನಿಮಾಗಳು ನಟಿಯ ಕೈಯಲ್ಲಿವೆ. ಕಳೆದ ವರ್ಷ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದಲ್ಲಿ ವಿಹಾನ್‌ಗೆ ನಾಯಕಿಯಾಗಿ ನಟಿಸಿದ್ದರು ಅಂಕಿತಾ.

  • ಅಂಕಿತಾ ಅಮರ್‌ಗೆ ‘ಹೇಳು ಗೆಳತಿ’ ಎಂದು ಹಾಡಿದ ವಿಹಾನ್

    ಅಂಕಿತಾ ಅಮರ್‌ಗೆ ‘ಹೇಳು ಗೆಳತಿ’ ಎಂದು ಹಾಡಿದ ವಿಹಾನ್

    ವಿಹಾನ್, ಅಂಕಿತಾ ಅಮರ್ ನಟನೆಯ ‘ಇಬ್ಬನಿ ತಬ್ಬಿದ ಇಳೆಯಲಿ’ (Ibbani Tabbida Ileyali) ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿ’ ಎಂಬ ಮೆಲೋಡಿ ಹಾಡನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ಈ ಹಿಂದೆ ಹರಿಬಿಟ್ಟಿದ್ದ ಹಾಡುಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು. ಇದೀಗ ‘ಹೇಳು ಗೆಳತಿ’ ಹಾಡಿಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದನ್ನೂ ಓದಿ:ನಾನು ಸುದೀಪ್ ಅವರ ದೊಡ್ಡ ಅಭಿಮಾನಿ: ‘ಮ್ಯಾಕ್ಸ್’ ನಟಿ ಸಂಯುಕ್ತಾ ಹೊರನಾಡ್

    ನಾಗಾರ್ಜುನ ಶರ್ಮಾ ಸಾಹಿತ್ಯವಿರುವ ಈ ಹಾಡಿಗೆ ಗಗನ್ ಬಡೇರಿಯಾ ಸಂಗೀತ ಸಂಯೋಜಿಸಿದ್ದಾರೆ. ಸದ್ಯ ಟ್ರೆಂಡ್ ಹುಟ್ಟು ಹಾಕಿರುವ ಈ ಗೀತೆಗೆ ದೀಕ್ಷಿತ್ ಕುಮಾರ್ ನೃತ್ಯ ನಿರ್ದೇಶನವಿದೆ. ಇನ್ನೂ ಈ ರೆಟ್ರೋ ಹಾಡಿಗೆ ಚರಣ್‌ರಾಜ್ ದನಿಗೂಡಿಸಿರುವುದು ವಿಶೇಷ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಈ ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ.

    ‘ಕಿರಿಕ್ ಪಾರ್ಟಿ’ ಹಾಗೂ ‘ಅವನೇ ಶ್ರೀಮನ್ನಾರಾಯಣ’ ಚಿತ್ರಗಳಲ್ಲಿ ಬರಹಗಾರರಾಗಿ ಗುರುತಿಸಿಕೊಂಡಿದ್ದ ಚಂದ್ರಜಿತ್ ಬೆಳಿಯಪ್ಪ, ರಕ್ಷಿತ್‌ರ ‘ಸೆವೆನ್ ಆಡ್ಸ್’ ಬರಹಗಾರರ ತಂಡದ ಪ್ರಮುಖ ಸದಸ್ಯ ಹಾಗೂ ಕಥಾಸಂಗಮ ಚಿತ್ರದ ನಿರ್ದೇಶಕರಲ್ಲೊಬ್ಬರಾಗಿದ್ದರು. ಇದೀಗ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರವನ್ನು ನಿರ್ದೇಶಿಸಿದ್ದಾರೆ. ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್.ಗುಪ್ತ, ರಕ್ಷಿತ್ ಶೆಟ್ಟಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.

    ತೆಲುಗಿನ ಸೂಪರ್‌ಹಿಟ್ ‘ಗೀತಾಂಜಲಿ’ ಸೇರಿದಂತೆ ಅನೇಕ ಚಿತ್ರಗಳಲ್ಲಿ ನಟಿಸಿರುವ ಗಿರಿಜಾ ಶೆಟ್ಟರ್ ಬಹಳ ವರ್ಷಗಳ ನಂತರ ನಟನೆಗೆ ಮರಳಿ ಬಂದಿದ್ದಾರೆ. ಮಯೂರಿ ನಟರಾಜ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ಮೊದಲಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

    ಸದ್ಯ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ಚಿತ್ರತಂಡ ಮಗ್ನವಾಗಿದ್ದು, ವಿಎಫ್‌ಎಕ್ಸ್ ಕೆಲಸ ನಡೆಯುತ್ತಿದೆ. ಶ್ರೀವತ್ಸನ್ ಸೆಲ್ವರಾಜನ್ ಛಾಯಾಗ್ರಹಣ, ರಕ್ಷಿತ್ ಕಾಪ್ ಸಂಕಲನ ಈ ಚಿತ್ರಕ್ಕಿದೆ.

  • ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ರೊಮ್ಯಾಂಟಿಕ್ ಸಾಂಗ್ ಔಟ್

    ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ರೊಮ್ಯಾಂಟಿಕ್ ಸಾಂಗ್ ಔಟ್

    ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಟನೆಯ ‘ಇಬ್ಬನಿ ತಬ್ಬಿದ ಇಳೆಯಲಿ’ (Ibbani Tabbida Ilayeli) ಸಿನಿಮಾದ ರೊಮ್ಯಾಂಟಿಕ್ ಸಾಂಗ್‌ವೊಂದು ಇದೀಗ ಬಿಡುಗಡೆಯಾಗಿದೆ. ನಟಿ ಅಂಕಿತಾ ಅಮರ್ (Ankita Amar) ಜೊತೆ ವಿಹಾನ್ ಡ್ಯುಯೇಟ್ ಹಾಡಿದ್ದು, ಓ ಅನಾಹಿತ ಹಾಡಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ. ಇದನ್ನೂ ಓದಿ:‘ಕೆಂಪೇಗೌಡ’ ಪಾತ್ರದಲ್ಲಿ ಡಾಲಿ- ಟಿ.ಎಸ್‌ ನಾಗಾಭರಣ ಆ್ಯಕ್ಷನ್ ಕಟ್

    ರಕ್ಷಿತ್ ಶೆಟ್ಟಿ (Rakshit Shetty) ಹೊಸ ಪ್ರೇಮಕಥೆಯನ್ನು ನಿರ್ಮಾಣದ ಮೂಲಕ ತೋರಿಸಲು ಹೊರಟಿದ್ದಾರೆ. ವಿಹಾನ್ ಮತ್ತು ಅಂಕಿತಾ ಈ ಸುಂದರ ಜೋಡಿ ರೊಮ್ಯಾಂಟಿಕ್ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ‘ಓ ಅನಾಹಿತ’ ಎಂಬ ಹಾಡು ಕಲರ್‌ಫುಲ್ ಆಗಿ ಮೂಡಿ ಬಂದಿದೆ. ಹಾಡಿನ ಲಿರಿಕ್ಸ್ ಮ್ಯೂಸಿಕ್ ಪ್ರಿಯರಿಗೆ ನಾಟುವಂತಿದೆ.

     

    View this post on Instagram

     

    A post shared by Rakshit Shetty (@rakshitshetty)

    ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಈ ಚಿತ್ರದಲ್ಲಿ ವಿಹಾನ್, ಅಂಕಿತಾ ಅಮರ್, ಗಿರಿಜಾ ಶೆಟ್ಟರ್, ಮಯೂರಿ ನಟರಾಜ್ ಸೇರಿದಂತೆ ಅನೇಕರು ನಟಿಸಿದ್ದಾರೆ.

    ಅಂದಹಾಗೆ, ಈ ಸುಂದರ ಪ್ರೇಮಕಥೆಯ ಮೂಲಕ ವಿಹಾನ್ ಮತ್ತು ಅಂಕಿತಾ ಜೋಡಿ ಪ್ರೇಕ್ಷಕರಿಗೆ ಪರಿಚಯವಾಗುತ್ತಿದೆ. ಈ ಹೊಸ ಜೋಡಿ ನೋಡುಗರಿಗೆ ಮೋಡಿ ಮಾಡುತ್ತಾ ಎಂದು ಕಾಯಬೇಕಿದೆ.

  • ಜೂ.21ರಂದು ರಿಲೀಸ್‌ ಆಗಲಿದೆ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಹಾಡು

    ಜೂ.21ರಂದು ರಿಲೀಸ್‌ ಆಗಲಿದೆ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಹಾಡು

    ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ (Rakshit Shetty) ನಿರ್ಮಾಣದ ‘ಇಬ್ಬನಿ ತಬ್ಬಿದ ಇಳೆಯಲಿ’ (Ibbani Tabbida Ilayali Film) ಸಿನಿಮಾದ ಬಗ್ಗೆ ಅಪ್‌ಡೇಟ್‌ವೊಂದು ಸಿಕ್ಕಿದೆ. ವಿಹಾನ್, ಅಂಕಿತಾ ಅಮರ್ ನಟಿಸಿರುವ ‘ಓ ಅನಾಹಿತ’ ಹಾಡು ಇದೇ ಜೂನ್ 21ಕ್ಕೆ ರಿಲೀಸ್ ಆಗಲಿದೆ. ಇದನ್ನೂ ಓದಿ:ಲ್ಯಾಂಬೋರ್ಗಿನಿ ತಗೋಳೋಕೆ ದರ್ಶನ್‌ಗೆ ಅಡ್ವಾನ್ಸ್ ಕೊಟ್ಟಿದ್ದೇ ನಾನು: ಉಮಾಪತಿ

    ನಟ, ನಿರ್ದೇಶಕ, ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಹೊಸ ಪ್ರತಿಭೆಗಳಿಗೆ ತಮ್ಮದೇ ನಿರ್ಮಾಣ ಸಂಸ್ಥೆಯ ಮೂಲಕ ಪರಿಚಯಿಸುತ್ತಿದ್ದಾರೆ. ‘ಇಬ್ಬನಿ ತಬ್ಬಿ ಇಳೆಯಲಿ’ ಚಿತ್ರವನ್ನು ರಕ್ಷಿತ್ ನಿರ್ಮಾಣ ಮಾಡಿದ್ದಾರೆ. ಜೂನ್ 21ರಂದು ಓ ಅನಾಹಿತ ಎಂಬ ಬ್ಯೂಟಿಫುಲ್ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಲಿದೆ.

    ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನದ ಈ ಚಿತ್ರದಲ್ಲಿ ವಿಹಾನ್, ಅಂಕಿತಾ ಅಮರ್ (Ankita Amar), ಗಿರಿಜಾ ಶೆಟ್ಟರ್, ಮಯೂರಿ ನಟರಾಜ್ ಸೇರಿದಂತೆ ಅನೇಕರು ನಟಿಸಿದ್ದಾರೆ. ಇದನ್ನೂ ಓದಿ:Darshan Case: ಸೆಲೆಬ್ರಿಟಿ ಅಂತಲ್ಲ, ತಪ್ಪು ಯಾರೇ ಮಾಡಿದ್ರು ತಪ್ಪೇ- ಉಮಾಪತಿ ರಿಯಾಕ್ಷನ್

    ಅಂದಹಾಗೆ, ಈ ಸುಂದರ ಪ್ರೇಮಕಥೆಯ ಮೂಲಕ ವಿಹಾನ್ ಮತ್ತು ಅಂಕಿತಾ ಜೋಡಿ ಪ್ರೇಕ್ಷಕರಿಗೆ ಪರಿಚಯವಾಗುತ್ತಿದೆ. ಈ ಹೊಸ ಜೋಡಿ ನೋಡುಗರಿಗೆ ಮೋಡಿ ಮಾಡುತ್ತಾ ಎಂದು ಕಾಯಬೇಕಿದೆ.

