ರಾಯಚೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ (Caste Census Survey) ಕಾರ್ಯಕ್ಕೆ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ಆರೋಪ ಹಿನ್ನೆಲೆ ರಾಯಚೂರು ಜಿಲ್ಲೆಯಲ್ಲಿ ಆರು ಅಂಗನವಾಡಿ ಕಾರ್ಯಕರ್ತೆಯರನ್ನು ವಜಾಗೊಳಿಸಲಾಗಿದ್ದು, 57 ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಈ ಕುರಿತು ಆದೇಶ ಹೊರಡಿಸಿದ್ದಾರೆ. ಸಮೀಕ್ಷಾ ಕಿಟ್ ಪಡೆದು ಸೇವೆ ಆರಂಭಿಸಿಲ್ಲ ಎಂದು ದೇವದುರ್ಗದ (Devadurga) ತಹಶೀಲ್ದಾರ್ ಅವರು ನೀಡಿದ್ದ ವರದಿಯನ್ವಯ ಆರು ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರಾದ ಗುಂಡಮ್ಮ, ರಂಗಮ್ಮ, ಮುತ್ತಮ್ಮ, ಚಾಂದಬಿ, ವಿಜಯಲಕ್ಷ್ಮಿ ಹಾಗೂ ರೇಣುಕಾ ಎಂಬುವವರನ್ನು ವಜಾಗೊಳಿಸಲಾಗಿದೆ.ಇದನ್ನೂ ಓದಿ: ಬೆಂಗಳೂರು | 7.80 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್
ಇನ್ನೂ ಲಿಂಗಸುಗೂರು (Lingasuguru) ತಾಲೂಕಿನಲ್ಲಿ ಸಮೀಕ್ಷೆಗೆ ನಿರಂತರವಾಗಿ ಗೈರಾದ 57 ಜನ ಸಮೀಕ್ಷಾ ಸಿಬ್ಬಂದಿಗೆ ಲಿಂಗಸುಗೂರು ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ ಅವರು ನೋಟಿಸ್ ಜಾರಿ ಮಾಡಿದ್ದು, ಗೈರಾದಕ್ಕೆ ಕಾರಣ ನೀಡುವಂತೆ ಸೂಚನೆ ನೀಡಿದ್ದಾರೆ.
ಬೆಂಗಳೂರು: ಶುಕ್ರವಾರ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಮಂಡಿಸಿದ ರಾಜ್ಯ ಬಜೆಟ್ (Karnataka Budget) ಕೆಲವರಿಗೆ ಸಿಹಿ, ಕೆಲವರಿಗೆ ಕಹಿಯನ್ನುಂಟು ಮಾಡಿದೆ. ಮುಖ್ಯಮಂತ್ರಿಗಳ ಬಜೆಟ್ ಮೇಲೆ ಸಾರಿಗೆ ನೌಕರರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಅವು ಈಡೇರಿಲ್ಲ. ಹೀಗಾಗಿ ಸಾರಿಗೆ ನೌಕರರು ಮತ್ತೆ ಬಸ್ ಬಂದ್ ಮಾಡುವ ಎಚ್ಚರಿಕೆ ಕೊಟ್ಟಿದ್ದಾರೆ.
