ರಾಮನಗರ: ಮಗು ಹಠ ಮಾಡುತ್ತಿದೆ ಎಂದು ಅಂಗನವಾಡಿ ಸಹಾಯಕಿಯೊಬ್ಬರು ಮಗುವಿನ ಕೈಗೆ ಬರೆ ಎಳೆದು, ಡೈಪರ್‌ಗೆ ಖಾರದ ಪುಡಿ ಹಾಕಿ ವಿಕೃತಿ ಮೆರೆದಿರುವ ಘಟನೆ ಕನಕಪುರ (Kanakapura) ತಾಲೂಕಿನ ಮಹರಾಜಕಟ್ಟೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರಮೇಶ್ ಹಾಗೂ ಚೈತ್ರಾ ದಂಪತಿಯ ಎರಡೂವರೆ ವರ್ಷದ ಮಗು ಮೇಲೆ ಅಂಗನವಾಡಿ ಸಹಾಯಕಿ ಹಲ್ಲೆ ಮಾಡಿದ್ದರು. ಅಂಗನವಾಡಿಯಲ್ಲಿ ಮಗು ಹಠ ಮಾಡ್ತಿದೆ ಎಂದು ಕೈ ಮೇಲೆ ಬರೆ ಹಾಕಿ ಬಳಿಕ ಡೈಪರ್ ಒಳಗೆ ಚಂದ್ರಮ್ಮ ಖಾರದಪುಡಿ ಹಾಕಿದ್ದರು. ಇದನ್ನೂ ಓದಿ: ಅಮೆರಿಕದ ಶಿಕ್ಷಣ ಇಲಾಖೆಯೇ ಬಂದ್ – ಮಕ್ಕಳ ಮುಂದೆಯೇ ಆದೇಶಕ್ಕೆ ಟ್ರಂಪ್ ಸಹಿ
ಬಿಜೆಪಿ ಸದಸ್ಯೆ ಹೇಮಲತಾ ನಾಯಕ್ (Hemalatha Nayak), ಅಂಗನವಾಡಿಗಳಲ್ಲಿ ಆಹಾರ ಸರಿಯಿಲ್ಲ. ಕೆಟ್ಟಿರುವ ಮೊಟ್ಟೆಗಳನ್ನ ಕೊಡ್ತಿದ್ದಾರೆ. ಹಾಲು ಸರಿಯಾಗಿಲ್ಲ. ಬಾಳೆಹಣ್ಣು ಇಲ್ಲ, ಶೇಂಗಾ ಕಡಲೆ ಕೊಡ್ತಿಲ್ಲ. ಹುಳು ಬಿದ್ದ ಆಹಾರ ನೀಡ್ತಿದ್ದಾರೆ. ಆಹಾರ ಕಳೆಪಯಾಗಿದೆ, ಇದಕ್ಕೆ ಸರ್ಕಾರ ಏನು ಕ್ರಮ ಕೈಗೊಂಡಿದೆ? ಅಂತ ಪ್ರಶ್ನಿಸಿದರು. ಈ ವೇಳೆ ಅಂಗನವಾಡಿಗಳಲ್ಲಿ ತಯಾರು ಮಾಡುವ ಆಹಾರ ಪದಾರ್ಥಗಳ ಪೊಟ್ಟಣ ತೋರಿಸಲು ಮುಂದಾದರು. ಕೊನೆಗೆ ಸದನದಲ್ಲಿ ಇದೆಲ್ಲವನ್ನು ತರುವಂತಿಲ್ಲ ಅಂತ ಸಭಾಪತಿಗಳು ಸೂಚಿಸಿದರು.
