Tag: ಅಂತಿಮ ದರ್ಶನ

  • ಎಸ್‌ಎಂ ಕೃಷ್ಣ ವಿಧಿವಶ – ಬುಧವಾರ ರಾಮನಗರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

    ಎಸ್‌ಎಂ ಕೃಷ್ಣ ವಿಧಿವಶ – ಬುಧವಾರ ರಾಮನಗರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

    ರಾಮನಗರ: ಮಾಜಿ ಸಿಎಂ ಎಸ್‌ಎಂ ಕೃಷ್ಣ (SM Krishna) ವಿಧಿವಶರಾದ ಹಿನ್ನೆಲೆ ಬುಧವಾರ ರಾಮನಗರದಲ್ಲಿ (Ramanagara) ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ರಾಮನಗರ ಜಿಲ್ಲಾಧಿಕಾರಿ ಯಶವಂತ್ ಗುರುಕರ್ ಮಾಹಿತಿ ನೀಡಿದ್ದಾರೆ.

    ಬುಧವಾರ ಬಿಡದಿ, ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಿದ್ದು, ಜಿಲ್ಲಾಡಳಿತ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಬಿಡದಿಯ ಬಿಜೆಎಸ್ ಸರ್ಕಲ್, ರಾಮನಗರ ಐಜೂರು ವೃತ್ತ ಹಾಗೂ ಚನ್ನಪಟ್ಟಣದ ಗಾಂಧಿ ಭವನದ ಬಳಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದನ್ನೂ ಓದಿ: ಭಾಗ-1 | ಶಾಸಕನಿಂದ ಮುಖ್ಯಮಂತ್ರಿವರೆಗೆ…. ಎಸ್‌ಎಂಕೆ ರಾಜಕೀಯ ಜೀವನದ ಏಳುಬೀಳು!

    ಬೆಳಗ್ಗೆ 9:30ಕ್ಕೆ ಬಿಡದಿಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ರಾಮನಗರದ ಐಜೂರು ವೃತ್ತ ಹಾಗೂ ಚನ್ನಪಟ್ಟಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಪಾಯಿಂಟ್‌ನಲ್ಲೂ 15ರಿಂದ 20 ನಿಮಿಷಗಳು ಮಾತ್ರ ಸಾರ್ವಜನಿಕ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬಳಿಕ ಮೈಸೂರು-ಬೆಂಗಳೂರು ಹಳೆ ಹೆದ್ದಾರಿಯಲ್ಲಿ ಎಸ್.ಎಂ.ಕೃಷ್ಣ ಪಾರ್ಥೀವ ಶರೀರ ಸೋಮನಹಳ್ಳಿ ತಲುಪಲಿದೆ. ಇದನ್ನೂ ಓದಿ: ಎಸ್‌ಎಂಕೆ ಅಂತಿಮ ದರ್ಶನ ಪಡೆದ ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ

  • ಎಸ್‌ಎಂಕೆ ಅಂತಿಮ ದರ್ಶನ ಪಡೆದ ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ

    ಎಸ್‌ಎಂಕೆ ಅಂತಿಮ ದರ್ಶನ ಪಡೆದ ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ

    ಬೆಂಗಳೂರು: ಟೀಂ ಇಂಡಿಯಾದ (Team India) ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ (Anil Kumble) ಅವರಿಂದು ಬೆಂಗಳೂರು ಸದಾಶಿವ ನಗರದ ಎಸ್‌ಎಂ ಕೃಷ್ಣ (SM Krishna) ನಿವಾಸಕ್ಕೆ ಆಗಮಿಸಿ ಎಸ್‌ಎಂಕೆಗೆ ಅಂತಿಮ ನಮನ ಸಲ್ಲಿಸಿದರು.

    ಬಳಿಕ ಮಾತನಾಡಿದ ಅವರು, ಕರ್ನಾಟಕಕ್ಕೆ ಅವರ ಕೊಡುಗೆ ಅಪಾರವಾಗಿದೆ. ಬೆಂಗಳೂರು, ಕರ್ನಾಟಕದ ಅಭಿವೃದ್ಧಿಗೆ ಅವರ ಕೊಡುಗೆ ಸಾಕಷ್ಟಿದೆ. ಜೊತೆಗೆ ಕ್ರೀಡೆಗೂ ತುಂಬಾ ಪ್ರೋತಾಹ ನೀಡುತ್ತಿದ್ದರು ಎಂದರು.ಇದನ್ನೂ ಓದಿ: 1,000 ಕೆಜಿ ಗಂಧದ ಕಟ್ಟಿಗೆಯಲ್ಲಿ ಎಸ್‌ಎಂ ಕೃಷ್ಣ ಅಂತ್ಯಸಂಸ್ಕಾರ: ಗಣಿಗ ರವಿ

    ಎಸ್‌ಎಂ ಕೃಷ್ಣ ಅವರ ಅಗಲಿಕೆ ರಾಜ್ಯಕ್ಕೆ ದು:ಖಕರವಾದ ಸಂಗತಿ. ನಾವೆಲ್ಲ ಕುಟುಂಬದ ರೀತಿ ಇದ್ದೇವು ಎಂದು ಸ್ಮರಿಸಿದರು.

    ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರ ವಿದೇಶಾಂಗ ಸಚಿವ ಎಸ್‌ಎಂ ಕೃಷ್ಣ ಅವರಿಂದು (ಡಿ.10) ಬೆಳಗಿನ ಜಾವ ವಿಧಿವಶರಾದರು.ಇದನ್ನೂ ಓದಿ: ಹೈಟೆಕ್‌ ಜಿಮ್‌, ಸ್ಪಾ – ದೆಹಲಿ ಸಿಎಂ ನಿವಾಸ ʻಶೇಶ್‌ ಮಹಲ್‌ʼ ವೀಡಿಯೋ ಹರಿಬಿಟ್ಟ ಬಿಜೆಪಿ!