ಸರ್ಕಾರ ಹಾಗೂ ಸಾರಿಗೆ ನೌಕರರ ಪರಿಸ್ಥಿತಿ ನಾ ಕೊಡೆ, ನೀ ಬಿಡೇ ಎನ್ನುವಂತಾಗಿದೆ. ಸಾರಿಗೆ ನೌಕರರ ಭರವಸೆಗಳು ಸುಮಾರು ಮೂರು ವರ್ಷಗಳಾದರೂ ಈಡೇರುತ್ತಿಲ್ಲ. ಶಕ್ತಿ ಯೋಜನೆಯ ಎಫೆಕ್ಟ್‌ನಿಂದಾಗಿ ಸಾರಿಗೆ ನೌಕರರ ಕೆಲಸ ಹೆಚ್ಚಾಗುತ್ತಿದೆ. ಆದರೆ ಬೇಡಿಕೆಗಳು ಮಾತ್ರ ಈಡೇರಿಲ್ಲ. ಹೀಗಾಗಿ ಮಾರ್ಚ್ 22ರೊಳಗೆ ಸರ್ಕಾರಿ ನೌಕರರಿಗೆ ನೀಡುತ್ತಿರುವ ವೇತನವನ್ನು ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ನಿಗಮದ ನೌಕರರಿಗೆ ನೀಡಬೇಕು. ಇಲ್ಲವಾದರೆ ಮಾರ್ಚ್ 25ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಾಲ್ಕು ನಿಗಮಗಳ ಸಂಘಟನೆಗಳ ಒಕ್ಕೂಟ ಸಭೆ ಮಾಡಿ ಬಂದ್ ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಸಾರಿಗೆ ನೌಕರರ ಒಕ್ಕೂಟ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಯೂರೋಪ್, ಅಮೆರಿಕ, ದುಬೈಗೆ ನಿರಂತರ ಸುತ್ತಾಟ – ನಟಿ ರನ್ಯಾ ಟ್ರಾವೆಲ್ ಹಿಸ್ಟರಿ ಬಯಲು
ಅಲ್ಲದೇ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸರಿಸಮಾನ ವೇತನ ನೀಡಬೇಕು. 7ನೇ ವೇತನ ಆಯೋಗ ಜಾರಿ ಆಗಬೇಕು. 38 ತಿಂಗಳ ವೇತನ ಹಿಂಬಾಕಿ ನೀಡಬೇಕು. ಕಾರ್ಮಿಕ ಸಂಘಟನೆಗಳ ಚುನಾವಣೆ ಮಾಡಬೇಕು. 2021ರ ವೇಳೆ ಮುಷ್ಕರದಲ್ಲಿ ವಜಾಗೊಂಡ ನೌಕರರ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಪ್ರಮುಖ ಬೇಡಿಕೆಗಳನ್ನು ನೌಕರರು ಇಟ್ಟಿದ್ದಾರೆ. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್ ಒಳಗೆ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಇತ್ತ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಮತ್ತೆ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ, ಸಹಾಯಕಿಯರಿಗೆ 750 ರೂ. ಗೌರವಧನ ಹೆಚ್ಚಿಸಲಾಗಿದೆ. ಆದೆರೆ ಇದು ನಮಗೆ ತೃಪ್ತಿ ತಂದಿಲ್ಲ. ಎರಡರಿಂದ ಮೂರು ಸಾವಿರ ಗೌರವಧನ ಹೆಚ್ಚಳಕ್ಕೆ ಸರ್ಕಾರಕ್ಕೆ ಮನವಿ ಮಾಡಿದ್ದೆವು. ಆದರೆ 1 ಸಾವಿರ, 750 ರೂಪಾಯಿ ಗೌರವಧನ ಅಷ್ಟೇ ಹೆಚ್ಚಳ ಮಾಡಿರೋದು ಭಾರೀ ನಿರಾಸೆ ಮೂಡಿಸಿದೆ. ಈ ವೇತನದಲ್ಲಿ ಜೀವನ ನಿರ್ವಹಣೆ ಕಷ್ಟ ಆಗುತ್ತದೆ. ನಮ್ಮದೇ ದುಡ್ಡಲ್ಲಿ ಮೊಬೈಲ್ ಖರೀದಿಸಿ, ಇಲಾಖೆಯ ಕೆಲಸ ಮಾಡಬೇಕಾಗುತ್ತದೆ. ಸರ್ಕಾರದ ಅಲ್ಪ ಪ್ರಮಾಣದ ಗೌರವಧನ ಹೆಚ್ಚಳ ನಮಗೆ ತೃಪ್ತಿ ತಂದಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಹೀಗಾಗಿ ಸರ್ಕಾರದ ವಿರುದ್ಧ ಮತ್ತೆ ಹೋರಾಟಕ್ಕೆ ಸಜ್ಜಾಗುತ್ತಿದ್ದಾರೆ. ಇದನ್ನೂ ಓದಿ: ಹಾಸನ| ಪ್ರಿಯಕರನ ಜೊತೆ ಪತ್ನಿ ಪರಾರಿ – ನದಿಗೆ ಹಾರಿ ಪತಿ ಆತ್ಮಹತ್ಯೆ
ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election) ಸನಿಹ ಬರುತ್ತಿದ್ದಂತೆ ಕಾಂಗ್ರೆಸ್ (Congress) ನೇತೃತ್ವದ ರಾಜ್ಯ ಸರ್ಕಾರ ಪಂಚ ಗ್ಯಾರಂಟಿಗಳನ್ನ ಜನರಿಗೆ ತಲುಪಿಸಲು ಸರ್ಕಸ್ ಮಾಡುತ್ತಿದೆ. ಅದರಲ್ಲೂ ಮಹಿಳೆಯರಿಗೆ ಅನುಕೂಲವಾಗುವ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ (Gruhalakshmi) ಸವಾಲುಗಳು ದಿನಕ್ಕೊಂದು ಬರುತ್ತಿದೆ. ಹೀಗಾಗಿ ಗೃಹಲಕ್ಷ್ಮಿ ತಾಂತ್ರಿಕ ದೋಷ ನಿವಾರಣೆಗಾಗಿ ಮನೆಬಾಗಿಲಲ್ಲಿ ದಾಖಲೆ ಸಂಗ್ರಹಕ್ಕೆ ಇಲಾಖೆ ರೆಡಿಯಾಗಿದೆ.
ಗೃಹಲಕ್ಷ್ಮಿ ಗ್ಯಾರಂಟಿ ಜಾರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ದಿನಕ್ಕೊಂದು ಕಸರತ್ತು ನಡೆಸುತ್ತಿದೆ. ಆದರೆ ಈಗ ತಾಂತ್ರಿಕ ದೋಷದ ಪರಿಣಾಮ ಬರೋಬ್ಬರಿ 5-6 ಲಕ್ಷದಷ್ಟು ಗೃಹಲಕ್ಷ್ಮಿಯರಿಗೆ ದುಡ್ಡು ಜಮೆಯಾಗಿಲ್ಲ. ಹೀಗಾಗಿ ಗ್ರಾಮ-ಗ್ರಾಮಗಳಲ್ಲಿ ಅದಾಲತ್‌ಗೆ ತಯಾರಾಗಿದೆ. ಆದರೆ ಅದಾಲತ್‌ಗೂ ಮುನ್ನಾ ಅಂಗನವಾಡಿ ಕಾರ್ಯಕರ್ತೆಯರು (Anganwadi Worker) ಖುದ್ದು ಮನೆಗಳಿಗೆ ತೆರಳಿ, ತಾಂತ್ರಿಕ ದೋಷಗಳ ಕಾರಣ ಹುಡುಕಿ ಪೂರಕ ದಾಖಲೆ ಕಲೆಹಾಕಲಿದ್ದಾರೆ. ಸುಮಾರು 5-6 ಲಕ್ಷದಷ್ಟು ಗೃಹಲಕ್ಷ್ಮಿ ದುಡ್ಡು ಜಮೆಯಾಗದ ಯಜಮಾನಿಯರ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹಿಸಿ, ಅವರಿಗೆ ಹಣ ತಲುಪಲು ಕ್ರಮ ವಹಿಸಲಾಗುತ್ತಿದೆ. ಇದನ್ನೂ ಓದಿ: ನನ್ನ ಅನುವಾದಕರಾಗಿರುವುದು ಕಷ್ಟದ ಕೆಲಸ: ರಾಹುಲ್ ಗಾಂಧಿ ಹೀಗಂದಿದ್ಯಾಕೆ..?
ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಮಹಿಳೆಯರ ಖಾತೆಗೆ ದುಡ್ಡು ಜಮೆಯಾಗುವಂತೆ ನೋಡಿಕೊಳ್ಳಬೇಕು ಎಂದು ಈಗಾಗಲೇ ಸಿಎಂ ಟಾರ್ಗೆಟ್ ಕೊಟ್ಟಿದ್ದಾರೆ. ಹೀಗಾಗಿ ಅಂಗನವಾಡಿ ಕಾರ್ಯಕರ್ತೆಯರಿಂದ ಮಾಹಿತಿ ತರಿಸಿಕೊಂಡು, ಬಳಿಕ ಅದಾಲತ್ ಮೂಲಕ ದುಡ್ಡು ಜಮೆಯಾಗುವಂತೆ ಇಲಾಖೆ ನೋಡಿಕೊಳ್ಳಲಿದೆ. ಇದನ್ನೂ ಓದಿ: ಎತ್ತಿನಹೊಳೆ ಯೋಜನೆಗೆ ಆರಂಭದಲ್ಲೇ ವಿಘ್ನ- ನೀರು ಹರಿಸಿದ್ದರಿಂದ ಪೈಪ್‍ನಿಂದ ಸೋರಿಕೆ
ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ (Anganwadi Workers) 15 ಸಾವಿರ ರೂ. ವರೆಗೆ ವೇತನ ಹೆಚ್ಚಿಸಲಾಗುವುದು. ಆಶಾ ಕಾರ್ಯಕರ್ತೆಯರಿಗಾಗಿ 8 ಸಾವಿರ ರೂ. ವೇತನ ಹೆಚ್ಚಳ ಮಾಡಲಾಗುವುದು ಎಂದು ಕಾಂಗ್ರೆಸ್ (Congress) ನಾಯಕಿ ಪ್ರಿಯಾಂಕಾ ಗಾಂಧಿ (Priyanka Gandhi) ಹೊಸ ಘೋಷಣೆ ಮಾಡಿದರು.
ಖಾನಾಪುರದಲ್ಲಿ ನಡೆದ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿಯಿಂದ ಹೊಸ ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಕಾಂಗ್ರೆಸ್ ಗ್ಯಾರಂಟಿಯಲ್ಲಿ (Guarantee) ಮತ್ತೊಂದು ಗ್ಯಾರಂಟಿ ಘೋಷಣೆ ಮಾಡಲಾಗಿದೆ. ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ವೇತನ ಹೆಚ್ಚಳ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಲೂಟ್, ಜೂಟ್ ಸರ್ಕಾರ ಇದೆ- ಬಿಜೆಪಿ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ
ಕಾರ್ಯಕರ್ತೆಯರಿಗೆ ಯಾವುದೇ ಪೆನ್ಶನ್ ಸಿಗಲ್ಲ, ಸೌಲಭ್ಯ ಸಿಗಲ್ಲ. ಅಂಗನವಾಡಿ ಮಹಿಳೆಯರಿಗೆ 15 ಸಾವಿರ ರೂ. ವರೆಗೆ ವೇತನ ಹೆಚ್ಚಿಸಲಾಗುವುದು. ಆಶಾ ಕಾರ್ಯಕರ್ತೆಯರಿಗಾಗಿ 8 ಸಾವಿರ ರೂ. ವೇತನ ಹೆಚ್ಚಳ ಮಾಡಲಾಗುವುದು. ಬಿಸಿಯೂಟ ಕಾರ್ಯಕರ್ತರಿಗೆ 5 ಸಾವಿರ ರೂ. ವೇತನ ಏರಿಕೆ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿ ಪರ ಯೋಗಿ ಭರ್ಜರಿ ಪ್ರಚಾರ – ರಾಮಮಂದಿರ ಉದ್ಘಾಟನೆಗೆ ಆಹ್ವಾನ
