Tag: ಅಂಡರ್ 19 ಕ್ರಿಕೆಟ್

  • ಸಿಕ್ಸರ್, ಬೌಂಡರಿ ಅಬ್ಬರ – 1,101 ದಿನಗಳ ಬಳಿಕ ಶತಕ ಸಿಡಿಸಿದ ಹಿಟ್‌ಮ್ಯಾನ್

    ಸಿಕ್ಸರ್, ಬೌಂಡರಿ ಅಬ್ಬರ – 1,101 ದಿನಗಳ ಬಳಿಕ ಶತಕ ಸಿಡಿಸಿದ ಹಿಟ್‌ಮ್ಯಾನ್

    ಭೋಪಾಲ್: ಸಿಕ್ಸರ್, ಬೌಂಡರಿಗಳ ಸುರಿಮಳೆಯೊಂದಿಗೆ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma) 1,101 ದಿನಗಳ ಬಳಿಕ ಅಂದರೆ 3 ವರ್ಷಗಳ ಬಳಿಕ ಶತಕದ ಬರ ನೀಗಿಸಿಕೊಂಡಿದ್ದಾರೆ.

    ಇಂದೋರ್‌ನ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ (New Zealand) ವಿರುದ್ಧ ನಡೆಯುತ್ತಿರುವ ಏಕದಿನ ಸರಣಿಯ ಅಂತಿಮ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ರೋಹಿತ್ ಶರ್ಮಾ 85 ಎಸೆತಗಳಲ್ಲಿ 101 ರನ್ ಬಾರಿಸಿದ್ದಾರೆ. 6 ಸಿಕ್ಸರ್, 9 ಬೌಂಡರಿಗಳು ಇದರಲ್ಲಿ ಸೇರಿವೆ. ಇದನ್ನೂ ಓದಿ: ಪಂತ್ ಆದಷ್ಟು ಬೇಗ ಗುಣಮುಖರಾಗಲಿ – ಮಹಾಕಾಳೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದ ಸೂರ್ಯ, ಕುಲ್‌ದೀಪ್

    2020ರ ಜನವರಿ 19ರಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಕೊನೆಯ ಶತಕ ಸಿಡಿಸಿದ್ದರು. ಇಂದು 83 ಎಸೆತಗಳಲ್ಲಿ ಶತಕ ಸಿಡಿಸಿದ್ದು, ಇದು ಅವರ 2ನೇ ವೇಗದ ಶತಕವಾಗಿದೆ. ಇದನ್ನೂ ಓದಿ: T20I TEAM OF THE YEAR 2022: ಕೊಹ್ಲಿ, ಸೂರ್ಯ, ಪಾಂಡ್ಯಗೆ ಸ್ಥಾನ

    ಅಲ್ಲದೇ 1,101 ದಿನಗಳ ಬಳಿಕ 30ನೇ ಶತಕ ಸಿಡಿಸಿದ ಶರ್ಮಾ ಹೊಸ ದಾಖಲೆಯನ್ನೂ ಬರೆದಿದ್ದಾರೆ. ಆಸ್ಟ್ರೇಲಿಯಾ ಕೋಚ್ ಆಗಿರುವ ರಿಕ್ಕಿಪಾಟಿಂಗ್ ಏಕದಿನ ಕ್ರಿಕೆಟ್‌ನಲ್ಲಿ 30 ಶತಕ ಸಿಡಿಸಿ, ಅತಿಹೆಚ್ಚು ಶತಕ ಸಿಡಿಸಿದ ವಿಶ್ವದ 3ನೇ ಆಟಗಾರನಾಗಿದ್ದರು. ಇದೀಗ ರೋಹಿತ್ ಶರ್ಮಾ, ರಿಕ್ಕಿ ಪಾಟಿಂಗ್ ಅವರ ಶತಕ ಸಾಧನೆಯನ್ನ ಸರಿಗಟ್ಟಿದ್ದಾರೆ. ಆದರೆ ರಿಕ್ಕಿ ಪಾಂಟಿಂಗ್ 365  ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರೆ, ರೋಹಿತ್ ಶರ್ಮಾ 234 ಇನ್ನಿಂಗ್ಸ್‌ಗಳಲ್ಲೇ ಸಾಧನೆ ಮಾಡಿರುವುದು ವಿಶೇಷ.

    ನ್ಯೂಜಿಲೆಂಡ್ ವಿರುದ್ಧ ಟಾಸ್ ಸೋತು ಮೊದಲು ಕ್ರೀಸ್‌ಗಿಳಿದ ಟೀಂ ಇಂಡಿಯಾ ಉತ್ತಮ ಶುಭಾರಂಭ ಪಡೆಯಿತು. ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ (Shubman Gill) ಜೋಡಿ 212 ರನ್‌ಗಳ ಜೊತೆಯಾಟವಾಡಿತು.

