Tag: ಅಂತ್ಯಕ್ರೀಯೆ

  • ಸರಳ ಸಜ್ಜನ ರಾಜಕಾರಣಿ ಸಿ.ಎಂ ಉದಾಸಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

    ಸರಳ ಸಜ್ಜನ ರಾಜಕಾರಣಿ ಸಿ.ಎಂ ಉದಾಸಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ

    ಹಾವೇರಿ: ಹಾಲಿ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿ.ಎಂ.ಉದಾಸಿ ಮಂಗಳವಾರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಹಾವೇರಿ ಜಿಲ್ಲೆ ಹಾನಗಲ್ ಪಟ್ಟಣದ ವಿರಕ್ತಮಠದ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಸಕಲ ಸಿದ್ಧತೆ ಮಾಡಲಾಗಿದೆ.

    ಇಂದು ಮಧ್ಯಾಹ್ನ 12 ಗಂಟೆಗೆ ಉದಾಸಿ ಪಾರ್ಥೀವ ಶರೀರ ಹಾನಗಲ್ ಪಟ್ಟಣ ತಲುಪಲಿದೆ. ಮಧ್ಯಾಹ್ನ 1 ಗಂಟೆಗೆ ಗೌಳಿ ಗಲ್ಲಿಯ ನಿವಾಸದಲ್ಲಿ ಪಾರ್ಥಿವ ಶರೀರಕ್ಕೆ ಕುಟುಂಬಸ್ಥರು ಪೂಜೆ ಸಲ್ಲಿಸಲಿದ್ದಾರೆ. 1 ಗಂಟೆಯ ನಂತರ ವಿರಕ್ತಮಠದ ಆವರಣದಲ್ಲಿ ಪಾರ್ಥಿವ ಶರೀರ ಅಂತೀಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ:  ಬುಧವಾರ ಮಾಜಿ ಸಚಿವ ಸಿ.ಎಂ.ಉದಾಸಿ ಅಂತ್ಯ ಸಂಸ್ಕಾರ – ಪತ್ನಿ ನೀಲಮ್ಮ ಕಣ್ಣೀರು

    ಕೋವಿಡ್ ಕಾರಣದಿಂದ ಅಂತರ ಕಾಯ್ದುಕೊಂಡು ದರ್ಶನ ಪಡೆಯಲು ಬ್ಯಾರಿಕೇಡ್‍ಗಳನ್ನ ಹಾಕಿ ಪೊಲೀಸ್ ಸಿಬ್ಬಂದಿ ವ್ಯವಸ್ಥೆ ಮಾಡಿದ್ದಾರೆ. ಸಾರ್ವಜನಿಕ ದರ್ಶನದ ನಂತರ ಸಂಜೆ 4 ಗಂಟೆಗೆ ವಿರಕ್ತಮಠದ ರುದ್ರಭೂಮಿಯಲ್ಲಿ ಲಿಂಗಾಯತ ವಿಧಿ ವಿಧಾನದಂತೆ ಅಂತ್ಯಕ್ರಿಯೆ ನಡೆಯಲಿದೆ. ಅಂತ್ಯಕ್ರಿಯೆಯಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸೇರಿದಂತೆ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ಗುರು ಇಲ್ಲದೇ ಬೆಳೆದ ರಾಜಕೀಯ ನಾಯಕ, ಹಾನಗಲ್ ತಾಲೂಕಿನ ಅಭಿವೃದ್ಧಿಯ ಹರಿಕಾರ

    ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಸಿ.ಎಂ.ಉದಾಸಿಯವರು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಮಧ್ಯಾಹ್ನ 2.45ರ ಸುಮಾರಿಗೆ ನಿಧನರಾಗಿದ್ದಾರೆ. ಪತಿ ನಿಧನದ ಸುದ್ದಿ ತಿಳಿದು ಹಾನಗಲ್ ಪಟ್ಟಣದ ಗೌಳಿ ಗಲ್ಲಿಯ ಮನೆಯಲ್ಲಿರುವ ಪತ್ನಿ ನೀಲಮ್ಮ ಕಣ್ಣೀರು ಸುರಿಸಿದ್ದಾರೆ.