  • ಬೆಳಗ್ಗೆ 9.30ರವರೆಗೂ ನಿರ್ಮಾಪಕ ಸೌಂದರ್ಯ ಜಗದೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಬೆಳಗ್ಗೆ 9.30ರವರೆಗೂ ನಿರ್ಮಾಪಕ ಸೌಂದರ್ಯ ಜಗದೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ನಿನ್ನೆ ಮಹಾಲಕ್ಷ್ಮಿ ಲೇಔಟ್ ನ ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದ (Death) ನಿರ್ಮಾಪಕ ಸೌಂದರ್ಯ ಜಗದೀಶ್ (Soundarya Jagadish) ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆ 9:30 ಗಂಟೆವರೆಗೂ ಸಾರ್ವಜನಿಕರು ಹಾಗೂ ಚಿತ್ರರಂಗದ ಮಂದಿಗೆ ವ್ಯವಸ್ಥೆ ಮಾಡಲಾಗಿದೆ. ಅವರ ನಿವಾಸ ಕುಟೀರದಲ್ಲೇ ಅಂತಿಮ ದರ್ಶನವನ್ನು ಮಾಡಬಹುದಾಗಿದೆ.

    ಬೆಳಗ್ಗೆ 9:30 ಗಂಟೆಯ ನಂತರ ಚನ್ನರಾಯಪಟ್ಟಣದ ಹಿರಿಸಾವೆ ಬಳಿಯ ಫಾರಂ ಹೌಸ್ ನತ್ತ ಪಾರ್ಥಿವ ಶರೀರವನ್ನು ತಗೆದುಕೊಂಡು ಹೋಗಲಾಗುತ್ತಿದ್ದು, ಸೌಂದರ್ಯ ಜಗದೀಶ್ ಅವರ ಫಾರಂ ಹೌಸ್ ನಲ್ಲಿ ಮಧ್ಯಾಹ್ನ 12 ಗಂಟೆಯ ನಂತರ ಅಂತ್ಯಕ್ರಿಯೆ ನೆರವೇರಲಾಗುವುದು.

    ಅಂತಿಮ ವಿಧಿವಿಧಾನವನ್ನು ಜಗದೀಶ್ ಅವರ ಪುತ್ರ ಸ್ನೇಹಿತ್ ನೆರವೇರಿಸುತ್ತಾರೆ ಎಂದು ಕುಟುಂಬದ ಮೂಲಗಳ ತಿಳಿಸಿವೆ. ಪಾರ್ಥಿವ ಶರೀರ ಕೊಂಡೊಯ್ಯಲು ಚಿರಶಾಂತಿ ವಾಹನದ ಸಿದ್ದತೆ ಕೂಡ ಮಾಡಲಾಗಿದೆ.

     

    ನಿನ್ನೆ ದರ್ಶನ್, ಪ್ರೇಮ್, ಉಪೇಂದ್ರ, ಪ್ರಿಯಾಂಕಾ ಉಪೇಂದ್ರ, ಅಮೂಲ್ಯ, ಗುರುಕಿರಣ್ ಸೇರಿದಂತೆ ಅನೇಕ ತಾರೆಯರು ಅಂತಿಮ ದರ್ಶನ ಪಡೆದಿದ್ದಾರೆ. ಇವತ್ತು ಕೂಡ ಚಿತ್ರರಂಗದ ಅನೇಕ ಗಣ್ಯರು ಮತ್ತು ಉದ್ಯಮಿಗಳು ಕೂಡ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

  • ಲೀಲಾವತಿ ನಿಧನ: ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ದರ್ಶನಕ್ಕೆ ವ್ಯವಸ್ಥೆ

    ಲೀಲಾವತಿ ನಿಧನ: ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ದರ್ಶನಕ್ಕೆ ವ್ಯವಸ್ಥೆ

    ನ್ನಡದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದಾರೆ. ಅವರ ಅಂತಿಮ ದರ್ಶನದ ವಿಚಾರವಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ವಿಚಾರವಾಗಿ ನೆಲಮಂಗಲ (Nelamangala) ಡಿವೈಎಸ್ ಪಿ ಪುರುಷೋತ್ತಮ ಅವರು ಮಾಧ್ಯಮಗಳ ಜೊತೆ ಮಾತನಾಡಿ, ನಾಳೆ  ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

    ನಾಳೆ ನೆಲಮಂಗಲದ ಆಂಬೇಡ್ಕರ್ (Ambedakar Ground) ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.  ದಯವಿಟ್ಟು ಸಾರ್ವಜನಿಕರು ಸಹಕರಿಸಿ. ಎಲ್ಲರಿಗೂ ಅವರ ಅಂತಿಮ ದರ್ಶನ ಸಿಗುವಂತೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ. ನೆಲಮಂಗಲ ಪೊಲೀಸರು ಹಾಗೂ ತಹಶಿಲ್ದಾರ್  ಅರುಂಧತಿ ನೇತೃತ್ವದಲ್ಲಿ ಮೈದಾನದಲ್ಲಿ ತಯಾರಿ ಮಾಡಲಾಗುತ್ತಿದೆ.

    ಚಿಕಿತ್ಸೆ ಫಲಕಾರಿ ಆಗಲಿಲ್ಲ

    ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ

    ಲೀಲಾವತಿ (Leelavathi) ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದಾರೆ. ಅವರ ಆರೋಗ್ಯ (Health) ಯೋಗಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ (Cm Siddaramiah) ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.

