Tag: ಅಂತಿಮ ಸಂಸ್ಕಾರ

  • ಲೀಲಮ್ಮನ ಫೋಟೋ ಮುಂದೆ ಕುಳಿತು ಮೂಕ ವೇದನೆ – ಕಣ್ಣೀರಿಟ್ಟ ಪ್ರೀತಿಯ ಶ್ವಾನ!

    ಲೀಲಮ್ಮನ ಫೋಟೋ ಮುಂದೆ ಕುಳಿತು ಮೂಕ ವೇದನೆ – ಕಣ್ಣೀರಿಟ್ಟ ಪ್ರೀತಿಯ ಶ್ವಾನ!

    ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ (Leelavati) ಅವರ ನಿಧನಕ್ಕೆ ನಾಡಿನ ಗಣ್ಯಮಾನ್ಯರು ಕಂಬನಿ ಮಿಡಿದಿದ್ದಾರೆ.

    ಬೆಳಗ್ಗೆ ಸುಮಾರು 10 ಗಂಟೆಯವರೆಗೂ ಸಾರ್ವಜನಿಕರಿಗೆ ಪಾರ್ಥೀವ ಶರೀರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ದರ್ಶನ ಪಡೆದವರೆಲ್ಲರೂ ಲೀಲಾವತಿ ಅವರ ಸಮಾಜಮುಖಿ ಕಾರ್ಯಗಳ ಬಗ್ಗೆ ಗುಣಗಾನ ಮಾಡುತ್ತಿದ್ದಾರೆ. ಅವರ ನೆಚ್ಚಿನ ಸೋಲದೇವನಹಳ್ಳಿ ತೋಟದ ಮನೆಯಲ್ಲೂ ನೀರವ ಮೌನ ಮಡುಗಟ್ಟಿದೆ. ಅದರಲ್ಲೂ ಲೀಲಾವತಿಯವರ ಅಚ್ಚು ಮೆಚ್ಚಿನ ಶ್ವಾನ (Dog) ಕರಿಯನ ಮುಖ ವೇದನ ಕೂಡ ಹೇಳತೀರದಾಗಿದೆ. ಇದನ್ನೂ ಓದಿ: ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪಿಎಂ ಮೋದಿ ಸಂತಾಪ

    ಮನೆಯ ಒಳಭಾಗಲ್ಲಿ ಇಟ್ಟಿರುವ ಲೀಲಾವತಿಯವರ ಪೋಟೋ ಮುಂದೆ ಕುಳಿತು ನಾಯಿಯ ವೇದನೆ ಅನುಭವಿಸುತ್ತಿದೆ. ಕಳೆದ ಅನೇಕ ವರ್ಷಗಳಿಂದ ಲೀಲಾವತಿಯವರ ಅಚ್ಚುಮೆಚ್ಚಿನ ಶ್ವಾನವಾಗಿದ್ದ ಕರಿಯ, ರಾತ್ರಿಯಿಂದ ಮನೆಯಲ್ಲಿ ಲೀಲಾವತಿಯವರು ಕಾಣದ ಹಿನ್ನೆಲೆ ಪೋಟೋ ಮುಂದೆ ಕುಳಿತು ವೇದನೆ ಅನುಭವಿಸುತ್ತಿದೆ. ಇದನ್ನೂ ಓದಿ: ಸೋಲದೇವನಹಳ್ಳಿ ತೋಟದಲ್ಲಿ ಲೀಲಾವತಿ ಅಂತಿಮ ಸಂಸ್ಕಾರ

    ಎರಡು ಕಾಲುಗಳಲ್ಲಿ ಬಹುತೇಕ ಸ್ವಾಧೀನ ಕಳೆದುಕೊಂಡಿದ್ದರೂ, ತೆವಳಿಕೊಂಡೇ ಮನೆಯ ಒಳಗೆ ಬಂದಿರುವ ಶ್ವಾನ ಲೀಲಾವತಿ ಅವರ ಫೋಟೋ ಮುಂದೆಯೇ ಕುಳಿತಿದೆ. ಕಣ್ಣಲ್ಲಿ ನೀರು ಕಚ್ಚಿಕೊಂಡಿದ್ದು, ಮೂಕ ವೇದನೆ ಅನುಭವಿಸಿದೆ. ಈ ದೃಶ್ಯ ಲೀಲಾವತಿ ಅವರ ಅಭಿಮಾನಿಗಳಿಗೂ ಕಣ್ಣೀರು ತರಿಸಿದೆ. ಇದನ್ನೂ ಓದಿ: ಸಿಎಂ, ಗಣ್ಯರ ಅಂತಿಮ ದರ್ಶನದ ಬಳಿಕ ಲೀಲಾವತಿ ಅಂತಿಮ ಸಂಸ್ಕಾರ

  • ಸಿಎಂ, ಗಣ್ಯರ ಅಂತಿಮ ದರ್ಶನದ ಬಳಿಕ ಲೀಲಾವತಿ ಅಂತಿಮ ಸಂಸ್ಕಾರ

    ಸಿಎಂ, ಗಣ್ಯರ ಅಂತಿಮ ದರ್ಶನದ ಬಳಿಕ ಲೀಲಾವತಿ ಅಂತಿಮ ಸಂಸ್ಕಾರ

    – ಸೋಲದೇವನಹಳ್ಳಿ ತೋಟದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

    ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು (Cremation) ಅವರ ನೆಚ್ಚಿನ ತೋಟದಲ್ಲಿ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ (Soladevanahalli) ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದೆ.

