Tag: ಅಂತರಾಷ್ಟ್ರೀಯ ವಿಮಾನ ನಿಲ್ದಾಣ

  • ಇಂಡಿಗೊ ವಿಮಾನದಲ್ಲಿ ಸಿಗರೇಟ್ ಸೇದಿ ಆತಂಕ ತಂದೊಡ್ಡಿದ ಯುವತಿ

    ಇಂಡಿಗೊ ವಿಮಾನದಲ್ಲಿ ಸಿಗರೇಟ್ ಸೇದಿ ಆತಂಕ ತಂದೊಡ್ಡಿದ ಯುವತಿ

    ಬೆಂಗಳೂರು: ಕೋಲ್ಕತ್ತಾದಿಂದ (Kolkata) ಬೆಂಗಳೂರಿಗೆ ಬರುತ್ತಿದ್ದ ಇಂಡಿಗೊ (IndiGo) ವಿಮಾನದಲ್ಲಿ ಯುವತಿಯೊಬ್ಬಳು ಸಿಗರೇಟ್ (Cigarette) ಸೇದಿ ಆತಂಕ ಮೂಡಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಮಾ. 5ರಂದು 6ಇ716 ವಿಮಾನ ರಾತ್ರಿ 9.50ಕ್ಕೆ ಕೋಲ್ಕತ್ತಾದಿಂದ ಹೊರಟು ಬೆಂಗಳೂರಿನಲ್ಲಿ (Bengaluru) ಲ್ಯಾಂಡ್ ಆಗಲು ಅರ್ಧ ಗಂಟೆ ಬಾಕಿ ಇತ್ತು. ಆಗ ಪಶ್ಚಿಮ ಬಂಗಾಳದ ಯುವತಿ ಪ್ರಿಯಾಂಕ ಚಕ್ರವರ್ತಿ (24) ವಿಮಾನದ ಶೌಚಾಲಯದಲ್ಲಿ ಸಿಗರೇಟ್ ಹಚ್ಚಿದ್ದಾಳೆ. ತಕ್ಷಣವೇ ಎಚ್ಚೆತ್ತ ಸಿಬ್ಬಂದಿ ಶೌಚಾಲಯದ ಬಾಗಿಲು ತೆಗಿಸಿದ್ದಾರೆ. ಸಿಗರೇಟನ್ನು ಡಸ್ಟ್‌ಬಿನ್‌ಗೆ ಹಾಕಿ ನೀರು ಸುರಿದಿದ್ದಾರೆ. ಇದನ್ನೂ ಓದಿ: ಸಿಂಗಾಪುರದಲ್ಲಿ ಮಹಿಳೆಯರಿಗೆ ಕಿರುಕುಳ ಆರೋಪ- ಭಾರತ ಮೂಲದ ಯೋಗಾ ಶಿಕ್ಷಕನ ವಿಚಾರಣೆ

    ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಪ್ರಿಯಾಂಕರನ್ನು ಭದ್ರತಾ ವಿಭಾಗಕ್ಕೆ ಒಪ್ಪಿಸಲಾಗಿದೆ. ಪ್ರಯಾಣಿಕರ ಜೀವ ಮತ್ತು ವಯಕ್ತಿಕ ಸುರಕ್ಷತೆಗೆ ಅಪಾಯ ಉಂಟು ಮಾಡಿದ ಆರೋಪದಡಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (International Airport) ಪೊಲೀಸರು ಪ್ರಿಯಾಂಕ ಅವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಮೀಸಲು ಅರಣ್ಯದಲ್ಲಿ 60ಕ್ಕೂ ಹೆಚ್ಚು ಫೈರಿಂಗ್ ಕಾಟ್ರೇಜ್ ಪತ್ತೆ, ತನಿಖೆಗೆ ಇಳಿದ ಅರಣ್ಯ ಇಲಾಖೆ

  • ಮತ್ತೊಂದು ಐತಿಹಾಸಿಕ ಯೋಜನೆಗೆ ಪ್ರಧಾನಿ ಮೋದಿ ಅಡಿಗಲ್ಲು

    ಮತ್ತೊಂದು ಐತಿಹಾಸಿಕ ಯೋಜನೆಗೆ ಪ್ರಧಾನಿ ಮೋದಿ ಅಡಿಗಲ್ಲು

    ನವದೆಹಲಿ: ಸದಾ ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ಐತಿಹಾಸಿಕ ಯೋಜನೆಗೆ ಅಡಿಗಲ್ಲು ಹಾಕಲಿದ್ದಾರೆ. ನವೆಂಬರ್ 25 ರಂದು ನೊಯ್ಡಾದ ಬಳಿ ಇರುವ ಜೇವಾರ್‌ನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಯೋಜನಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ.