ಹೇಮಲತಾ ನಾಯಕ್ ಪ್ರಶ್ನೆಗೆ ಉತ್ತರಿಸಲು ಮುಂದಾದ ಲಕ್ಷ್ಮಿ ಹೆಬ್ಬಾಳ್ಕರ್, ನೀವೆಲ್ಲಾ ಮೊಟ್ಟೆ ತಿನ್ನುತ್ತೀರಿ, ನಾನಂತೂ ತಿನ್ನಲ್ಲ. ಮೊಟ್ಟೆ ಮುಟ್ಟೋದು ಇಲ್ಲ ಎಂದು ಹೇಳಿದರು. ಇದಕ್ಕೆ ಕಾಲೆಳೆದ ಸಭಾಪತಿಗಳು `ಒಮ್ಮೆ ತಿಂದು ನೋಡ್ರಿ, ಟೇಸ್ಟ್ ಗೊತ್ತಾಗುತ್ತೆ’ ಅಂತ ಹಾಸ್ಯ ಚಟಾಕಿ ಹಾರಿಸಿದರು. ಕೆಲ ಕ್ಷಣ ಪರಿಷತ್ ಸದಸ್ಯರು ನಗೆಗಡಲಲ್ಲಿ ತೇಲಿದರು. ಇದನ್ನೂ ಓದಿ: ಹಾವೇರಿಯಲ್ಲಿ ನಿರಂತರ ಮಳೆ – ಮನೆಯ ಮೇಲ್ಚಾವಣಿ ಕುಸಿದು ಮೂವರು ಸಾವು, 3 ಮಂದಿ ಗಂಭೀರ
ಬಳಿಕ ಕಳಪೆ ಆಹಾರ ಪೂರೈಕೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವರು, ನಾವು ಸ್ಥಳೀಯವಾಗಿ ಮೊಟ್ಟೆ ಖರೀದಿ ಮಾಡುತ್ತೇವೆ. ಮಾರ್ಕೆಟ್ ನಲ್ಲಿ 8 ರೂಪಾಯಿ ಇದೆ. ಸೃಷ್ಟಿ ಯೋಜನೆ ಅಡಿ ಮೊಟ್ಟೆ ಕೊಡಲಾಗ್ತಿದೆ. ಮಕ್ಕಳಿಗೆ ಪೌಷ್ಟಿಕಾಂಶ ನೀಡಲು ಮೊಟ್ಟೆ ಕೊಡ್ತಿದ್ದೇವೆ. ಕಳೆದ 8 ವರ್ಷಗಳಿಂದ ಒಂದು ಮಗುವಿಗೆ 8 ರೂಪಾಯಿ ಮಾತ್ರ ಕೇಂದ್ರ ಸರ್ಕಾರ ಕೊಡ್ತಿದೆ. ಕೇಂದ್ರ ಸರ್ಕಾರ ಬೆಲೆ ಪರಿಷ್ಕರಣೆ ಮಾಡಿಲ್ಲ. ಆದರೂ ನಾವು ಗುಣಮಟ್ಟದ ಮೊಟ್ಟೆ, ಆಹಾರ ನೀಡಲು ಕ್ರಮವಹಿಸುತ್ತಿದ್ದೇವೆ. ಎಲ್ಲಾದ್ರು ಇಂತಹ ಸಮಸ್ಯೆ ಆಗಿದ್ರೆ ಕ್ರಮ ತೆಗೆದುಕೊಳ್ತೀವಿ ಎಂದು ಉತ್ತರಿಸಿದರು. ಇದನ್ನೂ ಓದಿ: ಭವಿಷ್ಯದ ದೃಷ್ಟಿಯಿಂದ ಇಬ್ಬರೂ ಬೇರೆಯಾಗುತ್ತಿದ್ದೇವೆ: ಡಿವೋರ್ಸ್ ಖಚಿತಪಡಿಸಿದ ನತಾಶಾ
ಇದೇ ವೇಳೆ ಅಂಗನವಾಡಿ ಕಟ್ಟಡಗಳ ಸುರಕ್ಷತೆ ಬಗ್ಗೆಯೂ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿದರು. ರಾಜ್ಯದಲ್ಲಿ ಒಟ್ಟು 69,919 ಅಂಗನವಾಡಿ ಕೇಂದ್ರಗಳಿವೆ. ಇದರಲ್ಲಿ 47,236 ಸ್ವಂತ ಕಟ್ಟಡದಲ್ಲಿ ಇವೆ. 12,653 ಅಂಗನವಾಡಿ ಕೇಂದ್ರಗಳು ಬಾಡಿಗೆ ಕಟ್ಟಡಗಳಲ್ಲಿ ಇವೆ. 30 ವರ್ಷ ಮೇಲ್ಪಟ್ಟ ಅಂಗನವಾಡಿ ಕಟ್ಟಡ ಮತ್ತು ದುಸ್ಥಿತಿಯಲ್ಲಿರೋ ಕಟ್ಟಡಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅಂಗನವಾಡಿ ಕೇಂದ್ರಗಳ ಕಲ್ಪನೆ ಪ್ರಾರಂಭವಾಗಿ 49 ವರ್ಷ ಆಗಿದೆ. ಇಂದಿರಾಗಾಂಧಿ ಅವರು ಅಂಗನವಾಡಿ ಕೇಂದ್ರ ಪ್ರಾರಂಭ ಮಾಡಿದ್ರು. ಈವರೆಗೂ ಯಾವುದೇ ಅನಾಹುತ ಆಗಿಲ್ಲ. 30 ವರ್ಷ ಮೇಲ್ಪಟ್ಟ ಕಟ್ಟಡಗಳನ್ನೂ ನಾನು ಶೀಘ್ರವೇ ತಪಾಸಣೆ ನಡೆಸಲು ಕ್ರಮ ವಹಿಸುತ್ತೇನೆ ಎಂದು ಭರವಸೆ ನೀಡಿದರು.