  • ಜಸ್ಟ್ ಮ್ಯಾರೀಡ್: ಶೈನ್ ಶೆಟ್ಟಿ-ಅಂಕಿತಾ ಅಮರ್ ಫೋಟೋ ವೈರಲ್

    ಜಸ್ಟ್ ಮ್ಯಾರೀಡ್: ಶೈನ್ ಶೆಟ್ಟಿ-ಅಂಕಿತಾ ಅಮರ್ ಫೋಟೋ ವೈರಲ್

    ಜನೀಶ್ ಲೋಕನಾಥ್ ಹಾಗೂ ಸಿ.ಆರ್ ಬಾಬಿ (CR Bobby) ಅವರು ನಿರ್ಮಿಸುತ್ತಿರುವ, ಸಿ.ಆರ್.ಬಾಬಿ ಅವರ ನಿರ್ದೇಶನದಲ್ಲಿ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ (Shine Shetty) ಹಾಗೂ ಅಂಕಿತ ಅಮರ್ (Ankita Amar) ನಾಯಕ-ನಾಯಕಿಯಾಗಿ ನಟಿಸಿರುವ ಬಹು ನಿರೀಕ್ಷಿತ “ಜಸ್ಟ್ ಮ್ಯಾರೀಡ್” (Just Married) ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು ಮತ್ತು ಚಿಕ್ಕಮಗಳೂರಿನಲ್ಲಿ ನಲವತ್ತೈದು ದಿನಗಳ ಚಿತ್ರೀಕರಣ ನಡೆದಿದೆ. ಚಿತ್ರೀಕರಣ ನಂತರದ ಕೆಲಸಗಳು ಬಿರುಸಿನಿಂದ ಸಾಗಿದೆ.

    ಸೂಪರ್ ಹಿಟ್ ಚಿತ್ರಗಳಿಗೆ ಸಂಗೀತ ನೀಡಿ  ಜನಮನಸೂರೆಗೊಂಡಿರುವ ಅಜನೀಶ್ ಲೋಕನಾಥ್ ಈ ಚಿತ್ರದ ಮೂಲಕ ನಿರ್ಮಾಪಕರಾಗಿದ್ದಾರೆ. ಸಿ.ಆರ್.ಬಾಬಿ ಅವರು ಚಿತ್ರ ನಿರ್ಮಾಣಕ್ಕೆ ಅಜನೀಶ್ ಅವರಿಗೆ ಸಾಥ್ ನೀಡಿದ್ದಾರೆ. ಸಿ.ಆರ್.ಬಾಬಿ ಅವರೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇಷ್ಟು ದಿವಸ ಸಂಗೀತ ಕ್ಷೇತ್ರದಲ್ಲಿ ಹೆಸರು‌ ಮಾಡಿದ್ದ ಸಿ.ಆರ್ ಬಾಬಿ ಅವರು ಈ ಚಿತ್ರದ ಮೂಲಕ ನಿರ್ದೇಶಕಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದಾರೆ.

    ಚಿತ್ರದಲ್ಲಿ ಆರು ಸುಮಧುರ ಹಾಡುಗಳಿದ್ದು ಅಜನೀಶ್ ಲೋಕನಾಥ್ ಅವರೆ ಸಂಗೀತ ಸಂಯೋಜನೆ ಮಾಡಿದ್ದಾರೆ. ಈ ಪೈಕಿ ಪ್ರಮೋದ್ ಮರವಂತೆ ಅವರು ಬರೆದು, ವಿಜಯ್ ಪ್ರಕಾಶ್ ಹಾಡಿರುವ “ಅಭಿಮಾನಿಯಾಗಿ  ಹೋದೆ” ಹಾಡು ಇತ್ತೀಚಿಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದುಕೊಂಡಿದೆ. “ಜಸ್ಟ್ ಮ್ಯಾರೀಡ್” ಪ್ರೇಮಕಥೆಯ ಚಿತ್ರವಾಗಿದ್ದರೂ, ಪ್ರೇಕ್ಷಕರಿಗೆ ಬೇಕಾದ ಎಲ್ಲಾ ಅಂಶಗಳು ಇದೆ.  ಸಿ.ಆರ್ ಬಾಬಿ ಅವರೆ ಕಥೆ ಬರೆದಿದ್ದಾರೆ‌. ಚಿತ್ರಕಥೆ ಸಿ.ಆರ್ ಬಾಬಿ ಹಾಗೂ ಧನಂಜಯ್ ರಂಜನ್ ಅವರದು. ರಘು ನಿಡುವಳ್ಳಿ ಈ ಚಿತ್ರದ ಸಂಭಾಷಣೆಕಾರರು.

    ಪಿ ಜಿ  ಛಾಯಾಗ್ರಹಣ, ಶ್ರೀಕಾಂತ್ ಮತ್ತು ಅಶಿಕ್ ಕುಸುಗೊಳ್ಳಿ (ಗಣೇಶ ಸಾಂಗ್) ಸಂಕಲನ, ಅಮರ್ ಕಲಾ ನಿರ್ದೇಶನ, ವಿಕ್ರಮ್ ಮೋರ್, ಸಾಹಸ ನಿರ್ದೇಶನ ಹಾಗೂ ಬಾಬಾ ಭಾಸ್ಕರ್, ಶಾಂತಿ ಅರವಿಂದ್ ಅವರ ನೃತ್ಯ ನಿರ್ದೇಶನವಿರುವ “ಜಸ್ಟ್ ಮ್ಯಾರೀಡ್” ಚಿತ್ರದ ಹಾಡುಗಳನ್ನು ಪ್ರಮೋದ್ ಮರವಂತೆ ಮತ್ತು ಧನಂಜಯ್ ಬರೆದಿದ್ದಾರೆ.