    ದೆಹಲಿಯ ಹೊರ ವಲಯ ನೊಯ್ಡಾದಲ್ಲಿ ನಿರ್ಮಾಣವಾಗುತ್ತಿರುವ ಈ ಅಂತರಾಷ್ಟ್ರೀಯ ವಿಮಾನ ದೇಶದಲ್ಲಿ ಅತಿದೊಡ್ಡ ವಿಮಾನ ನಿಲ್ದಾಣವಾಗಲಿದ್ದು ಅತ್ಯಾಧುನಿಕ ತಂತ್ರಜ್ಞಾನ ಬಳಕೆ ಮಾಡಿಕೊಂಡು ನಿರ್ಮಿಸಲಾಗುತ್ತಿದೆ. ಮುಂಬರುವ ಉತ್ತರ ಪ್ರದೇಶ ಚುನಾವಣೆ ಮತ್ತು ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ಯೋಜನೆಗೆ ಈಗ ಚಾಲನೆ ನೀಡಲಾಗಿತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದನ್ನೂ ಓದಿ: ಸ್ವಾಮೀಜಿಗಳಿಗೆ ಮಣಿದು ರಾಮಾಯಣ ಎಕ್ಸ್‌ಪ್ರೆಸ್‌ನಲ್ಲಿ ಸಿಬ್ಬಂದಿ ಸಮವಸ್ತ್ರ ಬದಲು

    ಮಾಹಿಗಳ ಪ್ರಕಾರ, ಏಳು ಕೋಟಿ ಪ್ರಯಾಣಿಕರ ಸಾಮರ್ಥ್ಯ ಈ ಬೃಹತ್ ವಿಮಾನ ನಿಲ್ದಾಣ ಹೊಂದಿರಲಿದ್ದು, ಏಕಕಾಲದಲ್ಲಿ 186 ವಿಮಾನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ 10 ಲಕ್ಷ ಟನ್ ಕಾರ್ಗೋ ಟರ್ಮಿನಲ್ ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ದೆಹಲಿಯಿಂದ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ, ವಾರಣಾಸಿಯಿಂದ ಹೈಸ್ಪೀಡ್ ರೈಲಿನ ವ್ಯವಸ್ಥೆ ಮಾಡಲಾಗಿದೆ. ಇದು 10,000 ಕೋಟಿ ವೆಚ್ಚದ ಕಾಮಗಾರಿಯಾಗಿದ್ದು 2024 ರ ವೇಳೆಗೆ ಜನರ ಬಳಕೆಗೆ ಮುಕ್ತಗೊಳಿಸಲಾಗಿದೆ.

    ವಿಮಾನ ನಿಲ್ದಾಣದಲ್ಲಿ ಹೈಟೆಕ್ ಹೋಟೆಲ್, ವಿವಿಐಪಿ ಟರ್ಮಿನಲ್, ತೆರೆದ ಪ್ರವೇಶ ಇಂಧನ ಫಾರ್ಮ್, ವಿಮಾನ ನಿಲ್ದಾಣದ ಪಾರುಗಾಣಿಕಾ ಮತ್ತು ಅಗ್ನಿಶಾಮಕ ಕಟ್ಟಡ ಮತ್ತು ದೊಡ್ಡ ಮಳೆ ಕೊಯ್ಲು ಕೊಳವನ್ನು ಸಹ ಯೋಜಿಸಲಾಗಿದೆ. ಅಲ್ಲದೇ ಏರ್ ಪೋರ್ಟ್ ಕಾಂಪ್ಲೆಕ್ಸ್‍ನಲ್ಲಿ 167 ಎಕರೆ ಪ್ರದೇಶವನ್ನು ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಇದನ್ನೂ ಓದಿ: 100 ರೂ. ನೋಟ್ ಒಳಗೆ ವೈಟ್ ಪೇಪರ್ ಇಟ್ಟು ವಂಚನೆ- ಐವರು ಅರೆಸ್ಟ್

