Tag: ಅಂತಿಮ ದರ್ಶನ

  • ಆತ್ಮೀಯ ಸ್ನೇಹಿತ, ಅಜಾತಶತ್ರುವನ್ನು ಕಳೆದುಕೊಂಡಿದ್ದೇನೆ: ಸಿಎಂ ಕುಮಾರಸ್ವಾಮಿ

    ಆತ್ಮೀಯ ಸ್ನೇಹಿತ, ಅಜಾತಶತ್ರುವನ್ನು ಕಳೆದುಕೊಂಡಿದ್ದೇನೆ: ಸಿಎಂ ಕುಮಾರಸ್ವಾಮಿ

    ಬೆಂಗಳೂರು: ಆತ್ಮೀಯ ಸ್ನೇಹಿತ ಹಾಗೂ ಅಜಾತಶತ್ರುವಾಗಿದ್ದ ಕೇಂದ್ರ ಸಚಿವ ಹಾಗೂ ರಾಜ್ಯ ಬಿಜೆಪಿ ಮುಖಂಡ ಅನಂತಕುಮಾರ್ ಸಾವಿನ ಸುದ್ದಿ ಸಿಡಿಲುಬಡಿದಂತಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಂಬನಿ ಮಿಡಿದಿದ್ದಾರೆ.

    ವಿಶ್ರಾಂತಿ ನಿಮಿತ್ತ ಮೈಸೂರಿಗೆ ತೆರಳಿದ್ದ ಸಿಎಂ ಕುಮಾರಸ್ವಾಮಿಯವರು ಅನಂತಕುಮಾರ್ ಅವರ ಸಾವಿನ ಸುದ್ದಿ ಕೇಳುತ್ತಲೇ ಬೆಂಗಳೂರಿಗೆ ವಾಪಾಸ್ಸಾಗಿದ್ದರು. ನಂತರ ಬಸವನಗುಡಿಯಲ್ಲಿರುವ ಸುಮೇರು ನಿವಾಸಕ್ಕೆ ಭೇಟಿ ನೀಡಿ, ಅನಂತಕುಮಾರ್ ಅವರ ಅಂತಿಮ ದರ್ಶನ ಪಡೆದುಕೊಂಡರು.

    ದರ್ಶನ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವರು ಹಾಗೂ ನನ್ನ ಆತ್ಮೀಯ ಸ್ನೇಹಿತರಾಗಿದ್ದ ಅನಂತಕುಮಾರ್ ಅವರ ನಿಧನ ಸುದ್ದಿ ನನಗೂ ಸೇರಿದಂತೆ ಲಕ್ಷಾಂತರ ಅಭಿಮಾನಿಗಳಿಗೆ ಆಘಾತ ತಂದಿದೆ. ಈ ದುಃಖವನ್ನು ಭರಿಸುವ ಶಕ್ತಿ, ದೇವರು ಅವರ ಕುಟುಂಬಕ್ಕೆ ನೀಡಲಿ. ಈ ರೀತಿ ಅವರು ನಮ್ಮನ್ನೆಲ್ಲಾ ಅಗಲಿ ಹೋಗುತ್ತಾರೆಂದು ನಿರೀಕ್ಷಿಸಿರಲಿಲ್ಲ. ನಾಡಿನ ಲಕ್ಷಾಂತರ ಅಭಿಮಾನಿಗಳನ್ನು ಅನಾಥರನ್ನಾಗಿ ಬಿಟ್ಟು ಹೋಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆಂದು ಹೇಳಿದರು.

