Tag: ಅಂಜುದೀವ್ ದ್ವೀಪದ

  • 2025ರ ಜೂನ್‌ಗೆ 175 ಕಿಮೀ ಮೆಟ್ರೋ ಮಾರ್ಗ- ಅಂಜುಂ ಪರ್ವೇಜ್

    2025ರ ಜೂನ್‌ಗೆ 175 ಕಿಮೀ ಮೆಟ್ರೋ ಮಾರ್ಗ- ಅಂಜುಂ ಪರ್ವೇಜ್

    ಬೆಂಗಳೂರು: ಮೆಟ್ರೋ ರೈಲು ವ್ಯವಸ್ಥೆಯು ಸುಗಮ ಸಂಚಾರ ಸಾಧ್ಯವಾಗಿಸುತ್ತಿದೆ. 2025ರ ಜೂನ್ ಹೊತ್ತಿಗೆ `ನಮ್ಮ ಮೆಟ್ರೋ’ (Namma Metro) ಜಾಲದಲ್ಲಿ 175 ಕಿ.ಮೀ. ಉದ್ದದ ಮಾರ್ಗ ಸಿದ್ಧವಾಗಲಿದೆ ಎಂದು ಬಿಎಂಆರ್‌ಸಿಎಲ್ (BMRCL) ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್ (Anjum Parvez)ತಿಳಿಸಿದ್ದಾರೆ.

    ಬೆಂಗಳೂರು ಟೆಕ್ ಸಮ್ಮೇಳನದ (Bengaluru Tech Summit) ವಿಚಾರ ಗೋಷ್ಠಿಯಲ್ಲಿ `ಸಂಚಾರ ವ್ಯವಸ್ಥೆಯ ಭವಿಷ್ಯ’ ಕುರಿತು ಮಾತನಾಡಿದ ಅವರು, ನಮ್ಮ ಮೆಟ್ರೋದ 2 ಮತ್ತು 3ನೇ ಹಂತದ ಕಾಮಗಾರಿಗಳು ಸಂಪೂರ್ಣವಾಗಿ ಮುಗಿದರೆ, ನಗರದಲ್ಲಿ 2041ರ ಹೊತ್ತಿಗೆ ಒಟ್ಟು 314 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ಸಿದ್ಧವಾಗಲಿದೆ. ಸದ್ಯಕ್ಕೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (International Airport) ಕಡೆ ಮೆಟ್ರೋ ಕಾಮಗಾರಿ ಭರದಿಂದ ಸಾಗುತ್ತಿದೆ. ಆದರೆ ಸ್ವಂತ ವಾಹನಗಳನ್ನು ಬಿಟ್ಟು ಸಾರ್ವಜನಿಕ ಸಾರಿಗೆಯ ಕಡೆಗೆ ಜನರನ್ನು ಕರೆತರುವುದೇ ದೊಡ್ಡ ಸವಾಲಾಗಿದೆ ಎಂದು ಅವರು ಪ್ರತಿಪಾದಿಸಿದರು.

    1990ರ ವರೆಗೂ ದೇಶದಲ್ಲಿ ನಗರ ಪ್ರದೇಶಗಳ ಕಡೆಗೆ ಗಮನವನ್ನೇ ಕೊಡುತ್ತಿರಲಿಲ್ಲ. ಹೀಗಾಗಿ ನಮ್ಮ ನಗರಾಭಿವೃದ್ಧಿ ಯೋಜನೆಗಳು ಬಹುಕಾಲ ವೈಜ್ಞಾನಿಕವಾಗಿರಲಿಲ್ಲ. ಈಗ ನವೋದ್ಯಮಗಳಿಂದ ಮೆಟ್ರೋ ವ್ಯವಸ್ಥೆಗೆ ಸಾಕಷ್ಟು ಅನುಕೂಲಗಳು ಸಿಗುತ್ತಿವೆ. ಹೀಗಾಗಿ ಜನರು ಮೆಟ್ರೋ ರೈಲುಗಳ ಮೂಲಕ ತಮ್ಮ ಕಾರ್ಯಸ್ಥಳಗಳನ್ನು ತಲುಪುವಂತೆ ಮಾಡಲು ಹಲವು ನವೋದ್ಯಮಗಳೊಂದಿಗೆ ಬಿಎಂಆರ್‌ಸಿಎಲ್ ಒಡಂಬಡಿಕೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ವಿವರಿಸಿದರು. ಇದನ್ನೂ ಓದಿ: ಪ್ರೀತಿಸಿ ಮದುವೆಯಾದವಳು ಮತಾಂತರವಾಗಲಿಲ್ಲ – ಪತ್ನಿಯನ್ನೇ ಕೊಲ್ಲಲು ಮುಂದಾದ ಪತಿ