    ಈಗಾಗಲೇ ಜೆಸಿಬಿ ಮೂಲಕ ಫಾರ್ಮ್‌ಹೌಸ್‌ನಲ್ಲಿ ಸಮಾಧಿ ತೆಗೆಯುವ ಕಾರ್ಯ ಆರಂಭಗೊಂಡಿದ್ದು, ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆಗೆ ತರಯಾರಿ ಶುರುವಾಗಿದೆ. ಮತ್ತೊಂದೆಡೆ ಭದ್ರತೆಗೆ ನಿಯೋಜನೆಗೊಂಡಿರುವ ಪೊಲೀಸ್‌ ಅಧಿಕಾರಿಗಳು ಬರುವ ಗಣ್ಯರಿಗೆ ಅಂತಿಮ ದರ್ಶನ ಪಡೆಯಲು ಸೂಕ್ತ ವ್ಯವಸ್ಥೆ ಕಲ್ಪಿಸುತ್ತಿದ್ದಾರೆ. ಇದನ್ನೂ ಓದಿ: ಲೀಲಾವತಿ ಖಾಸಗಿ ವಿಷಯ ಹೇಳಿ ತುಂಬಾ ಅತ್ತಿದ್ದರು: ನಟಿ ಸರೋಜಾದೇವಿ

    ಬೆಳಗ್ಗೆ 9:30ರ ವರೆಗೆ ಸಾರ್ವಜನಿಕರಿಗೆ ಪಾರ್ಥಿವ ಶರೀರ ದರ್ಶನ ಪಡೆಯಲು ಅವಕಾಶ ಮಾಡಿಕೊಡಲಾಗಿದೆ. ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮೈದಾನ ಸುತ್ತ ಪೊಲೀಸ್ ಭದ್ರತೆ ಹೆಚ್ಚಳ ಮಾಡಲಾಗಿದೆ. ಬೆಳಗ್ಗೆಯಿಂದಲೇ ಸಾರ್ವಜನಿಕರು ದರ್ಶನ ಪಡೆಯುತ್ತಿದ್ದು, ಎಲ್ಲರೂ ಲೀಲಾವತಿ ಅವರ ಅವರ ಸಮಾಜಮುಖಿ ಕಾರ್ಯಗಳ ಬಗ್ಗೆ ಗುಣಗಾನ ಮಾಡುತ್ತಿದ್ದಾರೆ. ಬೆಳಗ್ಗೆ 11 ಗಂಟೆ ವೇಳೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಲಿದ್ದಾರೆ. ಇತರ ಗಣ್ಯರೂ ಅಂತಿಮ ದರ್ಶನ ಪಡೆದ ಬಳಿಕ ಅಂತ್ಯಕ್ರಿಯೆ ಕಾರ್ಯ ನೆರವೇರಲಿದೆ. ಇದನ್ನೂ ಓದಿ: ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆ ಕಾವು – 14 ಸಂಘಟನೆಗಳಿಂದ ಸಾಲು ಸಾಲು ಧರಣಿ

    ಪೊಲೀಸ್‌ ಭದ್ರತೆ ಹೇಗೆ?
    ಶನಿವಾರ (ಇಂದು) ಮಧ್ಯಾಹ್ನ ಮೆರವಣಿಗೆ ಮೂಲಕ ಸೋಲದೇವನಹಳ್ಳಿಯ ತೋಟಕ್ಕೆ ತೆರಳಿ, ಅಲ್ಲಿ ಮಣ್ಣು ಮಾಡುವ ಮೂಲಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಅವರ ಕುಟುಂಬದೊಂದಿಗೆ ಮಾತನಾಡಲಾಗಿದೆ. ಲೀಲಾವತಿ ಅಂತಿಮ ದರ್ಶನದ ಭದ್ರತೆಗೆ 500 ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ, ಹೆಚ್ಚುವರಿ ಎಸ್ಪಿ ನೇತೃತ್ವದಲ್ಲಿ 6 ಮಂದಿ ಡಿವೈಎಸ್ಪಿ, 15 ಮಂದಿ ಇನ್ಸ್‌ಪೆಕ್ಟರ್‌ ಹೆಚ್ಚುವರಿಯಾಗಿ ಕೆಎಸ್ಆರ್‌ಪಿ ತುಕಡಿಗಳ ನಿಯೋಜನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ತಿಳಿಸಿದ್ದಾರೆ. ಇದನ್ನೂ ಓದಿ: ಲೀಲಾವತಿ ವಯಸ್ಸು ಚಿಕಿತ್ಸೆಗೆ ಸ್ಪಂದಿಸಲಿಲ್ಲ: ಡಾ.ವಿಕಾಸ್

  • ಸೋಲದೇವನಹಳ್ಳಿ ತೋಟದಲ್ಲಿ ಲೀಲಾವತಿ ಅಂತಿಮ ಸಂಸ್ಕಾರ

    ಸೋಲದೇವನಹಳ್ಳಿ ತೋಟದಲ್ಲಿ ಲೀಲಾವತಿ ಅಂತಿಮ ಸಂಸ್ಕಾರ

    ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು (Cremation) ಅವರ ನೆಚ್ಚಿನ ತೋಟದಲ್ಲಿ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ನೆಲಮಂಗಲ ಸಮೀಪದ ಸೋಲದೇವನಹಳ್ಳಿ (Soladevanahalli) ತೋಟದಲ್ಲಿ ಲೀಲಾವತಿ ಅವರ ಅಂತಿಮ ಸಂಸ್ಕಾರ ಮಾಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಎಸ್ಪಿ ‘ಇಂದು ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ನಾಳೆ ಮಧ್ಯಾನ್ಹ ಮೆರವಣಿಗೆ ಮೂಲಕ ಸೋಲದೇವನಹಳ್ಳಿಯ ತೋಟಕ್ಕೆ ತೆರಳಿ, ಅಲ್ಲಿ ಮಣ್ಣು ಮಾಡುವ ಮೂಲಕ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಲು ಅವರ ಕುಟುಂಬದೊಂದಿಗೆ ಮಾತನಾಡಲಾಗಿದೆ. ಲೀಲಾವತಿ ಅಂತಿಮ ದರ್ಶನದ  ಭದ್ರತೆಗೆ 500 ಪೊಲೀಸರ ನಿಯೋಜನೆ ಮಾಡಲಾಗಿದೆ. ಎಸ್ಪಿ, ಹೆಚ್ಚವರಿ ಎಸ್ಪಿ ನೇತೃತ್ವದಲ್ಲಿ 6 ಮಂದಿ ಡಿವೈಎಸ್ಪಿ, 15 ಮಂದಿ ಇನ್ಸೆಪೆಕ್ಟರ್ಸ್ ಹೆಚ್ಚುವರಿಯಾಗಿ ಕೆಎಸ್ಆರ್ಪಿ ತುಕಡಿಗಳ ನಿಯೋಜನೆಗೆ ಸಿದ್ದತೆ ಮಾಡಿಕೊಳ್ಳಲಾಗಿದೆ’ ಎಂದರು.