    ಸಾಮಾನ್ಯ ಕುಟುಂಬದಲ್ಲಿ ಜನಿಸಿ, ರಾಷ್ಟ್ರಮಟ್ಟದಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಣೆ ಮಾಡಿದ್ದರು. ಕೇಂದ್ರದ ಸಚಿವರಾಗಿ ನಾಡಿಗೆ ಸಲ್ಲಿಸಿರುವ ಸೇವೆ ಅಪಾರ. ಒಂದು ಪಕ್ಷದ ನಾಯಕರಾಗಿ, ಯಾವೊಂದು ಪಕ್ಷದ ಮುಖಂಡರ ಜೊತೆ ಸಂಘರ್ಷಕ್ಕೆ ಅವಕಾಶ ಮಾಡಿಕೊಡದೇ, ಎಲ್ಲರೊಂದಿಗೂ ಆತ್ಮೀಯವಾಗಿ ಬೆರೆಯುವ ಮೂಲಕ ಅಜಾತಶತ್ರು ಎಂದೆನಿಸಿಕೊಂಡಿದ್ದರು. ಕಾಕತಾಳಿಯವಂತೆ ಇಬ್ಬರೂ 1996 ರಲ್ಲಿ ಲೋಕಸಭೆ ಸಂಸದರಾಗಿ ಆಯ್ಕೆಯಾಗಿದ್ದೆವು ಎಂದು ತಮ್ಮ ನೆನಪನ್ನು ಹಂಚಿಕೊಂಡರು.

    ತಮ್ಮ ಕಿರಿಯ ವಯಸ್ಸಿನಲ್ಲೇ ನಾಡಿಗೆ ಅಪಾರವಾದ ಸೇವೆ ಸಲ್ಲಿಸಿದ್ದರು. ಆದರೆ ಅವಶ್ಯಕತೆಯಿರುವಾಗ ಅವರ ಸಾವು ವೈಯಕ್ತಿಕವಾಗಿ ನನಗೆ ತುಂಬಲಾರದ ನಷ್ಟತಂದಿದೆ. ನಾನು 2ನೇ ಬಾರಿ ಮುಖ್ಯಮಂತ್ರಿಯಾಗಿ ಜೂನ್ ತಿಂಗಳಲ್ಲಿ ದೆಹಲಿಗೆ ಹೋಗಿದ್ದೆ, ಆಗ ಅವರನ್ನು ಭೇಟಿ ಮಾಡಿದ್ದೆ. ಅಂದು ಅವರು ಆರೋಗ್ಯವಾಗಿಯೇ ಇದ್ದರು. ಅಚಾನಕ್ ಆಗಿ ಅನಾರೋಗ್ಯದಿಂದ ಆಸ್ಪತ್ರೆ ಸೇರಿಕೊಂಡು, ನಾವು ಊಹೆ ಮಾಡದ ರೀತಿ ಬಾರದ ಲೋಕಕ್ಕೆ ಹೋಗಿದ್ದಾರೆಂದು ಬೇಸರ ವ್ಯಕ್ತಪಡಿಸಿದರು.

    ಜವರಾಯ ಕರೆದಾಗ ಎಲ್ಲರೂ ಹೋಗಲೇಬೇಕು. ಅವನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಜವರಾಯನ ಕರೆಗೆ ಎಲ್ಲರೂ ತಲೆಬಾಗಲೇ ಬೇಕು. ಆದರೆ ಈ ರೀತಿ ಆಗುತ್ತದೆಂದು ನಿರೀಕ್ಷಿಸಿರಲಿಲ್ಲ. ನಾನು ಆತ್ಮೀಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆಂದು ಭಾವುಕರಾದರು. ಇದನ್ನೂ ಓದಿ: ರಾಜಕಾರಣಕ್ಕೂ ಮೀರಿದ ಸ್ನೇಹ ನಮ್ಮ ಕುಟುಂಬಗಳ ಮಧ್ಯೆ ಇತ್ತು- ಸಿಎಂ ಸಂತಾಪ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ರಾಷ್ಟ್ರದ ಜನಪ್ರಿಯ ನಾಯಕರೊಬ್ರು ಅಸ್ತಂಗತವಾಗ್ತಿದ್ದಾರೆ- ಎಸ್‍.ಎಂ ಕೃಷ್ಣ ಸಂತಾಪ

