ಶಿವಮೊಗ್ಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ವಿಶ್ವದ ಅತಿದೊಡ್ಡ ಮಾನವ ಸರಪಳಿ ನಿರ್ಮಾಣದಲ್ಲಿ ನವಜೋಡಿಯೊಂದು ಪಾಲ್ಗೊಂಡು ಗಮನ ಸೆಳೆಯಿತು.
ರಾಜ್ಯದಾದ್ಯಂತ ಸುಮಾರು 2,500 ಕಿ.ಮೀ ಉದ್ಧದ ಮಾನವ ಸರಪಳಿ ನಿರ್ಮಿಸಲಾಗಿತ್ತು. ಶಿವಮೊಗ್ಗ (Shivamogga) ಜಿಲ್ಲೆ ಭದ್ರಾವತಿ ತಾಲೂಕಿನ ಕಾರೇಹಳ್ಳಿಯಿಂದ ಶಿವಮೊಗ್ಗ ತಾಲೂಕಿನ ಮಡಕೆ ಚೀಲೂರು ವರೆಗೆ, ಸುಮಾರು 60 ಕಿಮೀ ವರೆಗೆ ಮಾನವ ಸರಪಳಿ ನಿರ್ಮಿಸಲಾಗಿತ್ತು.
ಶಿವಮೊಗ್ಗ ಜಿಲ್ಲಾಡಳಿತದಿಂದ ಕೈಗೊಂಡಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ನವಜೋಡಿಯೊಂದು ಪಾಲ್ಗೊಂಡಿತ್ತು. ವಿವಾಹದ ನಂತರ ಮಾನವ ಸರಪಳಿಯಲ್ಲಿ ಕೈ ಕೈ ಹಿಡಿದು ವಧು-ವರ ಭಾಗವಹಿಸಿದ್ದರು. ಮದುವೆ ಮಂಟಪದಿಂದ ಸೀದಾ ಬಂದು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಜೋಡಿ ಭಾಗವಹಿಸಿತು.
ಮಾನವ ಸರಪಳಿಯಲ್ಲಿ ಸರ್ಕಾರಿ ಶಾಲೆ, ಖಾಸಗಿ ಶಾಲೆ ಮಕ್ಕಳು ಮತ್ತು ಸರ್ಕಾರಿ ನೌಕರರು ಭಾಗಿಯಾಗಿದ್ದರು. ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು.
ಕಾರ್ಯಕ್ರಮಕ್ಕೂ ಮುನ್ನ ಮಹಾನಗರ ಪಾಲಿಕೆ ಆಚರಣದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ಜೊತೆಗೆ ಸಸಿ ನೆಡುವ ಕಾರ್ಯಕ್ರಮವೂ ನಡೆಯಿತು. ಈ ವೇಳೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಎಸ್‌ಪಿ ಮಿಥುನ್ ಕುಮಾರ್ ಸಾಥ್ ನೀಡಿದರು.
ಚಾಮರಾಜನಗರ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ (International Democracy Day) ಅಂಗವಾಗಿ ಹಮ್ಮಿಕೊಂಡಿರುವ ಬೀದರ್‌ನಿಂದ (Bidar) ಚಾಮರಾಜನಗರದವರೆಗೆ (Chamarajnagar) ರಾಜ್ಯದ ಅತಿ ಉದ್ದದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಧ್ವಜವನ್ನು ಹಿಡಿದು ಏಕತೆಯ ಸಂಸ್ಕೃತಿಯನ್ನು ಪ್ರತಿಬಿಂಬಿಸಿದ್ದಾರೆ.
ಚಾಮರಾಜನಗರ ಮತ್ತು ಮೈಸೂರು (Mysuru) ಗಡಿ ಭಾಗವಾದ ಮೂಗೂರು ಕ್ರಾಸ್‌ನಲ್ಲಿ ಆರಂಭಗೊಂಡ ಮಾನವ ಸರಪಳಿ ಚಾಮರಾಜನಗರದ ರಾಮಸಮುದ್ರದ ಅಂಬೇಡ್ಕರ್ ಪ್ರತಿಮೆ ಬಳಿ ಕೊನೆಗೊಂಡಿತು. ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಮಾನವ ಸರಪಳಿ ಹಾದು ಹೋಗಿದ್ದ ಮಾರ್ಗದಲ್ಲಿ ಭಾರತದ ಒಂದೊಂದು ರಾಜ್ಯದ ಸಾಂಸ್ಕೃತಿಕ ಧಿರಿಸು ಧರಿಸಿ ವಿವಿಧೆತೆಯಲ್ಲಿ ಏಕತೆಯನ್ನು ಮೆರೆದಿದ್ದಾರೆ.ಇದನ್ನೂ ಓದಿ: ನಮ್ಮ ಸರ್ಕಾರ ಸಮಾನತೆ ಸಾಧಿಸುವ ದಾರಿಯಲ್ಲಿ ಸಾಗುತ್ತಿದೆ: ಸಿಎಂ
ಮಾನವ ಸರಪಳಿಯ ಪ್ರಮುಖ ವೃತ್ತಗಳಲ್ಲಿ ಜಾನಪದ ನೃತ್ಯ ಪ್ರಸ್ತುತ ಪಡಿಸಲಾಯಿತು. ಸೋಲಿಗರ ಗೊರುಕನ, ಜೇನುಕುರುಬರ ನೃತ್ಯ, ಗೊರವರ ಕುಣಿತ, ಹುಲಿ ವೇಷ, ವೀರಗಾಸೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಗಮನ ಸೆಳೆದವು. ಪ್ರಜಾಪ್ರಭುತ್ವದ ಸಂಭ್ರಮಾಚರಣೆ ಹಿನ್ನೆಲೆ ಸರ್ಕಾರಿ ನೌಕರರು, ಕಾಲೇಜಿನ ಉಪನ್ಯಾಸಕರು, ಸಾರ್ವಜನಿಕರು, ರೈತರು, ಕನ್ನಡಪರ ಹೋರಾಟಗಾರರು ಪ್ರತಿನಿಧಿಸಿದರು. ಮಹಿಳೆಯರು ಹಸಿರು ಸೀರೆ, ಪುರುಷರು ಬಿಳಿ ಪಂಚೆ, ಶರ್ಟ್, ಶಲ್ಯ ಧರಿಸಿ ಮಿಂಚಿದರು. ರೈತರು ಹಸಿರು ಟವೆಲ್, ಕನ್ನಡಪರ ಹೋರಾಟಗಾರರು ನಾಡ ಧ್ವಜ, ಹೋರಾಟಗಾರರು ನೀಲಿ ಶಲ್ಯ ಹೊದ್ದಿದ್ದರು. ರಾಮಸಮುದ್ರದಲ್ಲಿ 1 ಕಿಮೀ ಉದ್ದದ ಭಾರತ ಧ್ವಜ ಹಿಡಿದು ರಾಷ್ಟ್ರಗೀತೆ ಹಾಡಿದ್ದು ಎಲ್ಲರ ಮನ ಗೆದ್ದಿತು. ಗಡಿ ಜಿಲ್ಲೆ ಚಾಮರಾಜನಗರಲ್ಲಿ 25 ಕಿಮೀ ಉದ್ದದ ಮಾನವ ಸರಪಳಿ 19,700 ಮಂದಿ ಸೇರುತ್ತಾರೆ ಎನ್ನಲಾಗಿತ್ತು. ಆದರೆ, ಜಿಲ್ಲಾಡಳಿತದ ನಿರೀಕ್ಷೆ ಹುಸಿಯಾಗಿ ಮಾನವ ಸರಪಳಿ ಅಲ್ಲಲ್ಲಿ ನಿರೀಕ್ಷಿತ ಪ್ರಮಾಣದ ಜನರು ಸೇರದೇ ಇದ್ದದ್ದು ಕಂಡುಬಂದಿತು.ಇದನ್ನೂ ಓದಿ: ‘ಗಿಚ್ಚಿ ಗಿಲಿಗಿಲಿ’ ಫಿನಾಲೆಯಲ್ಲಿ ರಿವೀಲ್ ಆಗ್ತಿದೆ Bigg Boss ಬಿಗ್ ಅಪ್‌ಡೇಟ್- ಏನದು?
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸೌಧದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ (International Constitution Day) ದಿನ ಆಚರಿಸಲಾಯಿತು. ಪ್ರಜಾಪ್ರಭುತ್ವ ದಿನದ ಅಂಗವಾಗಿ ಏಕಕಾಲದಲ್ಲಿ ವಿಶ್ವಾದ್ಯಂತ ಭಾರತದ ಸಂವಿಧಾನ ಪೀಠಿಕೆ (Constitution Preamble) ವಾಚನ ಮಾಡಲಾಯಿತು.