    ಲೀಲಾವತಿ ಅವರು ಅಂತಿಮ ದರ್ಶನಕ್ಕೆ ಇಪ್ಪತ್ತು ಸಾವಿರದಷ್ಟು ಜನರು ಬರುವ ಸಾಧ್ಯತೆ ಇದ್ದು, ಅದರಂತೆ ಸಾರ್ವಜನಿಕ ದರ್ಶನಕ್ಕೆ ಬರುವವರಿಗೆ ಯಾವುದೇ ರೀತಿಯಾಗಿ ಅಡೆತಡೆಗಳು ಆಗದಂತೆ ಸಿದ್ದತೆ ಮಾಡಿಕೊಳ್ಳಲಾಗಿದೆಯಂತೆ. ವಿವಿಐಪಿಗಳಿಗೆ ಹಾಗೂ ಸಿನಿಮಾ ನಟ ನಟಿಯರಿಗೆ ದರ್ಶನಕ್ಕಾಗಿ ಪ್ರತ್ಯೇಕವಾದ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

    ಅವರ ದೇಹ  ಬಳಲಿತ್ತು

    ಸತತ ಎರಡು ತಿಂಗಳಿಂದ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಎರಡು ವಾರದ ಹಿಂದೆಯಷ್ಟೇ ನಾನು ಅವರ ಮನೆಗೆ ಹೋಗಿದ್ದೆ. ಮಲಗಿದ್ದಲ್ಲೇ ಮಲಗಿದ್ದರಿಂದ ಬೆನ್ನಿನಲ್ಲಿ ನೋವಿತ್ತು. ಹಾಗಾಗಿ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಿಸೋದು ಕಷ್ಟವಾಗಿಲ್ಲ. ಮನೆಯಲ್ಲೇ ಟ್ರೀಟ್ ಮೆಂಟ್ ಕೊಡಲು ಮುಂದಾದೆವು ಎಂದರು ಡಾ.ವಿಕಾಸ್.

    ಮುಂದುವರೆದು ಮಾತನಾಡಿದ ಡಾ.ವಿಕಾಸ್, ‘ಲೀಲಾವತಿ ಅವರ ದೇಹದಲ್ಲಿ ಪ್ರೊಟಿನ್ ಕಡಿಮೆ ಇತ್ತು. ಉಪ್ಪಿನಾಂಶ ಕೂಡ ತೀರಾ ಕಡಿಮೆ ಆಗಿತ್ತು. ಹೊಟ್ಟೆಗೆ ಡೈರೆಕ್ಟ್ ಆಗಿ ಅವರಿಗೆ ಆಹಾರವನ್ನು ಕೊಡುವಂತಹ ವ್ಯವಸ್ಥೆ ಮಾಡಲಾಗಿತ್ತು. ವಯೋಸಹಜ ಕಾಯಿಲೆಯಿಂದ ಅವರು ಬಳಲುತ್ತಿದ್ದರು. ವಯಸ್ಸಿನ ಕಾರಣದಿಂದಾಗಿ ಅವರ ದೇಹ ಚಿಕಿತ್ಸೆಗೆ ಬೇಗ ಬೇಗ ಸ್ಪಂದಿಸುತ್ತಿರಲಿಲ್ಲ ಎಂದಿದ್ದಾರೆ.

    ಸತತ ಎರಡು ತಿಂಗಳಿಂದ ನಟಿ ಲೀಲಾವತಿ (Leelavati) ಅವರಿಗೆ ಚಿಕಿತ್ಸೆ ನೀಡುತ್ತಿದ್ದ ಡಾ.ವಿಕಾಸ್ (Dr.Vikas), ನಟಿಗೆ ಚಿಕಿತ್ಸೆ ನೀಡಿದ ವಿವರವನ್ನು ಪಬ್ಲಿಕ್ ಟಿವಿ ಜೊತೆ ಮಾತನಾಡಿದ್ದಾರೆ. ಲೀಲಾವತಿ ಅವರಿಗೆ ಏನೆಲ್ಲ ಚಿಕಿತ್ಸೆ ನೀಡಲಾಗುತ್ತಿತ್ತು ಎನ್ನುವ ವಿವರವನ್ನೂ ಅವರು ನೀಡಿದ್ದಾರೆ.

  • ಸ್ಪಂದನಾ ನಿಧನ: ಮಲ್ಲೇಶ್ವರಂನಲ್ಲಿ ದರ್ಶನ, ಹರಿಶ್ಚಂದ್ರ ಘಾಟ್‍ ನಲ್ಲಿ ಅಂತಿಮ ಸಂಸ್ಕಾರ

    ಸ್ಪಂದನಾ ನಿಧನ: ಮಲ್ಲೇಶ್ವರಂನಲ್ಲಿ ದರ್ಶನ, ಹರಿಶ್ಚಂದ್ರ ಘಾಟ್‍ ನಲ್ಲಿ ಅಂತಿಮ ಸಂಸ್ಕಾರ

    ಟ ವಿಜಯ ರಾಘವೇಂದ್ರ (Vijaya Raghavendra) ಪತ್ನಿ ಸ್ಪಂದನಾ (Spandana) ಅವರ ಮೃತದೇಹ ರಾತ್ರಿ 11 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ. ಅಲ್ಲಿಂದ ಸ್ಪಂದನಾ ಅವರ ನಿವಾಸಕ್ಕೆ ಮೃತದೇಹ ಬರಲಿದ್ದು, ಅಲ್ಲಿ ಪೂಜೆಯ ನಂತರ ಅಂತಿಮ ದರ್ಶನಕ್ಕಾಗಿ ಬೆಂಗಳೂರಿನ ಮಲ್ಲೇಶ್ವರಂ (Malleswaram) ಆಟ ಮೈದಾನದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಸ್ಪಂದನಾ ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್ ತಿಳಿಸಿದ್ದಾರೆ.