    ರಾಷ್ಟ್ರದ ಜನಪ್ರಿಯ ನಾಯಕರೊಬ್ರು ಅಸ್ತಂಗತವಾಗ್ತಿದ್ದಾರೆ- ಎಸ್‍.ಎಂ ಕೃಷ್ಣ ಸಂತಾಪ

    ಬೆಂಗಳೂರು: ನನ್ನ ಸ್ನೇಹಿತರಾದಂತಹ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಹಠಾತ್ ನಿಧನ ನನಗೆ ಹಾಗೂ ಅವರ ಸಹಸ್ರಾರು ಸ್ನೇಹಿತರಿಗೆ ಬಹಳ ದೊಡ್ಡ ಆಘಾತವನ್ನುಂಟು ಮಾಡಿದೆ. ಈ ಮೂಲಕ ಇಂದು ರಾಷ್ಟ್ರದ ಜನಪ್ರಿಯ ನಾಯಕರೊಬ್ಬರು ಅಸ್ತಂಗತವಾಗ್ತಿದ್ದಾರೆ ಅಂತ ಮಾಜಿ ಮುಖ್ಯಮಂತ್ರಿ, ಮಾಜಿ ವಿದೇಶಾಂಗ ಮಂತ್ರಿ ಎಸ್. ಎಂ ಕೃಷ್ಣ ಸಂತಾಪ ಸೂಚಿಸಿದ್ದಾರೆ.

    ಅನಂತ್ ಕುಮಾರ್ ಅವರ ಬೆಂಗಳೂರು ನಿವಾಸದಲ್ಲಿ ಸಚಿವರ ಅಂತಿಮ ದರ್ಶನ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ, ಕರ್ನಾಟಕದ ಯಾವುದೇ ಜ್ವಲಂತ ಸಮಸ್ಯೆ ಎದುರು ಬಂದಾಗ ನನ್ನ ಕಣ್ಣಿಗೆ ದೆಹಲಿ ಮಟ್ಟದಲ್ಲಿ ಕಾಣುತ್ತಿದ್ದ ಮೊದಲಿಗ ಅಂದ್ರೆ ಅದು ಅನಂತ್ ಕುಮಾರ್ ಅವರಾಗಿದ್ದರು. ನದಿ ನೀರು, ಗಡಿ ಪ್ರಶ್ನೆ ಇರಬಹುದು ಅಥವಾ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಈ ಎಲ್ಲಾ ವಿಚಾರಗಳಲ್ಲಿಯೂ ನಾನು ಮತ್ತು ಅವರು ಬೇರೆ ಬೇರೆ ಪಕ್ಷದಲ್ಲಿದ್ದರೂ ಕೂಡ ನನ್ನ ಭುಜಕ್ಕೆ ಭುಜ ಕೊಟ್ಟು ಕರ್ನಾಟಕದ ಬೆಳವಣಿಗೆಗೆ ಸರ್ವತೋಮುಖವಾಗಿ ಸಹಕಾರ ಕೊಟ್ಟು ಸಹಾಯ ಮಾಡಿದ ಅವರನ್ನು ಇಂದು ನಾನು ಅತ್ಯಂತ ಬೇಸರದಿಂದ ಸ್ಮರಿಸಿಕೊಳ್ಳುತ್ತಿದ್ದೇನೆ ಅಂತ ಹೇಳಿದ್ರು.

    ಅನಂತ್ ಕುಮಾರ್ ಅವರು ವಿಶೇಷ ಗುಣವೆಂದರೆ, ಎಲ್ಲರೂ ನನ್ನವರೇ ಎಂಬ ಅತ್ಯಂತ ದೊಡ್ಡ ಹೃದಯ ವೈಶಾಲ್ಯದಿಂದ ಜನರನ್ನು ನೋಡುತ್ತಿದ್ದರು. ಇದು ಕೇವಲ ರಾಜ್ಯ ಮಟ್ಟದಲ್ಲಿ ಅಲ್ಲ. ರಾಷ್ಟ್ರಮಟ್ಟದಲ್ಲೂ ಅವರ ಗುಣ ಇದೇ ಆಗಿತ್ತು. ನಾನು ವಿದೇಶಾಂಗ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಅವರನ್ನು ವಿರೋಧ ಪಕ್ಷದಲ್ಲಿ ನೋಡುತ್ತಿದ್ದೆ. ಆ ವೇಳೆ ಅನಂತ್ ಅವರು ಇಡೀ ದೇಶದಲ್ಲಿ ತಮ್ಮ ವ್ಯಕ್ತಿತ್ವದ ಛಾಯೆಯ ಛಾಪು ಮೂಡಿಸಿದ್ರು. ಆದ್ರೆ ವಿಧಿ ತನ್ನ ಕೈವಾಡ ಮಾಡುತ್ತಲೇ ಇರುತ್ತದೆ. ಇಂದು ಅತ್ಯಂತ ಜನಪ್ರಿಯ ನಾಯಕನೊಬ್ಬ ರಾಷ್ಟ್ರದಿಂದ ಅಸ್ತಂಗತವಾಗುತ್ತಿದ್ದಾರೆ. ಅವರಿಗೆ ನನ್ನ ಗೌರವಪೂರ್ಣ ನಮನ ಸಲ್ಲಿಸಲು ಅವರ ಮನೆಗೆ ಬಂದಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಅಂತ ಕೃಷ್ಣ ಅವರು ಸಂತಾಪ ಸೂಚಿಸಿದ್ರು.