    ಮೆಟ್ರೋ ನಿಲ್ದಾಣಗಳಲ್ಲೇ ಬಸ್ ನಿಲ್ದಾಣಗಳನ್ನು ಅಭಿವೃದ್ಧಿ ಪಡಿಸುವಂತೆ ಬಿಎಂಟಿಸಿ (BMTC) ಜೊತೆ ಮಾತುಕತೆ ಪ್ರಗತಿಯಲ್ಲಿದೆ. ಇದರಿಂದ ಆ ಸಂಸ್ಥೆಗೂ ಲಾಭವಾಗಲಿದೆ. ಇದರ ಜತೆಗೆ ಕಾರು ಮತ್ತು ಬೈಕ್ ಪೂಲಿಂಗ್ ವ್ಯವಸ್ಥೆಯನ್ನು ಉತ್ತೇಜಿಸಬೇಕು. ಅಲ್ಲದೆ ಮೆಟ್ರೋ ನಿಲ್ದಾಣಗಳ ಒಳಗೆ ಮತ್ತು ಹೊರಗೆ ಸಾರ್ವಜನಿಕರಿಗೆ ಎಲ್ಲ ಸೌಲಭ್ಯ ಸಿಗುವಂತಿರಬೇಕು. ಇದನ್ನ ಸಾಧ್ಯವಾಗಿಸುವ ನಿಟ್ಟಿನಲ್ಲಿ ಸಂಸ್ಥೆಯು ಯೋಚಿಸುತ್ತಿದೆ ಎಂದು ಪರ್ವೇಜ್ ನುಡಿದರು.

    ಅಂತಾರಾಷ್ಟ್ರೀಯ ಸಾರಿಗೆ ಕೌನ್ಸಿಲ್‌ನ ಅಮಿತ್ ಭಟ್ ಮಾತನಾಡಿ, ಪಾಶ್ಚಾತ್ಯ ಜಗತ್ತಿನಲ್ಲಿ ಶೇ.85 ರಷ್ಟು ನಗರೀಕರಣವಾಗಿದ್ದು, ಭಾರತದಲ್ಲಿ ಈ ಪ್ರಮಾಣ ಶೇ.33ರಷ್ಟಿದೆ. ಆದರೆ ನಮ್ಮಲ್ಲಿ ಇನ್ನೂ ಶೇ.66ರಷ್ಟು ಮೂಲಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಬೇಕಾಗಿದೆ. ಏಕೆಂದರೆ ನಮ್ಮಲ್ಲಿ ಹೊಸದಾಗಿ ಹಲವು ನಗರಗಳು ತಲೆ ಎತ್ತುತ್ತಿವೆ ಎಂದು ಹೇಳಿದರು. ಇದನ್ನೂ ಓದಿ: ‘ಲೈಗರ್’ ಸಿನಿಮಾಗೆ ಹಣ ಎಲ್ಲಿಂದ ಬಂತು?: ನಟಿ, ನಿರ್ದೇಶಕನಿಗೆ ‘ಇಡಿ’ ಗ್ರಿಲ್

    ಸುಗಮ ಮತ್ತು ಅತ್ಯಾಧುನಿಕ ಸಾರಿಗೆ ಸೌಲಭ್ಯವನ್ನು ಒದಗಿಸುವಾಗ ಇಂಗಾಲದ ಉತ್ಪಾದನೆ ಇಲ್ಲದಂತೆ ನೋಡಿಕೊಳ್ಳುವುದು, ಎಲ್ಲರನ್ನೂ ಒಳಗೊಳ್ಳುವುದು ಮತ್ತು ಯಾವುದೇ ಅಪಘಾತಗಳಿಗೆ ಆಸ್ಪದವಿಲ್ಲದಂತೆ ಖಾತ್ರಿಪಡಿಸುವುದು ಬಹಳ ದೊಡ್ಡ ಸವಾಲುಗಳಾಗಿವೆ ಎಂದು ಅವರು ಪ್ರತಿಪಾದಿಸಿದರು.