     

    87 ವರ್ಷದ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ನಟ ದರ್ಶನ್, ಅಂಬರೀಶ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ಆಗಮಿಸಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಕೂಡ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟ ಮನೆಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದರು.

  • ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಿರ್ದೇಶಕ ಭಗವಾನ್ ಅಂತಿಮ ದರ್ಶನಕ್ಕೆ ಸಿದ್ಧತೆ

    ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಿರ್ದೇಶಕ ಭಗವಾನ್ ಅಂತಿಮ ದರ್ಶನಕ್ಕೆ ಸಿದ್ಧತೆ

    ಇಂದು ಬೆಳಗ್ಗೆ ನಿಧನರಾಗಿರುವ ಕನ್ನಡದ ಹೆಸರಾಂತ ಹಿರಿಯ ನಿರ್ದೇಶಕ ಎಸ್.ಕೆ. ಭಗವಾನ್ (Dorai Bhagavan) ಅವರ ಪಾರ್ಥೀವ ಶರೀರವನ್ನು ಆಸ್ಪತ್ರೆಯಿಂದ ಸಹಕಾರಿ ನಗರದ ಅವರ ನಿವಾಸಕ್ಕೆ ತರಲಾಗಿದೆ. ಕುಟುಂಬಸ್ಥರು ವಿಧಿ ವಿಧಾನ ಮುಗಿಸಿದ ನಂತರ ಅಭಿಮಾನಿಗಳಿಗಾಗಿ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ (Ravindra Kalakshetra) ಮಧ್ಯಾಹ್ನ 12.30ರ  ನಂತರ ವ್ಯವಸ್ಥೆ ಮಾಡಿರುವುದಾಗಿ ಭಗವಾನ್ ಪುತ್ರ ರಿಚ್ಚಿ ತಿಳಿಸಿದ್ದಾರೆ.

    ಶ್ರೀನಿವಾಸ್ ಕೃಷ್ಣ ಅಯ್ಯಂಗಾರ್ ಭಗವಾನ್ ಇವರು ಪೂರ್ಣ ಹೆಸರು. 1933ರಲ್ಲಿ ಮೈಸೂರಿನ ತಮಿಳು ಅಯ್ಯಂಗಾರ್ ಕುಟುಂಬದಲ್ಲಿ ಜನಿಸಿದ್ದ ಇವರು, ರಂಗಭೂಮಿ ಹಿನ್ನೆಲೆಯುಳ್ಳವರು. ಕಾಲೇಜು ದಿನಗಳಲ್ಲಿ ರಂಗಭೂಮಿಯ ಸಾಕಷ್ಟು ಚಟುವಟಿಕೆಗಳಲ್ಲಿ ತೊಡಗಿಕೊಂಡವರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕ ನಿರ್ದೇಶಕರಾಗಿ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದವರು. ಇದನ್ನೂ ಓದಿ: ಸದ್ದಿಲ್ಲದೇ ಆದಿಯೋಗಿ ಶಿವನ ದರ್ಶನ ಪಡೆದ ರಜನಿಕಾಂತ್

    1966ರಲ್ಲಿ ತೆರೆಕಂಡ ಸಂಧ್ಯಾರಾಗ ಚಿತ್ರದ ಮೂಲಕ ಸಹಾಯಕ ನಿರ್ದೇಶಕರಾಗಿ ಭಡ್ತಿ ಪಡೆದವರು. ನಂತರ ನಿರ್ದೇಶಕ ದೊರೈರಾಜ್ ಜೊತೆಗೂಡಿ ಸ್ವತಂತ್ರ ನಿರ್ದೇಶಕರಾದವರು. 1993ರಲ್ಲಿ ದೊರೈರಾಜ್ ನಿಧನದ ನಂತರ ಒಂಟಿಯಾದರು ಭಗವಾನ್. ಬರೋಬ್ಬರಿ 49 ಸಿನಿಮಾಗಳನ್ನು ಈ ಜೋಡಿ ನಿರ್ದೇಶನ ಮಾಡಿದ್ದು ವಿಶೇಷ. ಈ ಜೋಡಿಯ ಮತ್ತೊಂದು ದಾಖಲೆಯೆಂದರೆ 24 ಕಾದಂಬರಿ ಆಧರಿಸಿದ ಸಿನಿಮಾಗಳನ್ನು ಈ ಜೋಡಿ  ನಿರ್ದೇಶನ ಮಾಡಿದೆ.

    ಕನ್ನಡದ ಅಷ್ಟೂ ಸೂಪರ್ ಸ್ಟಾರ್ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಹೆಗ್ಗಳಿಕೆ ಈ ಜೋಡಿಯದ್ದು. ಜೇಡರ ಬಲೆ, ಕಸ್ತೂರಿ ನಿವಾಸ, ಎರಡು ಕನಸು, ಬಯಲು ದಾರಿ, ಗಿರಿಕನ್ಯೆ, ಚಂದನದ ಗೊಂಬೆ, ಜೀವನ ಚೈತ್ರ, ಒಡಹುಟ್ಟಿದವರು, ಯಾರಿವನು, ಮುನಿಯನ ಮಾದರಿ ಹೀಗೆ ಅಷ್ಟೂ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎಲಿಜಬೆತ್ ಅಂತಿಮ ದರ್ಶನಕ್ಕೆ ಚೀನಾ ನಿಯೋಗಕ್ಕಿಲ್ಲ ಅನುಮತಿ