    https://www.youtube.com/watch?v=48qGsizNGvg

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಅನಂತ ಕುಮಾರ್ ಅಂತಿಮ ದರ್ಶನ ಪಡೆದ ಪವರ್ ಸ್ಟಾರ್

    ಅನಂತ ಕುಮಾರ್ ಅಂತಿಮ ದರ್ಶನ ಪಡೆದ ಪವರ್ ಸ್ಟಾರ್

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ಕೇಂದ್ರ ಸಚಿವ ಅನಂತ ಕುಮಾರ್ ಅವರ ಅಂತಿಮ ದರ್ಶನ ಪಡೆದಿದ್ದಾರೆ.

    ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ, ಕರ್ನಾಟಕ ಬಿಜೆಪಿಯ ಹಿರಿಯ ಮುಖಂಡ ಎಚ್.ಎನ್. ಅನಂತಕುಮಾರ್ (59) ನಿಧನರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅನಂತ ಕುಮಾರ್ ಅವರು ಸೋಮವಾರ ನಸುಕಿನ ಜಾವ ಎರಡು ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

    ಇತ್ತೀಚೆಗೆ ತೀವ್ರ ಅನಾರೋಗ್ಯಪೀಡಿತರಾಗಿದ್ದ ಅನಂತಕುಮಾರ್ ಅವರನ್ನು ಕಳೆದ ಎರಡು ದಿನಗಳಿಂದ ವೆಂಟಿಲೇಟರ್‍ನಲ್ಲಿ ಇಡಲಾಗಿತ್ತು. ಅನಂತಕುಮಾರ್ ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ನಾಳೆ ಬೆಳಗ್ಗೆ ಪ್ರಧಾನಿ ಮೋದಿ ಬೆಂಗಳೂರಿಗೆ ಬರಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

  • ಕರುಣಾನಿಧಿ ಅಂತಿಮ ದರ್ಶನಕ್ಕೆ ಆಗಮಿಸಿದ ಪ್ರಧಾನಿ ಮೋದಿ

    ಕರುಣಾನಿಧಿ ಅಂತಿಮ ದರ್ಶನಕ್ಕೆ ಆಗಮಿಸಿದ ಪ್ರಧಾನಿ ಮೋದಿ

    ಚೆನ್ನೈ: ತಮಿಳುನಾಡು ಮಾಜಿ ಪ್ರಧಾನಿ ಹಾಗೂ ಡಿಎಂಕೆ ಮುಖ್ಯಸ್ಥ ಕರುಣಾ ನಿಧಿಯವರ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರಂದ್ರ ಮೋದಿಯವರು ಚೆನ್ನೈಗೆ ಬಂದಿಳಿದಿದ್ದಾರೆ.

    ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಚೆನ್ನೈಗೆ ಬಂದಿಳಿದ ಮೋದಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ರಾಜಾಜಿ ಹಾಲ್ ಗೆ ತೆರಳಲಿದ್ದಾರೆ. ಪ್ರಧಾನಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆಯೇ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪಳನೀ ಸ್ವಾಮಿ, ರಾಜ್ಯಪಾಲರು ಮತ್ತಿರರು ಸ್ವಾಗತಿಸಿದ್ದಾರೆ.

    ಇತ್ತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಕೂಡ ಬೆಂಗಳೂರಿನಿಂದ ಚೆನ್ನೈಗೆ ತೆರಳಿದ್ದಾರೆ. ಅಲ್ಲದೇ ಮಧ್ಯಾಹ್ನ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡ ಚೆನ್ನೈಗೆ ಬರಲಿದ್ದು, ಕರುಣಾನಿಧಿಯವರ ಅಂತಿಮ ದರ್ಶನ ಪಡೆಯಲಿದ್ದಾರೆ.