    ಶೈನ್ ಶೆಟ್ಟಿ, ಅಂಕಿತ ಅಮರ್,  ದೇವರಾಜ್,  ಅಚ್ಯುತಕುಮಾರ್, ಮಾಳವಿಕ ಅವಿನಾಶ್, ಅನೂಪ್ ಭಂಡಾರಿ, ಶ್ರುತಿ ಹರಿಹರನ್, ಶ್ರುತಿ ಕೃಷ್ಣ,  ಸಾಕ್ಷಿ ಅಗರವಾಲ್, ಶ್ರೀಮಾನ್, ರವಿಶಂಕರ್ ಗೌಡ, ರವಿ ಭಟ್, ವಾಣಿ ಹರಿಕೃಷ್ಣ, ಸಂಗೀತ ಅನಿಲ್, ಕುಮುದಾ, ಜಯರಾಮ್, ವೇದಿಕಾ ಕಾರ್ಕಳ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

  • ಇಬ್ಬನಿ ತಬ್ಬಿದ ಇಳೆಯಲಿ  ‘ಬ್ಯಾಚುಲರ್ ಪಾರ್ಟಿ’ ಕೊಟ್ಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

    ಇಬ್ಬನಿ ತಬ್ಬಿದ ಇಳೆಯಲಿ ‘ಬ್ಯಾಚುಲರ್ ಪಾರ್ಟಿ’ ಕೊಟ್ಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ

    ಕ್ಷಿತ್ ಶೆಟ್ಟಿ ಈಗ ಕೇವಲ ನಾಯಕರಾಗಷ್ಟೇ ಅಲ್ಲ. ನಿರ್ಮಾಪಕರಾಗೂ ಜನಪ್ರಿಯ. ತಮ್ಮ ಪರಂವಃ ಸ್ಟುಡಿಯೋಸ್ ಮೂಲಕ ಯುವಪ್ರತಿಭೆಗಳಿಗೆ ಅವಕಾಶ ನೀಡುತ್ತಾ ಬರುತ್ತಿದ್ದಾರೆ ರಕ್ಷಿತ್ ಶೆಟ್ಟಿ.  ಪ್ರಸ್ತುತ ಪರಂವಃ ಸ್ಟುಡಿಯೋಸ್ ನಿರ್ಮಿಸುತ್ತಿರುವ “ಬ್ಯಾಚುಲರ್ ಪಾರ್ಟಿ” ಹಾಗೂ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರಗಳ ಮುಹೂರ್ತ ಸಮಾರಂಭ ಧರ್ಮಗಿರಿ ಮಂಜುನಾಥಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

    ಚಿತ್ರರಂಗದಲ್ಲಿ ಹೊಸರೀತಿಯ ಕಥೆಗಳು ಬರಬೇಕು. ಹೊಸರೀತಿಯಲ್ಲಿ ಯೋಚಿಸುವ ಕಥೆಗಾರರನ್ನು ನಾವು ಬರಮಾಡಿಕೊಳ್ಳಬೇಕು. ಆ ನಿಟ್ಟಿನಲ್ಲಿ ನಮ್ಮ ಪರಂವಃ ಸ್ಟುಡಿಯೋಸ್ ಸದಾ ಸಿದ್ದ.ನನ್ನ ಜೊತೆ “ಕಿರಿಕ್ ಪಾರ್ಟಿ” ಸಮಯದಿಂದ ಜೊತೆಗಿರುವ ಚಂದ್ರಜಿತ್ ಬೆಳ್ಳಿಯಪ್ಪ “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರವನ್ನು ಹಾಗೂ ಅಭಿಜಿತ್ ಮಹೇಶ್ “ಬ್ಯಾಚುಲರ್ ಪಾರ್ಟಿ” ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎರಡು ಬೇರೆಯದೇ ತರಹದ ಕಥೆಗಳು. ಎರಡು ಚಿತ್ರಗಳಿಗೂ ಶುಭವಾಗಲಿ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ರಕ್ಷಿತ್ ಶೆಟ್ಟಿ. ಇದನ್ನೂ ಓದಿ: ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್‌ ತನ್ನಿ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ

    ನನಗೆ ಅವಕಾಶ ನೀಡಿರುವ ರಕ್ಷಿತ್ ಶೆಟ್ಟಿ ಅವರಿಗೆ ಧನ್ಯವಾದ. “ಬ್ಯಾಚುಲರ್ ಪಾರ್ಟಿ” ಹಾಸ್ಯ ಪ್ರಧಾನವಾದ ಉತ್ತಮ ಮನೋರಂಜನೆಯ ಚಿತ್ರ. ದಿಗಂತ್ ಮಂಚಾಲೆ, ರಿಷಬ್ ಶೆಟ್ಟಿ, ಅಚ್ಯುತಕುಮಾರ್, ಸಿರಿ ರವಿಕುಮಾರ್ ಮುಂತಾದವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹೆಚ್ಚಿನ ಭಾಗದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತದೆ ಎಂದರು ನಿರ್ದೇಶಕ ಅಭಿಜಿತ್ ಮಹೇಶ್. ನಾನು, ಅಭಿಜಿತ್ ಹಾಗೂ ಚಂದ್ರಜಿತ್ ಒಟ್ಟಾಗಿ “ಕಿರಿಕ್ ಪಾರ್ಟಿ” ಯಲ್ಲಿ ಕೆಲಸ ಮಾಡಿದವರು. ಈಗ ಮತ್ತೊಮ್ಮೆ ಒಟ್ಟಾಗಿ ಸೇರಿದ್ದೇವೆ‌. ಅಭಿಜಿತ್ ಮಹೇಶ್ “ಬ್ಯಾಚುಲರ್ ಪಾರ್ಟಿ” ಯಲ್ಲಿ ಒಳ್ಳೆಯ ಪಾತ್ರ ನೀಡಿದ್ದಾರೆ. ಎರಡೂ ತಂಡಕ್ಕೂ ಒಳಿತಾಗಲಿ ಎಂದರು ರಿಷಬ್ ಶೆಟ್ಟಿ.