    ಎಲಿಜಬೆತ್ ಅಂತಿಮ ದರ್ಶನಕ್ಕೆ ಚೀನಾ ನಿಯೋಗಕ್ಕಿಲ್ಲ ಅನುಮತಿ

    ಲಂಡನ್: ಬ್ರಿಟನ್‌(Britain)ನ ರಾಣಿ 2ನೇ ಎಲಿಜಬೆತ್(Queen Elizabeth II) ಅವರ ಅಂತ್ಯಕ್ರಿಯೆ(Funeral) ಸೆಪ್ಟೆಂಬರ್ 19ರಂದು ನಡೆಯಲಿದೆ. ಅದಕ್ಕೂ ಮುನ್ನ ಅವರ ಮೃತದೇಹವನ್ನು ಸಂಸತ್ತಿನ ಒಳಗೆ ಅಂತಿಮ ದರ್ಶನಕ್ಕೆಂದು ಇಡಲಾಗಿದೆ. ಆದರೆ ಚೀನಾಗೆ(China) ಅಂತಿಮ ದರ್ಶನದ ಅನುಮತಿಯನ್ನು ನಿರಾಕರಿಸಲಾಗಿದೆ.

    ಚೀನಾದ ಕ್ಸಿನ್‌ಜಿಯಾಂಗ್‌ನಲ್ಲಿ ಉಯಿಘರ್ ಮುಸ್ಲಿಮರನ್ನು ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದ ಬ್ರಿಟನ್‌ನ ಐವರು ಸಂಸದರ ಮೇಲೆ ಚೀನಾ ನಿರ್ಬಂಧ ಹೇರಿತ್ತು. ಈ ಹಿನ್ನೆಲೆ ಚೀನಾದ ಪ್ರತಿನಿಧಿಗಳಿಗೆ ಆಹ್ವಾನ ನೀಡುವ ಬಗ್ಗೆ ಬ್ರಿಟನ್ ಕಳವಳ ವ್ಯಕ್ತಪಡಿಸಿದೆ. ಈ ಕಾರಣಕ್ಕೆ ಹೌಸ್ ಆಫ್ ಕಾಮನ್ಸ್‌ನ ಸ್ಪೀಕರ್ ಸರ್ ಲಿಂಡ್ಸೆ ಹೊಯ್ಲ್ ಅವರು ಚೀನಾದ ನಿಯೋಗಕ್ಕೆ ಅನುಮತಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಶಾಸಕ ಜಿಗ್ನೇಶ್ ಮೇವಾನಿಗೆ 6 ತಿಂಗಳು ಜೈಲು

    ಬ್ರಿಟನ್ ಪ್ರಧಾನಿ ಲಿಜ್ ಟ್ರಸ್ ಅವರ ವಕ್ತಾರರು ವಿದೇಶಾಂಗ ಕಚೇರಿಯಿಂದ ಸಲಹೆಯನ್ನು ಪಡೆದು, ಬಳಿಕ ಅತಿಥಿ ಪಟ್ಟಿಯನ್ನು ತಯಾರಿಸಲಾಗುವುದು ಎಂದು ತಿಳಿಸಿದ್ದಾರೆ. ಬ್ರಿಟನ್ ಸಂಪ್ರದಾಯದ ಪ್ರಕಾರ, ಬ್ರಿಟನ್ ರಾಜತಾಂತ್ರಿಕ ಸಂಬಂಧ ಹೊಂದಿರುವ ರಾಷ್ಟ್ರಗಳ ಪ್ರತಿನಿಧಿಗಳನ್ನು ಆಹ್ವಾನಿಸುತ್ತದೆ. ಇದನ್ನೂ ಓದಿ: ಮೋದಿ ಹುಟ್ಟುಹಬ್ಬ – ನಾಳೆ ಹುಟ್ಟುವ ಮಕ್ಕಳಿಗೆ ಚಿನ್ನದುಂಗುರ ನೀಡಲಿದೆ ಬಿಜೆಪಿ

    ಎಲಿಜಬೆತ್ ಅಂತ್ಯಕ್ರಿಯೆಯಲ್ಲಿ ಚೀನಾ ಭಾಗವಹಿಸಲಿದೆ ಎನ್ನಲಾಗಿದ್ದು, ಚೀನಾದ ಉಪಾಧ್ಯಕ್ಷ ವಾಂಗ್ ಕಿಶನ್ ಚೀನಾವನ್ನು ಪ್ರತಿನಿಧಿಸುವ ನಿರೀಕ್ಷೆಯಿದೆ. ರಾಣಿಯ ಅಂತ್ಯಕ್ರಿಯೆಯಲ್ಲಿ ವಿಶ್ವದ ನಾಯಕರು, ರಾಜವಂಶಸ್ಥರು ಮತ್ತು ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಬ್ರಿಟಿಷ್ ವಿದೇಶಾಂಗ ಕಚೇರಿ ಗುರುವಾರ ತಿಳಿಸಿದೆ.