    ರಾಜಾಜಿ ಹಾಲ್ ಗೆ ತಮಿಳುನಾಡಿನಾದ್ಯಂತ ಲಕ್ಷಾಂತರ ಜನ, ರಾಜಕೀಯ ಧುರೀಣರು, ಚಿತ್ರ ನಟರು ಮೊದಲಾದ ಗಣ್ಯಾತೀಗಣ್ಯರು ಆಗಮಿಸಿ, ಕಲೈನಾರ್ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

    ಆಸ್ಪತ್ರೆಯಲ್ಲಿಯೇ ನಿಧನ:
    ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಅವರು ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ವಿಧಿವಶರಾದ್ರು.

    ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ರಾತ್ರಿ 9.30ರ ಸುಮಾರಿಗೆ ಕಾವೇರಿ ಆಸ್ಪತ್ರೆಯಿಂದ ಗೋಪಾಲಪುರಂ ನಿವಾಸಕ್ಕೆ ಕೊಂಡೊಯ್ದು ಅಂತಿಮ ದರ್ಶನಕ್ಕಿಡಲಾಗಿತ್ತು. ಈ ವೇಳೆ ನಟ ರಜಿನಿಕಾಂತ್, ಪಶ್ಚಿಮಗಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು. ಬಳಿಕ ಮಧ್ಯರಾತ್ರಿ 1.30 ರ ಸುಮಾರಿಗೆ ಸಿಐಟಿ ಕಾಲೋನಿಯಲ್ಲಿರುವ ಪುತ್ರಿ ಕನಿಮೋಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯ್ತು. ನಸುಕಿನ ಜಾವ 5.30ರ ನಂತರ ರಾಜಾಜಿ ಹಾಲ್‍ನಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿದ್ದು, ಸಾಗರೋಪಾದಿಯಲ್ಲಿ ಜನ ಹರಿದು ಬರ್ತಿದ್ದಾರೆ.

    ಐದು ಬಾರಿ ಮುಖ್ಯಮಂತ್ರಿ:
    ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು.

  • ರಾಜಾಜಿಹಾಲ್‍ನಲ್ಲಿ ಕರುಣಾನಿಧಿ ಪಾರ್ಥಿವ ಶರೀರ-ಸಾವಿರಾರು ಜನರಿಂದ ಅಂತಿಮ ದರ್ಶನ

    ರಾಜಾಜಿಹಾಲ್‍ನಲ್ಲಿ ಕರುಣಾನಿಧಿ ಪಾರ್ಥಿವ ಶರೀರ-ಸಾವಿರಾರು ಜನರಿಂದ ಅಂತಿಮ ದರ್ಶನ

    ಚೆನ್ನೈ: ತಮಿಳುನಾಡಿನ ಅಪೂರ್ವ ನಿಧಿ ಕಲೈನಾರ್ ಮರೆಯಾಗಿದ್ದಾರೆ. ನಿಧಿ ಇಲ್ಲದ ದ್ರಾವಿಡ ನಾಡು ಬಡವಾಗಿದ್ದು, ರಾಜ್ಯದಲ್ಲಿ ಕಣ್ಣೀರ ಕೋಡಿ ಹರಿದಿದೆ. ಪತ್ನಿಯರಿಬ್ಬರು, ನಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿರುವ ಮುತ್ತುವೇಲು ನಿಧನಕ್ಕೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