    ರಾತ್ರಿಯಿಂದಲೇ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹರಿಶ್ಚಂದ್ರ ಘಾಟ್‍ ನಲ್ಲಿ ಈಡಿಗ ಸಂಪ್ರದಾಯದಂತೆ ಅಂತಿಮ ಸಂಸ್ಕಾರ (Cremation) ಮಾಡಲಾಗುವುದು ಎಂದು ಬಿ.ಕೆ ಹರಿಪ್ರಸಾದ್ ಹೇಳಿದರು. ಇಂದು ಮಧ್ಯಾಹ್ನದವರೆಗೂ ಥೈಲ್ಯಾಂಡ್ ನ ದೇಶದ ಕಸ್ಟಮ್ ಕ್ಲಿಯರೆನ್ಸ್ ಪ್ರಕ್ರಿಯೆಗಳು ನಡೆಯಲಿವೆ. ತದನಂತರ ಸ್ಪಂದನಾ ಮೃತದೇಹ ಕುಟುಂಬಕ್ಕೆ ಹಸ್ತಾಂತರವಾಗಲಿದೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಸ್ಪಂದನಾರನ್ನ ನೋಡಬೇಕು ಎಂದು ಕಣ್ಣೀರಿಟ್ಟಿದ್ದರು ಚಿನ್ನಾರಿಮುತ್ತ ವಿಜಯ್

    ಕಳೆದ ಒಂದು ವಾರದಿಂದ ಸ್ಪಂದನಾ ಸೋದರ ಸಂಬಂಧಿಗಳ ಜೊತೆ ಬ್ಯಾಂಕಾಕ್ (Bangkok) ಪ್ರವಾಸದಲ್ಲಿದ್ದರು. ಭಾನುವಾರ ಅವರಿಗೆ ಹೃದಯನೋವು ಕಾಣಿಸಿಕೊಂಡಿದೆ. ರಾತ್ರಿ ಮಲಗಿದವರು ಎದ್ದೇಳಲಿಲ್ಲ ಎನ್ನುವ ಮಾಹಿತಿಯನ್ನು ಅವರ ಕುಟುಂವಸ್ಥರು ತಿಳಿಸಿದ್ದಾರೆ.  ಈ ವಿಷಯ ತಿಳಿಯುತ್ತಿದ್ದಂತೆಯೇ ಭಾನುವಾರ ರಾತ್ರಿಯೇ ವಿಜಯ ರಾಘವೇಂದ್ರ ಬ್ಯಾಂಕಾಕ್ ಗೆ ತೆರಳಿದ್ದಾರೆ.

     

    ಭಾನುವಾರ ರಾತ್ರಿ ಬ್ಯಾಂಕಾಕ್ ಹೊರಟ ವಿಜಯ ರಾಘವೇಂದ್ರ, ಸೋಮವಾರ ಬೆಳಗ್ಗೆ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಸ್ಪಂದನಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಸುದ್ದಿ ತಿಳಿಯುತ್ತಿದ್ದಂತೆಯೇ ಎರಡೂ ಕುಟುಂಬ ಆಘಾತಕ್ಕೆ ಒಳಗಾಗಿದೆ. ಜೊತೆಗೆ ವಿಜಯ ರಾಘವೇಂದ್ರ ಜೊತೆ ಸಂಪರ್ಕದಲ್ಲಿದ್ದು, ಅಲ್ಲಿನ ಪ್ರಕ್ರಿಯೆಗಳನ್ನು ಮುಗಿಸಲಾಗುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಂಚಭೂತಗಳಲ್ಲಿ ಕೆಕೆ ಲೀನ: ಪುತ್ರ ನಕುಲ್ ಅವರಿಂದ  ಅಂತಿಮ ವಿಧಿ ವಿಧಾನ

    ಪಂಚಭೂತಗಳಲ್ಲಿ ಕೆಕೆ ಲೀನ: ಪುತ್ರ ನಕುಲ್ ಅವರಿಂದ ಅಂತಿಮ ವಿಧಿ ವಿಧಾನ

    ಬಾಲಿವುಡ್ ಖ್ಯಾತ ಗಾಯಕ ಕೃಷ್ಣಕುಮಾರ್ ಕುನ್ನತ್ (ಕೆಕೆ) ಅವರ ಅಂತ್ಯ ಸಂಸ್ಕಾರವು ಹಿಂದೂ ಸಂಪ್ರದಾಯದಂತೆ, ಮುಂಬೈನಲ್ಲಿ ನಡೆಯಿತು. ಪುತ್ರ ನಕುಲ್ ಅವರು ಅಂತಿಮ ವಿಧಿ ವಿಧಾನಗಳ ಮೂಲಕ ಅಂತಿಮ ಸಂಸ್ಕಾರ ನೆರವೇರಿಸಿದರು. ಈ ಸಂದರ್ಭದಲ್ಲಿ ಕೆಕೆ ಅವರ ಪತ್ನಿ ಜ್ಯೋತಿ, ಸ್ನೇಹಿತರು ಮತ್ತು ಅಪಾರ ಅಭಿಮಾನಿಗಳು ಹಾಜರಿದ್ದರು. ಇದನ್ನೂ ಓದಿ :  ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್

     

    ಬೆಳಿಗ್ಗೆಯಿಂದ ಮುಂಬೈ ಮನೆಯಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಬಾಲಿವುಡ್ ನ ನಟ, ನಟಿಯರು, ತಂತ್ರಜ್ಞರು ಮತ್ತು ಗಾಯಕರು ಕೆಕೆ ಮನೆಗೆ ಆಗಮಿಸಿ, ಅಂತಿಮ ನಮನ ಸಲ್ಲಿಸಿದರು. ನಂತರ ಮುಂಬೈನ ಹಿಂದೂ ರುದ್ರಭೂಮಿಯಲ್ಲಿ ಕೆಕೆ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಕುಟುಂಬದ ಆಕ್ರಂದನ ಮುಗಿಲುಮುಟ್ಟಿತ್ತು. ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ

    ಬುಧವಾರ ಅವರ ಶವ ಪರೀಕ್ಷೆಯ ಮಾಹಿತಿಯು ಲಭ್ಯವಾಗಿದ್ದು, ಕೆಕೆ ಸಾವಿಗೆ ಹೃದಯಸ್ತಂಭನವೇ ಕಾರಣ ಎಂದು ವೈದ್ಯರು ಶರಾ ಬರೆದಿದ್ದಾರೆ. ಮಯೋಕಾರ್ಡಿಯಲ್ ಇನ್ ಫ್ರಾಕ್ಷನ್ ಕಾರಣವು ಕೆಕೆ ಅವರ ನಿಧನಕ್ಕೆ ಕಾರಣವೆಂದು ಹೇಳಲಾಗಿದೆ. ಜೊತೆಗೆ ಕೆಕೆ ಅವರ ದೇಹದಲ್ಲಿ ಸುದೀರ್ಘವಾದ ಹೃದಯ ಸಮಸ್ಯೆಗಳು ಕಂಡು ಬಂದಿವೆ ಎಂದು ವರದಿಯಲ್ಲಿ ಹೇಳಲಾಗಿದೆ.

    ಮಂಗಳವಾರ ರಾತ್ರಿ ಕೆಕೆ ಅವರು ಕೋಲ್ಕತ್ತಾ ಠಾಕೂರ್ಪುಕೂರ್ ವಿವೇಕಾನಂದ ಕಾಲೇಜಿನಲ್ಲಿ ಆಯೋಜನೆ ಮಾಡಿದ್ದ ಉತ್ಸವದಲ್ಲಿ ಸಂಗೀತ ಕಾರ್ಯಕ್ರಮವನ್ನು ನೀಡಲು ಹೋಗಿದ್ದರು. ಒಂದು ಗಂಟೆ ಕಾರ್ಯಕ್ರಮ ನೀಡಿದ ನಂತರ, ಮಧ್ಯದಲ್ಲೇ ಅವರು ಅಸ್ವಸ್ಥರಾಗಿದ್ದರು. ವಿಶ್ರಾಂತಿ ಪಡೆಯಲೆಂದೇ ಅವರು ಹೋಟೆಲ್ ಗೆ ತೆರೆಳಿದರು. ಅಲ್ಲಿ ಕುಸಿದು ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಕೂಡಲದೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ, ಯಾವುದೇ ಪ್ರಯೋಜನವಾಗಲಿಲ್ಲ.

  • ಐವರು ಹೆಣ್ಣು ಮಕ್ಕಳಿಂದ ತಂದೆಯ ಅಂತ್ಯಸಂಸ್ಕಾರ

    ಐವರು ಹೆಣ್ಣು ಮಕ್ಕಳಿಂದ ತಂದೆಯ ಅಂತ್ಯಸಂಸ್ಕಾರ

    ಜೈಪುರ: ಐವರು ಹೆಣ್ಣು ಮಕ್ಕಳು ತಂದೆಯ ಶವಕ್ಕೆ ಕೊಳ್ಳಿ ಇಡುವ ಮೂಲಕ ರಾಜಸ್ಥಾನದಲ್ಲಿ ಅಂತ್ಯಸಂಸ್ಕಾರ ಮಾಡಿದ್ದಾರೆ.

    ರಾಜಸ್ಥಾನದ ದುಂಗರ್‍ಪುರ್ ಜಿಲ್ಲೆಯ ನವಶ್ಯಾಮ್ ಗ್ರಾಮದ ನಿವಾಸಿ ಕರುಲಾಲ್ ತ್ರಿವೇದಿ ಎಂಬವರು ದೀರ್ಘಕಾಲದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಆದರೆ ಶನಿವಾರ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಅವರ ಐವರು ಪುತ್ರಿಯರಾದ ನಿರ್ಮಲಾ, ಚಂದ್ರಕಾಂತ, ನೀತಾ, ಜಯಶ್ರೀ ಮತ್ತು ಸುರೇಖ ತಂದೆಯ ಅಂತಿಮ ವಿಧಿವಿಧಾನವನ್ನು ತಾವೇ ಮಾಡಲು ನಿರ್ಧರಿಸಿದರು. ಇವರ ಈ ನಿರ್ಧಾರಕ್ಕೆ ಅವರ ಸಂಬಂಧಿಗಳು ಸಂತೋಷದಿಂದ ಸಮ್ಮತಿ ಸೂಚಿಸಿದರು.

    ಈ ಐವರು ಹೆಣ್ಣು ಮಕ್ಕಳು ತಂದೆಯ ಶವವನ್ನು ತಮ್ಮ ಹೆಗಲ ಮೇಲೆ ಹೊತ್ತು ಸ್ಮಶಾನಕ್ಕೆ ಕರೆದೊಯ್ದಿದ್ದಾರೆ. ಬಳಿಕ ಹಿಂದೂ ಸಂಪ್ರದಾಯದ ಪ್ರಕಾರ ತಂದೆಯ ದೇಹಕ್ಕೆ ಕೊಳ್ಳಿ ಇಟ್ಟು ಅಂತಿಮ ಸಂಸ್ಕಾರ ನೆರವೇರಿಸಿದ್ದಾರೆ. ಅಲ್ಲದೆ ನಮ್ಮ ಪೋಷಕರ ಬಗ್ಗೆ ನಾವು ಹೆಮ್ಮೆ ಪಡುತ್ತೇವೆ. ಎಂದಿಗೂ ಅವರು ಗಂಡು ಮಕ್ಕಳ ಮೇಲೆ ವ್ಯಾಮೋಹ ಹೊಂದಿರಲಿಲ್ಲ ಎಂದು ನೀತಾ ಹೇಳಿದ್ದಾರೆ.

