Tag: ಅಂತರಾಷ್ಟ್ರೀಯ ಮಹಿಳಾ ದಿನ

  • ಮೊದಲ ಮಹಿಳಾ ಅಂಬುಲೆನ್ಸ್ ಚಾಲಕಿಯಾದ ಪಿ.ಜಿ ದೀಪಾಮೋಲ್

    ಮೊದಲ ಮಹಿಳಾ ಅಂಬುಲೆನ್ಸ್ ಚಾಲಕಿಯಾದ ಪಿ.ಜಿ ದೀಪಾಮೋಲ್

    ತಿರುವನಂತಪುರಂ: ಮಹಿಳೆಯರು ಎಲ್ಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದಾರೆ. ಇಂದು ಅಂತರಾಷ್ಟ್ರೀಯ ಮಹಿಳಾ ದಿನ. ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಅಂಬುಲೆನ್ಸ್ (Ambulance) ಚಾಲಕರಾಗಿ ವೃತ್ತಿಪ್ರಾರಂಭಿಸುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

    ಕೊಟ್ಟಾಯಂ ನಿವಾಸಿ ಪಿ.ಜಿ ದೀಪಾಮೋಲ್ ಅವರು ಕೇರಳದ ಮೊದಲ ಮಹಿಳಾ ಚಾಲಕರಾಗಿ ಸೇವೆಸಲ್ಲಿಸಲು ಸಿದ್ಧರಾಗಿದ್ದಾರೆ. 42 ವರ್ಷದ ದೀಪಾಮೋಲ್ ಅವರು ಆರೋಗ್ಯ ಇಲಾಖೆಯ ಅಂಬುಲೆನ್ಸ್ ಸೇವೆಯೊಂದಿಗೆ ಮೊದಲ ಮಹಿಳಾ ಚಾಲಕರಾಗಿ ಕರ್ತವ್ಯ ನಿರ್ವಹಿಸಲು ಸಜ್ಜಾಗಿದ್ದಾರೆ. ತಿರುವನಂತಪುರಂನಲ್ಲಿ ನಡೆದ ಸಮಾರಂಭದಲ್ಲಿ ಅವರು ಆರೋಗ್ಯ ಸಚಿವೆ ವೀಣಾ ಜಾರ್ಜ್ ಅವರಿಂದ ಅಂಬುಲೆನ್ಸ್‌ನ  ಕೀಗಳನ್ನು ಸ್ವೀಕರಿಸಿದ್ದಾರೆ.

    ಇದು ಕೇರಳದ ಮಹಿಳೆಯರಲ್ಲಿ ತಾವು ಯಾವುದೇ ಕೆಲಸ ಮಾಡಬಲ್ಲೆ ಎಂಬ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ದೀಪಾಮೋಳ್ ಅವರು ಅಂಬುಲೆನ್ಸ್ ಚಾಲಕರಾಗಲು ಇಚ್ಛೆ ವ್ಯಕ್ತಪಡಿಸಿದರು. ಈ ಆಲೋಚನೆಯನ್ನು ಸಿಪಿಐ(ಎಂ) ಸರ್ಕಾರವು, ಇದೀಗ ರಾಜ್ಯದ ಮೊದಲ ಮಹಿಳಾ ಅಂಬುಲೆನ್ಸ್ ಚಾಲಕರಾಗಿದ್ಧಾರೆ.