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತವರು ಮೈಸೂರಿನಲ್ಲಿ ಅಂಗನವಾಡಿಯ (Anganawadi) ದುಸ್ಥಿತಿಯ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಬಿತ್ತರಿಸಿದ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡಿದೆ. ಶೀಘ್ರವೇ ಸ್ವಂತ ಅಂಗನವಾಡಿ ಕಟ್ಟಡದ ಭರವಸೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Laxmi Hebbalkar) ಕೊಟ್ಟಿದ್ದಾರೆ.
ಪಬ್ಲಿಕ್ ಟಿವಿ ವರದಿಗೆ ಪ್ರತಿಕ್ರಿಯಿಸಿದ ಅವರು, ಮೈಸೂರಿನ ಅಂಗನಾವಾಡಿ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. 15 ದಿನದೊಳಗೆ ಬಾಡಿಗೆ ಕಟ್ಟಡಕ್ಕೆ ಶಿಫ್ಟ್ ಮಾಡಿಸುತ್ತೇನೆ. ಆದಷ್ಟು ಬೇಗ ಸರ್ಕಾರ ಸ್ವಂತ ಜಾಗ ಖರೀದಿಸುತ್ತೆ. ಅಲ್ಲೇ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಮಾಡುವುದಾಗಿ ಸಚಿವೆ ಭರವಸೆ ನೀಡಿದ್ದಾರೆ.
ದುಸ್ಥಿತಿ ಏನು..?: ಸಿಎಂ ತವರಲ್ಲಿ ತಲೆ ತಗ್ಗಿಸುವಂತಹ ಸ್ಥಿತಿಯಲ್ಲಿ ಅಂಗನವಾಡಿ ಕೇಂದ್ರ ಇದೆ. ಮುರಿದ ಗುಡಿಸಲಿನಲ್ಲಿ ಅಂಗನವಾಡಿಗೆ ಬರುವ ಮಕ್ಕಳು ಆಟವಾಡಬೇಕಿದೆ. ಮೈಸೂರಿನ ಬನ್ನಿಮಂಟಪದ ಎಲ್ಲಮ್ಮ ಬಡಾವಣೆಯ ಅಂಗನವಾಡಿಯ ಶೋಚನಿಯ ಸ್ಥಿತಿ ಇದು. ಮಣ್ಣಿನಲ್ಲೆ ಕುಳಿತು ಮಕ್ಕಳು ಊಟ ಮಾಡಬೇಕಿದೆ. ಗುಡಿಸಲ ನೆಲವನ್ನು ಇಲಿ, ಹೆಗ್ಗಣಗಳು ಕೊರೆದು ಹಾಕಿವೆ. 60 ಮಕ್ಕಳ ಸಂಖ್ಯೆ ಬಲ ಹೊಂದಿರುವ ಅಂಗನವಾಡಿ ಕೇಂದ್ರದಲ್ಲಿ ಪ್ರತಿ ನಿತ್ಯವೂ ಸುಮಾರು 25 ಮಕ್ಕಳು ಅಂಗನವಾಡಿಗೆ ಬರುತ್ತಿದ್ದಾರೆ. ಮಣ್ಣಿನಲ್ಲೇ ಕುಳಿತು ಆಟವಾಡಿ, ಮದ್ಯಾಹ್ನದ ಊಟ ಸೇವಿಸಿ ಹೋಗುತ್ತಿದ್ದಾರೆ ಎಂದು ಇಂದು ಬೆಳಗ್ಗೆ ಪಬ್ಲಿಕ್ ಟಿವಿ ವರದಿ ಮಾಡಿತ್ತು.