ನೆಲಮಂಗಲ: ಗ್ರಾಮೀಣ ಪ್ರದೇಶದಲ್ಲಿ ಆಡಳಿತ ವ್ಯವಸ್ಥೆಯ ಏಣಿಶ್ರೇಣಿ ನಿಯಮದಲ್ಲಿ ಬೇರು ಮಟ್ಟದಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕಾರ್ಯಕರ್ತೆಯರಿಗೆ ಸರ್ಕಾರ ಹೆಚ್ಚಿನ ಸೌಲಭ್ಯ ನೀಡಬೇಕು ಎಂದು ಎಐಟಿಯುಸಿ ಸಂಘಟನೆಯ ತಾಲೂಕು ಅಧ್ಯಕ್ಷೆ ಶಿವಗಂಗೆ ಜ್ಯೋತಿ ಸರ್ಕಾರಕ್ಕೆ ಒತ್ತಾಯಿಸಿದರು.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ, ಕುಲುವನಹಳ್ಳಿ ಪಂಚಾಯತಿ ವ್ಯಾಪ್ತಿಯ ಸುಧಾನಗರದ ಅಂಗನವಾಡಿ ಕೇಂದ್ರದಲ್ಲಿ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ವತಿಯಿಂದ ಸಂಘಟನೆಗೆ ನೋಂದಣಿ ಮತ್ತು ಸಂಘದ ನಡಾವಳಿ ತಿಳಿಸಿಕೊಡುವ ಸಭೆ ನಡೆಯಿತು. ಇದನ್ನೂ ಓದಿ: ಹುಲಿ ಹುಡುಕೋ ಕಾರ್ಯಾಚರಣೆ ವೇಳೆ ಸಿಕ್ತು ಕಾಡುಕೋಣ..!
ಈ ವೇಳೆ ಮಾತನಾಡಿದ ಶಿವಗಂಗೆ ಜ್ಯೋತಿ ಅವರು, ಮಹಿಳೆಯರ ಸಬಲೀಕರಣದ ಜೊತೆಗೆ ಕಾರ್ಯಕರ್ತೆಯರ ಹಕ್ಕುಗಳಿಗೆ ಹಾಗೂ ಮುಖ್ಯವಾಗಿ ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ, ಪಿಂಚಣಿ, ಹೋರಾಟ, ಸರ್ಕಾರದ ಸೌಲಭ್ಯವನ್ನು ತಲುಪಿಸಲು ಶ್ರಮಿಸುತ್ತಿದ್ದೇವೆ. ಕೋವಿಡ್ ನೆಪವೊಡ್ಡಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಲಕ್ಷ ಸರ್ಕಾರ ನೀಡುತ್ತಿದ್ದನ್ನು ಮೊಟಕುಗೊಳಿಸಿರುವುದಕ್ಕೆ ಬೇಸರ ವ್ಯಕ್ತಪಡಿಸಿದರು.
ಬೆಂಗಳೂರು: ರಾಷ್ಟ್ರೀಯ ಪೋಷನ್ ಅಭಿಯಾನದ ಅನುದಾನದ ಬಳಕೆ ಹಾಗೂ ಸಾಧನೆಯಲ್ಲಿ ಇಡೀ ದೇಶದಲ್ಲಿಯೇ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಮುಂದಿನ ತ್ರೈಮಾಸಿಕ ಸಭೆಯ ವೇಳೆಗೆ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಗುರಿ ನೀಡಿದ್ದಾರೆ.