    ನೋಯ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಯಮುನಾ ಇಂಟರ್‌ನ್ಯಾಷನಲ್‌ ಏರ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ (YIAPL) ಅಭಿವೃದ್ಧಿಪಡಿಸುತ್ತಿದೆ, ಇದು ಜ್ಯೂರಿಚ್ ಏರ್ ಪೋರ್ಟ್ ಇಂಟರ್‌ನ್ಯಾಷನಲ್‍ನ ಅಂಗಸಂಸ್ಥೆಯಾಗಿದೆ. ಉತ್ತರ ಪ್ರದೇಶ ಸರ್ಕಾರವು ಅಕ್ಟೋಬರ್ 7, 2020 ರಂದು YIAPL ನೊಂದಿಗೆ ರಿಯಾಯಿತಿ ಒಪ್ಪಂದಕ್ಕೆ ಸಹಿ ಹಾಕಿದೆ.

  • ಕೊರೊನಾ ಸೋಂಕು ಶಂಕೆ- ದುಬೈನಿಂದ ಮಂಗ್ಳೂರಿಗೆ ಬಂದಿದ್ದಾತ ವೆನ್ಲಾಕ್ ಆಸ್ಪತ್ರೆಗೆ ದಾಖಲು

    ಕೊರೊನಾ ಸೋಂಕು ಶಂಕೆ- ದುಬೈನಿಂದ ಮಂಗ್ಳೂರಿಗೆ ಬಂದಿದ್ದಾತ ವೆನ್ಲಾಕ್ ಆಸ್ಪತ್ರೆಗೆ ದಾಖಲು

    ಮಂಗಳೂರು: ನಗರದ ಅಂತರಾಷ್ಟ್ರೀಯ ಏರ್ ಪೋರ್ಟಿನಲ್ಲಿ ಶಂಕಿತ ಕೊರೊನಾ ಪ್ರಯಾಣಿಕನೊಬ್ಬ ಪತ್ತೆಯಾಗಿದ್ದಾನೆ. ಪ್ರಯಾಣಿಕ ಭಾನುವಾರ ತಡ ರಾತ್ರಿ ದುಬೈನಿಂದ ಮಂಗಳೂರಿಗೆ ಆಗಮಿಸಿದ್ದಾನೆ. ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದಾಗ ಸ್ಕ್ರೀನಿಂಗ್ ವೇಳೆ ಟೆಂಪರೇಚರ್ ನಲ್ಲಿ ಬಯಲಾಗಿದೆ.

    ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ವೇಳೆ ಆರೋಗ್ಯಾಧಿಕಾರಿಗಳು ಸ್ಯಾಂಪಲ್ ತೆಗೆದು ಲ್ಯಾಬ್‍ಗೆ ರವಾನಿಸಿದ್ದು, ಕೊರೊನಾ ಇರೋ ಶಂಕೆ ವ್ಯಕ್ತವಾಗಿದೆ. ಸದ್ಯ ಪ್ರಯಾಣಿಕನನ್ನು ಐಸೋಲೇಶನ್ ವಾರ್ಡ್‍ಗೆ ಸಿಬ್ಬಂದಿ ರವಾನಿಸಿದ್ದಾರೆ.

    ಚೀನಾದಲ್ಲಿ ಮರಣ ಮೃದಂಗ ಬಾರಿಸಿದ್ದ ಕೊರೊನಾ ವೈರಸ್ ಇದೀಗ ಭಾರತದಲ್ಲಿ ಮರಣ ಮೃದಂಗ ಆರಂಭಿಸಿತೇ ಎನ್ನುವ ಆತಂಕ ಜನರಲ್ಲಿ ಶುರುವಾಗಿದೆ. ಕೊರೊನಾ ಜ್ವರದ ಹಿನ್ನೆಲೆಯಲ್ಲಿ ಭಾರತದಲ್ಲಿ ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪಶ್ಚಿಮ ಬಂಗಾಳದಲ್ಲಿ ಮತ್ತು ಲಡಾಕ್‍ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಗುತ್ತಿದೆ. ಕೊರೊನಾ ಜ್ವರ ಶಂಕೆ ಹಿನ್ನೆಲೆಯಲ್ಲಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿತ್ತು.