ಈ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಬೆನ್ನಲ್ಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ಕೊಟ್ಟಿದ್ದಾರೆ. ಈ ವೇಳೆ ಸ್ಥಳೀಯರು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಅಂಗನವಾಡಿಗೆ ಜಾಗ ಮೀಸಲಿರಿಸಿವದ್ದೇವೆ. ಆದರು ಅದನ್ನು ಮಾಡುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಕಿಡಿಕಾರಿದ ಪ್ರಸಂಗ ನಡೆಯಿತು.
ಹಾಸನ: ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಅಂಗನವಾಡಿ ಕೇಂದ್ರದಲ್ಲಿ (Anganwadi) ಕೊಳೆತ ಮೊಟ್ಟೆಗಳನ್ನು (Rotten Eggs) ವಿತರಣೆ ಮಾಡಿರುವ ಘಟನೆ ಹಾಸನ (Hassan) ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಲಕ್ಷ್ಮಿಪುರ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ಅಂಗನವಾಡಿ ಕೇಂದ್ರದಲ್ಲಿ ನೀಡಿದ ಮೊಟ್ಟೆಗಳನ್ನು ಪಡೆದು ಮನೆಯಲ್ಲಿ ಬೇಯಿಸಿ ಸಿಪ್ಪೆ ಸುಲಿದಾಗ ಮೊಟ್ಟೆಗಳು ಕೊಳೆತಿರುವುದು ಬೆಳಕಿಗೆ ಬಂದಿದೆ. ಕೂಡಲೇ ಅಂಗವಾಡಿ ಕೇಂದ್ರಕ್ಕೆ ಬಂದ ಗರ್ಭಿಣಿಯರು ಮೊಟ್ಟೆ ಪೂರೈಕೆ ಮಾಡುತ್ತಿರುವ ಗುತ್ತಿದಾರನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಳೆಯ ಹಾಗೂ ಕಳಪೆ ಗುಣಮಟ್ಟದ ಮೊಟ್ಟೆಗಳನ್ನು ವಿತರಣೆ ಮಾಡುತ್ತಿದ್ದಾರೆ. ಒಂದು ವೇಳೆ ಸಣ್ಣ ಮಕ್ಕಳು ಮೊಟ್ಟೆ ತಿಂದಿದ್ದರೆ ಏನಾದರೂ ಅನಾಹುತ ಸಂಭವಿಸುತ್ತಿತ್ತು. ಕೂಡಲೇ ಮೊಟ್ಟೆ ಪೂರೈಕೆ ಮಾಡುತ್ತಿರುವ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು, ಅವರನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇಂಗ್ಲಿಷ್ ಇರೋದೇ ತಪ್ಪು ಮಾತಾಡೋಕೆ, ಕನ್ನಡ ಇರೋದು ಸರಿಯಾಗಿ ಮಾತನಾಡಲು: ಪ್ರದೀಪ್ ಈಶ್ವರ್