ಪೋಷನ್ ಅಭಿಯಾನದ ಪ್ರಗತಿ ಪರಿಶೀಲನೆ ಕುರಿತಂತೆ ಬಹುಮಹಡಿ ಕಟ್ಟಡದ ಆಯುಕ್ತರ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಜಿಲ್ಲಾ ಉಪನಿರ್ದೇಶಕರ ಜೊತೆಗೆ ಶಶಿಕಲಾ ಜೊಲ್ಲೆಯವರು ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು. ಅಭಿಯಾನದ ಕುರಿತಂತೆ ಪ್ರತಿಯೊಂದು ಜಿಲ್ಲೆಗಳ ಉಪನಿರ್ದೇಶಕರ ಜೊತೆಗೆ ಮಾತನಾಡಿ ಚಟುವಟಿಕೆಗಳ ಭೌತಿಕ ಹಾಗೂ ಆರ್ಥಿಕ ಮಾಹಿತಿ ಪಡೆದರು. ಅಲ್ಲದೆ ಅಭಿಯಾನದ ಜಾರಿಗೆ ಇರುವ ಸಮಸ್ಯೆಗಳ ಕುರಿತಂತೆಯೂ ಮಾಹಿತಿ ಪಡೆದರು. ಪೋಷನ್ ಟ್ರ್ಯಾಕರ್ ಅಳವಡಿಕೆ, ಸಮುದಾಯ ಆಧಾರಿತ ಕಾರ್ಯಕ್ರಮಗಳು, ಐಎಲ್‍ಎ ತರಬೇತಿ ಕಾರ್ಯಕ್ರಮ, ಇ-ಐಎಲ್‍ಎ ಪ್ರಗತಿ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಇದೇ ವೇಳೆ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಮೇಲ್ವಿಚಾರಕಿಯರಿಗೆ ನೀಡಿರುವ ಸ್ಮಾರ್ಟ್ ಫೋನ್ ಸಮಸ್ಯೆ ಕುರಿತು ಸಚಿವೆಯರ ಗಮನಕ್ಕೆ ತಂದರು. ನಂತರ ಪ್ರತಿಕ್ರಿಯಿಸಿದ ಸಚಿವರು, ಸಮಸ್ಯೆಯನ್ನು ಲಿಖಿತ ರೂಪದಲ್ಲಿ ಆಯುಕ್ತರಿಗೆ ಸಲ್ಲಿಸುವಂತೆ ಸೂಚಿಸಿದರು. ಅಲ್ಲದೆ ಸಂಬಂಧಪಟ್ಟ ಕಂಪನಿಗಳ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.
ಇದೇ ಸಮಯದಲ್ಲಿ ಈ ಅಭಿಯಾನದ ಜಾರಿಯಲ್ಲಿ ಎರಡನೇ ಸ್ಥಾನದಲ್ಲಿರುವುದಕ್ಕೆ ಅಧಿಕಾರಿಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಮುಂದಿನ ಸಭೆಯ ವೇಳೆಗೆ ದೇಶದಲ್ಲಿ ಈ ಅಭಿಯಾನ ಜಾರಿಗೊಳಿಸುವುದರಲ್ಲಿ ಮೊದಲ ಸ್ಥಾನದಲ್ಲಿರುವಂತೆ ನೋಡಿಕೊಳ್ಳಿ ಎಂದು ಅಧಿಕಾರಿಗೆಳಿಗೆ ಗುರಿ ನೀಡಿದರು. ಸರ್ಕಾರದ ಯೋಜನೆ ಜಾರಿಯಲ್ಲಿ ಏನಾದರೂ ಸಮಸ್ಯೆಗಳಿದ್ದಲ್ಲಿ ನೇರವಾಗಿ ನನ್ನನ್ನು ಸಂಪರ್ಕಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.
ರಾಂಚಿ: ವಿವಿಧ ಬೇಡಿಕೆಯನ್ನು ಈಡೇರಿಸುವಂತೆ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಿದ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಜಾರ್ಖಂಡ್ ರಾಜ್ಯ ಸರ್ಕಾರ ಲಾಠಿ ಚಾರ್ಜ್ ಮಾಡಿಸಿದೆ.
ಜಾರ್ಖಂಡ್‍ನ ಅಂಗನವಾಡಿ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮುಖ್ಯಮಂತ್ರಿ ರಘುಬರ್ ದಾಸ್ ಅವರ ಮನೆ ಮುಂದೆ ಪ್ರತಿಭಟನೆ ಮಾಡಿದ್ದಾರೆ. ನಂತರ ಸಿಎಂ ಮನೆಗೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ್ದಾರೆ ಅದ್ದರಿಂದ ಪೊಲೀಸರು ಮಹಿಳೆಯರು ಎಂಬುದನ್ನು ನೋಡದೆ ಮನಬಂದಂತೆ ಲಾಠಿ ಚಾರ್ಜ್ ಮಾಡಿದ್ದಾರೆ.