    ಬಾಶ್ ಕಂಪನಿಯ ಉಪಾಧ್ಯಕ್ಷ ವಾದಿರಾಜ್ ಕೃಷ್ಣಮೂರ್ತಿ, ಚಲೋ ಕಂಪನಿಯ ಸಹ ಸಂಸ್ಥಾಪಕ ವಿನಾಯಕ್ ಭಾವ್ನಾನಿ ಅವರು ಕೂಡ ಗೋಷ್ಠಿಯಲ್ಲಿ ತಮ್ಮ ವಿಚಾರಗಳನ್ನು ಮಂಡಿಸಿದರು.

    Live Tv
    [brid partner=56869869 player=32851 video=960834 autoplay=true]

  • ನೌಕಾನೆಲೆ ನಿರ್ಬಂಧಿತ ಅಂಜುದೀವ್ ದ್ವೀಪದಲ್ಲಿ ಹಾರಿದ ತ್ರಿವರ್ಣ ಧ್ವಜ

    ನೌಕಾನೆಲೆ ನಿರ್ಬಂಧಿತ ಅಂಜುದೀವ್ ದ್ವೀಪದಲ್ಲಿ ಹಾರಿದ ತ್ರಿವರ್ಣ ಧ್ವಜ

    ಕಾರವಾರ: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಚರಿಸಲಾಗುತ್ತಿರುವ ‘ಆಜಾದಿ ಕಾ ಅಮೃತ್ ಮಹೋತ್ಸವ’ದಲ್ಲಿ ದೇಶದಾದ್ಯಂತ ಭಾರತೀಯ ನೌಕಾಪಡೆಯಿಂದ 75 ದ್ವೀಪಗಳಲ್ಲಿ ಧ್ವಜಾರೋಹಣ ನಡೆಸಲಾಗಿದೆ. ಅದರಂತೆ ಕಾರವಾರದ ನೌಕಾನೆಲೆ ನಿರ್ಬಂಧಿತ ಅಂಜುದೀವ್ ದ್ವೀಪದಲ್ಲಿಯೂ ಕೂಡ ತ್ರಿವರ್ಣ ಧ್ವಜವನ್ನು ಹಾರಿಸಿ ಗೌರವ ಸಲ್ಲಿಸಲಾಯಿತು.

    75ನೇ ವರ್ಷದ ಈ ಬಾರಿಯ ಸ್ವಾತಂತ್ರ್ಯೋತ್ಸವವನ್ನು ‘ಆಜಾದಿ ಕಾ ಅಮೃತ್ ಮಹೋತ್ಸವ’ ಎಂದು ಆಚರಿಸಲು ಕರೆ ನೀಡಲಾಗಿದೆ. ಭಾರತೀಯ ಸಶಸ್ತ್ರ ಪಡೆಗಳು ಮತ್ತು ಅರೆಸೇನಾ ಪಡೆಗಳು ದೇಶಾದ್ಯಂತ ‘ಅಜಾದಿ ಕಾ ಅಮೃತ್ ಮಹೋತ್ಸವ’ ಸರಣಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದು, ನವದೆಹಲಿಯ ಕೊಠಾರಿ ಕ್ರೀಡಾಂಗಣದಲ್ಲಿ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ಅವರು ಈ ಕಾರ್ಯಕ್ರಮಗಳಿಗೆ ಶುಕ್ರವಾರ ಚಾಲನೆ ನೀಡಿದರು.

    ಬಳಿಕ ಕಾರವಾರದ ಕದಂಬ ನೌಕಾನೆಲೆ ವ್ಯಾಪ್ತಿಯ ಕರ್ನಾಟಕ ನೌಕಾ ವಲಯದ ಫ್ಲ್ಯಾಗ್ ಆಫೀಸರ್ ಮಹೇಶ್ ಸಿಂಗ್ ಅಂಜುದೀವ್ ದ್ವೀಪದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅಂಜುದೀವ್ ದ್ವೀಪವು ಭಾರತೀಯ ನೌಕಾಪಡೆಗೆ ರಕ್ಷಣೆಯ ದೃಷ್ಟಿಯಲ್ಲಿ ಪ್ರಮುಖವಾಗಿದೆ ಎಂದು ಹೇಳಿದರು.