ಸಂವಿಧಾನ ಪೀಠಿಕೆ ವಾಚನ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕಾರ್ಯಕ್ರಮ ಉದ್ಘಾಟಿಸಲಾಯಿತು. ಬೃಹತ್ ಎಲ್‌ಇಡಿ ಪರದೆಯಲ್ಲಿ ಪೀಠಿಕೆ ವಾಚನವನ್ನು ಪ್ರಸಾರ ಮಾಡಲಾಯಿತು. ಇದಕ್ಕೂ ಮುನ್ನ ಗಿಡಕ್ಕೆ ನೀರು ಹಾಕುವ ಮೂಲಕ ಸಮಾರಂಭಕ್ಕೆ ಸಾಂಪ್ರದಾಯಿಕ ಚಾಲನೆ ನೀಡಲಾಯಿತು. ನಂತರ ವೇದಿಕೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್, ಮಾಜಿ ಉಪ ಪ್ರಧಾನಿ ಬಾಬು ಜಗಜೀವನ್ ರಾಮ್ ಹಾಗೂ ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಇದನ್ನೂ ಓದಿ: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಸೂತ್ರಧಾರ ದೆಹಲಿಯಲ್ಲಿ ಅರೆಸ್ಟ್
ಸಚಿವ ಸಂಪುಟ ಕೊಠಡಿಗೆ ಸಂವಿಧಾನ ಪೀಠಿಕೆಯನ್ನು ಸಚಿವ ಹೆಚ್.ಸಿ.ಮಹದೇವಪ್ಪ ಹಸ್ತಾಂತರ ಮಾಡಿದರು. ನಂತರ ಸಮತೆಗೆ ಸಮಾನತೆ ತಂತ್ರಾಂಶವನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಡುಗಡೆ ಮಾಡಿದರು. ಕರ್ನಾಟಕ ವಸತಿ ಶಾಲೆಗಳಲ್ಲಿ ಮಕ್ಕಳ ಸಂವಿಧಾನ ಕ್ಲಬ್‌ನ್ನು ಸಚಿವ ಹೆಚ್.ಸಿ.ಮಹದೇವಪ್ಪ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಇದೊಂದು ಐತಿಹಾಸಿಕ ಕಾರ್ಯಕ್ರಮ. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದಂದು ಸಂವಿಧಾನ ಪೀಠಿಕೆ ವಾಚನವಾಗಿದೆ. ಸಂವಿಧಾನ ಪೀಠಿಕೆ ಬೋಧನೆ ಮಾಡುವ ಮೂಲಕ ಪ್ರಪಂಚದಾದ್ಯಂತ ಕಾರ್ಯಕ್ರಮ ವೀಕ್ಷಣೆ ಮಾಡಿದ್ದಾರೆ ಎಂದು ಸಚಿವರು ಬಣ್ಣಿಸಿದರು. ಇದನ್ನೂ ಓದಿ: ನಾನು ಹಣವನ್ನ ಲೋನ್ ಪಡೆದು ಕೊಟ್ಟಿದ್ದೇನೆ: ಗೋವಿಂದ ಬಾಬು ಪೂಜಾರಿ
ಕರ್ನಾಟಕ ರಾಜ್ಯ ಇವತ್ತು ಹೊಸ ಇತಿಹಾಸ ಬರೆದಿದೆ. ಪ್ರಜಾಸತ್ತಾತ್ಮಕ ಒಕ್ಕೂಟಗಳು ಸೇರಿ ಪ್ರಜಾಪ್ರಭುತ್ವ ದಿನ ಮಾಡುವ ನಿರ್ಣಯ ಆಯ್ತು. 2007 ರಲ್ಲಿ ಈ ನಿರ್ಣಯವನ್ನು ವಿಶ್ವಸಂಸ್ಥೆ ಅಂಗೀಕಾರ ಮಾಡಿತ್ತು. 2008 ರಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಮಾಡುತ್ತಿದ್ದೇವೆ. ಸಮಾನತೆ, ಒಕ್ಕೂಟವನ್ನ ವಿಶ್ವ ಬಯಸುತ್ತಿದೆ. ಭಾರತವು ಪ್ರಜಾಪ್ರಭುತ್ವದ ಹಿರಿಯ ಅಣ್ಣನಾಗಿ ಕೆಲಸ ಮಾಡುತ್ತಿದೆ. ಈ ಮೂಲಕ ವಿಶ್ವಸಂಸ್ಥೆಯ ನಿರ್ಣಯವನ್ನ ಭಾರತ ಪಾಲಿಸುತ್ತಿದೆ. ಅಸಮಾನತೆ ನಿರ್ನಾಮ ಮಾಡಿ ಸಮಾನತೆ ಜಾರಿ ಮಾಡುವ ಆಶಯ ಇದಾಗಿದೆ. ನ್ಯಾಯ, ಹಕ್ಕು, ಸ್ತ್ರೀ ಸ್ವಾತಂತ್ರ್ಯ, ಸಮಾನತೆ, ಪತ್ರಿಕಾ ಸ್ವಾತಂತ್ರ್ಯ, ಕೋಮು ಸೌಹಾರ್ದಗಳನ್ನ ಉಳಿಸಿಕೊಳ್ಳುವ ಆಶಯ ಆಗಿದೆ ಎಂದು ತಿಳಿಸಿದರು.
ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ನಾಡಿನ ಜನರಿಗೆ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಶುಭಾಶಯ. ಇವತ್ತು ಜಗತ್ತಿನಾದ್ಯಂತ ಪ್ರಜಾಪ್ರಭುತ್ವ ದಿನ ಆಚರಣೆ ಮಾಡಲಾಗ್ತಿದೆ. ಜಗತ್ತಿನ ಅನೇಕ ರಾಷ್ಟ್ರಗಳು ಪ್ರಜಾಪ್ರಭುತ್ವ ಒಪ್ಪಿವೆ. ಪ್ರಜಾಪ್ರಭುತ್ವ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದಾರೆ. ಪ್ರಜಾಪ್ರಭುತ್ವ ಭಾರತದಲ್ಲಿ ಪ್ರಾಚೀನ ಕಾಲದಲ್ಲೂ ಅಸ್ತಿತ್ವದಲ್ಲಿ ಇತ್ತು ಎಂದು ಹೇಳಿದರು. ಇದನ್ನೂ ಓದಿ: ಚೈತ್ರಾ ಕುಂದಾಪುರ ಡೀಲ್ ಪ್ರಕರಣಕ್ಕೆ ಟ್ವಿಸ್ಟ್ – ಸಲೂನ್ ಮಾಲೀಕನಿಗೆ ಬೆದರಿಕೆ ಕರೆ
ಸಿಂಧು ನಾಗರಿಕತೆ, ಬಸವಣ್ಣ ಕಾಲದಲ್ಲಿ ಪ್ರಜಾಪ್ರಭುತ್ವ ಇತ್ತು ಅಂತ ತಿಳಿಯುತ್ತದೆ. ಬಸವಣ್ಣ ಕಾಲದಲ್ಲಿ ಅನುಭವ ಮಂಟಪ ರಚನೆ ಮಾಡಿ, ಅದರ ಅಧ್ಯಕ್ಷತೆಯನ್ನ ಅಲ್ಲಮಪ್ರಭುಗೆ ವಹಿಸಿದ್ದರು. ಬಸವಾದಿ ಶರಣರು ಅದರಲ್ಲಿ ಭಾಗವಹಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಬೌದ್ದರ ಕಾಲದಲ್ಲಿ ಸಂಘದ ಚುನಾವಣೆ ನಡೆಯುತ್ತಿತ್ತು. ಸಿಂಧು ನಾಗರಿಕತೆಯಲ್ಲಿ ಪ್ರಜಾಪ್ರಭುತ್ವ ಇತ್ತು. ಸಂವಿಧಾನ ಬರುವ ಮುಂಚೆಯೂ ಗಣತಂತ್ರ ವ್ಯವಸ್ಥೆ ಅಂತ ಪ್ರಜಾಪ್ರಭುತ್ವವನ್ನ ಕರೆಯಲಾಗುತ್ತಿತ್ತು. ಸಂವಿಧಾನ ರಚನೆ ಆದ ಮೇಲೆ ಅಧಿಕೃತವಾಗಿ ಪ್ರಜಾಪ್ರಭುತ್ವ ಶುರುವಾಯಿತು ಎಂದು ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ, ಮುನಿಯಪ್ಪ, ಸತೀಶ್ ಜಾರಕಿಹೊಳಿ, ಜಿ.ಪರಮೇಶ್ವರ್, ಪ್ರಿಯಾಂಕ್ ಖರ್ಗೆ, ನಾಗೇಂದ್ರ, ಶಿವರಾಜ್ ತಂಗಡಗಿ, ಸಭಾಪತಿ ಬಸವರಾಜ ಹೊರಟ್ಟಿ, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕರು, ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.