    ಮಂಗಳವಾರ ಸಂಜೆ 6 ಗಂಟೆ 10 ನಿಮಿಷಕ್ಕೆ ಕಾವೇರಿ ಆಸ್ಪತ್ರೆ ವೈದ್ಯರು ಕರುಣಾನಿಧಿ ಅವರ ಸಾವಿನ ಸುದ್ದಿಯನ್ನ ಪ್ರಕಟಿಸಿದ್ದರು. ನಂತ್ರ ಕರುಣಾನಿಧಿ ಅವರ ಪಾರ್ಥಿವ ಶರೀರವನ್ನು ರಾತ್ರಿ 9.30ರ ಸುಮಾರಿಗೆ ಕಾವೇರಿ ಆಸ್ಪತ್ರೆಯಿಂದ ಗೋಪಾಲಪುರಂ ನಿವಾಸಕ್ಕೆ ಕೊಂಡೊಯ್ದು ಅಂತಿಮ ದರ್ಶನಕ್ಕಿಡಲಾಗಿತ್ತು. ಈ ವೇಳೆ ನಟ ರಜಿನಿಕಾಂತ್, ಪಶ್ಚಿಮಗಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ಗಣ್ಯಾತಿಗಣ್ಯರು ಅಂತಿಮ ದರ್ಶನ ಪಡೆದರು. ಇದನ್ನೂ ಓದಿ: ಕರುಣಾನಿಧಿ ಯಾವಾಗಲೂ ಕಪ್ಪು ಕನ್ನಡಕವನ್ನೇ ಧರಿಸುತ್ತಿದ್ದರು ಯಾಕೆ?

    ಮಧ್ಯರಾತ್ರಿ 1.30 ರ ಸುಮಾರಿಗೆ ಸಿಐಟಿ ಕಾಲೋನಿಯಲ್ಲಿರುವ ಪುತ್ರಿ ಕನಿಮೋಳಿ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯ್ತು. ನಸುಕಿನ ಜಾವ 5.30ರ ನಂತರ ರಾಜಾಜಿ ಹಾಲ್‍ನಲ್ಲಿ ಸಾರ್ವಜನಿಕ ದರ್ಶನಕ್ಕಿಡಲಾಗಿದ್ದು, ಸಾಗರೋಪಾದಿಯಲ್ಲಿ ಜನ ಹರಿದು ಬರ್ತಿದ್ದಾರೆ.   ಇದನ್ನೂ ಓದಿ: ಸಾಹಿತಿ, ಹೋರಾಟಗಾರ, ಪತ್ರಕರ್ತ, ರಾಜಕೀಯ ನಾಯಕ: ಇಲ್ಲಿದೆ ಕರುಣಾನಿಧಿ ಹೆಜ್ಜೆಗುರುತು

     ತಮಿಳುನಾಡಿನ ಮಾಜಿ ಸಿಎಂ ಮತ್ತು ಡಿಎಂಕೆ ಮುಖ್ಯಸ್ಥ ಎಂ. ಕಲೈನರ್ ಕರುಣಾನಿಧಿ(94) ಅವರು ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದ ಅವರನ್ನು ಜುಲೈ 22ರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 22ರ ಬಳಿಕ ಕರುಣಾನಿಧಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ ಆರೋಗ್ಯದಲ್ಲಿ ಮತ್ತೇ ಏರಿಳಿತ ಕಂಡು ಬಂದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಾವೇರಿ ಆಸ್ಪತ್ರೆ ವೈದ್ಯರು ಸೋಮವಾರವೇ 24 ಗಂಟೆಗಳ ಕಾಲ ಯಾವ ಭರವಸೆಗಳನ್ನು ನೀಡೋದಕ್ಕೆ ಸಾಧ್ಯವಿಲ್ಲ. ಕ್ಷಣ ಕ್ಷಣಕ್ಕೂ ಕರುಣಾನಿಧಿ ಆರೋಗ್ಯ ಕ್ಷೀಣಿಸುತ್ತಿದೆ ಎಂದು ಸ್ಪಷ್ಟಪಡಿಸಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಂಜೆ ವಿಧಿವಶರಾದ್ರು. ಇದನ್ನೂ ಓದಿ: ಡಿಎಂಕೆ Vs ಎಐಎಡಿಎಂಕೆ: ಕರುಣಾ ಮೇಲೆ ಜಯಾ ಮುನಿಸಾಗಿದ್ದು ಯಾಕೆ? ಏನದು ಆ ಒಂದು ತಪ್ಪು?