    ನನಗೆ ಪರಂವಃ ಸ್ಟುಡಿಯೋಸ್ ನಲ್ಲಿ ಇದು ಎರಡನೇ ಚಿತ್ರ. ಅಭಿಜಿತ್ ಮಹೇಶ್ ಮಾಡಿಕೊಂಡಿರುವ ಕಥೆ ಚೆನ್ನಾಗಿದೆ. ಎಲ್ಲರನ್ನು ನಕ್ಕು ನಗಿಸುವ ಉತ್ತಮ ಕಾಮಿಡಿ ಜಾನರ್ ನ ಚಿತ್ರ ಇದಾಗಲಿದೆ ಎಂದು ನಟ ದಿಗಂತ್ ತಿಳಿಸಿದರು. ಚಿತ್ರದಲ್ಲಿ ಅಭಿನಯಿಸುತ್ತಿರುವ ಸಿರಿ ರವಿಕುಮಾರ್ ಹಾಗೂ ಜಯಲಕ್ಷ್ಮಿ ಸಹ ಪತ್ರಿಕಾಗೋಷ್ಠಿಯಲ್ಲಿದ್ದರು. ಚಿತ್ರದ ಆರಂಭದ ದಿನದಿಂದಲೂ  ನನ್ನ ತಂಡಕ್ಕೆ ಒಳ್ಳೆಯ ಕನಸುಗಳನ್ನು ತುಂಬಿದ್ದೀನಿ. ಅವರ ಕನಸುಗಳನ್ನು ನನಸು ಮಾಡುವ ಜವಾಬ್ದಾರಿ ನನ್ನ ಮೇಲಿದೆ. ನನ್ನ ನಂಬಿ ಬಂಡವಾಳ ಹಾಕಿರುವ ನಿರ್ಮಾಪಕರಿಗೆ ಹಣ ವಾಪಸು ಬರಬೇಕು ಆ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ.‌ ನೋಡಿದ ಜನ ಕೆಲವು ವರ್ಷಗಳವರೆಗೂ  ನೆನಪಿನಲ್ಲಿಟ್ಟಿಕೊಳ್ಳಬೇಕು ಅಂತಹ ಸಿನಿಮಾ ಮಾಡಲು ಪ್ರಯತ್ನ ಮಾಡುತ್ತೇನೆ. ರಾತ್ರಿ ಮಲಗಿದ್ದಾಗ ಒಂದು ಒಳ್ಳೆಯ ಕನಸು ಬೀಳುತ್ತದೆ. ಆ ಕನಸಿನಿಂದ ಬೆಳಗ್ಗೆ ಎದ್ದ ಕೂಡಲೇ ಒಂದು ತರಹ ಉತ್ಸಾಹವಿರುತ್ತದೆ. ಆ ರೀತಿ ನಮ್ಮ ಚಿತ್ರದ ಕಥೆ ಸಾಗುತ್ತದೆ. “ಇಬ್ಬನಿ ತಬ್ಬಿದ ಇಳೆಯಲಿ” ಒಂದೊಳ್ಳೆ ರೊಮ್ಯಾನ್ಸ್ ಡ್ರಾಮ ಎನ್ನಬಹುದು ಎಂದು ನಿರ್ದೇಶಕ ಚಂದ್ರಜಿತ್ ಬೆಳ್ಳಿಯಪ್ಪ ಚಿತ್ರದ ಬಗ್ಗೆ ಮಾಹಿತಿ ನೀಡಿದರು. ಇಂತಹ ಒಳ್ಳೆಯ ತಂಡದ ಜೊತೆಗೆ ಭಾಗಿಯಾಗಿರುವುದಕ್ಕೆ ಸಂತೋಷವಾಗಿದೆ ಎಂದು ನಾಯಕ ವಿಹಾನ್ ತಿಳಿಸಿದರು. “ಇಬ್ಬನಿ ತಬ್ಬಿದ ಇಳೆಯಲಿ” ಚಿತ್ರದಲ್ಲಿ  ಅಭಿನಯಿಸುತ್ತಿರುವುದು ಖುಷಿ ತಂದಿದೆ. ಪಾತ್ರ ಕೂಡ ಚೆನ್ನಾಗಿದೆ.‌ ಇದು ನನ್ನ ಮೊದಲ ಪತ್ರಿಕಾಗೋಷ್ಠಿ ಎಂದರು ನಾಯಕಿ ಅಂಕಿತಾ ಅಮರ್.