    Live Tv
    [brid partner=56869869 player=32851 video=960834 autoplay=true]

  • ನಿನ್ನನ್ನ ಉಳಿಸಿಕೊಳ್ಳೋಕೆ ಆಗಲಿಲ್ಲ : ಬಿಕ್ಕಿ ಬಿಕ್ಕಿ ಅತ್ತ ತಂದೆ ರೂಪೇಶ್

    ನಿನ್ನನ್ನ ಉಳಿಸಿಕೊಳ್ಳೋಕೆ ಆಗಲಿಲ್ಲ : ಬಿಕ್ಕಿ ಬಿಕ್ಕಿ ಅತ್ತ ತಂದೆ ರೂಪೇಶ್

    ಬೆಂಗಳೂರು: ನನ್ನಮ್ಮ ಸೂಪರ್ ಸ್ಟಾರ್ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ರಸ್ತೆ ಅಪಘಾತದಲ್ಲಿ ಗುರುವಾರ ಕೊನೆಯುಸಿರೆಳೆದಿದ್ದು, ಇಂದು ತಂದೆ ರೂಪೇಶ್ ಕಿಮ್ಸ್ ಆಸ್ಪತ್ರೆಯ ಬಳಿ ಗೋಗರೆದಿದ್ದಾರೆ. ಸಮನ್ವಿಯ ಮೃತ ದೇಹವನ್ನು ಬಾಚಿ ತಬ್ಬಿ ಐ ಆಮ್ ವೆರಿ ಸಾರಿ, ನಿನ್ನನ್ನ ಉಳಿಸಿಕೊಳ್ಳೋಕೆ ಆಗಲಿಲ್ಲ ಎಂದು ರೂಪೇಶ್ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

    ಈಚೆ ಮಗಳನ್ನು ಕಳೆದುಕೊಂಡಿರುವ ದುಃಖದಲ್ಲಿ ತಾಯಿ ಅಮೃತಾ ನಾಯ್ಡು ನಿತ್ರಾಣ ಸ್ಥಿತಿಗೆ ಜಾರಿದ್ದಾರೆ. ಬಿಗ್ ಬಾಸ್ ಹಾಗೂ ಕೆಲ ರಿಯಾಲಿಟಿ ಶೋಗಳಲ್ಲಿ ಮಿಂಚಿದ್ದ ಋಷಿಕುಮಾರ್ ಅಲಿಯಾಸ್ ಕಾಳಿ ಸ್ವಾಮಿ ಸಮನ್ವಿ ಅಂತಿಮ ದರ್ಶನ ಪಡೆಯಲು ಬಂದಿದ್ದು, ಅಮೃತಾಗೆ ಸಾಂತ್ವಾನ ಹೇಳಿದ್ದಾರೆ. ಇದನ್ನೂ ಓದಿ: ಲಾರಿ ಚಾಲಕನ ಅಜಾಗರೂಕತೆಯಿಂದಲೇ ಸಮನ್ವಿ ಸಾವು

    ಮಗು ಚೂಟಿಯಾಗಿತ್ತು:
    ನಾವು ಮಗುವನ್ನು ಟಿವಿಯಲ್ಲಿ ನೋಡುತ್ತಿದ್ದೆವು. ತುಂಬಾ ಇಷ್ಟ ಪಡುತ್ತಿದ್ದೆವು. ಮಗು ಚೂಟಿಯಾಗಿತ್ತು. ಶೋ ಅಲ್ಲಿ ಕೂಡ ಚೂಟಿ ಆಗಿದ್ಲು. ಆದರೆ ಯಾಕೆ ಹೀಗಾಯ್ತು! ನಾವು ಟಿವಿಯಲ್ಲಿ ನೋಡುತ್ತಿದ್ದ ಮಗು ಇನ್ಮೇಲೆ ಇಲ್ಲ ಅನ್ನೋ ನೋವನ್ನು ತಡೆದುಕೊಳ್ಳೋಕೆ ಆಗುತ್ತಿಲ್ಲ ಎಂದು ಸಮನ್ವಿ ಅಂತಿಮ ದರ್ಶನಕ್ಕೆ ಬಂದಿದ್ದ ಅಭಿಮಾನಿ ಲಕ್ಷ್ಮಮ್ಮ ಹೇಳಿಕೆ ನೀಡಿದರು. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ನನ್ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ಸಮನ್ವಿ ದಾರುಣ ಸಾವು

    ಸಮನ್ವಿ ಅಂತಿಮ ದರ್ಶನಕ್ಕೆ ಲಿಬರ್ಟಿ ಅಪಾರ್ಟ್ಮೆಂಟ್‌ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿದೆ. ಅಪಾರ್ಟ್ಮೆಂಟ್‌ನಲ್ಲಿ 20 ಮಂದಿಗೆ ಕೋವಿಡ್ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಅಪಾರ್ಟ್ಮೆಂಟ್‌ನ ಪ್ರವೇಶದ್ವಾರದಲ್ಲಿ ಮಧ್ಯಾಹ್ನ 1 ಗಂಟೆಯ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆಯಿದ್ದು, ಸಂಬಂಧಿಕರು ಹಾಗೂ ಸಿನಿಮಾ – ಸೀರಿಯಲ್ ಕಲಾವಿದರು ಅಂತಿಮ ದರ್ಶನ ಪಡೆಯಲಿದ್ದಾರೆ. ಮಧ್ಯಾಹ್ನದ ಬಳಿಕ ಸಮನ್ವಿ ಅಂತ್ಯ ಸಂಸ್ಕಾರ ನಡೆಯಲಿದೆ. ಇದನ್ನೂ ಓದಿ: ನಟಿ ಅಮೃತಾ ನಾಯ್ಡು ಬಾಳಲ್ಲಿ ಪದೇ ಪದೇ ವಿಧಿಯಾಟ