ಗುತ್ತಿಗೆದಾರರೊಂದಿಗೆ ಅಧಿಕಾರಿಗಳು ಶಾಮೀಲಾಗಿದ್ದಾರೆ. ಮೊಟ್ಟೆಗಳನ್ನು ಪರಿಶೀಲನೆ ಮಾಡದೆ ತೆಗೆದುಕೊಳ್ಳುತ್ತಿದ್ದಾರೆ. ಕೂಡಲೇ ಇದರ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಕೇವಲ 4 ದಿನಗಳ ಅಂತರದಲ್ಲಿ ಹೊಳೆನರಸೀಪುರದಲ್ಲಿ 2ನೇ ಪ್ರಕರಣ ನಡೆದಿದೆ. ಕಳೆದ ಗುರುವಾರ ಹೊಳೆನರಸೀಪುರ ಪಟ್ಟಣದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಹಾಗೂ ಪುಟಾಣಿ ಮಕ್ಕಳಿಗೆ ಕೆಟ್ಟ ಮೊಟ್ಟೆಗಳನ್ನು ವಿತರಿಸಲಾಗಿತ್ತು. ಇದೀಗ ಹೊಳೆನರಸೀಪುರ ತಾಲೂಕಿನಲ್ಲಿ ಮತ್ತೊಂದು ಅಂಗನವಾಡಿ ಕೇಂದ್ರದಲ್ಲಿ ಕೊಳೆತ ಮೊಟ್ಟೆ ವಿತರಣೆ ಮಾಡಿದ್ದು ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಆಧಾರ್‌ನಲ್ಲಿ ಹೆಸರು ಲಕ್ಷ್ಮೀ, ಲಿಂಗ ಪುರುಷ ಅಂತ ಇರೋದನ್ನ ಕಂಡು ಕಕ್ಕಾಬಿಕ್ಕಿಯಾದ ಕಂಡಕ್ಟರ್
ನೆಲಮಂಗಲ: ರಿಯಲ್ ಎಸ್ಟೇಟ್ ಮಾಫಿಯಾದ ವ್ಯಕ್ತಿಯೊಬ್ಬರು ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿರುವುದರಿಂದ ಪುಟಾಣಿಗಳು ಕಂಗಾಲಾಗಿರುವ ಘಟನೆ ನೆಲಮಂಗಲ ಶಾಸಕ ಡಾ.ಕೆ. ಶ್ರೀನಿವಾಸಮೂರ್ತಿ ಹುಟ್ಟೂರಿನಲ್ಲಿ ನಡೆದಿದೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಓಬಳಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಳೆದ ನಾಲ್ಕೈದು ದಿನಗಳಿಂದ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿದ್ದು, 30 ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗಿದೆ. ಶಾಸಕರ ಬೆಂಬಲಿಗ ವ್ಯಕ್ತಿಯಿಂದ ಅಂಗನವಾಡಿ ಕೇಂದ್ರಕ್ಕೆ ಬೀಗ ಹಾಕಿರುವ ಆರೋಪ ಕೇಳಿಬರುತ್ತಿದೆ. ಇದಕ್ಕೆ ಶಾಸಕರ ಕುಮ್ಮಕ್ಕು ಇದೆ ಎಂಬ ಗಂಭೀರವಾದ ಆರೋಪವನ್ನು ಸಾರ್ವಜನಿಕರು ಮಾಡುತ್ತಿದ್ದಾರೆ.