    ದೀಪಾಮೋಳ್ ಅವರು 2008ರಲ್ಲಿ ಡ್ರೈವಿಂಗ್ ಲೈಸೆನ್ಸ್ ಪಡೆದಿದ್ದು, ಟ್ಯಾಕ್ಸಿ ಓಡಿಸುವುದರ ಜೊತೆಗೆ ಟಿಪ್ಪರ್ ಲಾರಿ ಸೇರಿದಂತೆ ಭಾರೀ ವಾಹನಗಳನ್ನು ಓಡಿಸಲು 2009ರಲ್ಲಿ ಪರವಾನಗಿ ಪಡೆದಿದ್ದಾರೆ. ಚಿಕ್ಕ ಡ್ರೈವಿಂಗ್ ಸ್ಕೂಲ್ ಕೂಡ ನಡೆಸುತ್ತಿದ್ದಾರೆ. 2021 ರಲ್ಲಿ, ಅವರು 16 ದಿನಗಳಲ್ಲಿ ಕೊಟ್ಟಾಯಂನಿಂದ ಲಡಾಖ್‍ಗೆ ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡಿದರು. ಜೊತೆಗೆ ತ್ರಿಶೂರ್‍ನಲ್ಲಿ ನಡೆದ ಆಫ್-ರೋಡ್ ಡ್ರೈವಿಂಗ್ ಸ್ಪರ್ಧೆಯನ್ನು ಗೆದ್ದರು. ಅವರ ಪತಿ ಮೋಹನನ್ ಅನಾರೋಗ್ಯದಿಂದ ಬಳಲುತ್ತಿದ್ದಾಗ, ಅವರು ಡ್ರೈವಿಂಗ್‍ನ್ನು ವೃತ್ತಿಯಾಗಿ ತೆಗೆದುಕೊಳ್ಳುವ ಮೂಲಕ ಕುಟುಂಬವನ್ನು ಬೆಂಬಲಿಸಿದರು. ದೀಪಾಮೋಲ್ ಅವರು ಅಂಬುಲೆನ್ಸ್ ಓಡಿಸಲು ಅಗತ್ಯವಿರುವ ಎಲ್ಲಾ ಡ್ರೈವಿಂಗ್ ಪರೀಕ್ಷೆಗಳನ್ನು ಪೂರ್ಣಗೊಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರಿಗೆ 33% ಸರ್ಕಾರಿ ಉದ್ಯೋಗ, 200 ಕೋಟಿ ವೆಚ್ಚದಲ್ಲಿ ವಿಶ್ವವಿದ್ಯಾಲಯ ನಿರ್ಮಾಣ: ಅಮಿತ್ ಶಾ

    ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೆ ತಮ್ಮಲ್ಲಿರುವ ಕೌಶಲ್ಯವನ್ನು ಬಳಸಿಕೊಂಡು ಮುಂಚೂಣಿಗೆ ಬರಬೇಕು. ಆರ್ಥಿಕ ಸ್ವಾವಲಂಬನೆ ಪಡೆಯಲು ಯಾವುದೇ ಕೆಲಸವನ್ನು ಕೈಗೊಳ್ಳುವ ಇಚ್ಛಾಶಕ್ತಿ ನಮ್ಮಲ್ಲಿರಬೇಕು ಎಂದು ದೀಪಾಮೋಳ್ ಹೇಳಿದರು.

  • ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ಸರ್ಕಾರ, ಮಹಿಳೆಯರು ನಿಮ್ಮನ್ನು ಕ್ಷಮಿಸುವುದಿಲ್ಲ: ಡಿಕೆಶಿ

    ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ಸರ್ಕಾರ, ಮಹಿಳೆಯರು ನಿಮ್ಮನ್ನು ಕ್ಷಮಿಸುವುದಿಲ್ಲ: ಡಿಕೆಶಿ

    ಬೆಂಗಳೂರು: ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ಸರ್ಕಾರ. ನಿಮಗೆ ಹೆಣ್ಣು ಮಕ್ಕಳ ಬಗ್ಗೆ ಗೌರವವಿಲ್ಲ ಎಂಬುದಕ್ಕೆ ನಿಮ್ಮ ಬಜೆಟ್ ಸಾಕ್ಷಿ. ಮಹಿಳೆಯರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ಬಿಜೆಪಿ ವಿರುದ್ಧ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ.

    ಕೆಪಿಸಿಸಿಯಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಂತರಾಷ್ಟ್ರೀಯ ಮಹಿಳಾ ದಿನದಂದು ಎಲ್ಲ ಮಹಿಳೆಯರಿಗೆ ಶುಭಾಶಯ ಕೋರುತ್ತೇನೆ. ಜೊತೆಗೆ ಈ ದಿನ ನಿಮಗೆ ಹೊಸ ಆಲೋಚನೆಗಳು ಶುರುವಾಗಲಿ ಎಂದು ಇಚ್ಛಿಸುತ್ತೇನೆ. ಈ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ಸರ್ಕಾರ. ನಾವು ಹೆಣ್ಣು ಕುಟುಂಬದ ಕಣ್ಣು ಎಂದು ಬೇಕಾದಷ್ಟು ಕಾರ್ಯಕ್ರಮ ಆರಂಭಿಸಿದ್ದೆವು. ಇಡೀ ರಾಜ್ಯದಲ್ಲಿ ಕ್ರಾಂತಿಕಾರಿ ಬದಲಾವಣೆ ತಂದಿದ್ದೆವು. ಆದರೆ ಕಳೆದ ಚುನಾವಣೆಯಲ್ಲಿ ಬಿಜೆಪಿಯವರು ಮಹಿಳೆಯರ ಅಭಿವೃದ್ಧಿಗೆ 10 ಸಾವಿರ ಕೋಟಿ ಕೊಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದರು. ಮಹಿಳೆಯರಿಗೆ 2 ಲಕ್ಷದವರೆಗೂ ಸಾಲ, ಬಡ ಮಹಿಳೆಯರಿಗೆ ಸ್ಮಾರ್ಟ್ ಫೋನ್ ವಿತರಣೆ ಎಂಬ ಭರವಸೆಗಳನ್ನು ನೀಡಿದ್ದರು. 3 ಗ್ರಾಂ ತಾಳಿ, 25 ಸಾವಿರ ಹಣ ನೀಡುವುದಾಗಿ ಹೇಳಿದ್ದರು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ನನ್ನ ದಾರಿ ತಪ್ಪಿಸಲು ಈಶ್ವರಪ್ಪ ಜಗಳ ಮಾಡುಬೇಕು ಅಂತಾ ಬರ್ತಾರೆ: ಸಿದ್ದರಾಮಯ್ಯ ಹಾಸ್ಯ ಚಟಾಕಿ

    ಮುಖ್ಯಮಂತ್ರಿಗಳೇ ನಿಮ್ಮ ಬಜೆಟ್ ಬಂದಾಯ್ತು, ನೀವು ವಿಫಲವಾಗಿಯಾಯ್ತು. ನೀವು ಕ್ಷಮಾಪಣೆ ಕೇಳುವುದು ಬೇಡ. ನಿಮಗೆ ಹೆಣ್ಣು ಮಕ್ಕಳ ಬಗ್ಗೆ ಗೌರವವಿಲ್ಲ ಎಂಬುದಕ್ಕೆ ನಿಮ್ಮ ಬಜೆಟ್ ಸಾಕ್ಷಿ. ಬಿಜೆಪಿ ಸರ್ಕಾರ ಈಗಾಗಲೇ 3 ಬಜೆಟ್ ಮಂಡಿಸಿದ್ದು, ಈ ಬಜೆಟ್ ಚುನಾವಣೆ ಬಜೆಟ್ ಆಗಿದೆ. ಈ ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ಸರ್ಕಾರ. ಮಹಿಳೆಯರು ನಿಮ್ಮನ್ನು ಕ್ಷಮಿಸುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

    ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಹೊಸ ಹೆಜ್ಜೆ ಇಟ್ಟಿದ್ದು, ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ಅವರು ದೇಶದಲ್ಲೇ ದೊಡ್ಡ ಪರಿವರ್ತನಾ ಹೆಜ್ಜೆ ಇಟ್ಟಿದ್ದಾರೆ. ಅವರ ತಂದೆ ರಾಜೀವ್ ಗಾಂಧಿ ಅವರು ಮಹಿಳೆಯರಿಗೆ ಮೀಸಲಾತಿಯಂತಹ ಕ್ರಾಂತಿಕಾರಿ ಬದಲಾವಣೆಗೆ ಪ್ರಯತ್ನ ಮಾಡಿದ್ದರು. ನಾವು ನಮ್ಮ ಪ್ರಣಾಳಿಕೆಯಲ್ಲಿ ಶೇ.33 ರಷ್ಟು ಮೀಸಲಾತಿ ನೀಡುತ್ತೇವೆ ಎಂದು ಹೇಳಿದ್ದು, ರಾಜ್ಯಸಭೆಯಲ್ಲಿ ಪಾಸ್ ಆಗಿ ಲೋಕಸಭೆಯಲ್ಲಿ ಬಿಜೆಪಿ ಇನ್ನು ಕಾರ್ಯರೂಪಕ್ಕೆ ತಂದಿಲ್ಲ. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ

    ಮಹಿಳೆಯರಿಗೆ ಪುರುಷರಿಗೆ ಸಮಾನವಾಗಿ ಅವಕಾಶ ನೀಡಬೇಕು ಎಂದು ಧ್ವನಿ ಎತ್ತಿರುವ ಈ ಸಂದರ್ಭದಲ್ಲಿ ಪಕ್ಷ ಹಾಗೂ ರಾಜ್ಯದ ಪರವಾಗಿ ಪ್ರಿಯಾಂಕಾ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಂದು ನಮ್ಮ ಪಕ್ಷದ ವತಿಯಿಂದ ಪಕ್ಷದ ಕಾರ್ಯಕರ್ತರಲ್ಲದವರಿಗೆ ಒಂದು ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. ಇದರಲ್ಲಿ 3 ನಿಮಿಷ ವೀಡಿಯೋ ಹಾಕಿ, ಮಹಿಳೆ ಯಾವ ರೀತಿ ಹೋರಾಟ ಮಾಡಬಲ್ಲಳು ಎಂಬ ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದು ಮುಕ್ತ ಸ್ಪರ್ಧೆಯಾಗಿದ್ದು, ನಾನು ಕೂಡ ಈ ವಿಚಾರವಾಗಿ ವೀಡಿಯೋ ಮಾಡಿಸಿ, ಬೇರೆಯವರು ಮಾಡುವಂತೆ ಮನವಿ ಮಾಡುತ್ತೇನೆ. ಅತ್ಯುತ್ತಮ ವೀಡಿಯೋಗಳಿಗೆ ಬಹುಮಾನ ಘೋಷಣೆ ಬಗ್ಗೆಯೂ ಚಿಂತನೆ ನಡೆಸುತ್ತೇನೆ.

    ಮುಂದಿನ ದಿನಗಳಲ್ಲಿ ನಮಗೆ ಒಂದು ಅವಕಾಶ ಮಾಡಿಕೊಡಿ ಎಂದು ರಾಜ್ಯದ ಎಲ್ಲ ತಾಯಂದಿರು, ಸೋದರಿಯರಿಗೆ ಮನವಿ ಮಾಡುತ್ತೇನೆ. ನಿಮ್ಮ ವಿಚಾರಗಳನ್ನು ನಮಗೆ ಕೊಡಿ, ನಾವು ಅವುಗಳನ್ನು ಪ್ರಣಾಳಿಕೆಯಲ್ಲಿ ಸೇರಿಸಿಕೊಂಡು ಜನರ ಮುಂದೆ ಹೋಗಲು ಇಚ್ಛಿಸುತ್ತೇವೆ. ನಾವು “ನಾ ನಾಯಕಿ” ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಆದಷ್ಟು ಬೇಗ ನಾವು ಈ ಕಾರ್ಯಕ್ರಮ ಉದ್ಘಾಟನೆ ಮಾಡುತ್ತೇವೆ. ಸದಸ್ಯತ್ವ ಅಭಿಯಾನದ ನಂತರ ನಾವು ಇದನ್ನು ಮಾಡುತ್ತೇವೆ ಎಂದರು. ಇದನ್ನೂ ಓದಿ: ಕೈಗಾರಿಕೆಗಳಲ್ಲಿ 80% ಉದ್ಯೋಗ ಕನ್ನಡಿಗರಿಗೆ ಕಡ್ಡಾಯವಾಗಿ ನೀಡಬೇಕು: ಮುರುಗೇಶ್ ನಿರಾಣಿ