    ದುಬೈನಿಂದ ಮರಳಿದ್ದ ಪಶ್ಚಿಮ ಬಂಗಾಳದ ವ್ಯಕ್ತಿ ಸಾವನ್ನಪ್ಪಿರುವುದು. ಮುರ್ಷಿದಾಬಾದ್ ಜಿಲ್ಲೆಯ ಆ ವ್ಯಕ್ತಿಗೆ ಡಯಾಬಿಟಿಸ್ ಕೂಡ ಇತ್ತು. ಇರಾನ್‍ನಿಂದ ಮರಳಿದ್ದ ಲಡಾಕ್ ವ್ಯಕ್ತಿಗೂ ಕೊರೊನಾ ಚಿಕಿತ್ಸೆ ನೀಡಲಾಗುತ್ತಿತ್ತು. ಪ್ರತ್ಯೇಕ ವಾರ್ಡ್‍ನಲ್ಲಿ ಇರಿಸಿ ಇಬ್ಬರಿಗೂ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಇಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಇದು ಭಾರತದಲ್ಲಿ ಮೊದಲ ಕೊರೊನಾ ಶಂಕಿತರ ಸಾವಿನ ಪ್ರಕರಣ ಎನ್ನಲಾಗಿದೆ. ಇದುವರೆಗೂ ಜಗತ್ತಿನಾದ್ಯಂತ ಕೊರೊನಾ ಸಾವಿನ ಸಂಖ್ಯೆ 3,556ಕ್ಕೆ ಏರಿಕೆ ಆಗಿದೆ.

  • ದೇಶದ ಸ್ವಚ್ಛ ವಿಮಾನ ನಿಲ್ದಾಣ –  ಮಂಗಳೂರಿಗೆ ಪ್ರಶಸ್ತಿ

    ದೇಶದ ಸ್ವಚ್ಛ ವಿಮಾನ ನಿಲ್ದಾಣ – ಮಂಗಳೂರಿಗೆ ಪ್ರಶಸ್ತಿ

    ಮಂಗಳೂರು: ಭಾರತ ವಿಮಾನ ನಿಲ್ದಾಣಗಳ ಪ್ರಾಧಿಕಾರ (ಎಎಐ) ನೀಡುವ ದೇಶದ ಸ್ವಚ್ಛ ವಿಮಾನ ನಿಲ್ದಾಣ ಪ್ರಶಸ್ತಿಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪಾತ್ರವಾಗಿದೆ.

    ನವದೆಹಲಿಯಲ್ಲಿ ನಡೆದ 23ನೇ ವಾರ್ಷಿಕ ಸಮಾರಂಭದಲ್ಲಿ ಮಂಗಳೂರು ವಿಮಾನ ನಿಲ್ದಾಣದ ನಿರ್ದೇಶಕ ವಿವಿ ರಾವ್ ಪ್ರಶಸ್ತಿಯನ್ನು ಸ್ವೀಕರಿಸಿದರು. ದೇಶದ 53 ವಿಮಾನ ನಿಲ್ದಾಣಗಳಲ್ಲಿ ಸಮೀಕ್ಷೆ ನಡೆಸಿ ಎಎಐ ಮಂಗಳೂರು ವಿಮಾನ ನಿಲ್ದಾಣವನ್ನು ದೇಶದ ಅತ್ಯಂತ ಸ್ವಚ್ಛ ನಿಲ್ದಾಣ ಎಂದು ತೀರ್ಮಾನಿಸಿ ಪ್ರಶಸ್ತಿ ನೀಡಿದೆ.

     

    ಮಂಗಳೂರು ವಿಮಾನ ನಿಲ್ದಾಣ ಶುಚಿತ್ವದ ಜವಾಬ್ದಾರಿಯನ್ನು ದುರ್ಗಾ ಫೆಸಿಲಿಟಿ ಮ್ಯಾನೇಜ್ಮೆಂಟ್ ಪ್ರೈವೇಟ್ ಲಿಮಿಟೆಡ್ ಸೇವಾ ಸಂಸ್ಥೆಗೆ ವಹಿಸಲಾಗಿದೆ.

    ದೇಶದ್ಯಾಂತ ಸಮೀಕ್ಷೆ ನಡೆಸಿದ ಎಎಐ ಮಂಡಳಿಯ ಅಧಿಕಾರಿಗಳು ವಿಮಾನ ನಿಲ್ದಾಣದ ಟರ್ಮಿನಲ್, ಪಾರ್ಕಿಂಗ್ ಪ್ರದೇಶ, ಶೌಚಾಲಯ, ವಾಣಿಜ್ಯ ಮಳಿಗೆಗಳು ಹಾಗೂ ನಿಲ್ದಾಣದ ರಸ್ತೆ ಸೇರಿದಂತೆ ಪ್ರಯಾಣಿಕರ ಕೊಠಡಿಗಳ ಸ್ವಚ್ಛತೆಯ ಬಗ್ಗೆ ಸಮೀಕ್ಷೆ ನಡೆಸಿದ್ದರು.