ಅಂಗನವಾಡಿ ಕೇಂದ್ರದ ಜಾಗ ವಿವಾದ ಎಂದು ಬೀಗ ಹಾಕಲಾಗಿದೆ. ಎಲ್ಲಾ ದಾಖಲೆಗಳು ಸರಿಯಿದ್ದರು ಅಂಗನವಾಡಿ ಕೇಂದ್ರವನ್ನು ತೆರೆಯಲು ಅಧಿಕಾರಿಗಳ ಮೀನಾಮೇಷ ಮಾಡುತ್ತಿದ್ದಾರೆ. ಅಧಿಕಾರಿಗಳು ಶಾಸಕರ ಒತ್ತಡಕ್ಕೆ ಮಣಿದಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗ್ರಾಮಸ್ಥರು ದೂರು ನೀಡಿದರು, ಯಾವುದೇ ಪ್ರಯೋಜನವಾಗಿಲ್ಲ ಎಂದು ನೆಲಮಂಗಲ ಮಹಿಳಾ ಮತ್ತು ಮಕ್ಕಳ ಕಚೇರಿಗೆ ಗ್ರಾಮಸ್ಥರು ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಾರ್ಚ್ 25ಕ್ಕೆ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ- ಪ್ರಧಾನಿ ಭಾಗಿ
ಚಿಕ್ಕೋಡಿ: ಮಕ್ಕಳ ಮೊದಲ ಕಲಿಕೆಯ ಮೆಟ್ಟಿಲಾಗಿರುವ ಅಂಗನವಾಡಿ ಕೇಂದ್ರವನ್ನು ಉತ್ತಮ ಗುಣಮಟ್ಟದಲ್ಲಿ ನಿರ್ಮಿಸಿ, ಮೂಲಸೌಕರ್ಯಗಳ ವ್ಯವಸ್ಥೆ ಮಾಡಿ, ಅನುಕೂಲ ಕಲ್ಪಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಮತಕ್ಷೇತ್ರದ ಲಖನಾಪುರ ಗ್ರಾಮದಲ್ಲಿ, ನಬಾರ್ಡ್ ಆರ್‍ಐಡಿಎಫ್-25 ಯೋಜನೆಯಡಿ 17 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾದ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ರಾಮದ ಪುಟಾಣಿಗಳ ಏಳಿಗೆಗಾಗಿ ಈ ಕೇಂದ್ರ ಉತ್ತಮ ರೀತಿಯಲ್ಲಿ ಸೇವೆ ಸಲ್ಲಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಮಾಂತ್ರಿಕನಿಂದ ಕೃಷ್ಣಾ ಕಿತ್ತೂರಿನಲ್ಲಿ ವಾಮಾಚಾರ..!
ಅಷ್ಟೆ ಅಲ್ಲದೇ ಕ್ಷೇತ್ರದ ಅಂಗನವಾಡಿ ಕೇಂದ್ರಗಳ ಸವಾರ್ಂಗೀಣ ಅಭಿವೃದ್ದಿಗೆ ಶ್ರಮಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಇದನ್ನೂ ಓದಿ: ಗಣಪತಿಯ ಕುತ್ತಿಗೆಗೆ ಸುತ್ತಿಕೊಂಡ ನಾಗರ
ತುಮಕೂರು: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುವ ಆಹಾರ ದಾಸ್ತಾನಿನಲ್ಲಿ ಹುಳಗಳನ್ನ ಕಂಡು ತುರುವೇಕೆರೆ ಶಾಸಕ ಮಸಾಲೆ ಜಯರಾಮ್ ಕಂಗಾಲಾಗಿದ್ದಾರೆ.
ತುರುವೇಕೆ ಪಟ್ಟಣಕ್ಕೆ ಹೊಂದಿಕೊಂಡಿರುವ ಹಾವಾಳ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿ ಆಹಾರ ಸರಬರಾಜು ದಾಸ್ತಾನು ಮಳಿಗೆಗೆ ಶಾಸಕ ಮಸಾಲೆ ಜಯರಾಮ್ ಧಿಡೀರ್ ಭೇಟಿ ಕೊಟ್ಟಾಗ ಈ ಅವ್ಯವಸ್ಥೆ ಬೆಳಕಿಗೆ ಬಂದಿದೆ.
ಅಕ್ಕಿ ಮತ್ತು ರಾಗಿ ದಾಸ್ತಾನಿನಲ್ಲಿ ಬರೀ ಹುಳಗಳೇ ತುಂಬಿಕೊಂಡಿತ್ತು. ಹೀಗೆ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳನ್ನು ಪೂರೈಸುತ್ತಿರುವುದನ್ನು ಕಂಡು ಕಳವಳ ವ್ಯಕ್ತಪಡಿಸಿದ ಶಾಸಕರು, ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುತ್ತಿರುವ ಆಹಾರ ಪೂರೈಕೆ ಗುತ್ತಿಗೆದಾರನ ವಿರುದ್ಧ ಹರಿಹಾಯ್ದರು. ಅಲ್ಲದೆ ಗುತ್ತಿಗೆಯನ್ನು ರದ್ದುಗೊಳಿಸುವಂತೆ ಸ್ಥಳದಲ್ಲಿಯೇ ಸಚಿವ ಮಾಧುಸ್ವಾಮಿ ಅವರಿಗೆ ಕರೆಮಾಡಿ ಒತ್ತಾಯಸಿದರು.