    Live Tv
    [brid partner=56869869 player=32851 video=960834 autoplay=true]

  • ರಕ್ಷಿತ್ ಶೆಟ್ಟಿ ನಿರ್ಮಾಣದ ಚಿತ್ರಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಎಂಬ ಶೀರ್ಷಿಕೆ ಫಿಕ್ಸ್

    ರಕ್ಷಿತ್ ಶೆಟ್ಟಿ ನಿರ್ಮಾಣದ ಚಿತ್ರಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಎಂಬ ಶೀರ್ಷಿಕೆ ಫಿಕ್ಸ್

    ಕ್ಷಿತ್ ಶೆಟ್ಟಿ ಅವರ ಪರಂವಃ ಸ್ಟುಡಿಯೋಸ್​ನಡಿ ರಕ್ಷಿತ್​ ಶೆಟ್ಟಿ ನಿರ್ಮಿಸುತ್ತಿರುವ ಹೊಸ ಚಿತ್ರವು ಕಳೆದ ತಿಂಗಳಷ್ಟೇ ಘೋಷಣೆಯಾಗಿತ್ತು. ವಿಹಾನ್​ ಗೌಡ ಮತ್ತು ಅಂಕಿತಾ ಅಮರ್​ ಅಭಿನಯದ ಈ ಚಿತ್ರದ ಹೆಸರನ್ನು ಚಿತ್ರತಂಡ ಹೇಳಿರಲಿಲ್ಲ. ಶನಿವಾರ ಸಂಜೆ ಚಿತ್ರದ ಹೆಸರು ಅಧಿಕೃತವಾಗಿ ಘೋಷಣೆಯಾಗಿದ್ದು, ಚಿತ್ರಕ್ಕೆ ‘ಇಬ್ಬನಿ ತಬ್ಬಿದ ಇಳೆಯಲಿ’ ಎಂಬ ಹೆಸರನ್ನು ಇಡಲಾಗಿದೆ.

    ಪ್ರೀತಿ ಎಂದರೆ ಏನು? ಹಳೆಯ ನೆನಪುಗಳಾ? ನಾಳೆ ಜತೆಯಾಗಿರಬೇಕು ಎಂಬ ಕನಸುಗಳಾ? ದೂರವಾದ ನಂತರದ ಚಡಪಡಿಕೆಯಾ? ಇದೆಲ್ಲದರ ಸಂಗಮವೇ ‘ಇಬ್ಬನಿ ತಬ್ಬಿದ ಇಳೆಯಲಿ’. ಇದೊಂದು ಕಾವ್ಯಾತ್ಮಕ ಪ್ರೇಮಕಥೆಯಾಗಿದ್ದು, ಬೇಷರತ್ತಾಗಿ ಪ್ರೀತಿಸುವುದನ್ನು ಸಂಭ್ರಮಿಸುವ ಚಿತ್ರ. ನಿನ್ನೆ, ಇಂದು ಮತ್ತು ನಾಳೆಯ ಪ್ರೀತಿಯನ್ನು ತೋರಿಸುವ ಚಿತ್ರ. ಪ್ರೇಕ್ಷಕರು ಚಿತ್ರವನ್ನು ನೋಡುತ್ತಾ, ಹಾಡುತ್ತಾ, ನಲಿಯುತ್ತಾ, ತಮ್ಮನ್ನೇ ತಾವು ಮರೆಯುವಂತಹ ಚಿತ್ರ. ಇದನ್ನೂ ಓದಿ:ತನ್ನನ್ನು ತಾನೇ ಮದುವೆಯಾದ ಕಿರುತೆರೆ ನಟಿ ಕಾನಿಷ್ಕಾ ಸೋನಿ

    ಕಾಲೇಜಿನಿಂದ ಪ್ರಾರಂಭವಾಗುವ ಈ ಕಥೆಯು ಪ್ರೌಡಾವಸ್ಥೆಯವಸ್ಥೆಯಲ್ಲಿ ಅಂತ್ಯವಾಗುತ್ತದೆ. ಹೀಗೆ ಒಂದು ದಶಕದ ವಿವಿಧ ಕಾಲಘಟ್ಟವನ್ನು ಈ ಚಿತ್ರವು ಸೂಕ್ಷ್ಮವಾಗಿ ತೋರಿಸಲಿದ್ದು, ಇಲ್ಲಿ ಹಸಿರು ಎಷ್ಟು ಮುಖ್ಯವೋ, ಆಧುನಿಕ ನಗರದೃಶ್ಯಗಳು ಸಹ ಅಷ್ಟೇ ಪ್ರಮುಖ ಪಾತ್ರವಹಿಸುತ್ತದೆ. ಅಷ್ಟೇ ಅಲ್ಲ, ಬೇಸಿಗೆಯ ಘಮ, ಚಳಿಗಾಲದ ಹಿತ ಮತ್ತು ಮಳೆಗಾಲದ ಮಾಧುರ್ಯವೂ ಈ ಚಿತ್ರದಲ್ಲಿರಲಿದೆ.

    ಈ ಹಿಂದೆ ರಕ್ಷಿತ್​ ಶೆಟ್ಟಿ ಅವರ ಸೆವೆನ್​ ಆಡ್ಸ್​ ಚಿತ್ರಕಥಾ ವಿಭಾಗದಲ್ಲಿ ಸಕ್ರಿಯವಾಗಿ ‘ಕಿರಿಕ್​ ಪಾರ್ಟಿ’ ಮತ್ತು ‘ಅವನೇ ಶ್ರೀಮನ್ನಾರಾಯಣ’ ಚಿತ್ರಗಳ ಚಿತ್ರಕಥೆಯಲ್ಲಿ ತೊಡಗಿಸಿಕೊಂಡಿದ್ದ ಮತ್ತು ‘ಕಥಾಸಂಗಮ’ ಚಿತ್ರದ ‘ರೇನ್​ಬೋ ಲ್ಯಾಂಡ್​’ ಕಿರುಚಿತ್ರವನ್ನು ನಿರ್ದೇಶಿಸಿದ್ದ ಚಂದ್ರಜಿತ್​ ಬೆಳ್ಳಿಯಪ್ಪ, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಈ ಚಿತ್ರದ ಕಥೆ ಹೊಸತನ ಕೇಳುವುದರಿಂದ, ಹೊಸ ಕಲಾವಿದರು ಮತ್ತು ತಂತ್ರಜ್ಞರನ್ನು ಆಯ್ಕೆ ಮಾಡಲಾಗಿದೆ. ಈಗಾಗಲೇ ನಾಯಕ-ನಾಯಕಿಯಾಗಿ ವಿಹಾನ್​ ಮತ್ತು ಅಂಕಿತಾ ಅಮರ್​ ಆಯ್ಕೆಯಾಗಿದ್ದು, ಸದ್ಯದಲ್ಲೇ ಎರಡನೆಯ ನಾಯಕಿಯ ಅಧಿಕೃತ  ಘೋಷಣೆಯಾಗಲಿದೆ.