    ಕರುಣಾನಿಧಿ ಅವರು 1924 ಜೂನ್ 3ರಂದು ಮದ್ರಾಸ್ ನ ನಾಗಪಟ್ಟಿನಂ ಜಿಲ್ಲೆಯ ಥಿರುಕ್ಕುವಲೈ ನಲ್ಲಿ ಜನಿಸಿದ್ದರು. ತಮಿಳುನಾಡಿನ ಮೂರನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದ ಇವರು ತಮಿಳುನಾಡಿನ ರಾಜಕೀಯ ಪಕ್ಷವಾದ ದ್ರಾವಿಡ ಮುನ್ನೇತ್ರ ಕಳಗಂ ನ ಅಧ್ಯಕ್ಷರಾಗಿದ್ದರು. 1969 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ಮತ್ತೆ 2006 ಮೇ 13 ರಂದು ಐದನೇ ಬಾರಿಗೆ ಮುಖ್ಯಮಂತ್ರಿಯಾಗಿದ್ದರು. ಇದನ್ನೂ ಓದಿ: ಬದುಕಿರುವಾಗಲೇ ದಂತಕಥೆಯಂತಿದ್ದ ಕರುಣಾನಿಧಿ ಜೊತೆಗಿನ ಒಡನಾಟವನ್ನು ಹಂಚಿಕೊಂಡ ಎಚ್‍ಡಿಕೆ

  • ಐಶ್ವರ್ಯ ರೈ, ಸೋನಂ ಕಪೂರ್ ಸೇರಿದಂತೆ ಬಾಲಿವುಡ್ ನಟ-ನಟಿಯರಿಂದ ಶ್ರೀದೇವಿ ಅಂತಿಮ ದರ್ಶನ

    ಐಶ್ವರ್ಯ ರೈ, ಸೋನಂ ಕಪೂರ್ ಸೇರಿದಂತೆ ಬಾಲಿವುಡ್ ನಟ-ನಟಿಯರಿಂದ ಶ್ರೀದೇವಿ ಅಂತಿಮ ದರ್ಶನ

    ಮುಂಬೈ: ಅನೇಕ ಬಾಲಿವುಡ್ ನಟ ನಟಿಯರು ಹಾಗೂ ಚಿತ್ರರಂಗದವರು ನಟಿ ಶ್ರೀದೇವಿಯ ಅಂತಿಮ ದರ್ಶನ ಪಡೆದಿದ್ದಾರೆ.

    ಮುಂಬೈನ ಲೋಖಂಡ್ವಾಲಾದ ಸೆಲೆಬ್ರೇಷನ್ ಸ್ಪೋರ್ಟ್ಸ್ ಕ್ಲಬ್‍ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಟಿ ಐಶ್ವರ್ಯಾ ರೈ ಬಚ್ಚನ್, ಜಯಾ ಬಚ್ಚನ್, ಜಯಪ್ರದಾ, ತಬು, ಸುಶ್ಮಿತಾ ಸೇನ್, ಮಾಧುರಿ ದೀಕ್ಷಿತ್, ಶ್ರೀದೇವಿಯ ಸೋದರ ಸೊಸೆ ಸೋನಂ ಕಪೂರ್, ಕಾಜೋಲ್, ಅಜಯ್ ದೇವಗನ್ ಮುಂತಾದ ಬಾಲಿವುಡ್ ನಟ ನಟಿಯರು ಸೇರಿದಂತೆ ಇತರೆ ಗಣ್ಯರು ಹಾಗೂ ಅಭಿಮಾನಿಗಳು ಶ್ರೀದೇವಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

    ಇಂದು ಮಧ್ಯಾಹ್ನ 2 ಗಂಟೆಗೆ ಶ್ರೀದೇವಿಯ ಅಂತಿಮ ಯಾತ್ರೆ ಆರಂಭವಾಗಲಿದ್ದು, 3.30ರ ವೇಳೆಗೆ ವಿಲೆ ಪಾರ್ಲೆ ವೆಸ್ಟ್‍ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

    ಸಂಬಂಧಿಕರ ಮದುವೆಗೆಂದು ದುಬೈಗೆ ತೆರಳಿದ್ದ ವೇಳೆ ಕಳೆದ ಶನಿವಾರ ಶ್ರೀದೇವಿ ಮೃತಪಟ್ಟಿದ್ದರು. ವೈದ್ಯಕೀಯ ಹಾಘೂ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಶ್ರೀದೇವಿ ಅವರ ಪಾರ್ಥೀವ ಶರೀರವನ್ನು ಮಂಗಳವಾರ ರಾತ್ರಿ ಮುಂಬೈಗೆ ತರಲಾಗಿತ್ತು.