  • ತಂದೆ-ತಾಯಿ ಪಕ್ಕದಲ್ಲೇ ಚಿರನಿದ್ರೆಗೆ ಜಾರಿದ ಸಿ.ಎಸ್.ಶಿವಳ್ಳಿ

    ತಂದೆ-ತಾಯಿ ಪಕ್ಕದಲ್ಲೇ ಚಿರನಿದ್ರೆಗೆ ಜಾರಿದ ಸಿ.ಎಸ್.ಶಿವಳ್ಳಿ

    ಹುಬ್ಬಳ್ಳಿ: ತೀವ್ರ ಹೃದಯಾಘಾತದಿಂದ ನಿಧನರಾಗಿದ್ದ ಪೌರಾಡಳಿತ ಸಚಿವ ಸಿಎಸ್ ಶಿವಳ್ಳಿ ಅವರ ಅಂತಿಮ ಸಂಸ್ಕಾರ ಸಕಲ ಸರ್ಕಾರಿ ಗೌರವಗಳೊಂದಿಗೆ ಧಾರವಾಡದ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನಡೆಯಿತು.

    ಗ್ರಾಮದ ಬಳಿ ಇರುವ ಸಚಿವರ ಜಮೀನಿನಲ್ಲಿ ತಂದೆ ತಾಯಿ ಸಮಾಧಿಯ ಪಕ್ಕದಲ್ಲೇ ಶಿವಳ್ಳಿ ಅವರ ಅಂತ್ಯ ಸಂಸ್ಕಾರ ನಡೆಸಲಾಯಿತು. ಇದಕ್ಕೂ ಮುನ್ನ ಸಚಿವರ ಪಾರ್ಥಿವ ಶರೀರವನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು. ಸಚಿವರ ದಿಢೀರ್ ನಿಧನದಿಂದಾಗಿ ಶಿವಳ್ಳಿ ಹುಟ್ಟೂರಲ್ಲಿ ನೀರವ ಮೌನ ಆವರಿಸಿತ್ತು.

    ಜನಸಾಗರ: ಶಿವಳ್ಳಿ ಅವರ ನಿಧನ ಸುದ್ದಿ ಕೇಳಿ ಅಘಾತಗೊಂಡಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ನೆರೆದಿದ್ದರು. ನೆಚ್ಚಿನ ನಾಯಕನ ಅಂತಿಮ ದರ್ಶನ ಪಡೆಯಲು ನೂಕುನುಗ್ಗಲು ಸಂಭವಿಸಿತ್ತು. ಈ ವೇಳೆ ಜನರು ಸಚಿವರ ಸರಳ ವ್ಯಕ್ತಿತ್ವವನ್ನು ನೆನೆದು ಕೊಂಡಾಡಿದರು.

    ಇತ್ತ ಶಿವಳ್ಳಿ ಅವರ ಕುಟುಂಬ ಆಕ್ರಂದನ ಸ್ಥಳದಲ್ಲಿದ್ದವರ ಕಣ್ಣಲ್ಲು ನೀರು ತರಿಸಿತ್ತು. ಸಿಎಂ ಕುಮಾರಸ್ವಾಮಿ, ಡಿಸಿಎಂ ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಸಂಪುಟದ ಸಚಿವರು, ಶಾಸಕರು, ಬಿಜೆಪಿ ಪಕ್ಷ ನಾಯಕರು ಕೂಡ ಶಿವಳ್ಳಿ ಅವರ ಅಂತಿಮ ದರ್ಶನ ಪಡೆದರು. ಸಂಪುಟದ ಗೆಳೆಯನನ್ನು ಕಳೆದುಕೊಂಡ ಸಚಿವ ಡಿಕೆ ಶಿವಕುಮಾರ್ ಮಾತನಾಡಿ, ನನಗೆ ಏನು ಹೇಳುವ ಶಕ್ತಿ ಇಲ್ಲ ಎಂದು ಅಗಲಿದ ಮಿತ್ರನನನ್ನು ಕಂಡು ಗಳಗಳನೆ ಕಣ್ಣೀರಿಟ್ಟರು.

    ಇತ್ತ ಶಿವಳ್ಳಿ ಅವರ ಪುತ್ರಿ, ಹುಬ್ಬಳಿಯ ಕೆಎಲ್‍ಇ ಇಂಗ್ಲಿಷ್ ಶಾಲೆಯಲ್ಲಿ ಓದುತ್ತಿದ್ದ ರೂಪ ಶಿವಳ್ಳಿ ಇಂದು ನಗರದ ಚೇತನಾ ಕಾಲೊನಿಯಲ್ಲಿರುವ ಸೇಂಟ್ ಅಂಟೋನಿ ಶಾಲೆಯಲ್ಲಿ ತಂದೆಯ ಸಾವಿನ ದುಃಖದ ನಡುವೆಯೂ ಕಣ್ಣೀರು ಹಾಕುತ್ತಲೇ ಪರೀಕ್ಷೆ ಬರೆದರು.

  • ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆಗೆ ಕುಂದಾಪುರದಲ್ಲಿ ಸಿದ್ಧತೆ

    ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ಅಂತ್ಯಕ್ರಿಯೆಗೆ ಕುಂದಾಪುರದಲ್ಲಿ ಸಿದ್ಧತೆ

    ಉಡುಪಿ: ಖಡಕ್ ಐಪಿಎಸ್ ಅಧಿಕಾರಿ- ಕರ್ನಾಟಕದ ಸಿಂಗಂ ಖ್ಯಾತಿಯ ಮಧುಕರ್ ಶೆಟ್ಟಿ ಶುಕ್ರವಾರದಂದು ಇಹಲೋಕ ತ್ಯಜಿಸಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಕರ್ನಾಟಕದ ಜನರ ಹೃದಯ ಗೆದ್ದ ದಕ್ಷ ಪೊಲೀಸ್ ಅಧಿಕಾರಿಯ ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಕಣ್ಣೀರಿಡುತ್ತಾ ಸಿದ್ಧತೆ ಮಾಡುತ್ತಿದ್ದಾರೆ.