  • ಬೆಳಗ್ಗೆ 10ರವರೆಗೆ  ಶಿವರಾಂ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಬೆಳಗ್ಗೆ 10ರವರೆಗೆ ಶಿವರಾಂ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಬೆಂಗಳೂರು: ನಿನ್ನೆ ನಮ್ಮನಗಲಿದ ಚಂದನವನದ ಶರಪಂಜರ ಶಿವರಾಂ ಅವರ ಪಾರ್ಥಿವ ಶರೀರವನ್ನು ಬನಶಂಕರಿ ನಿವಾಸದಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಕೊಂಡೊಯ್ಯಲಾಗುತ್ತದೆ. ಬೆಳಗ್ಗೆ ಬೆಳಗ್ಗೆ 7.30 ರಿಂದ ಬೆಳಗ್ಗೆ 10 ಗಂಟೆ ತನಕ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆ ನಂತರ ಬನಶಂಕರಿ ಚಿತಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದ ಅನುಸಾರ ಅಂತಿಮ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಶಿವರಾಮಣ್ಣನಿಗೆ ಪೊಲೀಸ್ ಗೌರವದ ವಿದಾಯ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

    ನಿನ್ನೆ ಬನಶಂಕರಿಯ ನಿವಾಸದಲ್ಲಿ ಚಿತ್ರರಂಗದ ಹಿರಿ-ಕಿರಿಯ ಕಲಾವಿದರೆಲ್ಲರೂ ಕೂಡ ಶಿವರಾಮಣ್ಣಗೆ ಅಂತಿಮ ನಮನ ಸಲ್ಲಿಸಿದ್ರು. ದ್ವಾರಕೀಶ್, ಶ್ರೀನಾಥ್, ಅನಂತನಾಗ್, ಜಗ್ಗೇಶ್, ನಿರ್ದೇಶಕ ಭಗವಾನ್, ಶಿವಣ್ಣ, ರಾಘಣ್ಣ, ದೇವರಾಜ್, ರಮೇಶ್ ಅರವಿಂದ್, ಪ್ರೇಮಾ, ಉಮಾಶ್ರೀ, ಗಿರಿಜಾ ಲೋಕೇಶ್, ಸುಂದರರಾಜ್, ಯೋಗರಾಜ್ ಭಟ್, ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿದಂತೆ ಹಲವರು ಶಿವರಾಮಣ್ಣನನ್ನು ಸ್ಮರಿಸಿ ಕಂಬನಿ ಮಿಡಿದ್ರು.

    ಕನ್ನಡಚಿತ್ರರಂಗದ ಮೂರು ತಲೆಮಾರುಗಳನ್ನು ಕಂಡಿದ್ದ ಶಿವರಾಂ ಹಿರಿಯ ನಟನಾಗಿ ಮಾತ್ರವಲ್ಲ, ಸಿನಿಮಾ ಕುಟುಂಬಕ್ಕೆ ಹಿರಿಯರ ಸ್ಥಾನದಲ್ಲಿದ್ದು ನಿಜ ಪೋಷಕರೆನಿಸಿದ್ದರು. ಎಲ್ಲರ ಪಾಲಿಗೆ ಪ್ರೀತಿಯ ಶಿವರಾಮಣ್ಣ ಆಗಿದ್ದರು. ಇದೀಗ ಶಿವರಾಂ ಅಗಲಿಕೆಯಿಂದ ಕನ್ನಡ ಚಿತ್ರರಂಗ ಅಕ್ಷರಶಃ ಅನಾಥವಾಗಿದೆ. ವಿಷಾದದ ಕಡಲಲ್ಲಿ ಮುಳುಗಿದೆ. ಇದನ್ನೂ ಓದಿ: ಸಾಮಾನ್ಯ ವ್ಯಕ್ತಿಯಲ್ಲ ಶಿವರಾಂ, ಅವರಂತೆ ಯಾರು ಮತ್ತೆ ಹುಟ್ಟಿ ಬರಲು ಸಾಧ್ಯವಿಲ್ಲ: ದ್ವಾರಕೀಶ್

    ಕರ್ನಾಟಕ-ತಮಿಳುನಾಡು ಗಡಿಭಾಗದ, ಬೆಂಗಳೂರಿನಿಂದ 60 ಕಿಲೋಮೀಟರ್ ದೂರದ ಚೂಡಸಂದ್ರದಲ್ಲಿ 1938ರ ಜನವರಿ 28ರಂದು ಜನಿಸಿದ ಶಿವರಾಂ ಪ್ರಾಥಮಿಕ ಶಿಕ್ಷಣವನ್ನು ಅಲ್ಲಿಯೇ ಪೂರೈಸಿದರು. ನಂತರ ಅವರು ಸೇರಿದ್ದು ಬೆಂಗಳೂರು ಎಂಬ ಮಾಯನಗರಿಯನ್ನು. ಮೊದಲು ನಾಟಕಗಳಲ್ಲಿ ಅಭಿನಯಿಸುತ್ತಾ ಬೆಳ್ಳಿ ತೆರೆಗೂ ಎಂಟ್ರಿ ಕೊಟ್ಟರು. 1958ರಲ್ಲಿ ಮೊದಲ ಬಾರಿಗೆ ಬೆರೆತ ಜೀವ ಸಿನಿಮಾದಲ್ಲಿ ಬಣ್ಣ ಹಚ್ಚಿದರು. ಸುಮಾರು ಆರು ದಶಕಗಳ ಸುದೀರ್ಘ ಸಿನಿಮಾ ಜೀವನದಲ್ಲಿ ಅವರು ನಿರ್ವಹಿಸದ ಪಾತ್ರವಿಲ್ಲ.