    ಇದೊಂದು ಸಂಗೀತಮಯ ಪ್ರೇಮಕಥೆಯಾಗಿದ್ದು, ಗಗನ್​ ಬದೇರಿಯಾ ಸಂಗೀತ ಸಂಯೋಜಿಸುತ್ತಿದ್ದಾರೆ. ನ್ಯೂಯಾರ್ಕ್​ ಫಿಲಂ ಅಕಾಡೆಮಿಯಲ್ಲಿ ಕಲಿತು ಬಂದಿರುವ ಶ್ರೀವತ್ಸನ್​ ಸೆಲ್ವರಾಜನ್​, ಈ ಚಿತ್ರಕ್ಕೆ ಛಾಯಾಗ್ರಾಹಕರಾಗಿ ಆಯ್ಕೆ ಆಗಿದ್ದಾರೆ. ಈ ಹಿಂದೆ ‘ಕಥಾಸಂಗಮ’ ಚಿತ್ರದ ‘ಗಿರ್​ಗಿಟ್ಲೆ’  ಕಥೆಯನ್ನು ನಿರ್ದೇಶಿಸದ್ದ ಶಶಿಕುಮಾರ್​, ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದಾರೆ. ‘ಇಬ್ಬನಿ ತಬ್ಬಿದ ಇಳೆಯಲಿ’ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್​ ಮೊದಲ ವಾರದಲ್ಲಿ ಪ್ರಾರಂಭವಾಗಲಿದ್ದು, 2023ರ ಬೇಸಿಗೆಯಲ್ಲಿ ಬಿಡುಗಡೆಯಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • `ಪಂಚತಂತ್ರ’ ನಟನಿಗೆ ರಕ್ಷಿತ್ ಶೆಟ್ಟಿ ಸಾಥ್: ವಿಹಾನ್‌ಗೆ ನಾಯಕಿಯಾದ ಅಂಕಿತಾ ಅಮರ್

    `ಪಂಚತಂತ್ರ’ ನಟನಿಗೆ ರಕ್ಷಿತ್ ಶೆಟ್ಟಿ ಸಾಥ್: ವಿಹಾನ್‌ಗೆ ನಾಯಕಿಯಾದ ಅಂಕಿತಾ ಅಮರ್

    ಚಂದನವನದಲ್ಲಿ ಸಿಂಪಲ್ ಸ್ಟಾರ್ ಆಗಿ ಮಿಂಚುತ್ತಿರುವ ರಕ್ಷಿತ್ ಶೆಟ್ಟಿ, ಯುವ ಪ್ರತಿಭೆಗಳಿಗೆ ಸಾಥ್ ನೀಡುವುದರಲ್ಲಿ ಯಾವಾಗಲೂ ಮುಂದು. ಹೊಸ ಪ್ರತಿಭೆಗಳಿಗೆ, ವಿಭಿನ್ನ ಕಥೆಗೆ ಪರಂವಃ ಸ್ಟುಡಿಯೋಸ್ ಮೂಲಕ ಸಾಥ್ ನೀಡುತ್ತಾರೆ. ಈಗ `ಪಂಚತಂತ್ರ’ ಖ್ಯಾತಿಯ ವಿಹಾನ್‌ಗೆ ರಕ್ಷಿತ್ ಶೆಟ್ಟಿ ಸಾಥ್ ನೀಡುತ್ತಿದ್ದಾರೆ.

    ಗಾಂಧಿನಗರದಲ್ಲಿ `ಕಾಲ್ ಕೆಜಿ ಪ್ರೀತಿ’, `ಪಂಚತಂತ್ರ’ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನಲ್ಲಿ ಚಾಕಲೇಟ್‌ ಹೀರೋ ಆಗಿ ಗುರುತಿಸಿಕೊಂಡಿರುವ ನಟ ವಿಹಾನ್ ಮತ್ತೆ ಬೆಳ್ಳಿತೆರೆಮೇಲೆ ಮಿಂಚಲು ಬರುತ್ತಿದ್ದಾರೆ. ವಿಶೇಷ ಏನೆಂದರೆ, ಈ ಸಲ ವಿಹಾನ್‌ಗೆ ರಕ್ಷಿತ್ ಶೆಟ್ಟಿ ಸಾಥ್ ನೀಡುತ್ತಿದ್ದಾರೆ. ಅಂದರೆ, ರಕ್ಷಿತ್ ಶೆಟ್ಟಿ ಹೋಮ್ ಬ್ಯಾನರ್ “ಪರಂವಃ ಸ್ಟುಡಿಯೋಸ್” ಬ್ಯಾನರ್‌ನಲ್ಲಿ ಮೂಡಿಬರುವ ಚಿತ್ರದಲ್ಲಿ ವಿಹಾನ್ ಹೀರೋ ಆಗಿ ಮಿಂಚಲಿದ್ದಾರೆ.