  • ಮಂಗಳೂರು: ವಿಮಾನದ ಟಾಯ್ಲೆಟ್‍ನಲ್ಲಿ ಸಿಕ್ತು 4 ಕೆಜಿ ಚಿನ್ನ!

    ಮಂಗಳೂರು: ವಿಮಾನದ ಟಾಯ್ಲೆಟ್‍ನಲ್ಲಿ ಸಿಕ್ತು 4 ಕೆಜಿ ಚಿನ್ನ!

    ಮಂಗಳೂರು: ಇಲ್ಲಿನ ಅಂತರಾಷ್ಟ್ರೀಯ ವಿಮಾನದಲ್ಲಿ ಆಕ್ರಮವಾಗಿ ಸಾಗಣೆ ಮಾಡುತ್ತಿದ್ದ ಸುಮಾರು ನಾಲ್ಕು ಕೆಜಿ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

    ದುಬೈ ನಿಂದ ಮಂಗಳೂರಿಗೆ ಆಗಮಿಸಿದ ಜೆಟ್ ವಿಮಾನದ ಟಾಯ್ಲೆಟ್ ನಲ್ಲಿ ಅಕ್ರಮ ಚಿನ್ನವನ್ನು ಸಾಗಣೆ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ.

    ವಿಮಾನದ ಟಾಯ್ಲೆಟ್ ನಲ್ಲಿ ತಲಾ ಒಂದು ಕೆಜಿ ತೂಕದ 4 ಚಿನ್ನದ ಬಿಸ್ಕತ್ತು ಅಡಗಿಸಿ ಇಡಲಾಗಿತ್ತು. ಇವು ಸುಮಾರು 1.20ಕೋಟಿ ಮೌಲ್ಯವನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ. ಚಿನ್ನವನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

  • ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದವರ ಬಂಧನ

    ಕಸಾಯಿಖಾನೆಗೆ ಗೋವುಗಳನ್ನು ಸಾಗಿಸುತ್ತಿದ್ದವರ ಬಂಧನ

    ಬೆಂಗಳೂರು: ಗೋವುಗಳನ್ನು ಕಸಾಯಿಖಾನೆಗೆ ಸಾಗಿಸುತ್ತಿದ್ದ ಮೂವರನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

    ಸನಾ(28), ನಯಾಜ್(30), ಇಬ್ರಾಹಿಂ(32) ಬಂಧಿತ ಆರೋಪಿಗಳು. ಇವರನ್ನು ಏರ್‍ಪೋರ್ಟ್ ರಸ್ತೆಯ ನವಯುಗ ಟೋಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಆರೋಪಿಗಳು ಬಳ್ಳಾರಿಯಿಂದ ಶಿವಾಜಿನಗರಕ್ಕೆ ಗೋವುಗಳನ್ನು ಸಾಗಿಸುತ್ತಿದ್ದರು ಎನ್ನಲಾಗಿದೆ. ತಡ ರಾತ್ರಿಯಲ್ಲಿ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ 18 ಗೋವುಗಳನ್ನು ರಕ್ಷಿಸಿ ದೇವನಹಳ್ಳಿಯ ವಿಜಯಪುರ ಗೋಶಾಲೆಗೆ ರವಾನೆ ಮಾಡಲಾಗಿದೆ.

    ಘಟಬೆ ಸಂಬಂಧ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಬೆಂಗಳೂರಿನ ಮಹಿಳಾ ಪೊಲೀಸ್ ಪೇದೆ ಮೇಲೆ ಕಸ್ಟಮ್ಸ್ ಇನ್ಸ್ ಪೆಕ್ಟರ್‍ನಿಂದ ರೇಪ್!

    ಬೆಂಗಳೂರಿನ ಮಹಿಳಾ ಪೊಲೀಸ್ ಪೇದೆ ಮೇಲೆ ಕಸ್ಟಮ್ಸ್ ಇನ್ಸ್ ಪೆಕ್ಟರ್‍ನಿಂದ ರೇಪ್!

