Tag: ಅಂಗವಿಕರು

  • ವಿಕಲಾಂಗರು, ಗರ್ಭಿಣಿಯರಿಗೆ ವರ್ಕ್‌ ಫ್ರಮ್‌ ಹೋಮ್‌ – ದೆಹಲಿ ಸರ್ಕಾರ ಆದೇಶ

    ವಿಕಲಾಂಗರು, ಗರ್ಭಿಣಿಯರಿಗೆ ವರ್ಕ್‌ ಫ್ರಮ್‌ ಹೋಮ್‌ – ದೆಹಲಿ ಸರ್ಕಾರ ಆದೇಶ

    ನವದೆಹಲಿ: ವಿಕಲಾಂಗರಿಗೆ ಮತ್ತು ನಗರ ಸರ್ಕಾರಿ ಇಲಾಖೆಗಳಲ್ಲಿ ಕೆಲಸ ಮಾಡುವ ಗರ್ಭಿಣಿಯರಿಗೆ ವರ್ಕ್ ಫ್ರಮ್ ಹೋಮ್ ಮಾಡಲು ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅವಕಾಶ ನೀಡಿದೆ. ಈ ನೌಕರರು ಇನ್ನು ಮುಂದೆ ಕಚೇರಿಗಳಿಗೆ ಹಾಜರಾಗುವ ಅಗತ್ಯವಿಲ್ಲ ಎಂದು ಡಿಡಿಎಂಎ ತಿಳಿಸಿದೆ.

    ಪಿಎಸ್‍ಯುಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು, ಸ್ಥಳೀಯ ಸಂಸ್ಥೆಗಳ ಕಚೇರಿಗಳಿಗೆ ಆಗಮಿಸುವ ಅಂಗವಿಕಲರು ಮತ್ತು ಗರ್ಭಿಣಿಯರಿಗೆ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಕಚೇರಿಗೆ ಆಗಮಿಸುವ ಬದಲಾಗಿ ಮನೆಯಲ್ಲಿಯೇ ಕೆಲಸ ಮಾಡಲು ವಿನಾಯಿತಿ ನೀಡಲಾಗಿದೆ. ಇದನ್ನೂ ಓದಿ: ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪಂಜಾಬ್‌ ಸಿಎಂ ಮನವಿ ಪತ್ರ

    ವರ್ಕ್ ಫ್ರಮ್ ಹೋಂ ಮಾಡುವ ಉದ್ಯೋಗಿಗಳು ತಮ್ಮ ಕಚೇರಿಗಳೊಂದಿಗೆ ಮೊಬೈಲ್ ಫೋನ್ ಅಥವಾ ಇ-ಮೇಲ್ ಮೂಲಕ ಸಂವಹನ ನಡೆಸಬಹುದಾಗಿದೆ ಎಂದು ತಿಳಿಸಲಾಗಿದೆ. ಈ ವಾರದ ಆರಂಭದಲ್ಲಿ ದೆಹಲಿಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಡಿಡಿಎಂಎ ಚಾರ್ಟರ್ಡ್ ಅಕೌಂಟೆಂಟ್ ಮತ್ತು ಆದಾಯ ತೆರಿಗೆ ಇಲಾಖೆಯ ಉದ್ಯೋಗಿಗಳು ಸೇರಿದಂತೆ ಹಲವಾರು ಕಚೇರಿಯ ಉದ್ಯೋಗಿಗಳಿಗೆ ದೆಹಲಿ ಸರ್ಕಾರಿ ವರ್ಕ್ ಫ್ರಮ್ ಹೋಮ್ ಮಾಡುವಂತೆ ಆದೇಶ ಹೊರಡಿಸಿತ್ತು. ಆದರೆ ಅಗತ್ಯವಿದ್ದರೆ ಮಾತ್ರ ಉದ್ಯೋಗಿಗಳು ತಮ್ಮ ಕಚೇರಿಗಳಿಗೆ ಆಗಮಿಸಿ ಕೆಲಸ ಮಾಡಬಹುದು ಎಂದು ಸೂಚಿಸಿತ್ತು. ಇದನ್ನೂ ಓದಿ: ಅಯೋಧ್ಯೆ ಅಲ್ಲ, ಗೋರಖ್‌ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