    ಅಧಿಕಾರದಲ್ಲಿದ್ದುಕೊಂಡು ಉನ್ನತ ಸ್ಥಾನದಲ್ಲಿದ್ದು ಜನ ಮೆಚ್ಚುವ ಕೆಲಸ ಮಾಡೋದು ಕಷ್ಟ. ಆದ್ರೆ ರಿಯಲ್ ಹೀರೋ ಕರ್ನಾಟಕ ಸಿಂಗಂ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ತನ್ನ ಪೊಲೀಸ್ ಸೇವೆಯಲ್ಲಿ ನಿಷ್ಟುರ ಮತ್ತು ಅಷ್ಟೇ ಜನಪರ. ಮುಖ್ಯಮಂತ್ರಿಯಿಂದ ಹಿಡಿದು ಸಾಮಾನ್ಯ ಭ್ರಷ್ಟ ವ್ಯಕ್ತಿಗೂ ಕನಸಲ್ಲೂ ಕಾಡಿದ ಮಧುಕರ್ ಶೆಟ್ಟಿ ಅವರು ಎಚ್ 1 ಎನ್ 1ಗೆ ಬಲಿಯಾಗಿದ್ದಾರೆ. ಭಾನುವಾರದಂದು ಹಿರಿಯ ಪೊಲೀಸ್ ಅಧಿಕಾರಿಯ ಅಂತ್ಯ ಸಂಸ್ಕಾರ ಉಡುಪಿ ಜಿಲ್ಲೆಯ ಕುಂದಾಪುರದ ಯಡಾಡಿಯಲ್ಲಿ ನಡೆಯಲಿದೆ.

    ಮಧುಕರ್ ಶೆಟ್ಟಿ ಅವರು ಹಿರಿಯ ಪತ್ರಕರ್ತ ದಿವಂಗತ ವಡ್ಡರ್ಸೆ ರಘುರಾಮ ಶೆಟ್ಟಿಯವರ ಸುಪುತ್ರ. ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದ್ದ ಶೆಟ್ಟಿ ಕೆಲಸದ ವಿಚಾರಕ್ಕೆ ಬಂದ್ರೆ ತಂದೆಯಷ್ಟೆ ನಿಷ್ಟುರವಾದಿ. ಮಧುಕರ್ ಶೆಟ್ಟಿ ಅವರು 1999ರ ಬ್ಯಾಚ್‍ನ ಐಪಿಎಸ್ ಅಧಿಕಾರಿ. ಹುಟ್ಟಿದ್ದು ಬೆಂಗಳೂರು, ಬೆಳೆದದ್ದು ಮಂಗಳೂರು, ಪಿಜಿ(ಸ್ನಾತಕೋತ್ತರ ಪದವಿ) ಮಾಡಿದ್ದು ದೆಹಲಿಯಲ್ಲಿ. ಆದ್ರೆ ಹುಟ್ಟೂರಿನ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡಿದ್ದ ಯಡಾಡಿಯ ರೈ ಫಾರ್ಮ್‍ನಲ್ಲಿ ಈಗ ನೀರವ ಮೌನ ಬಿಟ್ಟು ಮತ್ತೆ ಕೇಳಿಸಿದ್ದು ಜೆಸಿಬಿಯ ಘರ್ಜನೆ ಮಾತ್ರ. ಮಧುಕರ್ ಶೆಟ್ಟಿಯವರ ಅಂತ್ಯಸಂಸ್ಕಾರಕ್ಕೆ ಮನೆಯ ಅಡಿಕೆ ತೋಟದಲ್ಲಿ ಸಿದ್ಧತೆ ನಡೆಯುತ್ತಿದೆ. ತಂದೆ-ತಾಯಿಗಳ ಸಮಾಧಿ ಪಕ್ಕದಲ್ಲೇ ಮಧುಕರ್ ಶೆಟ್ಟಿಯವರ ಚಿತೆಯನ್ನು ಸಿದ್ಧ ಮಾಡಲಾಗುತ್ತದೆ. ಕುಟುಂಬಸ್ಥರು- ವಡ್ಡರ್ಸೆ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಸದ್ಯ ಈ ಎಲ್ಲಾ ವಿಧಿವಿಧಾನದಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಖಾಕಿಯೊಳಗಿನ ಮಿನುಗುತಾರೆ ನೆನಪು ಮಾತ್ರ- ಮಧುಕರ್ ದಕ್ಷತೆ ಹಾದಿಯ ಬಗ್ಗೆ ಓದಿ

    ಕುಟುಂಬಸ್ಥರಾದ ಸಂದೇಶ್ ಮತ್ತು ಮೋಹನದಾಸ್ ಮಾತನಾಡಿ, ವಡ್ಡರ್ಸೆ ಕುಟುಂಬದ ಕುಡಿಯನ್ನು ಕಳೆದುಕೊಂಡ ದುಃಖದಲ್ಲಿದ್ದೇವೆ. ಕಳೆದ ನವರಾತ್ರಿಗೆ ಬಂದಿದ್ದ ಶೆಟ್ಟರನ್ನು ಕಳೆದುಕೊಂಡಿದ್ದೇವೆ ಎಂದರೆ ನಂಬಲಾಗುತ್ತಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ.