    ಸದ್ಯ ಉದಾಸಿ ನಿವಾಸದಲ್ಲಿ ನೀರವ ಮೌನ ಆವರಿಸಿದ್ದು, ಉದಾಸಿ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರು, ಸಂಬಂಧಿಕರು ಹಾಗೂ ಅಭಿಮಾನಿಗಳು ಆಗಮಿಸಿ ಪತ್ನಿ ನೀಲಮ್ಮ ಅವರಿಗೆ ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ.

  • ಅಂತ್ಯಕ್ರಿಯೆ ಮಾಡಲು ಹಿಂದೇಟು ಹಾಕಿದ ಕುಟುಂಬಸ್ಥರು- ಅಂತ್ಯಕ್ರಿಯೆ ನೆರೆವೇರಿಸಿದ ಮುಸ್ಲಿಂ ಯುವಕರು

    ಅಂತ್ಯಕ್ರಿಯೆ ಮಾಡಲು ಹಿಂದೇಟು ಹಾಕಿದ ಕುಟುಂಬಸ್ಥರು- ಅಂತ್ಯಕ್ರಿಯೆ ನೆರೆವೇರಿಸಿದ ಮುಸ್ಲಿಂ ಯುವಕರು

    ಹಾವೇರಿ: ಕೊರೊನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಹತ್ತಿರ ಯಾರು ಸುಳಿಯುತ್ತಿಲ್ಲ. ಕುಟುಂಬ ಸದಸ್ಯರೇ ಅಂತ್ಯಕ್ರಿಯೆ ಮಾಡಲು ಹಿಂದೇಟು ಹಾಕಿದ್ದು, ಕೊರೊನಾದಿಂದ ಸಾವನ್ನಪ್ಪಿದ 45 ವರ್ಷದ ವ್ಯಕ್ತಿ ಅಂತ್ಯಕ್ರಿಯೆಯನ್ನ 4 ಜನ ಮುಸ್ಲಿಂ ಯುವಕರು ನೆರೆವೇರಿಸಿದ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಖುರ್ದವೀರಾಪುರ ಗ್ರಾಮದಲ್ಲಿ ನಡೆದಿದೆ.

    ಯುವಕರು ಪಿಪಿಇ ಕಿಟ್ ಧರಿಸಿ ಅಂತ್ಯಕ್ರಿಯೆಯನ್ನ ಬ್ಯಾಡಗಿ ಪಟ್ಟಣದ ನಾಲ್ವರು ಮುಸ್ಲಿಂ ಯುವಕರು ನೆರವೇರಿಸಿದ್ದಾರೆ. ಮಂಜೂರ ಅಲಿ ಹಕೀಂ, ಮುಕ್ತಿಯಾರ್ ಅಹಮ್ಮದ ಮುಲ್ಲಾ, ಅಜೀಜ್ ಬಿಜಾಪುರ ಮತ್ತು ಹಸನ ಅಲಿ ಕುಪ್ಪೇಲೂರ ಎಂಬುವರಿಂದ ಅಂತ್ಯಕ್ರಿಯೆ ನೆರೆವೇರಿಸಿದರು.

    ಆರೋಗ್ಯ ಇಲಾಖೆ ನೆರವಿನೊಂದಿಗೆ ಸರ್ಕಾರದ ನಿಯಮಾವಳಿ ಪ್ರಕಾರ ಅಂತ್ಯಕ್ರಿಯೆ ನಡೆಸಿದರು. ಜಾತಿ ಬೇಧವೆನಿಸದೆ ಮೃತ ಹಿಂದೂ ವ್ಯಕ್ತಿಯ ಅಂತ್ಯಕ್ರಿಯೆ ನೆರವೇರಿಸಿದ ಮುಸ್ಲಿಂ ಯುವಕರ ಕಾರ್ಯಕ್ಕೆ ಜಿಲ್ಲೆಯ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.