    – ವಿಮಾನ ನಿಲ್ದಾಣದ ಕಸ್ಟಮ್ಸ್ ಇನ್ಸ್ ಪೆಕ್ಟರ್‍ನಿಂದ ಅತ್ಯಾಚಾರ

    ಬೆಂಗಳೂರು: ನಗದರಲ್ಲಿ ಅತ್ಯಾಚಾರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‍ಎಫ್) ಮಹಿಳಾ ಪೊಲೀಸ್ ಪೇದೆ ಮೇಲೆ ವಿಮಾನ ನಿಲ್ದಾಣದ ಕಸ್ಟಮ್ಸ್ ಇನ್ಸ್ ಪೆಕ್ಟರ್‍ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.

    ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಇನ್ಸ್ ಪೆಕ್ಟರ್ ಹೇಮರಾಜ್ ಗುರ್ಜರ್ ತನ್ನ ಮೇಲೆ ಅತ್ಯಾಚಾರವೆಸಗಿರೋದಾಗಿ 29 ವರ್ಷದ ಮಹಿಳಾ ಸಿಐಎಸ್‍ಎಫ್ ಪೇದೆ ಆರೋಪಿಸಿದ್ದಾರೆ.

    ಏನಿದು ಆರೋಪ: ಮದುವೆಯಾಗೋದಾಗಿ ನಂಬಿಸಿ, ಪೋಷಕರನ್ನು ಭೇಟಿ ಮಾಡಿಸುವುದಾಗಿ ಹೇಳಿ ಯಲಹಂಕ ಉಪನಗರದ ನಿವಾಸಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ನಂತರ ಮದುವೆಯಾಗೋಕೆ ಹೇಮರಾಜ್ ನಿರಾಕರಿಸಿದ್ದು, ಮದುವೆಯಾಗುವಂತೆ ಮಹಿಳಾ ಪೊಲೀಸ್ ಪೇದೆ ಒತ್ತಾಯಿಸಿದ್ದಾರೆ. ಈ ವೇಳೆ ಆತ ತನಗೆ ಮೊದಲೆ ಮದುವೆಯಾಗಿರುವ ಬಗ್ಗೆ ಬಾಯಿಬಿಟ್ಟಿದ್ದಾನೆ. 2013 ರಲ್ಲೇ ಮದುವೆಯಾಗಿ ಎರಡು ಮಕ್ಕಳಿದ್ದು, ಹೆಂಡತಿ ಮಕ್ಕಳು ರಾಜಸ್ಥಾನದಲ್ಲಿ ವಾಸವಿರೋದಾಗಿ ಹೇಳಿದ್ದಾನೆ.

    ಹೇಮರಾಜ್ ವಿರುದ್ಧ ದೂರು ನೀಡೋದಾಗಿ ಮಹಿಳಾ ಪೇದೆ ಹೇಳಿದಾಗ, ರಾಜಸ್ಥಾನದಿಂದ ಬಂದ ಹೇಮರಾಜ್ ತಂದೆ ಸೃಜನ್ ಸಿಂಗ್ ಹಾಗೂ ಸಹೋದರ ನಿಹಾಲ ಸಿಂಗ್ ಮದುವೆಗೆ ನಿರಾಕರಿಸಿ ಮಹಿಳೆಗೆ ಬೆದರಿಕೆ ಹಾಕಿದ್ದಾರೆ. ಇದರಿಂದ ನೊಂದ ಮಹಿಳಾ ಪೊಲೀಸ್ ಪೇದೆ ಮಾರ್ಚ್ 5 ರಂದು ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಆದರೆ ದೂರು ದಾಖಲಾಗಿ 9 ದಿನಗಳಾದ್ರೂ ಬಾಗಲೂರು ಪೊಲೀಸರು ಆರೋಪಿಯನ್ನ ಬಂಧಿಸಿಲ್ಲ. ಕನಿಷ್ಟ ಪಕ್ಷ ಪೊಲೀಸರು ಆತನನ್ನು ಕರೆದು ವಿಚಾರಣೆ ಕೂಡ ನಡೆಸಿಲ್ಲ. ಪೊಲೀಸರ ನಡೆ ಸಾಕಷ್ಟು ಅನುಮಾನಕ್ಕೆ ಎಡೆಮಾಡಿಕೊಟ್ಟದೆ ಅಂತಾ ಮಹಿಳಾ ಪೊಲೀಸ್ ಪೇದೆ ಅಳಲು ತೋಡಿಕೊಂಡಿದ್ದಾರೆ.