Tag: ಅಂತಾರಾಷ್ಟ್ರೀಯ ಮಾರುಕಟ್ಟೆ

  • ಖಾದ್ಯ ತೈಲ ಬೆಲೆ 30 ರೂ. ಭಾರೀ ಇಳಿಕೆ

    ಖಾದ್ಯ ತೈಲ ಬೆಲೆ 30 ರೂ. ಭಾರೀ ಇಳಿಕೆ

    ನವದೆಹಲಿ: 200ರ ಗಡಿ ದಾಟಿದ್ದ ಸೂರ್ಯಕಾಂತಿ ಖಾದ್ಯ ತೈಲ ಇದ್ದಕ್ಕಿದ್ದಂತೆ ಭಾರೀ ಇಳಿಕೆಯಾಗಿರುವುದು ಕಂಡುಬಂದಿದೆ.

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯತೈಲ ಬೆಲೆ ಇಳಿಕೆಯಾದ ನಂತರ ದೇಶದ ಪ್ರಮುಖ ಖಾದ್ಯ ತೈಲ ಉತ್ಪಾದನಾ ಕಂಪನಿಯಾಗಿರುವ ಅದಾನಿ ಒಡೆತನದ `ಅದಾನಿ ವಿಲ್ಮರ್’ ಕಂಪನಿಯು ಫಾರ್ಚೂನ್ ಖಾದ್ಯತೈಲ ಬೆಲೆಯನ್ನು ಪ್ರತಿ ಲೀಟರ್‌ಗೆ 30 ರೂ. ವರೆಗೆ ಇಳಿಕೆ ಮಾಡಿದೆ. ಇದನ್ನೂ ಓದಿ: ಲೀಟರ್‌ ಗೋಮೂತ್ರಕ್ಕೆ 4 ರೂ. – ರೈತರಿಂದ ಖರೀದಿಗೆ ಮುಂದಾದ ಸರ್ಕಾರ

    ಇದರ ಬೆನ್ನಲ್ಲೇ ಅಲ್ಪಸ್ವಲ್ಪ ಇಳಿಕೆ ಮಾಡಿದೆ. ಇತರ ಕಂಪನಿಗಳು ಇದೇ ಹಾದಿ ಹಿಡಿಯುವ ನಿರೀಕ್ಷೆಯಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಜೋರಾಯ್ತು ಕುರ್ಚಿ ಕದನ – ಸಿಎಂ ಪಟ್ಟಕ್ಕಾಗಿ ಸಮುದಾಯದ ಬೆಂಬಲ ಕೋರಿದ ಡಿಕೆ

    ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಖಾದ್ಯ ತೈಲಬೆಲೆ ಇಳಿಕೆ ಮತ್ತು ಕೇಂದ್ರ ಸರ್ಕಾರ ಆಮದು ಸುಂಕವನ್ನು ಶೇ.5ರಷ್ಟು ಇಳಿಸಿದ ಪರಿಣಾಮ ಫಾರ್ಚೂನ್ ವಿವಿಧ ಮಾದರಿಯ ಖಾದ್ಯ ತೈಲ ಬೆಲೆಯನ್ನು ಲೀ.ಗೆ 5 ರೂ. ನಿಂದ 30 ರೂ. ವರೆಗೂ ಇಳಿಸಿದೆ. ಹೀಗಾಗಿ ಅದಾನಿ ವಿಲ್ಮರ್ ಕಂಪನಿಯ ಸೋಯಾ ಎಣ್ಣೆ ದರದಲ್ಲಿ ಲೀ.ಗೆ 195 ರೂ. ನಿಂದ 165 ರೂ.ಗೆ, ಸೂರ್ಯಕಾಂತಿ ಎಣ್ಣೆ 210 ರೂ. ನಿಂದ 199 ರೂ.ಗೆ, ಎಳ್ಳೆಣ್ಣೆ 195 ರೂ. ನಿಂದ 190 ರೂ.ಗೆ, ಶೇಂಗಾ ಎಣ್ಣೆ 220 ರೂ. ನಿಂದ 210 ರೂ. ಇಳಿಕೆ ಆಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿತ್ತು 28 ಕೋಟಿ ಮೌಲ್ಯದ ಕೊಕೇನ್ – ಬೆಚ್ಚಿಬಿದ್ದ ಪೊಲೀಸರು

    ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿತ್ತು 28 ಕೋಟಿ ಮೌಲ್ಯದ ಕೊಕೇನ್ – ಬೆಚ್ಚಿಬಿದ್ದ ಪೊಲೀಸರು

    ನವದೆಹಲಿ: ತಮಿಳಿನ ಖ್ಯಾತ ನಟ ಸೂರ್ಯ ಅಭಿನಯದ ಅಯನ್ ಸಿನಿಮಾದಲ್ಲಿರುವ ದೃಶ್ಯದಂತೆ ತಮ್ಮ ಹೊಟ್ಟೆಯೊಳಗೆ ಸುಮಾರು 28 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ಸಾಗಿಸುತ್ತಿದ್ದ ಇಬ್ಬರು ಚಾಲಾಕಿ ಮಹಿಳೆಯರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

    ಉಗಾಂಡಾದಿಂದ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರ ಹೊಟ್ಟೆಯಲ್ಲಿ 181 ಕ್ಯಾಪ್ಸುಲ್‌ಗಳಲ್ಲಿ ಅಡಗಿಸಿಟ್ಟು ಸಾಗಿಸುತ್ತಿದ್ದ 28 ಕೋಟಿ ಮೌಲ್ಯದ ಕೊಕೇನ್ ಪತ್ತೆಯಾಗಿದ್ದು, ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ಬೆಂಗ್ಳೂರು ಡ್ರೋನ್ ಹಾರಿಸಿ ಉತ್ಸವಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ

    ಇಬ್ಬರು ಮಹಿಳೆಯರು ಸುಮಾರು 2 ಕೆಜಿ ಕೊಕೇನ್ ಅನ್ನು ಮಾತ್ರೆಗಳಲ್ಲಿ ಅಡಗಿಸಿಟ್ಟು ನುಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಕಿಂಗ್‍ಪಿನ್ ಅರೆಸ್ಟ್

    ಒಬ್ಬ ಮಹಿಳೆ ನಿನ್ನೆ ಸಿಕ್ಕಿಬಿದ್ದಿದ್ದರು. ಈಕೆ ತನ್ನ ಹೊಟ್ಟೆಯೊಳಗೆ 81 ಮಾತ್ರೆಗಳನ್ನು ತುಂಬಿಕೊಂಡಿದ್ದರು. ಆಕೆಯನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಸುಮಾರು 891 ಗ್ರಾಂ ತೂಕದ ತೂಕದ ಕೊಕೇನ್ ಪತ್ತೆಯಾಗಿದ್ದು, ಪೊಲೀಸರು ವಶಪಡಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇದರ ಮೌಲ್ಯ 13.6 ಕೋಟಿಗಳಷ್ಟಿದೆ ಎಂದು ಹೇಳಿದ್ದಾರೆ.

    ಇದಕ್ಕೂ ಮುನ್ನ ಮೇ 22 ರಂದು ಬಂಧಿತ ಮಹಿಳೆಯ ಹೊಟ್ಟೆಯಲ್ಲಿ ಸುಮಾರು 80 ಕ್ಯಾಪ್ಸುಲ್‌ಗಳು ಬಚ್ಚಿಟ್ಟಿರುವುದು ಪತ್ತೆಯಾಗಿತ್ತು. ಆಕೆಯನ್ನು ಇದೇ ಆಸ್ಪತ್ರೆಗೆ ದಾಖಲಿಸಿ 0.957 ಕೆಜಿ ತೂಕದ ಕೊಕೇನ್ ಇರುವುದನ್ನು ಪತ್ತೆ ಹಚ್ಚಿ ಅದನ್ನು ವಶಪಡಿಸಿಕೊಳ್ಳಲಾಗಿತ್ತು. ಇದರ ಮೌಲ್ಯ 14 ಕೋಟಿಗಳಷ್ಟಿತ್ತು ಎಂದು ಅಂದಾಜಿಸಿದ್ದರು.