ಡೆಹ್ರಾಡೂನ್: ಉತ್ತರಾಖಂಡ್ ನ ಚಮೋಲಿ ಜಿಲ್ಲೆಯ ಜಿಲ್ಲಾಧಿಕಾರಿ ಸ್ವಾತಿ ಭಡೌರಿಯಾ ತನ್ನ ಮಗನನ್ನು ಗೋಪೇಶ್ವರ್ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಸೇರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಚಮೋಲಿ ಜಿಲ್ಲೆಯ ಜಿಲ್ಲಾಧಿಕಾರಿ ಸ್ವಾತಿ ಭಡೌರಿಯಾರವರು ತಮ್ಮ ಎರಡೂವರೆ ವರ್ಷದ ಮಗ ಅಭ್ಯುದಯ್ ನನ್ನು ಅಂಗನವಾಡಿ ಶಾಲೆಗೆ ದಾಖಲಿಸಿದ್ದಾರೆ. ಅಲ್ಲದೇ ಉನ್ನತ ಹುದ್ದೆಯಲ್ಲಿಯರುವವರು, ತಮ್ಮ ಮಕ್ಕಳನ್ನು ಎಂದಿಗೂ ಹೈ-ಫೈ ಶಾಲೆಗಳಿಗೆ ಸೇರಿಸುವುದು ಸಾಮಾನ್ಯ ಸಂಗತಿ. ಆದರೆ ಚಮೋಲಿ ಜಿಲ್ಲೆಯ ಜಿಲ್ಲಾಧಿಕಾರಿ ಅದಕ್ಕೆ ಅಪವಾದವೆಂಬಂತೆ ನಡೆದುಕೊಂಡಿದ್ದಾರೆ. ಖುದ್ದು ತನ್ನ ಮಗನನ್ನು ಸರ್ಕಾರಿ ಅಂಗನಾಡಿ ಕೇಂದ್ರಕ್ಕೆ ದಾಖಲಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
Uttarakhand: Chamoli’s DM Swati Bhadauriya enrols her son to Anganwadi Center in Gopeshwar village. DM says,“It's for his social,mental&physical growth. All children are well-fed&provided with toys&basic amenities,including medical care.Children can have holistic growth here.” pic.twitter.com/3naLHgeuiV
ಈ ಕುರಿತು ಪ್ರತಿಕ್ರಿಯಿಸಿರುವ ಅವರು, ರಾಜ್ಯ ಸರ್ಕಾರ ನಡೆಸುತ್ತಿರುವ ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಅಲ್ಲದೇ ಮಕ್ಕಳ ವಿದ್ಯಾಭ್ಯಾಸವನ್ನು ಸರಿಯಾಗಿ ಕೊಡುತ್ತಿಲ್ಲ ಎನ್ನುವ ಆರೋಪವನ್ನು ತೆಗೆದು ಹಾಕಲು ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಶಿಕ್ಷಣ, ಆಟ ಹಾಗೂ ಊಟ-ಉಪಚಾರಗಳು ಒಂದೇ ರೀತಿ ಇರುತ್ತದೆ. ಅಂಗನವಾಡಿಗಳ ಕುರಿತು ತಪ್ಪು ಕಲ್ಪನೆ ಬೆಳೆಸಿಕೊಳ್ಳುವುದು ಸರಿಯಲ್ಲ ಎಂದರು.