    ಸಮಾಜದಲ್ಲಿ ನೊಂದವರು, ದಲಿತರ ಬಗ್ಗೆ ಅತೀವ ಕಾಳಜಿಯಿದ್ದ ಮಧುಕರ್ ಶೆಟ್ಟಿಯವರ ಪಾರ್ಥಿವ ಶರೀರ ಮಂಗಳೂರು ಮೂಲಕ ರಾತ್ರಿ 12 ಗಂಟೆ ಸುಮಾರಿಗೆ ಹುಟ್ಟೂರು ತಲುಪುತ್ತದೆ. ಬೆಳಗ್ಗೆ 7 ಗಂಟೆಯಿಂದ ಅಂತಿಮ ದರ್ಶನದ ವ್ಯವಸ್ಥೆ ಮಾಡಲಾಗಿದೆ. ದಕ್ಷ ಅಧಿಕಾರಿಗೆ ಅಂತಿಮ ನಮನ ಸಲ್ಲಿಸಲು ಡಿಜಿಪಿ ನೀಲಮಣಿ ರಾಜು, ಹಿರಿಯ ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಆಗಮಿಸಲಿದ್ದಾರೆ. ಬಳಿಕ ಭಾನುವಾರ ಬೆಳಗ್ಗೆ 10 ಗಂಟೆಗೆ ಮಧುಕರ ಶೆಟ್ಟಿ ಅವರ ಮೃತದೇಹ ಪಂಚಭೂತಗಳಲ್ಲಿ ಲೀನವಾಗಿ ಅವರ ನೆನಪು ಅಜರಾಮರವಾಗಲಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕೆಂಪು ಕಾಂಚಿವರಂ ಸೀರೆ ತೊಟ್ಟು ಅಂತಿಮ ಯಾತ್ರೆಗೆ ಹೊರಟ ತ್ರಿಲೋಕ ಸುಂದರಿ

    ಕೆಂಪು ಕಾಂಚಿವರಂ ಸೀರೆ ತೊಟ್ಟು ಅಂತಿಮ ಯಾತ್ರೆಗೆ ಹೊರಟ ತ್ರಿಲೋಕ ಸುಂದರಿ

    ಮುಂಬೈ: ತ್ರಿಲೋಕ ಸುಂದರಿ ಶ್ರೀದೇವಿ ಆಸೆಯಂತೆಯೇ ಮೃತದೇಹಕ್ಕೆ ಚಿನ್ನ ಲೇಪಿತ ಕೆಂಪು ಕಾಂಚಿವರಂ ಸೀರೆ ಉಡಿಸಿ, ಮಾಂಗಲ್ಯ ಸರದ ಜೊತೆ ಚಿನ್ನಾಭರಣ ಹಾಕಿ, ಪಾರ್ಥಿವ ಶರೀರಕ್ಕೆ ತ್ರಿವರ್ಣ ಧ್ವಜವನ್ನು ಹೊದಿಸಿ ಮೆರವಣಿಗೆ ಮಾಡಲಾಗುತ್ತಿದೆ.

    ಶ್ರೀದೇವಿಗೆ ಬಿಳಿ ಹೂಗಳೆಂದರೆ ಬಹಳ ಪ್ರೀತಿ. ಹಾಗಾಗಿ ಅವರ ಪಾರ್ಥಿವ ಶರೀರಕ್ಕೆ ಮಲ್ಲಿಗೆ ಹೂ ಮುಡಿಸಲಾಗಿದೆ. ಜೊತೆಗೆ ಅವರ ಅಂತಿಮ ಯಾತ್ರೆಯ ವಾಹನವನ್ನೂ ಕೂಡ ಬಿಳಿ ಹೂಗಳಿಂದ ಸಿಂಗರಿಸಲಾಗಿದೆ.

    ವಿಲ್ಲೆ ಪಾರ್ಲೆ ಸೇವಾ ಸಮಾಜ ಚಿತಾಗಾರ, ಹಿಂದೂ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ಸಿದ್ಧತೆ ನಡೆದಿದೆ. ಶ್ರೀದೇವಿ ಅವರ ಚಿತೆಗೆ ಪತಿ ಬೋನಿ ಕಪೂರ್ ಅಗ್ನಿ ಸ್ಪರ್ಶ ಮಾಡಲಿದ್ದಾರೆ. ಅಂತ್ಯ ಸಂಸ್ಕಾರಕ್ಕೆ ಕಪೂರ್ ಕುಟುಂಬದ ಜೊತೆ ಚಿತ್ರರಂಗದ ಗಣ್ಯರು ಭಾಗಿಯಾಗಿದ್ದಾರೆ.

     

    ಮುಂಬೈನ ಲೋಖಂಡ್ವಾಲಾದ ಸೆಲೆಬ್ರೇಷನ್ ಸ್ಪೋಟ್ರ್ಸ್ ಕ್ಲಬ್‍ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ನಟಿ ಐಶ್ವರ್ಯಾ ರೈ ಬಚ್ಚನ್, ಜಯಾ ಬಚ್ಚನ್, ಜಯಪ್ರದಾ, ತಬು, ಸುಶ್ಮಿತಾ ಸೇನ್, ಮಾಧುರಿ ದೀಕ್ಷಿತ್, ಶ್ರೀದೇವಿಯ ಸೋದರ ಸೊಸೆ ಸೋನಂ ಕಪೂರ್, ಕಾಜೋಲ್, ಅಜಯ್ ದೇವಗನ್ ಮುಂತಾದ ಬಾಲಿವುಡ್ ನಟ ನಟಿಯರು ಸೇರಿದಂತೆ ಇತರೆ ಗಣ್ಯರು ಹಾಗೂ ಅಭಿಮಾನಿಗಳು ಶ್ರೀದೇವಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

    ಸಂಬಂಧಿಕರ ಮದುವೆಗೆಂದು ದುಬೈಗೆ ತೆರಳಿದ್ದ ವೇಳೆ ಕಳೆದ ಶನಿವಾರ ಶ್ರೀದೇವಿ ಮೃತಪಟ್ಟಿದ್ದರು. ವೈದ್ಯಕೀಯ ಹಾಗೂ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಶ್ರೀದೇವಿ ಅವರ ಪಾರ್ಥೀವ ಶರೀರವನ್ನು ಮಂಗಳವಾರ ರಾತ್ರಿ ಮುಂಬೈಗೆ ತರಲಾಗಿತ್ತು.

    ಆಕಸ್ಮಿಕವಾಗಿ ಬಾತ್‍ಟಬ್‍ನಲ್ಲಿ ಮುಳುಗಿ ಶ್ರೀದೇವಿ ಸಾವನ್ನಪ್ಪಿದ್ದಾರೆಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿತ್ತು.