     

    View this post on Instagram

     

    A post shared by Paramvah Studios (@paramvah_studios)

    ಕಳೆದ ಮೂರು ವರ್ಷಗಳ ಹಿಂದೆ ಯೋಗರಾಜ್ ಭಟ್ ನಿರ್ದೇಶನದಲ್ಲಿನ `ಪಂಚತಂತ್ರ’ ಸಿನಿಮಾದಲ್ಲಿ ನಟಿಸಿದ ಬಳಿಕ ಬೇರೆ ಸಿನಿಮಾಗಳತ್ತ ಮುಖ ಮಾಡಿರಲಿಲ್ಲ. ಇದೀಗ ವಿಶೇಷ ಕಥೆಯೊಂದಿಗೆ ಅವರ ಆಗಮನವಾಗುತ್ತಿದೆ. ರೊಮ್ಯಾನ್ಸ್ ಡ್ರಾಮಾ ಶೈಲಿಯ ಈ ಚಿತ್ರದ ಪ್ರೀ ಪ್ರೊಡಕ್ಷನ್ ಕೆಲಸಗಳೂ ಈಗಾಗಲೇ ಶುರುವಾಗಿವೆ. ಈ ಚಿತ್ರದಲ್ಲಿ ನಾಯಕನಿಗೆ ಮೂರು ಹಂತಗಳಿರಲಿವೆ. ಕಾಲೇಜ್ ವಿದ್ಯಾರ್ಥಿ, ಕ್ರಿಕೆಟ್ ಆಟಗಾರ ಹಾಗೂ ಬಿಜಿನೆಸ್ ಮ್ಯಾನ್ ಆಗಿಯೂ ವಿಹಾನ್ ಕಾಣಿಸಿಕೊಳ್ಳಲಿದ್ದಾರೆ. ಇದೆಲ್ಲದಕ್ಕೂ ಸೂಟ್ ಆಗಲಿದ್ದಾರೆ ಎಂಬ ಕಾರಣಕ್ಕೆ ಚಿತ್ರತಂಡ ವಿಹಾನ್‌ರನ್ನು ಆಯ್ಕೆ ಮಾಡಿದ್ದಾರೆ.

    ರಿಷಬ್ ಶೆಟ್ಟಿ ಅವರ ಕಥಾಸಂಗಮ ಸಿನಿಮಾದಲ್ಲಿನ `ರೇನ್‌ಬೋ ಲ್ಯಾಂಡ್’ ಏಪಿಸೋಡ್ ಅನ್ನು ಚಂದ್ರಜಿತ್ ಬೆಳ್ಳಿಯಪ್ಪ ನಿರ್ದೇಶನ ಮಾಡಿದ್ದರು. ಈಗ ಈ ಹೊಸ ಸಿನಿಮಾಗೆ ಚಂದ್ರಜಿತ್ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ವಿಹಾನ್‌ಗೆ ನಾಯಕಿಯಾಗಿ `ನಮ್ಮನ್ನೆ ಯುವರಾಣಿ’ ಧಾರಾವಾಹಿ ಮೂಲಕ ಎಲ್ಲರ ಗಮನ ಸೆಳೆದ ಅಂಕಿತಾ ಅಮರ್ ನಟಿಸಲಿದ್ದಾರೆ. ಇತ್ತೀಚೆಗಷ್ಟೇ ಪರಮ್‌ವಾ ಸ್ಟುಡಿಯೋಸ್ ತನ್ನ ಅಧಿಕೃತ ಸೋಷಿಯಲ್ ಮೀಡಿಯಾ ಹ್ಯಾಂಡಲ್‌ನಲ್ಲಿ ಅವರ ಜನ್ಮದಿನಕ್ಕೆ ಪೋಸ್ಟ್ ಹಾಕಿ ಸುಳಿವು ನೀಡಿತ್ತು. ಇದೀಗ ಅವರೇ ನಮ್ಮ ನಾಯಕಿ ಎಂದು ತಂಡ ಅಧಿಕೃತವಾಗಿ ಘೋಷನೆ ಮಾಡಲಾಗಿತ್ತು. ಇನ್ನು ಚಿತ್ರದ ಶೂಟಿಂಗ್ ಸೆಪ್ಟೆಂಬರ್‌ನಲ್ಲಿ ಶುರುವಾಗಲಿದೆ. ಇದನ್ನೂ ಓದಿ:ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ `ನೀಲಕಂಠ’ ನಟಿ ನಮಿತಾ

    ರೊಮ್ಯಾನ್ಸ್ ಡ್ರಾಮಾ ಮತ್ತು ಮ್ಯೂಸಿಕಲ್ ಲವ್‌ಸ್ಟೋರಿ ಹಿನ್ನಲೆಯ ಈ ಸಿನಿಮಾದಲ್ಲಿ ಕಾಲೇಜು ಜೀವನವೂ ಕಾಣಿಸಲಿದೆ. ತಾಂತ್ರಿಕ ವರ್ಗದ ವಿಚಾರಕ್ಕೆ ಬಂದರೆ, ಅಮೆರಿಕಾದ ನ್ಯೂಯಾರ್ಕ್ ಫಿಲಂ ಅಕಾಡೆಮಿಯಲ್ಲಿ ಪದವಿ ಪಡೆದು, ಅಲ್ಲಿಯೇ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿರುವ ಶ್ರೀವಾತ್ಸವನ್ ಸೆಲ್ವರಾಜನ್ ಈ ಸಿನಿಮಾಕ್ಕೆ ಕ್ಯಾಮರಾ ಹಿಡಿಯಲಿದ್ದಾರೆ. ಇದು ಅವರ ಚೊಚ್ಚಲ ಚಿತ್ರವಾಗಿರಲಿದೆ. ಗಗನ್ ಬದೇರಿಯಾ ಸಂಗೀತ ಸಂಯೋಜಿಸಲಿದ್ದಾರೆ. ಇನ್ನು ಈ ಹೊಸ ಜೋಡಿ ತೆರೆಯ ಮೇಲೆ ಯಾವ ರೀತಿ ಮೋಡಿ ಮಾಡಲಿದೆ ಅಂತಾ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]