यह video आपको विचलित कर सकता है, पर यह झारखंड सरकार की सच्चाई है। राँची में आंगनवाड़ी सेवीकाओं पर झारखंड सरकार ने अपनी ताक़त दिखाई। इनका गुनाह यह था कि यह अपना मानदेय बढ़ाने की माँग पिछले 40 दिवसों से लगातार सरकार से कर रही थी। pic.twitter.com/XGor3dnSVS
ಜಾರ್ಖಂಡ್ ಪೊಲೀಸರು ಮಹಿಳೆಯರ ಮೇಲೆ ಲಾಠಿ ಚಾರ್ಜ್ ಮಾಡುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋದಲ್ಲಿ ಉನ್ನತ ಅಧಿಕಾರಿಯೊಬ್ಬರು ಮಹಿಳೆಯರಿಗೆ ಲಾಠಿಯಲ್ಲಿ ಮನಬಂದಂತೆ ಥಳಿಸುತ್ತಿರುವುದು ಕಂಡು ಬಂದಿದೆ. ಈ ಲಾಠಿ ಚಾರ್ಜ್‍ನಲ್ಲಿ ಹಲವಾರು ಮಹಿಳೆಯರಿಗೆ ಗಾಯವಾಗಿದ್ದು, ಒಂದು ಮಹಿಳೆಯ ಕೈ ಮುರಿದು ಹೋಗಿದೆ.
ಈ ವಿಡಿಯೋವನ್ನು ಕಾಂಗ್ರೆಸ್‍ನ ರಾಷ್ಟ್ರೀಯ ವಕ್ತಾರ ಗೌರವ್ ವಲ್ಲಭ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ರಾಂಚಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಜಾರ್ಖಂಡ್ ಸರ್ಕಾರ ತನ್ನ ಶಕ್ತಿಯನ್ನು ಪ್ರದರ್ಶನ ಮಾಡಿದೆ. ಕಳೆದ 40 ದಿನಗಳಿಂದ ತಮ್ಮ ಕೆಲಸವನ್ನು ಶಾಶ್ವತಗೊಳಿಸಿ ಎಂದು ಒತ್ತಾಯ ಮಾಡಿದ್ದಕ್ಕೆ ಸರ್ಕಾರ ನೀಡಿರುವ ಉತ್ತರವಿದು ಎಂದು ಬರೆದುಕೊಂಡಿದ್ದಾರೆ.
भाजपा राज में हक़ मांगना गुनाह है। झारखंड में आंगनबाड़ी कार्यकर्ताओं पर लाठियां बरसाना भाजपा सरकार की तानाशाही और नृशंस प्रवृत्ति को दर्शाता है। इन महिलाओं पर पड़ी एक-एक लाठी भाजपा हुकूमत के अंत का कारण बनेगी। pic.twitter.com/UTmBek15qP
ಈ ಕೃತ್ಯವನ್ನು ಖಂಡಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷ, ನಮ್ಮ ಬೇಡಿಕೆಗೆ ಹೋರಾಡುವುದು ಬಿಜೆಪಿ ಸರ್ಕಾರದಲ್ಲಿ ಅಪರಾಧವಾಗಿದೆ. ಜಾರ್ಖಂಡ್‍ನಲ್ಲಿ ಅಂಗನವಾಡಿ ಕಾರ್ಯಕರ್ತರ ಮೇಲೆ ಮಾಡಿರುವ ಲಾಠಿ ಚಾರ್ಜ್ ಬಿಜೆಪಿ ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ. ಈ ಮಹಿಳೆಯರ ಮೇಲೆ ಲಾಠಿ ಚಾರ್ಜ್ ಮಾಡಿರುವ ಬಿಜೆಪಿ ಆಡಳಿತ ಇದರಿಂದಲೇ ಅಂತ್ಯವಾಗಲಿದೆ ಎಂದು ಬಿಜೆಪಿ ಮೇಲೆ ಟ್ವೀಟ್ ದಾಳಿ ಮಾಡಿದೆ.