    ಗುರು ಶಿಷ್ಯರು, ಶರಪಂಜರ, ನಾಗರಾಹಾವು, ದೇವರಗುಡಿ, ಎಡಕಲ್ಲು ಗುಡ್ಡದ ಮೇಲೆ, ಚಲಿಸುವ ಮೋಡಗಳು, ಹಾಲುಜೇನು, ಹೊಂಬಿಸಲು, ಶುಭಮಂಗಳ.. ಉಪಾಸನೆ, ಡ್ರೈವರ್ ಹನುಮಂತು, ಬನಶಂಕರಿ.. ತಾಯಿ ಸಾಹೇಬ, ಅವರ ಸಿನಿಮಾಗಳ ಬಗ್ಗೆ ಹೇಳಲು ಒಂದೇ ಎರಡೇ ಸೇರಿ ನೂರಾರು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಗೃಹಭಂಗ, ಬದುಕು, ಚಕ್ರ, ಇತ್ತೀಚಿಗೆ ಬಂದ ಸತ್ಯ ಸೇರಿ ಧಾರವಾಹಿಗಳಿಗೂ ಜೀವ ತುಂಬಿದ್ದಾರೆ.

    ಕ್ಯಾಮೆರಾ ಸಹಾಯಕರಾಗಿ, ಸಹಾಯ ನಿರ್ದೇಶಕರಾಗಿ , ನಿರ್ದೇಶಕರಾಗಿ, ನಿರ್ಮಾಪಕರಾಗಿ ಚಂದನವನದ ನಿಜ ಅರ್ಥದಲ್ಲಿ ಪೋಷಕರೆನಿಸಿದ್ದರು. ಹಿರಿಯನಟ ಶಿವರಾಂ ಅಭಿನಯದ ಕೊನೇ ಚಿತ್ರ ಆವರ್ತ. ಈ ಸಿನಿಮಾದಲ್ಲಿ ನರೇಂದ್ರನಾಥ ಬಲ್ಲಾಳ ಅನ್ನೊ ಪಾತ್ರದಲ್ಲಿ ಶಿವರಾಂ ಕಾಣಿಸಿಕೊಂಡಿದ್ದರು.

  • ತಂದೆ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ

    ತಂದೆ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ

    ಬೆಂಗಳೂರು: ಕೊನೆಗೂ ತಂದೆ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನವನ್ನು ಪುತ್ರಿ ಧೃತಿ ಪಡೆದರು.

    ಪುನೀತ್ ನಿಧನರಾದ ಸುದ್ದಿ ತಿಳಿಯುತ್ತಿದ್ದಂತೆಯೇ ಧೃತಿ ಕೂಡಲೇ ಅಮೆರಿಕಾದಿಂದ ತವರಿನತ್ತ ಹೊರಟಿದ್ದಾರೆ. ವಿಶೇಷ ವಿಮಾನದ ಮೂಲಕ ಇಂದು ಮಧ್ಯಾಹ್ನ ದೆಹಲಿಗೆ ಬಂದಿಳಿದ ಧೃತಿ ಅಲ್ಲಿಂದ ಮತ್ತೆ ವಿಶೇಷ ವಿಮಾನದ ಮೂಲಕ ಸಂಜೆ 4.15ರ ಸುಮಾರಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಇದನ್ನೂ ಓದಿ: ಪತಿ ನಿಧನದ ಸುದ್ದಿ ಕೇಳ್ತಿದ್ದಂತೆ ಕಣ್ಣೀರಿಡುತ್ತಲೇ ಮೌನಕ್ಕೆ ಶರಣಾದ ಪತ್ನಿ ಅಶ್ವಿನಿ

    ಅಲ್ಲಿಂದ ಪೊಲೀಸ್ ಭದ್ರತೆಯಲ್ಲಿಯೇ ನೇರವಾಗಿ ತಮ್ಮ ನಿವಾಸ ಸದಾಶಿವ ನಗರಕ್ಕೆ ತೆರಳಿ ಅಲ್ಲಿಂದ ಕಂಠೀರವ ಸ್ಟೇಡಿಯಂಗೆ ಬಂದು ಅಪ್ಪನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ. ಇದನ್ನೂ ಓದಿ: ರಾಜ್‍ಕುಮಾರ್ ಮಕ್ಕಳ ಜೊತೆ ನಾನು ಆ್ಯಕ್ಟಿಂಗ್ ಮಾಡ್ಬೇಕುಂತ ಅಮ್ಮನಿಗೆ ಆಸೆ ಇತ್ತು: ರಚಿತಾ ರಾಮ್

    ಈಗಾಗಲೇ ಕತ್ತಲಾವರಿಸಿದ್ದರಿಂದ ಪುನೀತ್ ಅಂತ್ಯ ಕ್ರಿಯೆ ನಾಳೆ ನಡೆಯಲಿದೆ. ಈ ಸಂಬಂಧ ಮಾತನಾಡಿದ ಸಿಎಂ, 5.30 ನಂತರ ಅಂತ್ಯಕ್ರಿಯೆ ಮಾಡಲು ಸಾಧ್ಯವಿಲ್ಲ. ಯಾಕಂದರೆ ಜಾಗ ತುಂಬಾ ಕಿರಿದಾಗಿದ್ದು, ಕತ್ತಲಾದರೆ ಕಷ್ಟ ಸಾಧ್ಯ. ಹೀಗಾಗಿ ಪುನೀತ್ ಅವರ ಸಹೋದರ ಶಿವರಾಜ್‍ಕುಮಾರ್ ಅವರ ಬಳಿ ಹಾಗೂ ಕುಟುಂಬದ ಜೊತೆಗೆ ಚರ್ಚೆ ಮಾಡಿ ನಾಳೆ ಅಂತ್ಯಕ್ರಿಯೆ ನಡೆಸಲು ತೀರ್ಮಾನ ಮಾಡಲಾಗಿದೆ. ನಾಳೆವರೆಗೂ ಅಭಿಮಾನಿಗಳಿಗೆ ಬರಲು ಅವಕಾಶ ನೀಡಲಾಗಿದೆ. ದಯವಿಟ್ಟು ನೀವು ಸಹಕರಿಸಿ ಎಂದು ಮನವಿ ಮಾಡಿಕೊಂಡರು.