    ಆಕಸ್ಮಿಕವಾಗಿ ಬಾತ್‍ಟಬ್‍ನಲ್ಲಿ ಮುಳುಗಿ ಶ್ರೀದೇವಿ ಸಾವನ್ನಪ್ಪಿದ್ದಾರೆಂದು ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಹೇಳಲಾಗಿದೆ.

  • ತೆಲಗಿ ಮೃತದೇಹದ ಮುಂದೆ ಕುಟುಂಬಸ್ಥರ ಗಲಾಟೆ

    ತೆಲಗಿ ಮೃತದೇಹದ ಮುಂದೆ ಕುಟುಂಬಸ್ಥರ ಗಲಾಟೆ

    ಬೆಳಗಾವಿ: ಬಹು ಅಂಗಾಂಗ ವೈಫಲ್ಯದಿಂದ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪಿದ್ದ ಬಹುಕೋಟಿ ಛಾಪಾಕಾಗದ ಹಗರಣದ ಆರೋಪಿ ಅಬ್ದುಲ್ ಕರೀಂ ತೆಲಗಿ ಮೃತದೇಹದ ಮುಂದೆಯೇ ಕುಟುಂಬಸ್ಥರು ಗಲಾಟೆ ಮಾಡಿಕೊಂಡಿರುವ ಘಟನೆ ನಡೆದಿದೆ.

    ತೆಲಗಿ ಮರಣ ನಂತರ ಆತನ ಮೃತದೇಹವನ್ನು ನೋಡಲು ಬಂದ ತೆಲಗಿ ಸಹೋದರ ಅಜಿಂ ತೆಲಗಿ ಹಾಗೂ ಮಗಳು ಸನ್ನಾ ಮಧ್ಯೆ ತೀವ್ರ ವಾಗ್ವಾದ ನಡೆದಿದೆ ಎಂದು ತಿಳಿದುಬಂದಿದೆ.

    ತೆಲಗಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಯಾರೂ ನಮ್ಮನ್ನು ನೋಡಲು ಬಂದಿರಲಿಲ್ಲ ಎಂದು ಆರೋಪಿಸಿರುವ ಸನ್ನಾ, ತೆಲಗಿ ಮೃತ ದೇಹದ ಅಂತಿಮ ದರ್ಶನ ಪಡೆಯಲು ಬಂದ ಅಜಿಂ ತೆಲಗಿ ಅವರಿಗೆ ಈಗ ನಿಮ್ಮ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. ಅಲ್ಲದೇ ಸನ್ನಾ ಅವರ ಮಾತುಗಳಿಂದ ಬೇಸತ್ತ ಅಜಿಂ ತೆಲಗಿ ತಕ್ಷಣ ಮನೆಯಿಂದ ಹೊರನಡೆದಿದ್ದಾರೆ.

    ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಮೃತಪಟ್ಟ ತೆಲಗಿ ಮೃತದೇಹವನ್ನು ಆಂಬುಲೆನ್ಸ್ ಮೂಲಕ ಬೆಳಗಾವಿಯ ಖಾನಾಪುರದ ವಿದ್ಯಾನಗರದ ಮನೆಗೆ ಕೊಂಡೊಯ್ಯಲಾಗಿತ್ತು. ತೆಲಗಿಯ ಅಂತಿಮ ದರ್ಶನದ ವ್ಯವಸ್ಥೆಯನ್ನು ಇಂದು 10 ಗಂಟೆಯ ವರೆಗೆ ಖಾನಾಪುರದಲ್ಲಿ ಏರ್ಪಡಿಸಲಾಗಿದ್ದು, ನಂತರ ಮುಸ್ಲಿಂ ಸಾಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

    2006ರ ಜನವರಿ 17ರಂದು ನಕಲಿ ಛಾಪಾಕಾಗದ ಹಗರಣದಲ್ಲಿ ತೆಲಗಿಗೆ 30 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿತ್ತು.

    ಇದನ್ನೂ ಓದಿ: ತೆಲಗಿ ಬದುಕಿದ್ದರೆ ಇನ್ನು 12 ದಿನಗಳಲ್ಲಿ ಜೈಲಿಂದ ಹೊರಬರುತ್ತಿದ್ದನಂತೆ!