ಅಂಗನವಾಡಿ ಕೇಂದ್ರದಲ್ಲಿ ತಮ್ಮ ಮಗ ಇತರರೊಂದಿಗೆ ಹಂಚಿ ತಿನ್ನುವ ಅಭ್ಯಾಸವನ್ನು ಬೆಳೆಸಿಕೊಳ್ಳುತ್ತಿದ್ದಾನೆ. ಇತರ ಮಕ್ಕಳ ಜೊತೆ ತುಂಬಾ ಚೆನ್ನಾಗಿ ಆಟವಾಡುತ್ತಿದ್ದಾನೆ. ಈ ಕೇಂದ್ರಗಳಲ್ಲಿ ಮಕ್ಕಳು ಬೌದ್ಧಿಕವಾಗಿ ಹೆಚ್ಚು ಕಲಿಯುತ್ತಾರೆ. ಎಲ್ಲರೊಂದಿಗೆ ಬೆರೆಯುತ್ತಾರೆ. ದೈಹಿಕ ಮತ್ತು ಮಾನಸಿಕವಾಗಿಯೂ ಸದೃಢರಾಗುತ್ತಾರೆ. ಅಂಗನವಾಡಿ ಕೇಂದ್ರಗಳನ್ನು ನೋಡುವ ರೀತಿ ಬದಲಾಗಬೇಕು ಎಂದು ಹೇಳಿದ್ದಾರೆ.
ಸ್ವಾತಿ ಭಡೌರಿಯಾರ ಪತಿ ಕೂಡ ಐಎಎಸ್ ಅಧಿಕಾರಿಯಾಗಿದ್ದು, ಅವರು ಸಹ ಉತ್ತರಾಖಂಡ್‍ನ ಅಲ್ಮೋರಾ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಂಗನವಾಡಿ ಕೇಂದ್ರಗಳ ಮೇಲಿರುವ ಅಪನಂಬಿಕೆಯನ್ನು ಜನರಿಂದ ಹೋಗಲಾಡಿಸಬೇಕು. ಹೀಗಾಗಿ ಮಗನನ್ನು ಅಂಗನವಾಡಿಗೆ ಸೇರಿಸಿದ್ದೇವೆ ಎಂದು ತಿಳಿಸಿದ್ದಾರೆ.
ಮೈಸೂರು: ಅಂಗನವಾಡಿಯಲ್ಲಿ ಮಗು ಮೂತ್ರ ಮಾಡಿದ್ದರಿಂದ ಸಿಟ್ಟುಗೊಂಡ ಸಹಾಯಕಿಯೊಬ್ಬರು ಬರೆ ಹಾಕಿರುವ ಅಮಾನವೀಯ ಘಟನೆ ನಗರದ ದೇವಯ್ಯನ ಹುಂಡಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ನಗರದ ದೇವಯ್ಯನ ಹುಂಡಿಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ಅಂಗನವಾಡಿಯಲ್ಲಿ ಪುಟ್ಟ ಮಗುವೊಂದು ಮೂತ್ರ ಮಾಡಿತ್ತು. ಕೋಪಗೊಂಡ ಆಯಾ ನೀಲಮ್ಮ ಗ್ಯಾಸ್ ಸ್ಟೌವ್‍ನಲ್ಲಿ ಚಾಕು ಕಾಯಿಸಿ ಮಗುವಿನ ಕಾಲಿಗೆ ಬರೆ ಹಾಕಿದ್ದಾಳೆ. ಇದನ್ನೂ ಓದಿ: ಅಮ್ಮ ಬೇಕು ಅಂತ ಹಠಹಿಡಿದಿದ್ದ 4ರ ಕಂದಮ್ಮನ ಬೆನ್ನಿಗೆ ಬರೆ ಎಳೆದ ಶಿಕ್ಷಕ, ಆಯಾ!
ವಿಷಯ ತಿಳಿಯುತ್ತಿದ್ದಂತೆಯೇ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ ಪೋಷಕರು ಆಯಾ ನೀಲಮ್ಮರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಆಯಾ ಮಕ್ಕಳ ಮೇಲೆ ಯಾವಾಗಲೂ ಇದೇ ರೀತಿ ದೌರ್ಜನ್ಯ ನಡೆಸುತ್ತಾಳೆ ಎಂದು ಆರೋಪಿಸಿರುವ ಗ್ರಾಮಸ್ಥರು, ಕೂಡಲೇ ಆಯಾರನ್ನು ಅಮಾನತು ಮಾಡುವಂತೆ ಅಂಗನವಾಡಿ ಬಳಿ ಪ್ರತಿಭಟನೆ ನಡೆಸಿದ್ದಾರೆ.