    ಏಕದಿನ ಕ್ರಿಕೆಟ್‌ನ ಸೆಂಚುರಿ ಸ್ಟಾರ್ಸ್‌ 

    • ಸಚಿನ್ ತೆಂಡೂಲ್ಕರ್ – 79 ಶತಕ, 452 ಇನ್ನಿಂಗ್ಸ್
    • ವಿರಾಟ್ ಕೊಹ್ಲಿ – 46 ಶತಕ, 261 ಇನ್ನಿಂಗ್ಸ್
    • ರೋಹಿತ್ ಶರ್ಮಾ – 30 ಶತಕ, 234 ಇನ್ನಿಂಗ್ಸ್
    • ರಿಕ್ಕಿ ಪಾಂಟಿಂಗ್ – 30 ಶತಕ, 365 ಇನ್ನಿಂಗ್ಸ್
    • ಸನತ್ ಜಯಸೂರ್ಯ – 28 ಶತಕ, 433 ಇನ್ನಿಂಗ್ಸ್

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಅಂಡರ್ -19 ಕ್ರಿಕೆಟ್ ವಿಶ್ವಕಪ್‍ಗೆ ರಾಯಚೂರಿನ ಹುಡುಗ ಆಯ್ಕೆ

    ಅಂಡರ್ -19 ಕ್ರಿಕೆಟ್ ವಿಶ್ವಕಪ್‍ಗೆ ರಾಯಚೂರಿನ ಹುಡುಗ ಆಯ್ಕೆ

    ರಾಯಚೂರು: ಜನವರಿ 17ರಿಂದ ಫೆಬ್ರವರಿ 9ರವರೆಗೆ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಅಂಡರ್ 19 ಕಿರಿಯರ ಕ್ರಿಕೆಟ್ ವಿಶ್ವಕಪ್ ಪಂದ್ಯಾವಳಿಗೆ ರಾಯಚೂರಿನ ಕ್ರಿಕೆಟ್ ಆಟಗಾರ ಆಯ್ಕೆಯಾಗಿದ್ದಾರೆ.

    ರಾಯಚೂರು ತಾಲೂಕಿನ ಯರಮರಸ್ ಕ್ಯಾಂಪ್‍ನ ನಿವೃತ್ತ ಕೃಷಿ ಇಲಾಖೆ ಅಧಿಕಾರಿ ಸೋಮಶೇಖರ್ ಪಾಟೀಲ್ ಹಾಗೂ ಕವಿತಾ ದಂಪತಿಗಳ ಪುತ್ರ ವಿದ್ಯಾಧರ್ ಪಾಟೀಲ್ ವಿಶ್ವಕಪ್ ಗೆ ಆಯ್ಕೆಯಾಗುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

    10ನೇ ವಯಸ್ಸಿನಲ್ಲಿಯೇ ರಾಯಚೂರು ಸಿಟಿ ಇಲೆವೆನ್ಸ್ ಕ್ಲಬ್ ಮೂಲಕ ಕ್ರಿಕೆಟ್ ಆರಂಭಿಸಿದ ವಿದ್ಯಾಧರ್ ಬೆಂಗಳೂರಿನ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕ್ರಿಕೆಟ್ ಅಕಾಡೆಮಿಯಲ್ಲಿ ತರಬೇತಿ ಪಡೆದಿದ್ದಾರೆ. ಇದೇ ವರ್ಷ ಜುಲೈನಲ್ಲಿ ಇಂಗ್ಲೆಂಡ್‍ನಲ್ಲಿ ನಡೆದ ಕಿರಿಯರ ತ್ರಿಕೋನ ಸರಣಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿ ಮೆಚ್ಚುಗೆ ಗಳಿಸಿದ್ದರು.

    ಈಗ ಬಿಸಿಸಿಐನಿಂದ ಪ್ರಕಟವಾಗಿರುವ 15 ಜನ ಆಟಗಾರರ ತಂಡದಲ್ಲಿ ವಿದ್ಯಾಧರ್ ಪಾಟೀಲ್ ಆಯ್ಕೆಯಾಗಿದ್ದು, ವಿಶ್ವಕಪ್‍ಗೆ ಕರ್ನಾಟಕದಿಂದ ಮತ್ತೊಬ್ಬ ಆಟಗಾರ ಶುಭಾಂಗ್ ಹೆಗ್ಡೆ ಸಹ ಆಯ್ಕೆಯಾಗಿದ್ದಾರೆ. ಈ ಹಿಂದೆ ರಾಯಚೂರಿನ ಯರೇಗೌಡ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದು, ಬಿಟ್ಟರೆ ವಿದ್ಯಾಧರ್ ಪಾಟೀಲ್ ವಿಶ್ವ ಕ್ರಿಕೆಟ್‍ನಲ್ಲಿ ಭಾಗವಹಿಸುತ್ತಿರುವ ಜಿಲ್ಲೆಯ ಎರಡನೇ ಕ್ರಿಕೆಟ್ ಆಟಗಾರರಾಗಿದ್ದಾರೆ.