  • ಮಾತಾ ಮಾಣಿಕೇಶ್ವರಿ ಅಂತಿಮ ದರ್ಶನಕ್ಕೆ ಸಿದ್ಧತೆ- ತಾವೇ ನಿರ್ಮಿಸಿಕೊಂಡಿರೋ ಸಮಾಧಿಯಲ್ಲಿ ಅಂತ್ಯಕ್ರಿಯೆ

    ಮಾತಾ ಮಾಣಿಕೇಶ್ವರಿ ಅಂತಿಮ ದರ್ಶನಕ್ಕೆ ಸಿದ್ಧತೆ- ತಾವೇ ನಿರ್ಮಿಸಿಕೊಂಡಿರೋ ಸಮಾಧಿಯಲ್ಲಿ ಅಂತ್ಯಕ್ರಿಯೆ

    ಕಲಬುರಗಿ: ಲಿಂಗೈಕ್ಯರಾದ ಯಾನಾಗುಂದಿಯ ಮಾತಾ ಮಾಣಿಕೇಶ್ವರಿ ಅವರ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜೊತೆಗೆ ಅವರೇ ನಿರ್ಮಿಸಿಕೊಂಡಿರುವ ಸಮಾಧಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

    ಅನಾರೋಗ್ಯದಿಂದ ಶನಿವಾರ ಲಿಂಗೈಕ್ಯರಾದ ಮಾತಾ ಮಾಣಿಕೇಶ್ವರಿ ಅವರನ್ನು ನೋಡಲು ತಡರಾತ್ರಿಯಿಂದಲೇ ಸಾವಿರಾರು ಭಕ್ತರು ಮಾಣಿಕ್ಯಗಿರಿ ಬೆಟ್ಟಕ್ಕೆ ಬರುತ್ತಿದ್ದಾರೆ. ಆಂಧ್ರ ಪ್ರದೇಶ ಮಹಾರಾಷ್ಟ್ರ ಸೇರಿದಂತೆ ವಿವಿಧೆಡೆಯಿಂದ ಭಕ್ತರು ಆಗಮಿಸುತ್ತಿದ್ದು, ಮಠದ ಮುಖ್ಯ ದ್ವಾರದ ಆವರಣದಲ್ಲಿ ವೇದಿಕೆಗೆ ಸಿದ್ಧತೆ ಮಾಡಿ 10 ಗಂಟೆಯ ನಂತರ ಸಾರ್ವಜನಿಕ ದರ್ಶನಕ್ಕೆ ಚಿಂತನೆ ಮಾಡಲಾಗಿದೆ.

    ಮಾತಾ ಮಾಣಿಕೇಶ್ವರಿಯವರ ದರ್ಶನಕ್ಕಾಗಿ ಲಕ್ಷಾಂತರ ಭಕ್ತರು ಹರಿದು ಬರುವ ನೀರಿಕ್ಷೆ ಇದ್ದು, ಜಿಲ್ಲಾಡಳಿತ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲು ಭಕ್ತರು ಆಗಮಿಸಲಿದ್ದು, ಎರಡು ಸಾವಿರ ಪೊಲೀಸರು ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಮಠದ ಅವರಣದಲ್ಲಿ ಹಾಕಿರುವ ವೇದಿಕೆ ಮುಂಭಾಗ ಬ್ಯಾರಿಕೇಡ್ ಅಳವಡಿಸಿ ಸರತಿ ಸಾಲಿಗೆ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    ಬೆಳಗ್ಗೆ ಐದು ಗಂಟೆಗೆ ಅಮ್ಮನಿಗೆ ಮಠದ ಗುಹೆಯಲ್ಲಿ ಅರ್ಚಕರು ಹಾಲಿನಿಂದ ಅಭಿಷೇಕ ಮಾಡಿದ್ದಾರೆ. ವೀರಶೈವ ಲಿಂಗಾಯತ ಧರ್ಮದ ಪ್ರಕಾರ ಅಂತಿಮ ವಿಧಿವಿಧಾನ ನಡೆಯಲಿದ್ದು, ಮಠದ ಆವರಣದಲ್ಲಿಯೇ ಇರುವ ಶಿವಲಿಂಗದ ಆಕಾರದ ಸಮಾಧಿಯಲ್ಲಿ ಅವರನ್ನು ಲಿಂಗೈಕ್ಯ ಮಾಡಲಾಗುತ್ತದೆ. ಈ ಸಮಾಧಿಯನ್ನು ಸ್ವತಃ ಮಾತಾ ಮಾಣಿಕೇಶ್ವರಿ ಅವರೇ ನಿರ್ಮಾಣ ಮಾಡಿಕೊಂಡಿದ್ದರು.

    ಹೈದರಾಬಾದ್ ಕರ್ನಾಟಕ ಭಾಗದ ನಡೆದಾಡುವ ದೇವರು, ಪೀಠಾಧಿಪತಿ ಮಾತಾ ಮಾಣಿಕೇಶ್ವರಿ ಅಮ್ಮನವರು ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೀಗಾಗಿ ಜಿಲ್ಲೆಯ ಸೇಡಂ ತಾಲೂಕಿನ ಯಾನಾಗುಂದಿಯ ಮಠದಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಶನಿವಾರ ರಾತ್ರಿ ಲಿಂಗೈಕ್ಯರಾಗಿದ್ದರು.