    ವಿದ್ಯಾಧರ್ ಪಾಟೀಲ್ ಅಂಡರ್ -19 ವಿಶ್ವಕಪ್‍ಗೆ ಆಯ್ಕೆಯಾಗಿರುವುದಕ್ಕೆ ಜಿಲ್ಲೆಯ ಕ್ರಿಕೆಟ್ ಅಸೋಸಿಯೇಷನ್, ಕ್ರಿಕೆಟ್ ಅಭಿಮಾನಿಗಳು ಹಾಗೂ ಇಡೀ ಜಿಲ್ಲೆಯ ಜನ ಸಂತಸ ವ್ಯಕ್ತಪಡಿಸಿದ್ದಾರೆ.

  • ಅಂಡರ್ 19 ಟೆಸ್ಟ್ – ದ್ವಿಶತಕ ಸಿಡಿಸಿ ದಾಖಲೆ ಬರೆದ ಪವನ್ ಶಾ

    ಅಂಡರ್ 19 ಟೆಸ್ಟ್ – ದ್ವಿಶತಕ ಸಿಡಿಸಿ ದಾಖಲೆ ಬರೆದ ಪವನ್ ಶಾ

    ಕೊಲಂಬೊ: ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೀಂ ಇಂಡಿಯಾ ಅಂಡರ್-19 ಟೆಸ್ಟ್ ಪಂದ್ಯದಲ್ಲಿ ಪವನ್ ಶಾ ಅಕರ್ಷಕ 282 ರನ್ ಸಿಡಿಸಿ ಭಾರತದ ಪರ ಅತ್ಯಧಿಕ ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ.

    ಶ್ರೀಲಂಕಾ ವಿರುದ್ಧ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಪವನ್ ಶಾ 282 ರನ್(332 ಎಸೆತ, 33 ಬೌಂಡರಿ, 1 ಸಿಕ್ಸರ್) ಸಿಡಿಸಿದ್ದಾರೆ. ಈ ಮೂಲಕ ವಿಶ್ವ ಕ್ರಿಕೆಟ್ ನ ಅಂಡರ್ 19 ಟೆಸ್ಟ್ ನಲ್ಲಿ ಅತಿ ಹೆಚ್ಚು ರನ್ ಸಿಡಿಸಿದ 2ನೇ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದರು. ಈ ಪಟ್ಟಿಯಲ್ಲಿ ಆಸೀಸ್ ಆಟಗಾರ ಸಿ ಪೀಕೆ ಮೊದಲ ಸ್ಥಾನದಲ್ಲಿ ಇದ್ದು, ಭಾರತದ ವಿರುದ್ಧವೇ ಪೀಕೆ ಅಜೇಯ 304 ರನ್ ಗಳಿಸಿದ್ದರು. ಇನ್ನು ಟೀಂ ಇಂಡಿಯಾ ಪರ ಗೌತಮ್ ಗಂಭೀರ್ (212), ಚೇತೇಶ್ವರ ಪೂಜಾರ ಮತ್ತು ಅಭಿನವ್ ಮುಕುಂದ್ (205ರನ್) ದ್ವಿಶತಕ ಸಿಡಿಸಿದ ಪ್ರಮುಖ ಆಟಗಾರರಾಗಿದ್ದಾರೆ.

    ಶ್ರೀಲಂಕಾ ವಿರುದ್ಧ ಟೆಸ್ಟ್ ಪಂದ್ಯದ ವೇಳೆ ಪವನ್ ಶಾ ಅವರಿಗೆ ಬ್ಯಾಟಿಂಗ್ ಕ್ರಮಾಂಕದಲ್ಲಿ ಬಡ್ತಿ ನೀಡಲಾಗಿತ್ತು. ಆರಂಭಿಕರಾಗಿ ಕಣಕ್ಕೆ ಇಳಿದ ಅಥರ್ವ 177ರನ್ (172 ಎಸೆತ, 20 ಬೌಂಡರಿ, 3 ಸಿಕ್ಸರ್) ಹೊಡೆದರು. ಇವರಿಬ್ಬರ ಅಮೋಘ ಆಟದ ನೆರವಿನಿಂದ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ ಎಂಟು ವಿಕೆಟ್ ನಷ್ಟಕ್ಕೆ ಬರೋಬ್ಬರಿ 613 ರನ್ ಗಳಿಸಿದೆ.

    ಅಂಡರ್ 19 ಟೆಸ್ಟ್ ದ್ವಿಶತಕ :
    ಪವನ್ ಶಾ – 282 ರನ್ (2018)
    ಶ್ರೀವಾಸ್ತವಾ – 220 ರನ್ (2007)
    ಗೌತಮ್ ಗಂಭೀರ್ – 212 ರನ್ (2001)
    ಚೇತೇಶ್ವರ ಪೂಜಾರ – 21 ರನ್ (2005)
    ಅಭಿನವ್ ಮುಕುಂದ್ – 205 ರನ್ (2007)
    ವಿನಾಯಕ್ ಮಾನೆ – 201 ರನ್ (2001)